Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 4:4 - ಕನ್ನಡ ಸತ್ಯವೇದವು C.L. Bible (BSI)

4 ಸತ್ಯಕ್ಕೆಕಿವಿಗೊಡದೆ ಕಟ್ಟುಕತೆಗಳನ್ನು ಕೇಳಲು ಅಲೆದಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ಸತ್ಯ ಬೋಧನೆಗೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ಇಚ್ಛಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರು ಸತ್ಯ ಬೋಧನೆಗೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಜನರು ಸತ್ಯವನ್ನು ಕೇಳದೆ ಸುಳ್ಳುಕಥೆಗಳನ್ನು ಕೇಳಲಾರಂಭಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ಸತ್ಯಕ್ಕೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ತಿರುಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೆನಿ ಖರಿ ಶಿಕಾಪಾ ಆಯಿಕ್ತಲೆ ಸೊಡುನ್ ಲೊಕಾನಿ ಅಪ್ನಿಚ್ ಘಡ್ವಲ್ಯಾ ಕಾನಿಯಾ ಆಯಿಕ್ತಲ್ಯಾಕ್ಡೆ ಲೈ ಧ್ಯಾನ್ ದಿತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 4:4
13 ತಿಳಿವುಗಳ ಹೋಲಿಕೆ  

“ನಿಮ್ಮ ಪೂರ್ವಜರು ಕಿವಿಗೊಡದೆಹೋದರು: ಹಟಮಾರಿಗಳಾದರು; ಮಂದಮತಿಗಳಾದರು; ಅವರ ಹೃದಯ ಗೋರ್ಕಲ್ಲಿನಂತೆ ಆಯಿತು.


ಕಟ್ಟುಕತೆಗಳಲ್ಲೂ ಕೊನೆಮೊದಲಿಲ್ಲದ ವಂಶಾವಳಿಗಳ ನಿರೂಪಣೆಗಳಲ್ಲೂ ಕಾಲಹರಣ ಮಾಡಬಾರದೆಂದು ಅವರಿಗೆ ಆಜ್ಞಾಪಿಸಬೇಕು. ಅಂಥ ಕತೆಗಳು, ವಂಶಾವಳಿಗಳು ಅನಗತ್ಯವಾದ ವಾದವಿವಾದಗಳಿಗೆ ಎಡೆಮಾಡುತ್ತವೆಯೇ ಹೊರತು ದೇವರ ಯೋಜನೆ ಕೈಗೂಡಲು ಅವು ಅನುಕೂಲವಾಗಿಲ್ಲ; ವಿಶ್ವಾಸದಿಂದ ಮಾತ್ರ ಅದು ಸಾಧ್ಯ.


ನಮ್ಮ ಪ್ರಭು ಯೇಸುಕ್ರಿಸ್ತರ ಶಕ್ತಿಸಾಮರ್ಥ್ಯವನ್ನು ಮತ್ತು ಅವರ ಪುನರಾಗಮನವನ್ನು ನಿಮಗೆ ತಿಳಿಯಪಡಿಸುವಾಗ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕತೆಗಳನ್ನು ಆಧರಿಸಿ ನಾವು ಮಾತನಾಡಲಿಲ್ಲ. ನಾವೇ ಅವರ ಮಹತ್ತನ್ನು ಕಣ್ಣಾರೆಕಂಡು ಅದನ್ನು ತಿಳಿಯಪಡಿಸಿದ್ದೇವೆ.


ಪ್ರಾಪಂಚಿಕ ಹಾಗೂ ತಿರುಳಿಲ್ಲದ ಕಟ್ಟುಕತೆಗಳನ್ನು ತಳ್ಳಿಬಿಟ್ಟು, ನಿನ್ನ ಭಕ್ತಿಯನ್ನು ವೃದ್ಧಿಮಾಡಿಕೋ.


ಇದನ್ನು ಕೇಳಿದ ನ್ಯಾಯಸಭೆಯ ಸದಸ್ಯರು ಆರ್ಭಟಿಸಿದರು; ಕಿವಿಗಳನ್ನು ಮುಚ್ಚಿಕೊಂಡರು; ಭರದಿಂದ ಅವನತ್ತ ಧಾವಿಸಿದರು.


ಆದ್ದರಿಂದ ಯೆಹೂದ್ಯರ ಕಟ್ಟುಕತೆಗಳಿಗೂ ಸತ್ಯಭ್ರಷ್ಟರಾದವರ ವಿಧಿಗಳಿಗೂ ಕಿವಿಗೊಡದಂತೆ ತೀವ್ರವಾಗಿ ಖಂಡಿಸಿ, ವಿಶ್ವಾಸದಲ್ಲಿ ದೃಢವಾಗಿರುವಂತೆ ಭಕ್ತಾದಿಗಳಿಗೆ ಬೋಧಿಸು.


ಏಷ್ಯಾ ಪ್ರಾಂತ್ಯದವರೆಲ್ಲ ನನ್ನನ್ನು ಕೈಬಿಟ್ಟುಹೋದರೆಂದು ನೀನು ಬಲ್ಲೆ. ಅವರೊಡನೆ ಫುಗೇಲನೂ ಹೆರ್ಮೊಗೇನನೂ ಸಹ ಹೊರಟುಹೋದರು.


ಪ್ರಿಯ ತಿಮೊಥೇಯನೇ, ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ಸುರಕ್ಷಿತವಾಗಿ ಕಾಪಾಡಿಕೋ. ಪ್ರಾಪಂಚಿಕ ವ್ಯರ್ಥ ಸಂಭಾಷಣೆಗಳಿಂದಲೂ ‘ಜ್ಞಾನಿ'ಗಳೆಂದು ತಪ್ಪಾಗಿ ಕೊಚ್ಚಿಕೊಳ್ಳುವವರ ವಾಗ್ವಾದಗಳಿಂದಲೂ ದೂರವಿರು.


ಮೂಢರು ತಮ್ಮ ಉದಾಸೀನತೆಯಿಂದಲೆ ಹತರಾಗುವರು. ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೆ ನಾಶವಾಗುವರು.


ದೇವರ ಕೃಪಾಶೀರ್ವಾದ ನಿಮ್ಮೆಲ್ಲರಲ್ಲೂ ಇರಲಿ!


ಇವರು ದಿವ್ಯದರ್ಶಿಗಳನ್ನು ನೋಡಿ : “ನಿಮಗೆ ದರ್ಶನವಾಗದಿರಲಿ,” ಎನ್ನುತ್ತಾರೆ. ಪ್ರವಾದಿಗಳಿಗೆ : “ನಯವಾದುದ್ದನ್ನು ನಮಗೆ ನುಡಿಯಿರಿ. ಮಾಯವಾದವುಗಳನ್ನೇ ಪ್ರವಾದನೆ ಮಾಡಿರಿ.


ಈ ಜನರ ಹೃದಯ ಕಲ್ಲಾಗಿದೆ ಕಿವಿ ಮಂದವಾಗಿದೆ ಕಣ್ಣು ಮಬ್ಬಾಗಿದೆ. ಇಲ್ಲದಿದ್ದರೆ ಇವರ ಕಣ್ಣು ಕಾಣುತ್ತಾ ಕಿವಿ ಕೇಳುತ್ತಾ ಹೃದಯ ಗ್ರಹಿಸುತ್ತಾ ನನ್ನತ್ತ ತಿರುಗುತ್ತಿದ್ದರು; ದೇವರಾದ ನಾನಿವರನು ಸ್ವಸ್ಥಪಡಿಸುತ್ತಿದ್ದೆನು.’


ಆದಕಾರಣ, ಅಸತ್ಯವನ್ನು ನಂಬುವಂಥ ಗಾಢಭ್ರಮೆಗೆ ದೇವರು ಅವರನ್ನು ಒಳಪಡಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು