Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 1:10 - ಕನ್ನಡ ಸತ್ಯವೇದವು C.L. Bible (BSI)

10 ಪ್ರಭು ತಮ್ಮ ಸದ್ಭಕ್ತರೆಲ್ಲರಿಂದ ಸನ್ಮಾನವನ್ನೂ ವಿಶ್ವಾಸಿಗಳೆಲ್ಲರಿಂದ ಗೌರವವನ್ನೂ ಪಡೆಯುವ ಆ ದಿನದಲ್ಲಿ ಇದೆಲ್ಲಾ ಸಂಭವಿಸುವುದು. ನಾವು ನಿಮಗಿತ್ತ ಸಾಕ್ಷಿಯನ್ನು ನಂಬಿದ ನೀವೆಲ್ಲರೂ ಅವರೊಂದಿಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆ ದಿನದಲ್ಲಿ ಆತನು ಬರುವಾಗ ತನ್ನ ಪರಿಶುದ್ಧ ಜನರಿಂದ ಮಹಿಮೆ ಹೊಂದಿದವನಾಗಿಯೂ ಮತ್ತು ನಾವು ನಿಮಗೆ ಹೇಳಿದ ಸಾಕ್ಷಿಯನ್ನು ನಂಬಿದವರೆಲ್ಲರ ಮೂಲಕ ತನ್ನ ವಿಷಯದಲ್ಲಿ ಆಶ್ಚರ್ಯ ಹುಟ್ಟಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಪ್ರಭುವಾದ ಯೇಸು ಪ್ರತ್ಯಕ್ಷನಾದಾಗ ಇದು ಸಂಭವಿಸುತ್ತದೆ. ಆತನು ತನಗೆ ದೊರೆಯ ಬೇಕಾದ ವೈಭವವನ್ನು ಸ್ವೀಕರಿಸಲು ತನ್ನ ಪರಿಶುದ್ಧ ಜನರೊಂದಿಗೆ ಪ್ರತ್ಯಕ್ಷನಾಗುತ್ತಾನೆ. ಆತನನ್ನು ನಂಬಿದ ಜನರೆಲ್ಲರೂ ಆತನನ್ನು ಕಂಡು ಆಶ್ಚರ್ಯಚಕಿತರಾಗುವರು. ನಾವು ಹೇಳಿದ್ದನ್ನು ನಂಬಿದ ನೀವೆಲ್ಲರೂ ವಿಶ್ವಾಸಿಗಳ ಆ ಸಮೂಹದಲ್ಲಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆ ದಿನದಲ್ಲಿ ಕರ್ತ ಯೇಸು ತಮ್ಮ ಪರಿಶುದ್ಧ ಜನರಲ್ಲಿ ಮಹಿಮೆ ಹೊಂದುವವರಾಗಿಯೂ ನಂಬುವವರೆಲ್ಲರನ್ನು ಆಶ್ಚರ್ಯಪಡಿಸುವವರಾಗಿಯೂ ಬರುವರು. ನಮ್ಮ ಸಾಕ್ಷಿಯನ್ನು ನಂಬಿದ್ದರಿಂದ ನಿಮಗೂ ಇವು ಸಂಭವಿಸುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತ್ಯಾ ದಿಸಿ ತೊ ಅಪ್ನಾಚ್ಯಾ ವಿಶ್ವಾಸಾಚ್ಯಾ ಪವಿತ್ರ್ ಲೊಕಾನಿಕ್ನಾ ಮಹಿಮಾ ಅನಿ ಮಾನ್ ಘೆವ್ಕ್ ಮನುನ್ ಯೆಲ್ಲ್ಯಾ ತನ್ನಾ, ತುಮಿಬಿ ತ್ಯಾ ವಿಶ್ವಾಸಾಚ್ಯಾ ಲೊಕಾಂಚ್ಯಾ ಮದ್ದಿ ರ್‍ಹಾತ್ಯಾಶಿ, ಕಶ್ಯಾಕ್ ಮಟ್ಲ್ಯಾರ್ ತುಮಿ, ಅಮಿ ಸಾಂಗಟಲ್ಲ್ಯಾ ಬರ್‍ಯಾ ಖಬ್ರೆ ವರ್‍ತಿ ವಿಶ್ವಾಸ್ ಕರ್ಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 1:10
40 ತಿಳಿವುಗಳ ಹೋಲಿಕೆ  

ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು.


ದೇವರು ನಿಮ್ಮ ಮನೋನೇತ್ರಗಳನ್ನು ತೆರೆಯಲಿ; ಅವರ ಬೆಳಕು ನಿಮಗೆ ಕಾಣುವಂತೆ ಆಗಲಿ. ಹೀಗೆ, ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದ್ದೆಂದೂ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯ ಸಂಪತ್ತು ಎಂಥದ್ದೆಂದೂ ನೀವು ಅರಿತುಕೊಳ್ಳಬೇಕು.


ಅವನವನ ಕೆಲಸದ ಗುಣವು ಕಡೆಯ ದಿನ ಬಟ್ಟಬಯಲಾಗುವುದು. ಯೇಸುಕ್ರಿಸ್ತರ ಆ ದಿನವು ಬೆಂಕಿಯ ದಿನವಾಗಿ ಪ್ರಜ್ವಲಿಸುವುದು. ಪ್ರತಿಯೊಬ್ಬನ ಕೆಲಸವನ್ನು ಆ ಬೆಂಕಿ ಪರೀಕ್ಷಿಸುವುದು.


ಏಕೆಂದರೆ, ಇವರು ನಿಮ್ಮವರು; ಇವರಿಂದ ನನಗೆ ಮಹಿಮೆ ಉಂಟಾಗಿದೆ. ನನ್ನದೆಲ್ಲವೂ ನಿಮ್ಮದೇ; ನಿಮ್ಮದು ಎಲ್ಲವೂ ನನ್ನದೇ.


ಆತನೆನಗೆ ಇಂತೆಂದ : “ನೀನೆನ್ನ ದಾಸ; ನನ್ನ ಮಹಿಮೆ ಬೆಳಗಿಸುವ ಇಸ್ರಯೇಲ.”


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ಯಕೋಬ್ಯರಿಗೆ ವಿರುದ್ಧವಾದ ಶಕುನವಿಲ್ಲ ಇಸ್ರಯೇಲರಿಗೆ ವಿರುದ್ಧವಾದ ತಂತ್ರಮಂತ್ರವಿಲ್ಲ. ತಾನು ಮಾಡುವುದನ್ನು ತತ್ಕಾಲದಲ್ಲೇ ದೇವ ತಿಳಿಸುತ್ತಾನೆ ಯಕೋಬ್ಯರಿಗೆ ಅದನ್ನು ಸೂಚಿಸುತ್ತಾನೆ ಸಮಯೋಚಿತವಾಗಿ ಆ ಇಸ್ರಯೇಲರಿಗೆ.


ಸಹೋದರರೇ, ಪ್ರಭುವಿಗೆ ಪ್ರಿಯರಾದವರೇ, ನಿಮಗಾಗಿ ನಿರಂತರವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ನಾವು ಬದ್ಧರು. ಏಕೆಂದರೆ, ದೇವರು ನಿಮ್ಮನ್ನು ಪವಿತ್ರಾತ್ಮರ ಮುಖಾಂತರ ಪಾವನಗೊಳಿಸಿ, ನೀವು ಸತ್ಯದಲ್ಲಿ ವಿಶ್ವಾಸವಿಡುವಂತೆ ಮಾಡಿ, ಜೀವೋದ್ಧಾರವನ್ನು ಪಡೆಯುವಂತೆ ನಿಮ್ಮನ್ನು ಪ್ರಥಮ ಫಲವನ್ನಾಗಿ ಆರಿಸಿಕೊಂಡಿದ್ದಾರೆ.


ಇದಲ್ಲದೆ, ಕ್ರಿಸ್ತಯೇಸುವನ್ನು ಕುರಿತ ಸಾಕ್ಷ್ಯವು ನಿಮ್ಮಲ್ಲಿ ನೆಲೆಗೊಂಡಿದೆ.


ಸ್ವರ್ಗೀಯ ಸಭೆಯಲಿ ಪ್ರತಿಭಾವಂತನು ದೇವನು II ಸುತ್ತಣದೆಲ್ಲ ಪರಿವಾರಕ್ಕಿಂತ ಬಹು ಭೀಕರನು II


ಅಂತಿಮ ದಿನದಂದು ಪ್ರಭು ಯೇಸು ಆತನಿಗೆ ಕರುಣೆತೋರಲಿ. ನಾನು ಏಷ್ಯಾದಲ್ಲಿದ್ದಾಗ ಆತನು ನನಗೆ ಎಷ್ಟೊಂದು ನೆರವು ನೀಡಿದನೆಂದು ನಿನಗೆ ಚೆನ್ನಾಗಿ ತಿಳಿದಿದೆ.


ಇದಕ್ಕಾಗಿಯೇ ಇಷ್ಟೆಲ್ಲಾ ಕಷ್ಟಕಾರ್ಪಣ್ಯಗಳನ್ನು ನಾಚಿಕೆಪಡದೆ ಅನುಭವಿಸುತ್ತಿದ್ದೇನೆ. ನಾನು ಯಾರಲ್ಲಿ ವಿಶ್ವಾಸವನ್ನಿಟ್ಟಿದ್ದೇನೆ ಎಂದು ಚೆನ್ನಾಗಿ ಬಲ್ಲೆ. ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನದವರೆಗೂ ಕಾಪಾಡುವುದಕ್ಕೆ ಅವರು ಶಕ್ತರು. ಆದ್ದರಿಂದ ನಾನು ಪೂರ್ಣ ಭರವಸೆಯಿಂದ ಇದ್ದೇನೆ.


ಹೀಗೆ ನಿಮ್ಮ ಮುಖಾಂತರ ಪ್ರಭು ಯೇಸುವಿನ ನಾಮಕ್ಕೂ ಮತ್ತು ಅವರಲ್ಲಿ ನಿಮಗೂ ಮಹಿಮೆಯುಂಟಾಗಲಿ. ನಮ್ಮ ದೇವರ ಹಾಗು ಪ್ರಭು ಯೇಸುಕ್ರಿಸ್ತರ ಅನುಗ್ರಹದಿಂದ ಇದು ನೆರವೇರಲಿ.


ಇನ್ನೊಂದು ಕಾರಣಕ್ಕಾಗಿಯೂ ನಾವು ಸತತವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನೀವು ದೇವರ ಸಂದೇಶವನ್ನು ನಮ್ಮಿಂದ ಕೇಳಿದಾಗ, ಅದನ್ನು ಮನುಷ್ಯರ ಮಾತುಗಳೆಂದು ಪರಿಗಣಿಸದೆ, ದೇವರ ವಾಕ್ಯವೆಂದೇ ಅರಿತು ಅಂಗೀಕರಿಸಿದಿರಿ. ವಿಶ್ವಾಸಿಗಳಾದ ನಿಮ್ಮಲ್ಲಿ ಚೈತನ್ಯಪೂರ್ಣವಾಗಿರುವ ಈ ವಾಕ್ಯವು, ನಿಜವಾಗಿಯೂ ದೇವರ ಸಂದೇಶವೇ ಸರಿ.


ಸಹೋದರರೇ, ನಾವು ನಿಮ್ಮಲ್ಲಿಗೆ ಬಂದುದು ವ್ಯರ್ಥವಾಗಲಿಲ್ಲವೆಂಬುದು ನಿಮಗೆ ಗೊತ್ತು.


ನಮ್ಮ ಶುಭಸಂದೇಶ ಕೇವಲ ಬಾಯಿಮಾತಿನದಲ್ಲ; ಅದು ಶಕ್ತಿಪೂರ್ಣವಾಗಿ ಪವಿತ್ರಾತ್ಮರ ಸಮೇತವಾಗಿ ಪೂರ್ಣ ಪ್ರಮಾಣದಿಂದ ಬಂದದ್ದು. ನಾವು ನಿಮ್ಮ ನಡುವೆಯಿದ್ದಾಗ, ನಿಮಗೋಸ್ಕರ ಹೇಗೆ ವರ್ತಿಸಿದೆವು ಎಂದು ನೀವೇ ಬಲ್ಲಿರಿ.


ಅವರು ತಮ್ಮ ಮಹಿಮೆಯ ಸಂಪನ್ಮೂಲಗಳಿಂದ ಪವಿತ್ರಾತ್ಮ ಅವರ ಮುಖಾಂತರ ನಿಮ್ಮ ಅಂತರಂಗವನ್ನು ಬಲಗೊಳಿಸಲಿ;


ಹೀಗೆ ಧರ್ಮಸಭೆಯ ಮೂಲಕ ದೇವರ ಬಹುರೂಪದ ಜ್ಞಾನವು ಅಶರೀರ ಶಕ್ತಿಗಳ ಅಧಿಕಾರಿಗಳಿಗೂ ಅಧಿಪತಿಗಳಿಗೂ ಈಗಿನ ಕಾಲದಲ್ಲಿ ತಿಳಿಯಬೇಕೆಂಬುದೇ ಅವರ ಉದ್ದೇಶವಾಗಿತ್ತು.


ದೇವರು ಯೇಸುಕ್ರಿಸ್ತರಲ್ಲಿ ನಮಗೆ ತೋರಿದ ದಯೆಯ ಮೂಲಕ ತಮ್ಮ ಅನುಗ್ರಹದ ಶ್ರೀಮಂತಿಕೆಯನ್ನು ಮುಂದಣ ಯುಗಗಳಲ್ಲಿ ತಿಳಿಯಪಡಿಸುವುದೇ ಅವರ ಉದ್ದೇಶವಾಗಿತ್ತು.


ಹೀಗೆ ದೇವರಿಗೆ ಸೇರಿದವರು ವಿಮೋಚನೆ ಹೊಂದಿ ಸ್ವರ್ಗೀಯ ಸ್ವಾಸ್ತ್ಯಕ್ಕೆ ಬಾಧ್ಯರಾಗಲು ಆ ಪವಿತ್ರಾತ್ಮರೇ ಆಧಾರ. ಈ ಕಾರಣ ದೇವರಿಗೆ ಮಹಿಮೆ ಸಲ್ಲಲಿ.


ಆದಕಾರಣ ಯೇಸುಕ್ರಿಸ್ತರಲ್ಲಿ ಮೊತ್ತಮೊದಲು ನಿರೀಕ್ಷೆಯನ್ನಿರಿಸಿದ ನಾವು ದೇವರ ಮಹಿಮೆಯನ್ನು ಸ್ತುತಿಸಿ ಹಾಡಬೇಕು.


ತಮ್ಮ ಪ್ರೀತಿಯ ಪುತ್ರನಲ್ಲೇ ಅವರು ನಮಗೆ ಉಚಿತವಾಗಿ ಅನುಗ್ರಹಿಸಿರುವ ಅತಿಶಯ ವರಪ್ರಸಾದಕ್ಕಾಗಿ ಅವರಿಗೆ ಸ್ತುತಿಸಲ್ಲಿಸೋಣ.


ಈ ಕಾರಣ ನನ್ನನ್ನು ಕುರಿತು ಅವರು ದೇವರನ್ನು ಕೊಂಡಾಡುತ್ತಿದ್ದರು.


ಇದನ್ನು ಕೇಳಿದ ಯೇಸು, “ಈ ಕಾಯಿಲೆ ಮರಣಕ್ಕಾಗಿ ಬಂದುದಲ್ಲ, ದೇವರ ಮಹಿಮೆಗೋಸ್ಕರ ಬಂದಿದೆ. ಇದರ ಮೂಲಕ ದೇವರ ಪುತ್ರನಿಗೆ ಮಹಿಮೆ ಉಂಟಾಗಲಿದೆ,” ಎಂದು ನುಡಿದರು.


ತೀರ್ಪಿನ ದಿನ ಈ ಊರಿನ ಗತಿ ಸೊದೋಮ್ ಊರಿನ ಗತಿಗಿಂತಲೂ ಕಠಿಣವಾಗಿರುವುದೆಂದು ನಾನು ನಿಮಗೆ ಹೇಳುತ್ತೇನೆ.


“ನರಪುತ್ರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಬರುವಾಗ ತನ್ನ ಮಹಿಮಾನ್ವಿತ ಸಿಂಹಾಸನದಲ್ಲಿ ಆಸೀನನಾಗಿರುವನು.


“ಆ ದಿನವಾಗಲಿ, ಆ ಗಳಿಗೆಯಾಗಲಿ ಯಾವಾಗ ಬರುವುದೆಂದು ದೇವರೇ ಹೊರತು ಮತ್ತಾರೂ ಅರಿಯರು. ಸ್ವರ್ಗದ ದೂತರೇ ಆಗಲಿ, ಪುತ್ರನೇ ಆಗಲಿ ಅದನ್ನು ಅರಿಯರು.


ತೀರ್ಪಿನ ದಿನದಂದು, ‘ಸ್ವಾಮೀ, ಸ್ವಾಮೀ, ನಿಮ್ಮ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿಮ್ಮ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೆ? ನಿಮ್ಮ ಹೆಸರಿನಲ್ಲಿ ಹಲವಾರು ಮಹತ್ಕಾರ್ಯಗಳನ್ನು ಮಾಡಲಿಲ್ಲವೇ?’ ಎಂದು ಅನೇಕರು ನನಗೆ ಹೇಳುವರು.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಇವರು ನನ್ನ ಜನರು; ನಾನು ಕಾರ್ಯತತ್ಪರನಾಗುವ ದಿನದಂದು ಅವರು ನನಗೆ ಸ್ವಕೀಯಜನರಾಗಿರುವರು. ತಂದೆಯೊಬ್ಬನು ತನಗೆ ಸೇವೆಮಾಡುವ ಮಗನನ್ನು ಕಾಪಾಡುವಂತೆ ನಾನು ಅವರನ್ನು ಕಾಪಾಡುವೆನು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.”


ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.


ಜಯ ಜಯಕಾರ ಮಾಡು ಓ ಆಕಾಶವೇ, ಜಯಘೋಷ ಮಾಡು ಭೂ ತಳವೇ, ಹರ್ಷಧ್ವನಿಗೈಯಿರಿ ಬೆಟ್ಟಗುಡ್ಡಗಳೇ ವನವೃಕ್ಷಗಳೇ. ವಿಮೋಚಿಸಿದನು ಸರ್ವೇಶ್ವರ ಯಕೋಬನನು, ಇಸ್ರಯೇಲನ್ನು ರಕ್ಷಿಸಿ ಪ್ರಚಾರಗೊಳಿಸಿದನು ತನ್ನ ಮಹಿಮೆಯನು.


ನಾ ಸೃಷ್ಟಿಸಿದ ಆಪ್ತ ಜನಕೆ ನೀಡುವೆನು ಜಲಪಾನವನು; ಎಂದೇ ಸ್ತುತಿಸಿಕೊಂಡಾಡುವರು ನನ್ನನು.”


ಪರಮ ಪವಿತ್ರಾಲಯದಲ್ಲಿಹ ದೇವಭಯಭಕುತಿಗೆ ಪಾತ್ರ I ಪ್ರಜೆಗೆ ಪರಾಕ್ರಮವೀವ ಇಸ್ರಯೇಲ ದೇವನಿಗೆ ಸ್ತೋತ್ರ II


ಜನಸಾಮಾನ್ಯರ ಅಟ್ಟಹಾಸವನ್ನು ಅಡಗಿಸಲಾಗುವುದು, ಪ್ರಮುಖರ ಗರ್ವ ಕಮರಿಹೋಗುವುದು, ಸ್ವಾಮಿ ಮಾತ್ರ ಅಂದು ಉನ್ನತೋನ್ನತವಾಗಿರುವರು.


ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


ಇಲ್ಲಿರುವವರಲ್ಲಿ ಕೆಲವರು ನರಪುತ್ರನು ತನ್ನ ಸಾಮ್ರಾಜ್ಯದಲ್ಲಿ ಪ್ರತ್ಯಕ್ಷನಾಗುವುದನ್ನು ಕಾಣುವುದಕ್ಕೆ ಮುನ್ನ ಸಾವನ್ನು ಸವಿಯುವುದಿಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.


ತಮ್ಮ ರಾಜ್ಯ ಹಾಗೂ ವೈಭವದಲ್ಲಿ ಭಾಗವಹಿಸಲು ಕರೆಯಿತ್ತ ದೇವರು ಮೆಚ್ಚುವಂತೆ ಬಾಳಬೇಕೆಂದು ನಿಮಗೆ ವಿಧಿಸಿದೆವು; ಇದೆಲ್ಲಾ ನಿಮಗೆ ತಿಳಿದಿದೆ.


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು