Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 1:5 - ಕನ್ನಡ ಸತ್ಯವೇದವು C.L. Bible (BSI)

5 ನೀವು ಅನುಭವಿಸುತ್ತಿರುವುದೆಲ್ಲ ದೇವರ ಸಾಮ್ರಾಜ್ಯಕ್ಕಾಗಿ. ಈ ಕಷ್ಟಾನುಭವಗಳ ಮೂಲಕ ದೇವರು ನಿಮ್ಮನ್ನು ತಮ್ಮ ಸಾಮ್ರಾಜ್ಯಕ್ಕೆ ಅರ್ಹರನ್ನಾಗಿ ಮಾಡುತ್ತಾರೆ. ಇವುಗಳಲ್ಲಿ ನೀವು ತೋರಿಸುವ ಸಹನೆ ಹಾಗೂ ವಿಶ್ವಾಸ ಇವುಗಳೇ ದೇವರು ನ್ಯಾಯವಾದ ತೀರ್ಪು ಮಾಡುತ್ತಾರೆಂಬುದಕ್ಕೆ ಸ್ಪಷ್ಟ ನಿದರ್ಶನಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೇವರ ನೀತಿಯುಳ್ಳ ತೀರ್ಪಿಗೆ ಪ್ರಮಾಣ ಯಾವುದೆಂದರೆ, ನೀವು ಪ್ರಯಾಸಪಡುತ್ತಿರುವ ದೇವರ ರಾಜ್ಯಕ್ಕೆ ನಿಮ್ಮನ್ನು ಯೋಗ್ಯರನ್ನಾಗಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದೇವರು ನ್ಯಾಯವಾದ ತೀರ್ಪುಮಾಡುತ್ತಾನೆಂಬದಕ್ಕೆ ನಿಮ್ಮ ತಾಳ್ಮೆಯು ಸ್ಪಷ್ಟವಾದ ನಿದರ್ಶನವಾಗಿದೆ. ಯಾವ ದೇವರಾಜ್ಯಕ್ಕೋಸ್ಕರ ನೀವು ಕಷ್ಟವನ್ನನುಭವಿಸುತ್ತೀರೋ ಅದಕ್ಕೆ ನೀವು ಯೋಗ್ಯರಾಗಬೇಕೆಂಬದೇ ದೇವರ ಅಭಿಪ್ರಾಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೇವರು ನ್ಯಾಯವಾದ ತೀರ್ಪನ್ನು ನೀಡುತ್ತಾನೆಂಬುದಕ್ಕೆ ಅದೇ ಪ್ರಮಾಣವಾಗಿದೆ. ದೇವರ ರಾಜ್ಯಕ್ಕೆ ನೀವು ಯೋಗ್ಯರಾಗಿರಬೇಕೆಂಬುದು ಆತನ ಅಪೇಕ್ಷೆ. ನೀವು ಹಿಂಸೆಪಡುತ್ತಿರುವುದು ಆ ರಾಜ್ಯಕ್ಕೋಸ್ಕರವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವು ಯಾವ ದೇವರ ರಾಜ್ಯಕ್ಕಾಗಿ ಕಷ್ಟವನ್ನು ಅನುಭವಿಸುತ್ತಿರುವಿರೋ, ಆ ರಾಜ್ಯಕ್ಕಾಗಿ ನೀವು ಯೋಗ್ಯರೆಂದು ಎಣಿಕೆಯಾಗಲು ಇದು ದೇವರ ನೀತಿಯುಳ್ಳ ನ್ಯಾಯತೀರ್ಪಿಗೆ ಸ್ಪಷ್ಟವಾದ ನಿದರ್ಶನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಹೆ ಸಗ್ಳೆ ಬಗಟ್ಲ್ಯಾರ್, ದೆವಾಚೊ ಝಡ್ತಿಚೊ ದಿಸ್ ಯೆವ್ನ್ ಹೊಲಾ, ಅನಿ ತುಮಿ ಸಗ್ಳೆ ಜೆ ಖಲ್ಯಾ ರಾಜಾಸಾಟ್ನಿ ಕಸ್ಟ್ ಸೊಸುಲ್ಯಾಸಿ, ತ್ಯಾ ರಾಜಾತ್ ಜಾವ್ಕ್ ಯೊಗ್ಯ್ ಮನಿ ಸರ್ಕೆ ನಿರ್ನಯ್ ಹೊಲಾ ಮನ್ತಲೆ ದಾಕ್ವುನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 1:5
28 ತಿಳಿವುಗಳ ಹೋಲಿಕೆ  

ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲೂ ಅಂಜದೆ, ಅಳುಕದೆ ಧೈರ್ಯದಿಂದಿರಿ. ಇದೇ ಅವರಿಗೆ ಅವರ ವಿನಾಶದ ಸ್ಪಷ್ಟ ಮುನ್ಸೂಚನೆ! ನಿಮಗೆ ದೇವರಿಂದ ಬರುವ ಸಂರಕ್ಷಣೆಯ ಮುನ್ಸೂಚನೆ.


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ಆತನ ನ್ಯಾಯತೀರ್ಪು ಸತ್ಯವಾದುದು, ನೀತಿಬದ್ಧವಾದುದು. ಇತ್ತಿರುವನಾತ ತೀರ್ಪನು ಮಹಾ ವೇಶ್ಯೆಯ ವಿರುದ್ಧ ಪೃಥ್ವಿಯನೇ ಹೊಲಸೆಬ್ಬಿಸಿದ ವ್ಯಭಿಚಾರಿಯ ವಿರುದ್ಧ ತನ್ನ ದಾಸರ ರಕ್ತಪಾತದ ಸೇಡನು ತೀರಿಸಿಹನಾತ,” ಎಂದು ಜನಸಮೂಹವು ಘೋಷಿಸಿತು.


ಆದರೆ ಸತ್ತವರು ಪುನರುತ್ಥಾನ ಹೊಂದಿ ಮರುಲೋಕ ಜೀವನಕ್ಕೆ ಯೋಗ್ಯರಾದಾಗ ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ.


ನಾವು ಆತನೊಡನೆ ಸತ್ತಿದ್ದರೆ, ಆತನೊಡನೆ ಜೀವಿಸುತ್ತೇವೆ; ಸೈರಣೆಯುಳ್ಳವರು ನಾವಾದರೆ, ಆತನೊಡನೆ ರಾಜ್ಯವಾಳುತ್ತೇವೆ; ನಾವಾತನನು ನಿರಾಕರಿಸಿದರೆ, ನಮ್ಮನ್ನಾತನು ನಿರಾಕರಿಸುತ್ತಾನೆ.


ಇದಕ್ಕಾಗಿ ನಿಮಗೋಸ್ಕರ ನಾವು ಸದಾ ಪ್ರಾರ್ಥಿಸುತ್ತೇವೆ. ದೇವರೇ ನೀಡಿರುವ ಕರೆಗೆ ನೀವು ಯೋಗ್ಯರಾಗಿ ಬಾಳುವಂತಾಗಲಿ; ದೇವರ ಮಹಿಮಾಶಕ್ತಿಯಿಂದ ನಿಮ್ಮ ಶುಭಾಕಾಂಕ್ಷೆಗಳು ಮತ್ತು ವಿಶ್ವಾಸಪ್ರೇರಿತ ಕಾರ್ಯಗಳು ಪೂರ್ಣವಾಗಲಿ.


ನಾವು ಮಕ್ಕಳಾಗಿದ್ದರೆ, ಹಕ್ಕುಬಾಧ್ಯತೆ ಉಳ್ಳವರು. ಹೌದು, ದೇವರ ಸೌಭಾಗ್ಯಕ್ಕೆ ಬಾಧ್ಯಸ್ಥರು; ಕ್ರಿಸ್ತಯೇಸುವಿನೊಡನೆ ಸಹ ಬಾಧ್ಯಸ್ಥರು. ಕ್ರಿಸ್ತಯೇಸುವಿನ ಯಾತನೆಯಲ್ಲೂ ನಾವು ಪಾಲುಗಾರರಾಗಬೇಕು. ಆಗ ಅವರ ಮಹಿಮೆಯಲ್ಲೂ ಪಾಲುಗಾರರಾಗುತ್ತೇವೆ.


ಶಕ್ತಿಸ್ವರೂಪಿಯೇ, ನ್ಯಾಯಪ್ರಿಯ ರಾಜನೇ I ನ್ಯಾಯನೀತಿ, ಯಥಾರ್ಥತೆಗೆ ಸ್ಥಾಪಕ ನೀನೆ I ಇಸ್ರಯೇಲ ವಂಶಕ್ಕಿದನು ಮನದಟ್ಟಾಗಿಸಿದವ ನೀನೆ II


ಅನಂತರ ಬಲಿಪೀಠದಿಂದ ಹೀಗೆ ಕೇಳಿ ಬಂತು : “ಹೌದು ಪ್ರಭುವೇ, ಸರ್ವಶಕ್ತನೇ, ನೀನಿತ್ತ ತೀರ್ಪು ಸತ್ಯ ಹಾಗೂ ನ್ಯಾಯಬದ್ಧವಾದುದೇ.”


ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”


ಆದರೂ ತಮ್ಮ ಉಡುಪನ್ನು ಮಲಿನಮಾಡಿಕೊಳ್ಳದ ಕೆಲವರು ಸಾರ್ದಿಸಿನಲ್ಲಿ ಇದ್ದಾರೆ. ಅಂಥವರು ಯೋಗ್ಯರಾಗಿರುವುದರಿಂದ ಶ್ವೇತಾಂಬರರಾಗಿ ನನ್ನೊಡನೆ ನಡೆದಾಡುವರು.


ಸಹೋದರರೇ, ನೀವು ಜುದೇಯದಲ್ಲಿರುವ ದೇವರ ಸಭೆಗಳನ್ನು ಅನುಸರಿಸಿದಿರಿ. ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಅವರು ಯೆಹೂದ್ಯರಿಂದ ಅನುಭವಿಸಿದಂಥ ಹಿಂಸೆಯನ್ನು, ನೀವೂ ಸ್ವಜನರಿಂದ ಅನುಭವಿಸಿದಿರಿ.


ಪಿತನಿಗೆ ಹರ್ಷದಿಂದ ಕೃತಜ್ಞತಾಸ್ತುತಿ ಸಲ್ಲಿಸುವಿರಿ. ಏಕೆಂದರೆ, ಬೆಳಕಿನಲ್ಲಿರುವ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯದಲ್ಲಿ ಪಾಲುಗಾರರಾಗಲು ನಿಮ್ಮನ್ನು ಯೋಗ್ಯರನ್ನಾಗಿ ಅವರು ಮಾಡಿದ್ದಾರೆ.


ಪ್ರಭುವಿನ ಸೇವೆಯ ನಿಮಿತ್ತ ಸೆರೆಯಾಳಾಗಿ ಇರುವ ನಾನು ನಿಮ್ಮಲ್ಲಿ ಬಿನ್ನವಿಸುವುದು ಏನೆಂದರೆ: ದೇವರ ಕರೆಗೆ ಅನುಗುಣವಾಗಿ ಯೋಗ್ಯ ಬಾಳುವೆ ನಡೆಸಿರಿ.


ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.


ಪೌಲ ಮತ್ತು ಬಾರ್ನಬ ಮತ್ತಷ್ಟು ಧೈರ್ಯದಿಂದ ಮಾತನಾಡಿದರು: “ದೇವರ ವಾಕ್ಯವನ್ನು ಮೊಟ್ಟಮೊದಲು ನಿಮಗೆ ಬೋಧಿಸುವುದು ಅಗತ್ಯವಾಗಿತ್ತು. ಆದರೆ ನೀವು ಅದನ್ನು ನಿರಾಕರಿಸಿ ಅಮರಜೀವಕ್ಕೆ ಅಪಾತ್ರರೆಂದು ನಿಮ್ಮನ್ನು ನೀವೇ ತೀರ್ಮಾನಿಸಿಕೊಂಡಿರಿ. ಆದುದರಿಂದ ನಾವು ನಿಮ್ಮನ್ನು ಬಿಟ್ಟು ಅನ್ಯಧರ್ಮದವರ ಕಡೆ ಹೋಗುತ್ತೇವೆ.


ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.


ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ, ಕೀರ್ತಿಸುತ್ತೇನೆ: ಆತನ ಕಾರ್ಯಗಳೆಲ್ಲವು ಸತ್ಯ, ಆತನ ಮಾರ್ಗಗಳೆಲ್ಲವು ನ್ಯಾಯ, ಗರ್ವಿಷ್ಠರನ್ನು ಆತ ತಗ್ಗಿಸಬಲ್ಲ.


ಹೆಚ್ಚಳಪಡುವವನು ನನ್ನನ್ನು ತಾನು ತಿಳಿದುಕೊಂಡದ್ದಕ್ಕಾಗಿ ಹೆಚ್ಚಳಪಡಲಿ; ಜಗದಲ್ಲಿ ಅಚಲ ಪ್ರೀತಿಯನ್ನೂ ನ್ಯಾಯನೀತಿಯನ್ನೂ ತೋರ್ಪಡಿಸುವ ಸರ್ವೇಶ್ವರ ನಾನೇ; ನನಗೆ ಪ್ರಿಯವಾದುವು ಪ್ರೀತಿ, ನೀತಿ, ನ್ಯಾಯಗಳೇ. ಇದನ್ನು ಗ್ರಹಿಸಿಕೊಂಡದ್ದಕ್ಕಾಗಿ ಹೆಚ್ಚಳಪಡಲಿ. ಇದು ಸರ್ವೇಶ್ವರನಾದ ನನ್ನ ನುಡಿ.”


ನೀತಿ ಸತ್ಯತೆಯುಳ್ಳವು ಆತನ ಸತ್ಕಾರ್ಯಗಳು I ಸುಸ್ಥಿರವಾದವು ಆತನ ನಿಯಮ ನಿಬಂಧನೆಗಳು II


ಆತನಾಳಲಿ ನಿನ್ನ ಪ್ರಜೆಯನು ನೀತಿಯಿಂದ I ಪರಿಪಾಲಿಸಲಿ ದೀನದಲಿತರನು ನ್ಯಾಯದಿಂದ II


ದೇವನೇ ಸತ್ಯಸ್ವರೂಪಿ, ನ್ಯಾಯಾಧಿಪತಿ I ಇದನು ಸಾರಿ ಹೇಳಲಿ ಆಕಾಶ ಪ್ರಕೃತಿ II


ಸತ್ಯಸಂಧನು, ನ್ಯಾಯಪ್ರಿಯನು ಆತನು I ಅಚಲಪ್ರೀತಿಯಿಂದ ಜಗವನು ತುಂಬಿಹನು II


ಅನ್ಯಾಯವಾದ ತೀರ್ಪನು ಕೊಡುತ್ತಾನೆಯೆ ದೇವರು? ಸತ್ಯವನ್ನು ಡೊಂಕುಮಾಡುತ್ತಾನೆಯೆ ಸರ್ವಶಕ್ತನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು