Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 1:7 - ಕನ್ನಡ ಸತ್ಯವೇದವು C.L. Bible (BSI)

7-8 ಪ್ರಭು ಯೇಸು ತಮ್ಮ ಪ್ರಭಾವಯುತ ದೂತರೊಂದಿಗೆ ಸ್ವರ್ಗದಿಂದ ಪ್ರತ್ಯಕ್ಷರಾಗುವಾಗ, ಬೆಂಕಿಯ ಜ್ವಾಲೆಗಳು ಕಂಡುಬರುವುವು; ದೇವರನ್ನು ಅರಿತು ಅಲ್ಲಗಳೆದವರಿಗೂ ನಮ್ಮ ಪ್ರಭು ಯೇಸುವಿನ ಶುಭಸಂದೇಶಕ್ಕೆ ಅವಿಧೇಯರಾಗಿ ವರ್ತಿಸಿದವರಿಗೂ ತಕ್ಕ ಪ್ರತೀಕಾರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೇಸು ಕರ್ತನು ತನ್ನ ಶಕ್ತಿಯುತ ದೇವದೂತರೊಂದಿಗೆ ಅಗ್ನಿ ಜ್ವಾಲೆಗಳ ಮೂಲಕ ಪರಲೋಕದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಾವಾಗ ಕೊಡುವನಂದರೆ ಯೇಸು ಕರ್ತನು ತನ್ನ ಶಕ್ತಿಯನ್ನು ತೋರ್ಪಡಿಸುವ ದೇವದೂತರಿಂದ ಕೂಡಿದವನಾಗಿ ಉರಿಯುವ ಬೆಂಕಿಯಲ್ಲಿ ಆಕಾಶದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ತೊಂದರೆಗೆ ಒಳಗಾಗಿರುವ ನಿಮಗೆ ದೇವರು ಶಾಂತಿಯನ್ನು ನೀಡುತ್ತಾನೆ. ಆತನು ನಮಗೂ ಶಾಂತಿಯನ್ನು ನೀಡುವನು. ಪ್ರಭುವಾದ ಯೇಸು ತನ್ನ ಶಕ್ತಿಶಾಲಿಗಳಾದ ದೂತರೊಂದಿಗೆ ಪರಲೋಕದಿಂದ ಪ್ರತ್ಯಕ್ಷನಾದಾಗ ಈ ಶಾಂತಿಯನ್ನು ದಯಪಾಲಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸಂಕಟ ಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವುದು ದೇವರಿಗೆ ನ್ಯಾಯವಾಗಿದೆ. ನಮಗೆ ಕರ್ತ ಆಗಿರುವ ಯೇಸು ತಮ್ಮ ಶಕ್ತಿಯುತವಾದ ದೂತರೊಂದಿಗೆ ಪರಲೋಕದಿಂದ ಪ್ರಜ್ವಲಿಸುವ ಜ್ವಾಲೆಯಲ್ಲಿ ಪ್ರತ್ಯಕ್ಷರಾಗುವಾಗ ಇದಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅನಿ ಕಸ್ಟ್ ಸೊಸ್ತಲ್ಯಾ ಅಮ್ಕಾ ಅನಿ ತುಮ್ಕಾ ದೆವ್ ಸುಟ್ಕಾ ದಿತಾ. ಹೆ, ತೊ ಧನಿ ಜೆಜು ಕ್ರಿಸ್ತ್ ಸರ್‍ಗಾ ವೈನಾ ಅಪ್ನಾಚ್ಯಾ ಮೆಜುಕ್ ಹೊಯ್ನಾ ತವ್ಡ್ಯಾ ದುತಾಂಚ್ಯಾ ವಾಂಗ್ಡಾ ಯೆಲ್ಲ್ಯಾ ಎಳಾರ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 1:7
51 ತಿಳಿವುಗಳ ಹೋಲಿಕೆ  

ಇದಾದ ಮೇಲೆ ಸ್ವರ್ಗದಿಂದ ಬಂದ ಧ್ವನಿಯೊಂದು ಕೇಳಿಸಿತು. ಅದು ನನಗೆ, “ನೀನಿದನ್ನು ಬರೆ: ಇಂದಿನಿಂದ ಪ್ರಭುವಿನ ಭಕ್ತರಾಗಿ ಸಾಯುವವರು ಭಾಗ್ಯವಂತರು,” ಎಂದು ತಿಳಿಸಿತು. ಆಗ ದೇವರ ಆತ್ಮ, “ಹೌದು, ಅವರೇ ಭಾಗ್ಯವಂತರು. ಇನ್ನು ಅವರ ಸಂಕಷ್ಟಗಳು ಮುಗಿದು ಅವರಿಗೆ ವಿಶ್ರಾಂತಿ ದೊರಕುವುದು; ಅವರ ಸುಕೃತ್ಯಗಳಿಗೆ ತಕ್ಕ ಪ್ರತಿಫಲ ದೊರಕುವುದು,” ಎಂದು ಹೇಳಿತು.


ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


“ಯೇಸುವೆಂಬ ನಾನೇ ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ನಿಮಗೆ ಸಾಕ್ಷಿನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ನಾನು ದಾವೀದಕುಲಪುತ್ರ. ಅದೇ ವಂಶದ ಕುಡಿ; ಉದಯಕಾಲದ ಉಜ್ವಲ ನಕ್ಷತ್ರ!


ನಾವು ಅನುಭವಿಸುತ್ತಿರುವ ಕಷ್ಟಸಂಕಟಗಳು ಅಲ್ಪವಾದುವು, ಕ್ಷಣಿಕವಾದುವು. ಅವುಗಳಿಂದ ಲಭಿಸುವ ಮಹಿಮೆಯಾದರೋ ಅಪಾರವಾದುದು, ಅನಂತವಾದುದು.


ಒರಸುವನಾತ ಅವರ ಕಂಬನಿಯನೆಲ್ಲಾ ಇರದಿನ್ನು ಸಾವುನೋವು ಅವರಿಗೆಲ್ಲಾ; ಇರವು ಶೋಕ ದುಃಖಗಳಾವುವು ಮರೆಯಾಗಿ ಹೋದವು ಹಿಂದಿನದೆಲ್ಲವು.”


ನಾವು ಮಕ್ಕಳಾಗಿದ್ದರೆ, ಹಕ್ಕುಬಾಧ್ಯತೆ ಉಳ್ಳವರು. ಹೌದು, ದೇವರ ಸೌಭಾಗ್ಯಕ್ಕೆ ಬಾಧ್ಯಸ್ಥರು; ಕ್ರಿಸ್ತಯೇಸುವಿನೊಡನೆ ಸಹ ಬಾಧ್ಯಸ್ಥರು. ಕ್ರಿಸ್ತಯೇಸುವಿನ ಯಾತನೆಯಲ್ಲೂ ನಾವು ಪಾಲುಗಾರರಾಗಬೇಕು. ಆಗ ಅವರ ಮಹಿಮೆಯಲ್ಲೂ ಪಾಲುಗಾರರಾಗುತ್ತೇವೆ.


ನರಪುತ್ರನು ಪ್ರತ್ಯಕ್ಷನಾಗುವ ದಿನದಲ್ಲೂ ಹಾಗೆಯೇ ನಡೆಯುವುದು.


“ನರಪುತ್ರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಬರುವಾಗ ತನ್ನ ಮಹಿಮಾನ್ವಿತ ಸಿಂಹಾಸನದಲ್ಲಿ ಆಸೀನನಾಗಿರುವನು.


ಸನ್ಮಾರ್ಗದಲ್ಲಿ ನಡೆಯುವವರು ಶಯ್ಯೆಯಲ್ಲಿ ವಿಶ್ರಮಿಸುತ್ತಾರೆ; ಶಾಂತಿಸಮಾಧಾನವನ್ನು ಸೇರುತ್ತಾರೆ.


ಆದರೆ ಆತನು, “ನೀನು ನನಗೆ ಅಡ್ಡಬೀಳಬೇಡ, ಪ್ರವಾದಿಗಳಾದ ನಿನ್ನ ಸಹೋದರರಿಗೂ ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಗೊಂಡು ನಡೆಯುವವರಿಗೂ ನಿನಗೂ ನಾನು ಸಹಸೇವಕನು ಮಾತ್ರ. ಆದ್ದರಿಂದ ನೀನು ದೇವರನ್ನು ಆರಾಧಿಸು,” ಎಂದು ತಿಳಿಸಿದನು.


ಅನಂತರ ಆ ದೇವದೂತನು ನನಗೆ, “ಈ ಮಾತುಗಳು ಸತ್ಯವಾದುವು, ನಂಬಲರ್ಹವಾದುವು. ಪ್ರವಾದಿಗಳಿಗೆ ಆತ್ಮಪ್ರೇರಣೆಯನ್ನೀಯುವ ದೇವರಾದ ಪ್ರಭುವೇ ಬೇಗನೆ ಸಂಭವಿಸಲಿರುವವುಗಳನ್ನು ತಮ್ಮ ದಾಸರಿಗೆ ತಿಳಿಸಲು ತಮ್ಮ ದೂತನನ್ನೇ ಕಳಿಸಿದ್ದಾರೆ.


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


ಇಗೋ ನೋಡು, ಮೇಘಾರೂಢನಾಗಿ ಬರುತಿಹನು ಪ್ರತಿಯೊಂದು ಕಣ್ಣೂ ಕಾಣುವುದು ಆತನನು, ಆತನನ್ನು ಇರಿದವರೂ ವೀಕ್ಷಿಸುವರು, ಗೋಳಾಡುವರಾತನನ್ನು ಕಂಡು ಲೋಕದ ಜನರೆಲ್ಲರು. ಹೌದು, ಅದರಂತೆಯೇ ಆಗುವುದು, ಆಮೆನ್.


ಯೇಸುಕ್ರಿಸ್ತರು ಸ್ವರ್ಗಕ್ಕೆ ಏರಿ, ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ; ದೂತಗಣಗಳ ಮೇಲೂ ಸ್ವರ್ಗೀಯ ಶಕ್ತರ ಹಾಗೂ ಅಧಿಕಾರಿಗಳ ಮೇಲೂ ಆಳ್ವಿಕೆ ನಡೆಸುತ್ತಿದ್ದಾರೆ.


ಹಾಗೆಯೇ, ಎಲ್ಲಾ ಮಾನವರ ಪಾಪಗಳನ್ನು ಹೊತ್ತು ಹೋಗಲಾಡಿಸಲು ಕ್ರಿಸ್ತಯೇಸು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡರು. ಅವರು ಮತ್ತೆ ಪ್ರತ್ಯಕ್ಷರಾಗುವರು; ಪಾಪನಿವಾರಣೆ ಮಾಡಲೆಂದು ಅಲ್ಲ, ತಮ್ಮನ್ನು ನಂಬಿ ನಿರೀಕ್ಷಿಸಿಕೊಂಡಿರುವವರನ್ನು ಜೀವೋದ್ಧಾರ ಮಾಡಲೆಂದು.


ಆದ್ದರಿಂದ ಈ ವಿಶ್ರಾಂತಿಯನ್ನು ಪಡೆಯಲು ನಾವು ಪ್ರಯತ್ನಪಡೋಣ. ನಮ್ಮಲ್ಲಿ ಯಾರೂ ಆ ಜನರಂತೆ ಅವಿಧೇಯತೆಯಿಂದ ವರ್ತಿಸಿ ವಿಶ್ವಾಸಭ್ರಷ್ಟರಾಗದೆ ಇರೋಣ.


ಆದಕಾರಣ, ದೇವಜನರು ಅನುಭವಿಸುವುದಕ್ಕಿರುವ ಸಬ್ಬತ್ತೆಂಬ ವಿಶ್ರಾಂತಿ ಇನ್ನೂ ಉಳಿದಿದೆ.


ದೇವರು ತಮ್ಮ ವಿಶ್ರಾಂತಿಯ ನೆಲೆಯನ್ನು ನೀಡುವುದಾಗಿ ಮಾಡಿದ ವಾಗ್ದಾನ ಇನ್ನೂ ರದ್ದಾಗದೆ ಉಳಿದಿದೆ. ನಿಮ್ಮಲ್ಲಿ ಯಾರೂ ಆ ವಾಗ್ದಾನದ ಫಲವನ್ನು ಪಡೆಯದೆ ಇರಬಾರದು. ಎಂತಲೇ, ನಾವು ಭಯಭಕ್ತಿಯಿಂದ ಬಾಳೋಣ.


ನಾವು ಆತನೊಡನೆ ಸತ್ತಿದ್ದರೆ, ಆತನೊಡನೆ ಜೀವಿಸುತ್ತೇವೆ; ಸೈರಣೆಯುಳ್ಳವರು ನಾವಾದರೆ, ಆತನೊಡನೆ ರಾಜ್ಯವಾಳುತ್ತೇವೆ; ನಾವಾತನನು ನಿರಾಕರಿಸಿದರೆ, ನಮ್ಮನ್ನಾತನು ನಿರಾಕರಿಸುತ್ತಾನೆ.


ಇರಲಿ ಇಹದಲಿ, ಇರಲಿ ಪರದಲಿ, ಅಶರೀರ ಒಡೆಯರಾಗಲಿ, ಒಡೆತನವಾಗಲಿ, ಅಧಿಕಾರಿಗಳಾಗಲಿ, ಆಧಿಪತ್ಯವಾಗಿರಲಿ, ಆದುದೆಲ್ಲವೂ ಆತನಲಿ, ಆತನಿಂದ, ಆತನಿಗಾಗಿ.


ಪಿತನಾದ ದೇವರ ಮತ್ತು ಪ್ರಭುವಾದ ಯೇಸುಕ್ರಿಸ್ತರ ಅನುಗ್ರಹವೂ ಶಾಂತಿಸಮಾಧಾನವೂ ನಿಮಗೆ ಲಭಿಸಲಿ!


“ಗಲಿಲೇಯದ ಜನರೇ, ನೀವು ಆಕಾಶವನ್ನು ದಿಟ್ಟಿಸಿ ನೋಡುತ್ತಾ ನಿಂತು ಇರುವುದೇಕೆ? ಸ್ವರ್ಗಾರೋಹಣರಾದ ಈ ಯೇಸು ನಿಮ್ಮ ಬಳಿಯಿಂದ ಹೇಗೆ ಸ್ವರ್ಗಕ್ಕೆ ಏರಿಹೋಗುವುದನ್ನು ಕಂಡಿರೋ ಹಾಗೆಯೇ ಅವರು ಹಿಂದಿರುಗಿ ಬರುವರು,” ಎಂದು ಹೇಳಿದರು.


ತಮ್ಮ ಮಾತನ್ನು ಮುಂದುವರೆಸುತ್ತಾ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಸ್ವರ್ಗವು ತೆರೆದಿರುವುದನ್ನೂ ನರಪುತ್ರನ ಮುಖಾಂತರ ದೇವದೂತರು ಏರುವುದನ್ನೂ ಇಳಿಯುವುದನ್ನೂ ನೀವು ಕಾಣುವಿರಿ,” ಎಂದು ಹೇಳಿದರು.


ದಿವ್ಯವಾಣಿಯ ಮುಖಾಂತರವೇ ಸಮಸ್ತವೂ ಉಂಟಾಯಿತು. ಉಂಟಾದವುಗಳಲ್ಲಿ ಯಾವುದೂ ಆ ದಿವ್ಯವಾಣಿಯಿಂದಲ್ಲದೆ ಆದುದಿಲ್ಲ.


ಅದಕ್ಕೆ ಅಬ್ರಹಾಮನು, ‘ಮಗನೇ, ಜೀವಮಾನದಲ್ಲಿ ಬೇಕಾದಷ್ಟು ಸುಖಸಂಪತ್ತನ್ನು ನೀನು ಅನುಭವಿಸಿದೆ; ಲಾಜರನಾದರೋ ದುಃಖ ದಾರಿದ್ರ್ಯವನ್ನು ಅನುಭವಿಸಿದ, ಎಂಬುದನ್ನು ನೆನಪಿಗೆ ತಂದುಕೊ. ಆದರೆ ಈಗ ಅವನು ಇಲ್ಲಿ ಸುಖಪಡುತ್ತಿದ್ದಾನೆ; ನೀನು ಅಲ್ಲಿ ಸಂಕಟಪಡುತ್ತಿರುವೆ.


ಅದಕ್ಕೆ ಯೇಸು, “ಹೌದು ನಾನೇ, ಸರ್ವಶಕ್ತ ದೇವರ ಬಲಗಡೆ ನರಪುತ್ರನು ಆಸೀನನಾಗಿ ಇರುವುದನ್ನೂ ಆಕಾಶದ ಮೇಘಗಳಲ್ಲಿ ಬರುವುದನ್ನೂ ನೀವು ಕಾಣುವಿರಿ,” ಎಂದರು.


ದೈವನಿಷ್ಠೆಯಿಲ್ಲದ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುತ್ತಾರೋ, ಅಂಥವರನ್ನು ಕುರಿತು ನರಪುತ್ರನು ಸಹ ತನ್ನ ಪಿತನ ಪ್ರಭಾವದೊಡನೆ ದೇವದೂತರ ಪರಿವಾರ ಸಮೇತನಾಗಿ ಬರುವಾಗ, ನಾಚಿಕೆಪಡುವನು,” ಎಂದರು.


ಅದಕ್ಕೆ ಯೇಸು, “ಅದು ನಿಮ್ಮ ಬಾಯಿಂದಲೇ ಬಂದಿದೆ; ಮಾತ್ರವಲ್ಲ, ನಾನು ಹೇಳುವುದನ್ನು ಕೇಳಿ; ನರಪುತ್ರನು ಸರ್ವಶಕ್ತ ದೇವರ ಬಲಗಡೆ ಆಸೀನನಾಗಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ಇನ್ನು ಮುಂದಕ್ಕೆ ಕಾಣುವಿರಿ,” ಎಂದರು.


ಅಲ್ಲಿ ಮುಳ್ಳಿನ ಪೊದೆಯೊಂದರ ಒಳಗೆ ಉರಿಯುವ ಬೆಂಕಿಯಲ್ಲಿ ಸರ್ವೇಶ್ವರನ ದೂತನು ಅವನಿಗೆ ಕಾಣಿಸಿಕೊಂಡನು. ಮೋಶೆ ನೋಡಿದನು. ಆ ಮುಳ್ಳಿನ ಪೊದೆ ಉರಿಯುತ್ತಲೇ ಇತ್ತು; ಆದರೆ ಸುಟ್ಟುಹೋಗದೆ ಇತ್ತು.


ಸೀನಾಯಿ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತ್ತು. ಏಕೆಂದರೆ ಸರ್ವೇಶ್ವರ ಸ್ವಾಮಿ ಬೆಂಕಿಯ ರೂಪದಲ್ಲಿ ಆ ಬೆಟ್ಟದ ಮೇಲೆ ಇಳಿದುಬಂದಿದ್ದರು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದೂ ಅಲ್ಲದೆ ಬೆಟ್ಟವೆಲ್ಲ ಬಹಳವಾಗಿ ಕಂಪಿಸಿತು.


ಸರ್ವೇಶ್ವರ ಬರುವನಿದೋ ಅಗ್ನಿಮಯನಾಗಿ ಆತನ ರಥಗಳು ಬಿರುಗಾಳಿಯಂತೆ ರಭಸವಾಗಿ ತೋರಿಸುವನು ತನ್ನ ಸಿಟ್ಟನ್ನು ರೌದ್ರವೇಶದಿಂದ ಖಂಡಿಸುವನು ಧಗಧಗಿಸುವ ಜ್ವಾಲೆಯಿಂದ


ಆ ಜೀವಿಗಳ ಮಧ್ಯೆ ಅದ್ಭುತಕಾಂತಿಯೊಂದು ಉರಿಯುವ ಕೆಂಡಗಳೋ ಪಂಜುಗಳೋ ಎಂಬಂತೆ ಕಾಣಿಸಿತು. ಅದು ಆ ಜೀವಿಗಳ ನಡುವೆ ಓಲಾಡುತ್ತಿತ್ತು; ಆ ಉರಿ ತೇಜೋಮಯವಾಗಿತ್ತು. ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು.


ನಾನು ನೋಡುತ್ತಿದ್ದ ಹಾಗೆ: ಸಿಂಹಾಸನಗಳನ್ನು ಹಾಕಲಾಯಿತು. ಮಹಾವೃದ್ಧನೊಬ್ಬನು ಆಸೀನನಾದನು. ಆತನ ಉಡುಪು ಬೆಳ್ಳಗಿತ್ತು ಹಿಮದಂತೆ. ಆತನ ತಲೆಗೂದಲಿತ್ತು ನಿರ್ಮಲವಾದ ಬಿಳಿಯ ಉಣ್ಣೆಯಂತೆ. ಆತನ ಸಿಂಹಾಸನ ಅಗ್ನಿಜ್ವಾಲೆಗಳು. ಧಗಧಗಿಸುವ ಬೆಂಕಿ ಅದರ ಚಕ್ರಗಳು.


ಇಲ್ಲಿರುವವರಲ್ಲಿ ಕೆಲವರು ನರಪುತ್ರನು ತನ್ನ ಸಾಮ್ರಾಜ್ಯದಲ್ಲಿ ಪ್ರತ್ಯಕ್ಷನಾಗುವುದನ್ನು ಕಾಣುವುದಕ್ಕೆ ಮುನ್ನ ಸಾವನ್ನು ಸವಿಯುವುದಿಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.


“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.


ಅವನವನ ಕೆಲಸದ ಗುಣವು ಕಡೆಯ ದಿನ ಬಟ್ಟಬಯಲಾಗುವುದು. ಯೇಸುಕ್ರಿಸ್ತರ ಆ ದಿನವು ಬೆಂಕಿಯ ದಿನವಾಗಿ ಪ್ರಜ್ವಲಿಸುವುದು. ಪ್ರತಿಯೊಬ್ಬನ ಕೆಲಸವನ್ನು ಆ ಬೆಂಕಿ ಪರೀಕ್ಷಿಸುವುದು.


ನಮ್ಮ ಪ್ರಭು ಯೇಸು ನಿಮ್ಮನ್ನು ದೃಢಪಡಿಸಲಿ; ತಮ್ಮ ಪರಿಶುದ್ಧ ಪರಿವಾರದ ಸಮೇತ ಯೇಸು ಪುನರಾಗಮಿಸುವಾಗ, ನಮ್ಮ ಪಿತನಾದ ದೇವರ ಸನ್ನಿಧಾನದಲ್ಲಿ ನೀವೂ ಸಹ ಪರಿಶುದ್ಧರೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಂತೆ ಮಾಡಲಿ.


ಬದಲಿಗೆ, ಅತ್ಯಂತ ಭಯದಿಂದ ಎದುರುನೋಡಬೇಕಾದ ದಂಡನಾತೀರ್ಪು ಹಾಗೂ ದೇವರ ಶತ್ರುಗಳನ್ನು ದಹಿಸುವ ಉಗ್ರಕೋಪಾಗ್ನಿ - ಇವುಗಳು ಮಾತ್ರ ನಮಗೆ ಉಳಿದಿರುತ್ತವೆ.


ಏಕೆಂದರೆ, ನಮ್ಮ ದೇವರು ದಹಿಸುವ ಅಗ್ನಿ.


ಈಗಿರುವ ಭೂಮ್ಯಾಕಾಶಗಳನ್ನು ಅದೇ ವಾಕ್ಯದ ಬಲದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲಾಗಿದೆ. ದುರ್ಜನರು ವಿನಾಶವಾಗಬೇಕಾದ ನ್ಯಾಯತೀರ್ಪಿನ ದಿನದವರೆಗೂ ಇವನ್ನು ಉಳಿಸಲಾಗಿದೆ.


ಸೊದೋಮ್, ಗೊಮೋರ ಮತ್ತು ಅವುಗಳ ಸುತ್ತಮುತ್ತಲಿನ ಪಟ್ಟಣಿಗರು ಆ ದೂತರಂತೆಯೇ ನಡೆದುಕೊಂಡರು. ಅಲ್ಲದೆ, ಅವರು ಅನೈತಿಕತೆಯಲ್ಲೂ ಪ್ರಕೃತಿ ವಿರುದ್ಧವಾದ ಲೈಂಗಿಕಕೃತ್ಯಗಳಲ್ಲೂ ಮಗ್ನರಾಗಿದ್ದರು. ಈ ಕಾರಣದಿಂದ ಅವರು ನಿತ್ಯಾಗ್ನಿಯ ಶಿಕ್ಷೆಗೆ ಗುರಿಯಾಗಿ ಇತರರಿಗೆ ಎಚ್ಚರಿಕೆಯನ್ನು ನೀಡುವ ನಿದರ್ಶನವಾಗಿದ್ದಾರೆ.


ಅವರಲ್ಲಿ ಪ್ರತಿಯೊಬ್ಬನಿಗೂ ಬಿಳಿಯ ನಿಲುವಂಗಿಯನ್ನು ಕೊಡಲಾಗಿತ್ತು. ಅಲ್ಲದೆ ಅವರಿಗೆ, “ಇನ್ನು ತುಸುಕಾಲ ಕಾದುಕೊಂಡಿರಿ, ನಿಮ್ಮ ಹಾಗೆಯೇ ಹತರಾಗಬೇಕಾಗಿರುವ ನಿಮ್ಮ ಸಹೋದರರ ಮತ್ತು ಜೊತೆಸೇವಕರ ಪಟ್ಟಿಯು ಭರ್ತಿಯಾಗುವ ತನಕ ವಿಶ್ರಮಿಸಿ,” ಎಂದು ತಿಳಿಸಲಾಯಿತು.


ಅಂಥವನು ದೇವರ ಕೋಪಾಗ್ನಿಯೆಂಬ ಪಾತ್ರೆಯಲ್ಲಿ ದೇವರ ಅಪ್ಪಟ ರೋಷವೆಂಬ ಮದ್ಯವನ್ನು ಕುಡಿಯಬೇಕಾಗುತ್ತದೆ. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯ ಮುಂದೆಯೂ ಅಂಥವನು ಬೆಂಕಿಯಲ್ಲೂ ಗಂಧಕದಲ್ಲೂ ಬೆಂದು ನರಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು