Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 4:5 - ಕನ್ನಡ ಸತ್ಯವೇದವು C.L. Bible (BSI)

5 ಆದರೆ, ನೀನು ಎಲ್ಲ ಸನ್ನಿವೇಶಗಳಲ್ಲೂ ಸ್ಥಿರಚಿತ್ತದಿಂದಿರು. ಕಷ್ಟವನ್ನು ಸಹಿಸಿಕೋ. ಶುಭಸಂದೇಶವನ್ನು ನಿಷ್ಠೆಯಿಂದ ಸಾರು. ನಿನ್ನ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದರೆ ನೀನು ಎಲ್ಲಾ ವಿಷಯಗಳಲ್ಲಿಯೂ ಸ್ವಸ್ಥಚಿತ್ತನಾಗಿರು, ಹಿಂಸೆಯನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇಮಿಸಿರುವ ಸೇವೆಯನ್ನು ಲೋಪವಿಲ್ಲದೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆದರೆ ನೀನು ಎಲ್ಲಾ ವಿಷಯಗಳಲ್ಲಿ ಸ್ವಸ್ಥಚಿತ್ತನಾಗಿರು, ಶ್ರಮೆಯನ್ನು ತಾಳಿಕೋ, ಸೌವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇವಿುಸಿರುವ ಸೇವೆಯನ್ನು ಲೋಪವಿಲ್ಲದೆ ನಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ನೀನು ಎಲ್ಲಾ ಕಾಲದಲ್ಲಿಯೂ ಸ್ವಸ್ಥಚಿತ್ತನಾಗಿರು. ತೊಂದರೆಗಳು ಬಂದಾಗ ಸಹಿಸಿಕೊ. ಸುವಾರ್ತೆಯನ್ನು ಪ್ರಚಾರಮಾಡು. ದೇವರ ಸೇವಕನಿಗೆ ಯೋಗ್ಯವಾದ ಎಲ್ಲಾ ಕಾರ್ಯಗಳನ್ನು ಮಾಡುತ್ತಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ ನೀನು ಎಲ್ಲಾ ವಿಷಯಗಳಲ್ಲಿ ಸ್ವಸ್ಥಚಿತ್ತನಾಗಿರು. ಶ್ರಮೆಗಳನ್ನು ತಾಳಿಕೋ. ಸುವಾರ್ತಿಕನ ಕೆಲಸವನ್ನು ಮಾಡು. ನಿನ್ನ ಸೇವೆಯ ಎಲ್ಲಾ ಕರ್ತವ್ಯಗಳನ್ನು ನೆರವೇರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಖರೆ ತಿಯಾ ಸಗ್ಳ್ಯಾ ವಿಶಯಾತ್ನಿಬಿ ಸಂಬಾಳುನ್ ಘೆವ್ನ್ ರ್‍ಹಾಮ್; ತರಾಸ್ ಸೊಸುನ್ ಘೆವ್ನ್ ಚಲ್, ಎಕ್ ಬರಿ ಖಬರ್ ಸಾಂಗ್ತಲೊ ಮಾನುಸ್ ಹೊವ್ನ್ ರ್‍ಹಾ ಅನಿ ತುಕಾ ದಿಲ್ಲೆ ಕಾಮ್ ದೆವಾಚ್ಯಾ ಸೆವಕಾಚ್ಯಾ ಸರ್ಕೆ ಕರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 4:5
28 ತಿಳಿವುಗಳ ಹೋಲಿಕೆ  

ಆದ್ದರಿಂದ ಕ್ರಿಸ್ತಯೇಸುವಿಗೆ ಸಾಕ್ಷಿ ಆಗಿರಲು ನಾಚಬೇಡ. ಅವರಿಗಾಗಿ ಬಂಧಿಯಾಗಿರುವ ನನ್ನ ವಿಷಯದಲ್ಲೂ ನಾಚಬೇಡ. ದೇವರ ಶಕ್ತಿಯನ್ನು ಆಶ್ರಯಿಸಿ ನನ್ನೊಡನೆ ಶುಭಸಂದೇಶಕ್ಕೋಸ್ಕರ ನಿನ್ನ ಪಾಲಿನ ಶ್ರಮವನ್ನು ಅನುಭವಿಸು.


ಆದ್ದರಿಂದ ನೀವು ಸ್ವಸ್ಥಚಿತ್ತರಾಗಿರಿ. ನಿಮ್ಮ ಮನಸ್ಸು ಕಾರ್ಯೋನ್ಮುಖವಾಗಿರಲಿ. ಯೇಸುಕ್ರಿಸ್ತರು ಪ್ರತ್ಯಕ್ಷವಾಗುವಾಗ ನಿಮಗೆ ಲಭಿಸಲಿರುವ ಸೌಭಾಗ್ಯದಲ್ಲಿ ಪೂರ್ಣ ನಿರೀಕ್ಷೆ ಉಳ್ಳವರಾಗಿರಿ.


ಕ್ರಿಸ್ತಯೇಸುವಿನ ನಿಷ್ಠಾವಂತ ಸೈನಿಕನಂತೆ ಕಷ್ಟದುಃಖಗಳನ್ನು ತಾಳ್ಮೆಯಿಂದ ಸಹಿಸಿಕೋ.


ತನಗೆ ಒಪ್ಪಿಸಿದ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕೆಂಬುದಾಗಿ ಅರ್ಖಿಪ್ಪನಿಗೆ ತಿಳಿಸಿರಿ.


ನೀನಿನ್ನೂ ಯುವಕನೆಂದು ನಿನ್ನನ್ನು ತಾತ್ಸಾರ ಮಾಡುವುದಕ್ಕೆ ಯಾರಿಗೂ ಅವಕಾಶ ಕೊಡಬೇಡ. ನಿನ್ನ ನಡೆನುಡಿ, ಪ್ರೀತಿವಿಶ್ವಾಸ ಹಾಗೂ ಪರಿಶುದ್ಧತೆಯ ವಿಷಯದಲ್ಲಿ ವಿಶ್ವಾಸಿಗಳಿಗೆಲ್ಲರಿಗೂ ನೀನೇ ಆದರ್ಶಪ್ರಾಯನಾಗಿರು.


ಮಾರನೆಯ ದಿನ ಅಲ್ಲಿಂದ ಹೊರಟು ಸೆಜರೇಯಕ್ಕೆ ಬಂದೆವು. ಅಲ್ಲಿ ಶುಭಸಂದೇಶ ಪ್ರಚಾರಕ ಫಿಲಿಪ್ಪನ ಮನೆಗೆ ಹೋಗಿ ಅವನೊಡನೆ ತಂಗಿದೆವು. ಜೆರುಸಲೇಮಿನಲ್ಲಿ ಆಯ್ಕೆಯಾದ ಏಳುಮಂದಿಯಲ್ಲಿ ಇವನೂ ಒಬ್ಬನು.


ನಿನ್ನ ಆಧ್ಯಾತ್ಮಿಕ ಪ್ರಗತಿ ಎಲ್ಲರಿಗೂ ಗೋಚರವಾಗುವಂತೆ ಈ ಕಾರ್ಯಸಾಧನೆಗಳಲ್ಲಿ ನಿರತನಾಗಿರು;


ಅಂದ ಮೇಲೆ, ಇತರರಂತೆ ನಾವು ನಿದ್ದೆಮಾಡದೆ ಎಚ್ಚರವಾಗಿದ್ದು ಸ್ವಸ್ಥಚಿತ್ತರಾಗಿ ವರ್ತಿಸೋಣ.


ಎಚ್ಚೆತ್ತು ನಿನ್ನಲ್ಲಿ ಉಳಿದಿರುವುಗಳನ್ನು ಉತ್ತೇಜನಗೊಳಿಸು; ಅವು ಸಾವಿನ ದವಡೆಯಲ್ಲಿವೆ. ನನ್ನ ದೇವರ ದೃಷ್ಟಿಯಲ್ಲಿ ನಿನ್ನ ಕೃತ್ಯಗಳು ಯಾವುವೂ ಸಮಗ್ರವಾಗಿರುವುದು ನನಗೆ ಕಂಡುಬಂದಿಲ್ಲ.


ಈ ವ್ಯಕ್ತಿ ನರಮಾನವರಿಗೆ ವರದಾನಗಳನ್ನಿತ್ತರು. ಕೆಲವರನ್ನು ಪ್ರೇಷಿತರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಬೋಧಕರನ್ನಾಗಿಯೂ ನೇಮಿಸಿದರು.


ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ. ಅವರ ಆಜ್ಞೆಗಳನ್ನು ಪಾಲಿಸಿರಿ. ಅವರು ನಿಮ್ಮ ಆತ್ಮಗಳ ಪಾಲಕರು; ದೇವರಿಗೆ ಲೆಕ್ಕ ಒಪ್ಪಿಸಬೇಕಾದವರು. ಈ ಸೇವೆಯನ್ನು ಅವರು ಸಂತೋಷದಿಂದ ಮಾಡುವಂತೆ ನೀವು ನಡೆದುಕೊಳ್ಳಿ. ಅವರು ಮನನೊಂದುಕೊಂಡು ಮಾಡುವ ಸೇವೆಯಿಂದ ನಿಮಗೆ ಒಳಿತಾಗದು.


ದೇವರಿಂದ ಆಯ್ಕೆಯಾದ ಪ್ರಜೆಗಳು ಪ್ರಭು ಯೇಸುವಿನಲ್ಲಿ ಲಭಿಸುವ ಜೀವೋದ್ಧಾರವನ್ನೂ ಅನಂತಮಹಿಮೆಯನ್ನೂ ನನ್ನೊಂದಿಗೆ ಪಡೆಯಲೆಂದು ನಾನು ಇದೆಲ್ಲವನ್ನೂ ಅವರಿಗಾಗಿ ಸಹಿಸುತ್ತಿದ್ದೇನೆ.


ಯಜಮಾನನು ಬಂದು ಯಾವ ಯಾವ ಸೇವಕ ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುತ್ತಾನೋ, ಅಂಥವರು ಭಾಗ್ಯವಂತರು. ಏಕೆಂದರೆ, ಯಜಮಾನನೇ ನಡುಕಟ್ಟಿನಿಂತು, ಅವರನ್ನು ಊಟಕ್ಕೆ ಕೂರಿಸಿ, ಒಬ್ಬೊಬ್ಬನಿಗೂ ತಾನೇ ಉಪಚಾರ ಮಾಡುವನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.


ನಿಮಗೆ ಹೇಳುವುದನ್ನೇ ಸರ್ವರಿಗೂ ಹೇಳುತ್ತೇನೆ; ಎಚ್ಚರಿಕೆಯಿಂದಿರಿ!” ಎಂದರು.


ದೇವರು ನನ್ನನ್ನು ಧರ್ಮಸಭೆಯ ದಾಸನನ್ನಾಗಿ ನೇಮಿಸಿದ್ದಾರೆ. ನಿಮ್ಮ ಹಿತಕ್ಕಾಗಿ ಒಂದು ಮಹತ್ವದ ಕಾರ್ಯವನ್ನು ನನಗೆ ವಹಿಸಿರುತ್ತಾರೆ.


ಜೆರುಸಲೇಮಿನಿಂದ ಪ್ರಾರಂಭಿಸಿ ಇಲ್ಲುರಿಕ ಪ್ರಾಂತ್ಯದವರೆಗೂ ಸುತ್ತಮುತ್ತಿನಲ್ಲೂ ನಾನು ಸಂಚಾರಮಾಡಿ, ಕ್ರಿಸ್ತಯೇಸುವಿನ ಶುಭಸಂದೇಶವನ್ನು ಪೂರ್ತಿಯಾಗಿ ಪ್ರಚಾರಮಾಡಿದ್ದೇನೆ.


ಪ್ರವಾಸಕ್ಕೆಂದು ಯಜಮಾನನೊಬ್ಬನು ಮನೆಬಿಟ್ಟು ಹೋಗುವಾಗ ತನ್ನ ಸೇವಕರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ಜವಾಬ್ದಾರಿಕೆಯನ್ನು ವಹಿಸಿ, ದ್ವಾರಪಾಲಕನಿಗೆ ‘ನೀನು ಎಚ್ಚರವಾಗಿರಬೇಕು,’ ಎಂದು ಅಪ್ಪಣೆಕೊಡುವ ರೀತಿಯಲ್ಲಿ ನಾನು ನಿಮಗೆ ಹೇಳುತ್ತಿದ್ದೇನೆ. ಎಚ್ಚರವಾಗಿರಿ;


“ನರಪುತ್ರನೇ, ಜನರನ್ನು ಸಂಭೋದಿಸಿ ಅವರಿಗೆ ಹೀಗೆ ನುಡಿ - “ನಾನು ದೇಶದ ಮೇಲೆ ಖಡ್ಗವನ್ನು ಬೀಳಮಾಡುವಾಗ, ಆ ದೇಶದವರು ತಮ್ಮಲ್ಲಿ ಆರಿಸಿ ನೇಮಿಸಿಕೊಂಡ ಕಾವಲುಗಾರನು


“ನರಪುತ್ರನೇ, ನಾನು ನಿನ್ನನ್ನು ಇಸ್ರಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ ನನ್ನ ಪರವಾಗಿ ಅವರನ್ನು ಎಚ್ಚರಿಸು.


ಸರ್ವೇಶ್ವರ ಸ್ವಾಮಿ ಕಾವಲುಗಾರರನ್ನು ನೇಮಿಸಿ, “ಕಹಳೆಯ ಕೂಗನ್ನು ಕೇಳಿ” ಎಂದರು. ಅವರು “ಇಲ್ಲ, ಕೇಳುವುದಿಲ್ಲ” ಎಂದು ಉತ್ತರಿಸಿದರು.


ಜೆರುಸಲೇಮ್, ಕಾವಲಿಟ್ಟಿರುವೆ ನಿನ್ನ ಗೋಡೆ ಸುತ್ತಲು ಮೌನವಿರಕೂಡದು ಆ ಕಾವಲಿಗರು ಹಗಲಿರುಳು.


“ನರಪುತ್ರನೇ, ನಾನು ನಿನ್ನನ್ನು ಇಸ್ರಯೇಲ್ ವಂಶದವರಿಗೆ ಕಾವಲುಗಾರನಾಗಿ ನೇಮಿಸಿದ್ದೇನೆ; ನೀನು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ದೂತನಾಗಿ ಅವರನ್ನು ಎಚ್ಚರಪಡಿಸು.


ದೇವಜನರನ್ನು ಪರಿಣಿತರನ್ನಾಗಿಸಿ ದೇವರ ಸೇವೆಗೆ ಸಿದ್ಧಗೊಳಿಸಲೆಂದು ಮತ್ತು ಯೇಸುಕ್ರಿಸ್ತರ ದೇಹವಾದ ಧರ್ಮಸಭೆ ಅಭಿವೃದ್ಧಿಹೊಂದಲೆಂದು ಈ ವರಗಳನ್ನು ಅವರಿಗೆ ನೀಡಿದರು.


ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮೀಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು. ಅಲ್ಲದೆ, ಸಿಂಹದ ಬಾಯಿಂದಲೂ ನನ್ನನ್ನು ಸಂರಕ್ಷಿಸಿದರು.


ಐದು ತಲೆಂತು ಪಡೆದ ಸೇವಕ ಒಡನೇ ಹೋಗಿ ಆ ಮೊತ್ತದಿಂದ ವ್ಯಾಪಾರಮಾಡಿ ಇನ್ನೂ ಐದನ್ನು ಸಂಪಾದಿಸಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು