Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 2:12 - ಕನ್ನಡ ಸತ್ಯವೇದವು C.L. Bible (BSI)

12 ಹೀಗೆ ಸತ್ಯವನ್ನು ವಿಶ್ವಾಸಿಸದೆ, ಅಧರ್ಮದಲ್ಲಿ ಆನಂದಿಸುವವರೆಲ್ಲರೂ ಖಂಡನೆಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ನ್ಯಾಯತೀರ್ಪಿಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ನ್ಯಾಯತೀರ್ಪಿಗೆ ಒಳಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸತ್ಯವನ್ನು ನಂಬದೆ, ಕೆಟ್ಟಕಾರ್ಯಗಳನ್ನು ಮಾಡುವುದರಲ್ಲಿ ಸಂತೋಷಪಡುವ ಜನರೆಲ್ಲರೂ ದಂಡನೆಗೆ ಒಳಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಿಸುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅಶೆ, ಖರೆ ಮಾನುನ್ ಘೆಯ್ನಸ್ತಾನಾ ಪಾಪಾತ್ ಕುಶಿ ಹೊವ್ನ್ ಜಿವನ್ ಕರ್‍ತಲ್ಯಾಂಚ್ಯಾ ವರ್‍ತಿ ದೆವಾಚಿ ಶಿಕ್ಷಾ ಉತ್ರುನ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 2:12
21 ತಿಳಿವುಗಳ ಹೋಲಿಕೆ  

ಇಂಥವುಗಳನ್ನು ಮಾಡುವವರು ಮರಣದಂಡನೆಗೆ ಪಾತ್ರರು ಎಂಬ ದೈವನಿಯಮವನ್ನು ಅರಿತಿದ್ದರೂ ಇಂಥ ಹೀನ ಕೃತ್ಯಗಳನ್ನು ಮಾಡುತ್ತಾರೆ. ತಾವು ಮಾಡುವುದೇ ಅಲ್ಲದೆ ಹಾಗೆಮಾಡುವ ಇತರರನ್ನೂ ಪ್ರೋತ್ಸಾಹಿಸುತ್ತಾರೆ.


ವಿಶ್ವಾಸವಿಟ್ಟು ದೀಕ್ಷಾಸ್ನಾನ ಪಡೆಯುವವನು ಜೀವೋದ್ಧಾರ ಹೊಂದುವನು. ವಿಶ್ವಾಸಿಸದೆ ಇರುವವನು ಖಂಡನೆಗೆ ಗುರಿಯಾಗುವನು.


ಸ್ವಾರ್ಥಸಾಧಕರಾಗಿದ್ದು, ಸತ್ಯಕ್ಕೆ ಮಣಿಯದೆ, ದುರ್ಮಾರ್ಗವನ್ನೇ ಅವಲಂಬಿಸಿ ನಡೆಯುವವರ ಮೇಲೆ ದೇವರ ಕೋಪವೂ ಆಕ್ರೋಶವೂ ಎರಗುತ್ತವೆ.


ಕೋಪಾಗ್ನಿಗೆ ನಾವು ಗುರಿಯಾಗಬೇಕೆಂದಲ್ಲ, ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ನಾವು ಜೀವೋದ್ಧಾರ ಹೊಂದಬೇಕೆಂಬುದೇ ದೈವೇಚ್ಛೆ.


ನಿಮ್ಮ ಪ್ರೀತಿ ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿರಿ. ಒಳ್ಳೆಯದನ್ನು ಕೈಬಿಡದಿರಿ.


ಪುತ್ರನಲ್ಲಿ ವಿಶ್ವಾಸವಿಟ್ಟವನು ನಿತ್ಯಜೀವವನ್ನು ಪಡೆದಿರುತ್ತಾನೆ; ಪುತ್ರನಿಗೆ ಶರಣಾಗದವನು ನಿತ್ಯಜೀವವನ್ನು ಸವಿಯನು. ಅವನು ದೇವರ ಕೋಪಾಗ್ನಿಗೆ ಗುರಿಯಾಗುತ್ತಾನೆ,” ಎಂದು ಉತ್ತರಕೊಟ್ಟನು.


“ಅವರು ಅಧರ್ಮದಿಂದ ಅರಸನನ್ನು ಆನಂದಗೊಳಿಸುತ್ತಾರೆ; ಅಸತ್ಯದಿಂದ ಅಧಿಕಾರಿಗಳನ್ನು ಸಂತೋಷಪಡಿಸುತ್ತಾರೆ.


ಪರೀಕ್ಷಿಸುವನು ಪ್ರಭು ಸಜ್ಜನ ದುರ್ಜನರನು I ದ್ವೇಷಿಸುವನು ಮನಸಾರೆ ಹಿಂಸಾತ್ಮಕರನು II


ಇದರಿಂದ ಆ ಯಾಜಕರಿಗೆ ಅತ್ಯಾನಂದವಾಯಿತು. ಅವನಿಗೆ ಹಣಕೊಡುವುದಾಗಿ ಅವರು ಮಾತುಕೊಟ್ಟರು. ಯೇಸುವನ್ನು ಹಿಡಿದೊಪ್ಪಿಸಲು ಅವನು ಸಂದರ್ಭ ಕಾಯತೊಡಗಿದನು.


ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೆಯದನ್ನೇ ಅನುಸರಿಸಿ ನಡೆ. ಒಳಿತನ್ನು ಮಾಡುವವನು ದೇವರಿಗೆ ಸೇರಿದವನು. ಕೆಡುಕನ್ನು ಮಾಡುವವನು ದೇವರನ್ನು ಕಾಣದವನು.


ಅವರು ದ್ರವ್ಯಾಶೆಪೀಡಿತರಾಗಿ ಕಟ್ಟುಕತೆಗಳನ್ನು ಹೇಳುತ್ತಾ ನಿಮ್ಮಿಂದ ಲಾಭಗಳಿಸುವರು. ದೀರ್ಘಕಾಲದಿಂದ ಅವರಿಗಾಗಿ ಸಿದ್ಧವಾಗಿರುವ ದಂಡನೆಯ ತೀರ್ಪು ಸಮೀಪಿಸುತ್ತಿದೆ. ಅವರನ್ನು ನಾಶಗೊಳಿಸುವವರೇನೂ ನಿದ್ರಿಸುತ್ತಿಲ್ಲ.


ಆದರೂ ನೀವು ಒಳಿತನ್ನು ದ್ವೇಷಿಸುತ್ತೀರಿ. ಕೆಟ್ಟದ್ದನ್ನು ಬಯಸುತ್ತೀರಿ. ನನ್ನ ಜನರ ಚರ್ಮವನ್ನು ಜೀವಸಹಿತ ಸುಲಿಯುತ್ತೀರಿ. ಅವರ ಎಲುಬುಗಳಿಂದ ಮಾಂಸವನ್ನು ಕಿತ್ತು ತಿನ್ನುತ್ತೀರಿ.


ಅವನ ಶತ್ರುಗಳಿಗೆ ಮುಯ್ಯಿತೀರಿಸುವುದು ನನ್ನ ಕೆಲಸ; ಸಮೀಪಿಸಿತವರಿಗೆ ಜಾರಿಬೀಳುವ ಸಮಯ, ವಿಪತ್ಕಾಲ; ಬೇಗಬರುವುದು ಅವರಿಗೆ ಸಿದ್ಧವಾದ ದುರ್ಗತಿಕಾಲ!


ಸತ್ಯವನ್ನು ಪ್ರೀತಿಸದೆ, ಜೀವೋದ್ಧಾರವನ್ನು ನಿರಾಕರಿಸಿ, ವಿನಾಶದ ಮಾರ್ಗದಲ್ಲಿರುವವರನ್ನು ಎಲ್ಲಾ ತರಹದ ಕುಯುಕ್ತಿಯಿಂದ ಅವನು ವಂಚಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು