2 ಥೆಸಲೋನಿಕದವರಿಗೆ 2:2 - ಕನ್ನಡ ಸತ್ಯವೇದವು C.L. Bible (BSI)2 ಪ್ರಭುವಿನ ದಿನವು ಬಂದೇಬಿಟ್ಟಿತೆಂದು ಪ್ರವಾದನೆಯಿಂದಾಗಲಿ, ಪ್ರವಚನದಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ತಿಳಿದುಬಂದಿದೆಯೆಂದು ಯಾರಾದರೂ ಹೇಳಿದರೆ, ಒಮ್ಮೆಗೇ ನೀವು ತಬ್ಬಿಬ್ಬಾಗಿ, ತಳಮಳಗೊಳ್ಳದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಕರ್ತನ ಆಗಮನದ ದಿನವು ಈಗಾಗಲೇ ಬಂದಿದೆಯೆಂಬುದಾಗಿ ಆತ್ಮದಿಂದಾಗಲಿ ಮಾತಿನಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ನೀವು ಬೇಗನೆ ಮನದಲ್ಲಿ ಚಂಚಲರಾಗಿ ಕಳವಳಪಡಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಕರ್ತನ ದಿನವು ಈಗಲೇ ಹತ್ತಿರವಾಯಿತೆಂಬದಾಗಿ ದೇವರಾತ್ಮಪ್ರೇರಿತವಾದ ನುಡಿ ಇದೆ ಎಂದಾಗಲಿ ಪೌಲನು ಹಾಗೆ ಹೇಳಿದನೆಂದಾಗಲಿ ಪೌಲನು ಹಾಗೆ ಬರೆದನೆಂದಾಗಲಿ ಯಾರಾದರೂ ಹೇಳಿದರೂ ನೀವು ಬೇಗನೆ ಬುದ್ಧಿಗೆಟ್ಟು ಚಂಚಲರಾಗಿ ಕಳವಳಪಡಬೇಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಪ್ರಭುವಿನ ದಿನವು ಈಗಾಗಲೇ ಬಂದುಬಿಟ್ಟಿತು ಎಂದು ಯಾರಾದರು ನಿಮಗೆ ಹೇಳಿದರೆ ಆ ಕೂಡಲೇ ಕಳವಳಗೊಳ್ಳಬೇಡಿ ಅಥವಾ ಭಯಪಡಬೇಡಿ. ಯಾವನಾದರೂ ತನ್ನ ಪ್ರವಾದನೆಯಲ್ಲಾಗಲಿ ಉಪದೇಶದಲ್ಲಾಗಲಿ ಹಾಗೆ ಹೇಳುವ ಸಾಧ್ಯತೆ ಇದೆ. ಯಾವನಾದರೂ ಸುಳ್ಳುಪತ್ರವನ್ನೇ ನಮ್ಮ ಹೆಸರಿನಲ್ಲಿ ತಾನೇ ಬರೆದು ನಿಮ್ಮ ಮುಂದೆ ಓದಿ ತಿಳಿಸುವ ಸಾಧ್ಯತೆಯೂ ಇದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಕ್ರಿಸ್ತ ಯೇಸುವಿನ ದಿನವು ಈಗಾಗಲೇ ಬಂದಿದೆಯೆಂದು ಪ್ರವಾದನೆಯಿಂದಾಗಲಿ, ಪ್ರಸಂಗದಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ತಿಳಿದು ನೀವು ಬೇಗನೆ ಚಂಚಲರಾಗಿ ಕಳವಳಪಡಬೇಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಧನಿಯಾಚೊ ದಿಸ್ ಯೆಲಾ ಮನುನ್ ಕೊನ್ ತರ್ ಸಾಂಗಟ್ಲ್ಯಾರ್ ತುಮಿ ಎಗ್ದಮ್ ಗೊಂದ್ಳುನಕಾಸಿ, ಕಶ್ಯಾಕ್ ಮಟ್ಲ್ಯಾರ್, ಅಮಿ ಪ್ರಚಾರಾಚ್ಯಾ ವೈನಾ ಅನಿ ಚಿಟಿ ಲಿವ್ತಲ್ಯಾ ವೈನಾ ಹೆಚ್ಯಾ ವಿಶಯಾತ್ ಶಿಕ್ವುಲಾ. ಅಧ್ಯಾಯವನ್ನು ನೋಡಿ |