Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 1:6 - ಕನ್ನಡ ಸತ್ಯವೇದವು C.L. Bible (BSI)

6 ನ್ಯಾಯವಾದುದ್ದನ್ನೇ ಮಾಡುವ ದೇವರು ನಿಮ್ಮನ್ನು ಹಿಂಸಿಸುವವರಿಗೆ ಪ್ರತಿಹಿಂಸೆಯನ್ನೂ ಮತ್ತು ಹಿಂಸೆಯನ್ನು ಸಹಿಸುತ್ತಿರುವ ನಿಮಗೆ, ನಮ್ಮೊಡನೆ ಉಪಶಮನವನ್ನೂ ದಯಪಾಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟವನ್ನೂ, ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವುದು ದೇವರ ಎಣಿಕೆಯಲ್ಲಿ ನ್ಯಾಯವಾಗಿದೆಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟವನ್ನೂ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವದು ದೇವರ ಎಣಿಕೆಯಲ್ಲಿ ನ್ಯಾಯವಾಗಿದೆಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರು ಯೋಗ್ಯವಾದುದ್ದನ್ನೇ ಮಾಡುತ್ತಾನೆ. ನಿಮಗೆ ತೊಂದರೆ ಕೊಡುವ ಜನರಿಗೆ ದೇವರು ತೊಂದರೆ ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಿಮ್ಮನ್ನು ಸಂಕಟ ಪಡಿಸುವವರಿಗೆ ದೇವರು ಪ್ರತಿಯಾಗಿ ಸಂಕಟವನ್ನೂ ಮತ್ತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಜೆ ಖಲೆ ಸಮಾ ಹಾಯ್ ತೆಚ್ ದೆವ್ ಕರ್‍ತಾ, ಜೆ ಕೊನ್ ತುಮ್ಕಾ ಕಸ್ಟ್ ದಿತಾ ತೆಂಚೆ ವರ್‍ತಿ ದೆವ್ ಕಸ್ಟ್ ಹಾನ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 1:6
18 ತಿಳಿವುಗಳ ಹೋಲಿಕೆ  

ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕ ಶಿಕ್ಷೆಯನ್ನು ಪಡೆಯುವನು. ದೇವರು ಪಕ್ಷಪಾತಿಯಲ್ಲ.


ತಮ್ಮ ಮಹಿಮೆಯನ್ನು ತಿಳಿಸುವುದಕ್ಕಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನು ಸೂರೆಮಾಡಿದ ರಾಷ್ಟ್ರಗಳಿಗೆ ಕೊಡುವ ಎಚ್ಚರಿಕೆ ಇದು:


ಅವರು ಆರ್ತಧ್ವನಿಯಿಂದ, ‘ಸರ್ವಶಕ್ತ ಪ್ರಭುವೇ, ಸತ್ಯವಂತರೇ, ಪರಿಶುದ್ಧರೇ, ನಮ್ಮನ್ನು ಕೊಲೆಮಾಡಿದ ಭೂನಿವಾಸಿಗಳಿಗೆ ಇನ್ನೆಷ್ಟುಕಾಲ ನ್ಯಾಯವಿಚಾರಣೆ ಮಾಡದೆ, ಸೇಡನ್ನು ತೀರಿಸಿಕೊಳ್ಳದೆ ಇರುತ್ತೀರಿ?” ಎಂದು ಕೇಳಿದರು.


ಆತನ ನ್ಯಾಯತೀರ್ಪು ಸತ್ಯವಾದುದು, ನೀತಿಬದ್ಧವಾದುದು. ಇತ್ತಿರುವನಾತ ತೀರ್ಪನು ಮಹಾ ವೇಶ್ಯೆಯ ವಿರುದ್ಧ ಪೃಥ್ವಿಯನೇ ಹೊಲಸೆಬ್ಬಿಸಿದ ವ್ಯಭಿಚಾರಿಯ ವಿರುದ್ಧ ತನ್ನ ದಾಸರ ರಕ್ತಪಾತದ ಸೇಡನು ತೀರಿಸಿಹನಾತ,” ಎಂದು ಜನಸಮೂಹವು ಘೋಷಿಸಿತು.


ಮಾಡುವೆನು ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಅಮಲೇರುವರು ಸ್ವಂತ ರಕ್ತವನ್ನು ಕುಡಿದು ದ್ರಾಕ್ಷಾರಸದಂತೆ. ಅರಿವರು ನರಮಾನವರೆಲ್ಲರು ಇಂತು : ನಾನೇ ಸರ್ವೇಶ್ವರ, ನಿನ್ನ ರಕ್ಷಕ, ನಿನ್ನ ನಿನ್ನ ವಿಮೋಚಕನೆಂದು; ನಾನೇ ಯಕೋಬ ವಂಶದ ಬಲಾಢ್ಯ ದೇವನೆಂದು.


ನೀವು ಆತನ ಮಾತನ್ನು ಶ್ರದ್ಧೆಯಿಂದ ಆಲಿಸಿ, ನನ್ನ ಆಶೆಗಳನ್ನೆಲ್ಲ ಪಾಲಿಸಿದರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು.


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”


ಕೆರಳಿದವು ವಿಶ್ವ ರಾಷ್ಟ್ರಗಳು ಎರಗಿತು ನಿನ್ನ ಪ್ರಕೋಪವು ಸಮೀಪಿಸಿತು ಮೃತರ ನ್ಯಾಯತೀರ್ಪಿನ ದಿನವು ಬಂದಿದೆ ಸಮಯ ಸನ್ಮಾನಿಸಲು ನಿನ್ನ ದಾಸರನು, ಪ್ರವಾದಿಗಳನು, ದೇವಪ್ರಜೆಗಳನು ನಿನ್ನಲ್ಲಿ ಭಯಭಕುತಿಯುಳ್ಳ ಹಿರಿಯ ಕಿರಿಯರನು. ಇದಿಗೋ ಬಂದಿದೆ ಗಳಿಗೆಯು ಲೋಕನಾಶಕರನ್ನು ವಿನಾಶಗೊಳಿಸಲು", ಎಂದು ಹಾಡಿದರು.


ಹರಿಯಿತಾ ನಗರದಲಿ ಪ್ರವಾದಿಗಳ ರಕ್ತ ದೇವಜನರ, ಭೂಮಿಯಲ್ಲಿ ಬಲಿಯಾದೆಲ್ಲರ ರಕ್ತ.”


ಆಗ ನಾನು ಮನಸ್ಸಿನಲ್ಲೇ, “ದೇವರು ಸಜ್ಜನರಿಗೂ ದುರ್ಜನರಿಗೂ ನ್ಯಾಯತೀರಿಸುವರು. ಅವರ ನ್ಯಾಯಕ್ರಮದಲ್ಲಿ ಎಲ್ಲ ಕೆಲಸಕಾರ್ಯಗಳಿಗೂ ತಕ್ಕ ಸಮಯ ಉಂಟಲ್ಲವೆ?” ಎಂದುಕೊಂಡೆ.


“ಬಿಲ್ಲುಬಾಣಗಾರರನ್ನೆಲ್ಲ ಬಾಬಿಲೋನಿಗೆ ಕರೆಯಿರಿ. ಅದರ ಸುತ್ತಲು ದಂಡಿಳಿಸಿರಿ. ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ. ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ. ಅದು ಮಾಡಿದಂತೆಯೇ ಅದಕ್ಕೆ ಮಾಡಿ. ಏಕೆಂದರೆ ಗರ್ವದಿಂದ ಅದು ಇಸ್ರಯೇಲರ ಪರಮ ಪಾವನನಾದ ಸರ್ವೇಶ್ವರನನ್ನು ಅಸಡ್ಡೆಮಾಡಿದೆ.


ನೀವು ದೇವಜನರಿಗೆ ಉಪಚಾರಮಾಡಿದ್ದೀರಿ, ಮಾಡುತ್ತಲೂ ಇದ್ದೀರಿ. ದೇವರ ಹೆಸರಿನಲ್ಲಿ ನೀವು ಮಾಡಿದ ಪ್ರೀತಿಪೂರ್ವಕವಾದ ಸೇವೆಯನ್ನು ದೇವರು ಮರೆಯುವಂತಿಲ್ಲ, ಅವರು ಅನ್ಯಾಯ ಮಾಡುವವರೇನೂ ಅಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು