Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 2:14 - ಕನ್ನಡ ಸತ್ಯವೇದವು C.L. Bible (BSI)

14 ಹೀಗೆ ಉದ್ಧಾರಹೊಂದಿ ನಮ್ಮ ಪ್ರಭು ಯೇಸುಕ್ರಿಸ್ತರ ಮಹಿಮೆಯಲ್ಲಿ ನೀವು ಸಹ ಪಾಲುಗೊಳ್ಳುವಂತೆ, ನಾವು ಸಾರಿದ ಶುಭಸಂದೇಶದ ಮೂಲಕ ದೇವರು ನಿಮ್ಮನ್ನು ಕರೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀವು ಹೀಗೆ ರಕ್ಷಿಸಲ್ಪಟ್ಟು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮಹಿಮೆಯನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀವು ಹೀಗೆ ರಕ್ಷಿಸಲ್ಪಟ್ಟು ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರಭಾವವನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀವು ರಕ್ಷಣೆಯನ್ನು ಹೊಂದಿಕೊಂಡು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮಹಿಮೆಯಲ್ಲಿ ಪಾಲುಗಾರರಾಗಬೇಕೆಂದು, ನಾವು ಸಾರಿದ ಸುವಾರ್ತೆಯ ಮೂಲಕ ದೇವರು ನಿಮ್ಮನ್ನು ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾವು ನಿಮಗೆ ತಿಳಿಸಿದ ಸುವಾರ್ತೆಯ ಮೂಲಕವಾಗಿ, ನೀವು ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮಹಿಮೆಯನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಿಮ್ಮನ್ನು ಈ ಆಯ್ಕೆಗಾಗಿ ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ಮಹಿಮೆತ್ ವಾಟೊ ಘೆವ್‍ಸಾಟ್ನಿ, ಅಮಿ ಸಾಂಗಲ್ಲ್ಯಾ ಬರ್‍ಯಾ ಖಬ್ರೆ ವೈನಾ ದೆವಾನ್ ತುಮ್ಕಾ ಬಲವ್ನಿ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 2:14
19 ತಿಳಿವುಗಳ ಹೋಲಿಕೆ  

ತಮ್ಮ ರಾಜ್ಯ ಹಾಗೂ ವೈಭವದಲ್ಲಿ ಭಾಗವಹಿಸಲು ಕರೆಯಿತ್ತ ದೇವರು ಮೆಚ್ಚುವಂತೆ ಬಾಳಬೇಕೆಂದು ನಿಮಗೆ ವಿಧಿಸಿದೆವು; ಇದೆಲ್ಲಾ ನಿಮಗೆ ತಿಳಿದಿದೆ.


ಯೇಸುಕ್ರಿಸ್ತರಲ್ಲಿ ನಿಮ್ಮನ್ನು ತಮ್ಮ ಶಾಶ್ವತ ಮಹಿಮೆಗೆ ಕರೆದ ಕೃಪಾನಿಧಿಯಾದ ದೇವರು ನೀವು ಸ್ವಲ್ಪಕಾಲ ಹಿಂಸೆಬಾಧೆಯನ್ನು ಅನುಭವಿಸಿದ ನಂತರ ನಿಮ್ಮನ್ನು ಪೂರ್ವಸ್ಥಿತಿಗೆ ತರುವರು; ನಿಮ್ಮನ್ನು ಸ್ಥಿರಗೊಳಿಸಿ ಬಲಪಡಿಸುವರು.


ನಮ್ಮ ಶುಭಸಂದೇಶ ಕೇವಲ ಬಾಯಿಮಾತಿನದಲ್ಲ; ಅದು ಶಕ್ತಿಪೂರ್ಣವಾಗಿ ಪವಿತ್ರಾತ್ಮರ ಸಮೇತವಾಗಿ ಪೂರ್ಣ ಪ್ರಮಾಣದಿಂದ ಬಂದದ್ದು. ನಾವು ನಿಮ್ಮ ನಡುವೆಯಿದ್ದಾಗ, ನಿಮಗೋಸ್ಕರ ಹೇಗೆ ವರ್ತಿಸಿದೆವು ಎಂದು ನೀವೇ ಬಲ್ಲಿರಿ.


ನಾವು ಮಕ್ಕಳಾಗಿದ್ದರೆ, ಹಕ್ಕುಬಾಧ್ಯತೆ ಉಳ್ಳವರು. ಹೌದು, ದೇವರ ಸೌಭಾಗ್ಯಕ್ಕೆ ಬಾಧ್ಯಸ್ಥರು; ಕ್ರಿಸ್ತಯೇಸುವಿನೊಡನೆ ಸಹ ಬಾಧ್ಯಸ್ಥರು. ಕ್ರಿಸ್ತಯೇಸುವಿನ ಯಾತನೆಯಲ್ಲೂ ನಾವು ಪಾಲುಗಾರರಾಗಬೇಕು. ಆಗ ಅವರ ಮಹಿಮೆಯಲ್ಲೂ ಪಾಲುಗಾರರಾಗುತ್ತೇವೆ.


ನಾನು ಜಯಗಳಿಸಿ ನನ್ನ ತಂದೆಯೊಡನೆ ಅವರ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೇನೆ. ಅದೇ ಪ್ರಕಾರ ಜಯಹೊಂದಿದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ನಾವು ಆತನೊಡನೆ ಸತ್ತಿದ್ದರೆ, ಆತನೊಡನೆ ಜೀವಿಸುತ್ತೇವೆ; ಸೈರಣೆಯುಳ್ಳವರು ನಾವಾದರೆ, ಆತನೊಡನೆ ರಾಜ್ಯವಾಳುತ್ತೇವೆ; ನಾವಾತನನು ನಿರಾಕರಿಸಿದರೆ, ನಮ್ಮನ್ನಾತನು ನಿರಾಕರಿಸುತ್ತಾನೆ.


ದೇವರು ನಿಮ್ಮ ಮನೋನೇತ್ರಗಳನ್ನು ತೆರೆಯಲಿ; ಅವರ ಬೆಳಕು ನಿಮಗೆ ಕಾಣುವಂತೆ ಆಗಲಿ. ಹೀಗೆ, ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದ್ದೆಂದೂ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯ ಸಂಪತ್ತು ಎಂಥದ್ದೆಂದೂ ನೀವು ಅರಿತುಕೊಳ್ಳಬೇಕು.


“ಅನಾದಿಯಿಂದಲೂ ಗುಪ್ತವಾಗಿದ್ದ ರಹಸ್ಯವು ಈಗ ಪ್ರಕಟವಾಗಿದೆ. ಶಾಶ್ವತ ದೇವರ ಆಜ್ಞೆಯ ಮೇರೆಗೆ ಅನ್ಯಧರ್ಮೀಯರೂ ವಿಧೇಯರಾಗಿ ವಿಶ್ವಾಸಿಸುವಂತೆ ಪ್ರವಾದನಾ ಗ್ರಂಥಗಳ ಮೂಲಕ ಆ ರಹಸ್ಯವನ್ನು ಈಗ ಅವರಿಗೆ ತಿಳಿಸಲಾಗುತ್ತಿದೆ.


ನಾನು ಬೋಧಿಸುವ ಶುಭಸಂದೇಶದ ಪ್ರಕಾರ, ದೇವರು ಯೇಸುಕ್ರಿಸ್ತರ ಮುಖಾಂತರ ಮಾನವನ ಗುಟ್ಟುಗಳನ್ನು ರಟ್ಟುಮಾಡಿ, ತೀರ್ಪುಕೊಡುವ ದಿನ ಬಂದೇ ಬರುತ್ತದೆ. ಆ ದಿನ ಇದೆಲ್ಲಾ ಸಂಭವಿಸುತ್ತದೆ.


ಪಿತನೇ, ಇವರನ್ನು ನೀವು ನನಗೆ ಕೊಟ್ಟಿರುವಿರಿ. ಜಗತ್ತು ಉಂಟಾಗುವ ಮೊದಲೇ ನೀವು ನನ್ನನ್ನು ಪ್ರೀತಿಸಿ ನನಗಿತ್ತ ಮಹಿಮೆಯನ್ನು ಇವರೂ ಕಾಣುವಂತೆ ನಾನಿದ್ದಲ್ಲಿ ಇವರೂ ಇರಬೇಕೆಂದು ಆಶಿಸುತ್ತೇನೆ.


ನಾವು ಒಂದಾಗಿರುವಂತೆ ಇವರೂ ಒಂದಾಗಿರಲೆಂದು ನೀವು ನನಗಿತ್ತ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.


ಅದಕ್ಕೆ ಆ ಧಣಿ, “ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ, ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೆ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ಭಾಗಿಯಾಗು,’ ಎಂದ.


ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು I ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು I ನಿನ್ನ ಬಲಗೈ ನೀಡುವುದು ನಿತ್ಯಭಾಗ್ಯವನು II


ನಗರಕ್ಕೆ ಬೆಳಕನ್ನು ಕೊಡಲು ಸೂರ್ಯನ ಇಲ್ಲವೆ ಚಂದ್ರನ ಅವಶ್ಯಕತೆ ಇಲ್ಲ. ಏಕೆಂದರೆ, ದೇವರ ತೇಜಸ್ಸೇ ಅದಕ್ಕೆ ಬೆಳಕು; ಯಜ್ಞದ ಕುರಿಮರಿಯೇ ಅದಕ್ಕೆ ಜ್ಯೋತಿ.


ತಮ್ಮ ಸ್ವಂತ ಮಹಿಮೆಯಲ್ಲೂ ಸೌಭಾಗ್ಯದಲ್ಲೂ ಭಾಗಿಗಳಾಗಲು ದೇವರು ನಮ್ಮನ್ನು ಕರೆದಿದ್ದಾರೆ. ಅವರನ್ನು ಅರಿತುಕೊಳ್ಳುವುದರ ಮೂಲಕ ನಾವು ಭಕ್ತಿಯುತ ಜೀವನವನ್ನು ನಡೆಸಲು ಬೇಕಾದುದೆಲ್ಲವನ್ನೂ ಆ ಯೇಸುವಿನ ದಿವ್ಯಶಕ್ತಿಯಿಂದ ಪಡೆದಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು