Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 4:18 - ಕನ್ನಡ ಸತ್ಯವೇದವು C.L. Bible (BSI)

18 ಪ್ರಭು ನನ್ನನ್ನು ಸಕಲ ಕೇಡುಗಳಿಂದ ರಕ್ಷಿಸಿ, ತಮ್ಮ ಸ್ವರ್ಗಸಾಮ್ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ಸೇರಿಸುವರು. ಯುಗಯುಗಾಂತರಕ್ಕೂ ಅವರಿಗೆ ಮಹಿಮೆ ಸಲ್ಲಲಿ, ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ನನ್ನನ್ನು ಕಾಪಾಡಿ ತನ್ನೊಂದಿಗೆ ಪರಲೋಕ ರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಾನು ಯಾವ ದುಷ್ಕೃತ್ಯವನ್ನೂ ಮಾಡದಂತೆ ಕರ್ತನು ನನ್ನನ್ನು ಕಾಪಾಡಿ ತನ್ನ ಬಳಿಗೆ ಪರಲೋಕರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯಾರಾದರೂ ನನಗೆ ತೊಂದರೆ ಮಾಡಲು ಪ್ರಯತ್ನಿಸಿದರೆ, ಪ್ರಭುವು ನನ್ನನ್ನು ರಕ್ಷಿಸುವನು. ಪ್ರಭುವು ನನ್ನನ್ನು ಸುರಕ್ಷಿತವಾಗಿ ತನ್ನ ಪರಲೋಕರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಪ್ರಭುವಿಗೆ ಮಹಿಮೆಯಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನನ್ನನ್ನು ಪ್ರತಿಯೊಂದು ದುಷ್ಟದಾಳಿಯಿಂದ ಕರ್ತ ಯೇಸು ತಪ್ಪಿಸಿ, ತಮ್ಮ ಪರಲೋಕ ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ತರುವರು. ಯುಗಯುಗಾಂತರಗಳಲ್ಲಿಯೂ ಅವರಿಗೆ ಮಹಿಮೆ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಅನಿಬಿ ಸಗ್ಳ್ಯಾ ವಾಯ್ಟಾನಿತ್ನಾ ಧನಿ ಮಾಕಾ ಹುರ್‍ವುತಾ ಅನಿ ಅಪ್ನಾಚ್ಯಾ ಸರ್ಗಾಚ್ಯಾ ರಾಜಾತ್ ಶಾಬಿತ್ ನ್ಹೆವ್ನ್ ಪಾವ್ಸುತಾ. ತೆಕಾ ಸದಾ ಸರ್ವತಾಕ್ ಮಹಿಮಾ ಹೊಂವ್ದಿತ್. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 4:18
40 ತಿಳಿವುಗಳ ಹೋಲಿಕೆ  

ಪ್ರಭು ಕಾಯುವನು ನಿನ್ನ ಪ್ರಾಣವನು I ಸಕಲ ಕೇಡಿನಿಂದ ಕಾಪಾಡುವನು II


ಪ್ರಭು ವಿಶ್ವಾಸಕ್ಕೆ ಪಾತ್ರರು. ಅವರು ನಿಮ್ಮನ್ನು ಸದೃಢರನ್ನಾಗಿ ಮಾಡಿ ಕೇಡಿನಿಂದ ನಿಮ್ಮನ್ನು ಕಾಪಾಡುವರು.


ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ಧಾರವು ವಿಶ್ವಾಸಿಗಳಾದ ನಿಮಗೆ ಲಭಿಸುವಂತೆ ದೇವರು ತಮ್ಮ ಶಕ್ತಿಯಿಂದ ನಿಮ್ಮನ್ನು ಕಾಪಾಡುತ್ತಾರೆ.


ಶಾಂತಿದಾಯಕ ದೇವರು ನಿಮ್ಮನ್ನು ಪೂರ್ಣವಾಗಿ ಪಾವನಗೊಳಿಸಲಿ. ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ನಿಮ್ಮ ಆತ್ಮ, ಪ್ರಾಣ, ದೇಹ - ಇವುಗಳು ದೋಷರಹಿತವಾಗಿಯೂ ಸ್ವಸ್ಥವಾಗಿಯೂ ಇರುವಂತೆ ನಿಮ್ಮನ್ನು ಕಾಪಾಡಲಿ.


ಸೂಕ್ತ ಸಲಹೆಯನಿತ್ತು ಮುಂದಕೆನ್ನ ನಡೆಸು I ಅಂತ್ಯದಲಿ ನಿನ್ನ ಮಹಿಮೆಗೆನ್ನ ಸೇರ್ಪಡಿಸು II


ನೀವು ಇಂಥ ದೇವರ ಚಿತ್ತವನ್ನು ನೆರವೇರಿಸಲು ನಿಮಗೆ ಬೇಕಾದ ಎಲ್ಲಾ ವರದಾನಗಳನ್ನು ಅವರು ನಿಮಗೆ ಅನುಗ್ರಹಿಸಲಿ. ಸ್ವಾಮಿ ಯೇಸುಕ್ರಿಸ್ತರ ಮುಖಾಂತರ ನಾವು ಅವರಿಗೆ ಪ್ರಿಯರಾದವರಾಗಿ ಬಾಳುವಂತಾಗಲಿ. ಯೇಸುಕ್ರಿಸ್ತರಿಗೆ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ಇದಕ್ಕಾಗಿಯೇ ಇಷ್ಟೆಲ್ಲಾ ಕಷ್ಟಕಾರ್ಪಣ್ಯಗಳನ್ನು ನಾಚಿಕೆಪಡದೆ ಅನುಭವಿಸುತ್ತಿದ್ದೇನೆ. ನಾನು ಯಾರಲ್ಲಿ ವಿಶ್ವಾಸವನ್ನಿಟ್ಟಿದ್ದೇನೆ ಎಂದು ಚೆನ್ನಾಗಿ ಬಲ್ಲೆ. ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನದವರೆಗೂ ಕಾಪಾಡುವುದಕ್ಕೆ ಅವರು ಶಕ್ತರು. ಆದ್ದರಿಂದ ನಾನು ಪೂರ್ಣ ಭರವಸೆಯಿಂದ ಇದ್ದೇನೆ.


ದೇವರೇ ನಮ್ಮನ್ನು ಈ ಭಯಂಕರ ಮರಣದಿಂದ ಪಾರುಮಾಡಿದರು. ಇನ್ನು ಮುಂದಕ್ಕೂ ಪಾರುಮಾಡುವರು. ಹೌದು, ನೀವು ಸಹ ನಮಗಾಗಿ ಪ್ರಾರ್ಥಿಸುತ್ತಾ ನಮ್ಮೊಡನೆ ಸಹಕರಿಸಿದರೆ, ಇನ್ನು ಮುಂದಕ್ಕೂ ನಮ್ಮನ್ನು ಪಾರುಮಾಡುವರು ಎಂಬ ಭರವಸೆಯಿಂದ ಇದ್ದೇವೆ. ಇದರ ಫಲವಾಗಿ ನಮಗೆ ದೊರೆಯುವ ವರದಾನಗಳಿಗಾಗಿ ಅನೇಕರು ನಮ್ಮ ಪರವಾಗಿ ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸುವರು.


ಸಮಸ್ತವೂ ಉಂಟಾಗುವುದು ಅವರಿಂದಲೇ; ಮುಂದುವರಿಯುವುದೂ ಅವರ ಮುಖಾಂತರವೇ; ಇರುವುದೂ ಅವರಿಗೋಸ್ಕರವೇ. ಆ ಪ್ರಭುವಿಗೆ ಯುಗಯುಗಾಂತರಕ್ಕೂ ಸ್ತುತಿಸ್ತೋತ್ರ ಸಲ್ಲಲಿ. ಆಮೆನ್.


ನಿನ್ನ ಶತ್ರುಗಳ ವಿನಾಶ ನಿಶ್ಚಿತ I ಕೆಡುಕರೆಲ್ಲ ಚದರಿ ಪೋಪುದು ಖಚಿತ II


ಪ್ರಭುವು ನ್ಯಾಯಪ್ರಿಯನು, ಭಕ್ತಜನರ ಪರಿಪಾಲಕನು I ಚಿರವುಳಿಸುವನು ಇವರನು, ಅಳಿಸುವನು ದುರುಳರ ಪೀಳಿಗೆಯನು II


ಸದ್ಧರ್ಮಿಗಳು ತಮ್ಮ ತಂದೆಯ ಸಾಮ್ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕಿವಿಯುಳ್ಳವನು ಕೇಳಿಸಿಕೊಳ್ಳಲಿ!


ಆದರೆ ಯಾಬೇಚ, “ಸರ್ವೇಶ್ವರಾ, ನನ್ನನ್ನು ಆಶೀರ್ವದಿಸಿರಿ, ನನ್ನ ಭೂಮಿಯನ್ನು ವಿಸ್ತರಿಸಿರಿ. ನನ್ನೊಡನೆ ಇದ್ದು ನನಗೆ ನೋವನ್ನುಂಟುಮಾಡುವ ಎಲ್ಲಾ ದುಷ್ಟಶಕ್ತಿಗಳಿಂದ ನನ್ನನ್ನು ಕಾಪಾಡಿ,” ಎಂದು ಸರ್ವೇಶ್ಚರನಿಗೆ ಪ್ರಾರ್ಥಿಸಿದನು. ಸರ್ವೇಶ್ವರ ಅವನ ಪ್ರಾರ್ಥನೆಯನ್ನು ಆಲಿಸಿ, ಕೇಳಿದ್ದನ್ನು ದಯಪಾಲಿಸಿದರು.


ಇವರನ್ನು ಲೋಕದಿಂದ ತೆಗೆದುಬಿಡಬೇಕೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತಿಲ್ಲ. ಆದರೆ ಕೇಡಿಗನಿಂದ ಇವರನ್ನು ಕಾಪಾಡಬೇಕೆಂದು ಕೇಳಿಕೊಳ್ಳುತ್ತೇನೆ.


“ಪುಟ್ಟಮಂದೆಯೇ, ಭಯಪಡಬೇಡ. ನಿನ್ನ ತಂದೆ ತಮ್ಮ ಸಾಮ್ರಾಜ್ಯವನ್ನು ನಿನಗೆ ನೀಡಲು ಇಷ್ಟಪಟ್ಟಿದ್ದಾರೆ.


ಮಾನವರಿಂದ ಜಯಿಸಲಾಗದ ಶೋಧನೆಗಳೇನೂ ನಿಮಗೆ ಬಂದಿಲ್ಲ. ದೇವರು ಕೊಟ್ಟಮಾತಿಗೆ ತಪ್ಪಲಾರರು. ಗೆಲ್ಲಲಾಗದ ಶೋಧನೆಗಳಿಗೆ ನಿಮ್ಮನ್ನೆಂದೂ ಗುರಿಪಡಿಸಲಾರರು. ಶೋಧನೆಗಳು ಬಂದಾಗ ಅವುಗಳನ್ನು ಸಹಿಸಿಕೊಳ್ಳುವ ಶಕ್ತಿಯನ್ನೂ ತಪ್ಪಿಸಿಕೊಳ್ಳುವ ಮಾರ್ಗವನ್ನೂ ಅವರೇ ಒದಗಿಸುತ್ತಾರೆ.


ಸಕಲ ಆಪತ್ತು ಕೇಡುಗಳಿಂದ ನನ್ನನ್ನು ಕಾಪಾಡಿಕೊಂಡು ಬಂದ ಆ ದೂತನು, ಈ ಹುಡುಗರನ್ನು ಆಶೀರ್ವದಿಸಲಿ! ಅವರ ಮುಖಾಂತರ ನನ್ನ ಹೆಸರೂ ನನ್ನ ಪಿತೃಗಳಾದ ಅಬ್ರಹಾಮ್ - ಇಸಾಕರ ಹೆಸರೂ ಊರ್ಜಿತಗೊಳ್ಳಲಿ; ಧರೆಯಲ್ಲಿ ಇವರು ದೊಡ್ಡ ಜನಸ್ತೋಮವಾಗಿ ಬೆಳೆಯಲಿ!”


ಅವರ ಆಳ್ವಿಕೆ ಯುಗಯುಗಾಂತರಕ್ಕೂ ಇರಲಿ. ಆಮೆನ್.


ಸರ್ವಯುಗಗಳ ಅರಸರೂ ಅಮರರೂ ಅಗೋಚರರೂ ಆಗಿರುವ ಏಕೈಕ ದೇವರಿಗೆ ಯುಗಯುಗಾಂತರಕ್ಕೆ ಗೌರವವೂ ಮಹಿಮೆಯೂ ಸಲ್ಲಲಿ! ಆಮೆನ್.


ಆಗ ಅರಸನು ತನ್ನ ಬಲಗಡೆಯಿರುವ ಜನರಿಗೆ, ‘ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ. ಲೋಕಾದಿಯಿಂದ ನಿಮಗಾಗಿ ಸಿದ್ಧಮಾಡಿದ ಸಾಮ್ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆಯಿರಿ.


ಪಿತನಾದ ದೇವರ ಪ್ರೀತಿಯಲ್ಲೂ ಯೇಸುಕ್ರಿಸ್ತರ ಆಶ್ರಯದಲ್ಲೂ ಬಾಳುತ್ತಿರುವ ಭಕ್ತರಿಗೆ - ಯೇಸುಕ್ರಿಸ್ತರ ದಾಸನೂ ಯಕೋಬನ ಸಹೋದರನೂ ಆದ ಯೂದನು ಬರೆಯುವ ಪತ್ರ.


ದೇವರಿಗೆ ಯುಗಯುಗಾಂತರಕ್ಕೂ ಸ್ತುತಿಸ್ತೋತ್ರ ಸಲ್ಲಲಿ! ಆಮೆನ್.


ಜ್ಞಾನಾಂಬುದಿಯಾದ ಆ ಏಕೈಕ ದೇವರಿಗೆ ಯೇಸುಕ್ರಿಸ್ತರ ಮುಖಾಂತರ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ನನ್ನ ಪಿತನು ನನಗೆ ರಾಜ್ಯಾಧಿಕಾರವನ್ನು ವಹಿಸಿರುವಂತೆ ನಾನೂ ನಿಮಗೆ ವಹಿಸುತ್ತೇನೆ.


ನಮಗೆ ತಪ್ಪು ಮಾಡಿದ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ, ನಮ್ಮ ಪಾಪಗಳನ್ನು ಕ್ಷಮಿಸಿರಿ. ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ’.”


ನಾಬಾಲನು ಸತ್ತನೆಂಬ ವರ್ತಮಾನವನ್ನು ದಾವೀದನು ಕೇಳಿದನು. “ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿ ತೀರಿಸಿದಂಥ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ನನ್ನನ್ನು ಕೆಟ್ಟತನದಿಂದ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದ್ದಾರೆ,” ಎಂದನು. ಅನಂತರ ಅವನು, ಅಬೀಗೈಲಳು ತನಗೆ ಹೆಂಡತಿಯಾಗಬೇಕೆಂದು ದೂತರನ್ನು ಕಳುಹಿಸಿದನು.


ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು‍ ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?


ನನ್ನನ್ನು ಅಂಥ ಕರಡಿ-ಸಿಂಹಗಳ ಉಗುರುಗಳಿಂದ ತಪ್ಪಿಸಿದ ಸರ್ವೇಶ್ವರ ಈ ಫಿಲಿಷ್ಟಿಯನ ಕೈಯಿಂದಲೂ ತಪ್ಪಿಸುವರು,” ಎಂದು ಹೇಳಿದನು. ಅದಕ್ಕೆ ಸೌಲನು, “ಹೋಗು, ಸರ್ವೇಶ್ವರ ನಿನ್ನೊಂದಿಗೆ ಇರಲಿ!” ಎಂದನು.


ಆಪತ್ಕಾಲ ಬಂದಾಗ ದುಷ್ಟನು ಹಾಳಾಗುತ್ತಾನೆ; ಮರಣವೇಳೆಯಲ್ಲೂ ನೀತಿವಂತ ನಂಬಿಕೆಯಿಂದಿರುತ್ತಾನೆ.


ಲೋಕವು ತನ್ನ ಸ್ವಂತ ಜ್ಞಾನದಿಂದ ದೇವರನ್ನು ಅರಿಯಲಾರದೆ ಹೋಯಿತು. ಇದು ದೈವಸಂಕಲ್ಪವೇ ಸರಿ. ಆದ್ದರಿಂದಲೇ ನಾವು ಸಾರುವ ‘ಹುಚ್ಚುತನ’ವೆಂಬ ಸಂದೇಶದ ಮೂಲಕ ವಿಶ್ವಾಸವುಳ್ಳವರನ್ನು ಉದ್ಧರಿಸುವುದು ದೇವರಿಗೆ ಉಚಿತವೆನಿಸಿತು


ಸಹೋದರರೇ, ನಾನು ನಿಮಗೆ ಹೇಳುವುದೇನೆಂದರೆ: ರಕ್ತಮಾಂಸವು ದೇವರ ಸಾಮ್ರಾಜ್ಯಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ. ಅಂತೆಯೇ, ಅಳಿದುಹೋಗುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ.


ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನು ಅವರ ಪ್ರತ್ಯಕ್ಷತೆಯನ್ನೂ ಸಾಮ್ರಾಜ್ಯವನ್ನೂ ಮುಂದಿಟ್ಟು ನಿನಗೆ ಆಜ್ಞಾಪಿಸುವುದೇನೆಂದರೆ:


ಆದರೆ, ಅವರು ಬಯಸಿದ್ದು ಶ್ರೇಷ್ಠವಾದ ನಾಡನ್ನು, ಅಂದರೆ ಸ್ವರ್ಗವನ್ನು. ಆದ್ದರಿಂದಲೇ ದೇವರು, “ಅವರ ದೇವರು,” ಎಂದು ಕರೆಸಿಕೊಳ್ಳಲು ಅವಮಾನಪಡಲಿಲ್ಲ. ಅದಕ್ಕೆ ಬದಲು, ಅವರಿಗಾಗಿ ಒಂದು ನಗರವನ್ನು ಸಜ್ಜುಗೊಳಿಸಿದ್ದಾರೆ.


ಆದರೆ ನೀವು ಬಂದಿರುವುದು ಸಿಯೋನ್ ಬೆಟ್ಟಕ್ಕೆ, ಜೀವಂತ ದೇವರ ನಗರಕ್ಕೆ; ಸ್ವರ್ಗೀಯ ಜೆರುಸಲೇಮಿಗೆ, ಅಸಂಖ್ಯ ದೇವದೂತರು ಕೂಡಿರುವ ಉತ್ಸವ ಕೂಟಕ್ಕೆ;


ನಮ್ಮ ಪ್ರಭು ಹಾಗೂ ಉದ್ಧಾರಕ ಯೇಸುಕ್ರಿಸ್ತರ ಅಮರ ರಾಜ್ಯವನ್ನು ಪ್ರವೇಶಿಸುವ ಭಾಗ್ಯವನ್ನು ದೇವರು ನಿಮಗೆ ಧಾರಾಳವಾಗಿ ಅನುಗ್ರಹಿಸುವರು.


ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು