2 ತಿಮೊಥೆಯನಿಗೆ 4:17 - ಕನ್ನಡ ಸತ್ಯವೇದವು C.L. Bible (BSI)17 ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮೀಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು. ಅಲ್ಲದೆ, ಸಿಂಹದ ಬಾಯಿಂದಲೂ ನನ್ನನ್ನು ಸಂರಕ್ಷಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದರೆ ಪ್ರಭುವು ನನ್ನ ಬಳಿಯೇ ಇದ್ದನು. ನಾನು ಸುವಾರ್ತೆಯನ್ನು ಯೆಹೂದ್ಯರಲ್ಲದವರಿಗೆ ಸಂಪೂರ್ಣವಾಗಿ ಬೋಧಿಸಲು ಪ್ರಭುವು ನನಗೆ ಶಕ್ತಿಯನ್ನು ದಯಪಾಲಿಸಿದನು. ಆ ಸುವಾರ್ತೆಯನ್ನು ಯೆಹೂದ್ಯರಲ್ಲದ ಜನರೆಲ್ಲರೂ ಕೇಳುವುದು ಪ್ರಭುವಿನ ಇಷ್ಟವಾಗಿತ್ತು. ಆತನು ನನ್ನನ್ನು ಸಿಂಹದ (ಶತ್ರು) ಬಾಯಿಂದ ರಕ್ಷಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ ಕರ್ತ ಯೇಸು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ, ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರುವಂತೆ ಮಾಡಿದರು. ಯೆಹೂದ್ಯರಲ್ಲದವರೆಲ್ಲರೂ ಸಹ ಅದನ್ನು ಕೇಳುವಂತೆಯೂ ಮಾಡಿದರು. ಇದಲ್ಲದೆ ಕರ್ತ ಯೇಸು ನನ್ನನ್ನು ಸಿಂಹದ ಬಾಯೊಳಗಿಂದ ಸಂರಕ್ಷಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಖರೆ ಧನಿ ಮಾಜ್ಯಾ ಜಗ್ಗೊಳುಚ್ ರ್‍ಹಾಲೊ ಅನಿ ತೆನಿ ಮಾಕಾ ಬಳ್ ದಿಲ್ಯಾನ್, ತಸೆಮನುನ್ ಜುದೆವ್ ನ್ಹಯ್ ಹೊತ್ತ್ಯಾ ಲೊಕಾನಿ ಆಯ್ಕಿ ಸರ್ಕೆ ಮಾಜೆ ವೈನಾ ಬರಿ ಖಬರ್ ಪುರಾ ಮಾಪಾನ್ ಸಾಂಗಿ ಸರ್ಕೆ ಹೊಲೆ. ಅಶೆ ಮರ್‍ನಾತ್ನಾ ಮಿಯಾ ಬಚಾವ್ ಹೊಲೊ. ಅಧ್ಯಾಯವನ್ನು ನೋಡಿ |