Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 2:4 - ಕನ್ನಡ ಸತ್ಯವೇದವು C.L. Bible (BSI)

4 ದೇವರೆನಿಸಿಕೊಳ್ಳುವ ಎಲ್ಲವನ್ನೂ ಅಲ್ಲಗಳೆಯುವನು; ಆರಾಧನೆಗೈಯುವ ಎಲ್ಲವನ್ನೂ ಇಲ್ಲಗೊಳಿಸುವನು; ಇವೆಲ್ಲಕ್ಕೂ ತಾವೇ ಮಿಗಿಲೆಂದು ಭಾವಿಸಿ ದೇವಮಂದಿರದಲ್ಲಿ ಕುಳಿತುಕೊಂಡು ತಾನೇ ದೇವರೆಂದು ಘೋಷಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯಾವುದು ದೇವರೆನಿಸಿಕೊಳ್ಳುತ್ತದೋ ಯಾವುದು ಆರಾಧಿಸಲ್ಪಡುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಘೋಷಿಸಿಕೊಂಡು ದೇವರ ಗರ್ಭಗುಡಿಯಲ್ಲೇ ಕುಳಿತುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯಾವದು ದೇವರೆನಿಸಿಕೊಳ್ಳುತ್ತದೋ ಯಾವದು ಪೂಜೆ ಹೊಂದುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಹೇಳಿಕೊಂಡು ದೇವರ ಗರ್ಭಗುಡಿಯಲ್ಲೇ ಕೂತುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವರೆಂದು ಕರೆಸಿಕೊಳ್ಳುವ ಏನನ್ನೇ ಆಗಲಿ, ಜನರು ಪೂಜಿಸುವ ಯಾವುದನ್ನೇ ಆಗಲಿ ಅಧರ್ಮಸ್ವರೂಪನು ವಿರೋಧಿಸಿ, ಅವುಗಳಿಗಿಂತ ತನ್ನನ್ನು ತಾನೇ ಹೆಚ್ಚಿಸಿಕೊಂಡು ದೇವರ ಆಲಯದೊಳಕ್ಕೆ ಹೋಗಿ ಕುಳಿತುಕೊಂಡು ತಾನೇ ದೇವರೆಂದು ಹೇಳಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವರೆಣಿಸಿಕೊಳ್ಳುವ ಎಲ್ಲವನ್ನೂ ಆರಾಧಿಸಲಾಗುವ ಪ್ರತಿಯೊಂದನ್ನೂ ಅವನು ವಿರೋಧಿಸಿ ನಿಲ್ಲುವನು. ದೇವರಿಗೆ ಸಂಬಂಧಿಸಿದ ಇವೆಲ್ಲವುಗಳ ಮೇಲೆ ತನ್ನನ್ನು ಹೆಚ್ಚಿಸಿಕೊಳ್ಳುವನು. ತಾನೇ ದೇವರೆಂದು ಘೋಷಿಸಿ ದೇವರ ಆಲಯದಲ್ಲಿ ಕೂತುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೊ ಸಗ್ಳ್ಯಾ ಸಾಮಾನಾಚ್ಯಾ ವಿರೊದ್ ದೆವಾಚೆ ಮನುನ್ ಹೊತ್ತ್ಯಾಂಚ್ಯಾ ಮಟ್ಲ್ಯಾರ್ ಪುಜಾ ಕರ್‍ತಲ್ಯಾ ದೆವಾಚ್ಯಾ ವಿರೊದ್ ರ್‍ಹಾತಾ ಅನಿ ಅಪ್ನಿಚ್ ಸಗ್ಳ್ಯಾನ್ಕಿ ಮೊಟೊ ಮನುನ್ ಸಾಂಗ್ತಾ. ದೆವಾಚ್ಯಾ ಗುಡಿತ್ ಗುಸುನ್ ಬಸ್ತಾ ಅನಿ ಅಪ್ನಿಚ್ ದೆವ್ ಮನುನ್ ಸಾಂಗುಕ್‍ ಲಾಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 2:4
13 ತಿಳಿವುಗಳ ಹೋಲಿಕೆ  

ಅವನು ಮಹೋನ್ನತ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಳ್ಳುವನು. ಮಹೋನ್ನತರ ಪವಿತ್ರ ಪ್ರಜೆಯನ್ನು (ಸಂತರನ್ನು) ಶೋಷಣೆಗೆ ಗುರಿಮಾಡುವನು. ಆ ಪ್ರಜೆ ಅವನಿಗೆ ಮೂರುವರೆ ವರ್ಷ ಅಧೀನರಾಗಿರುವರು.


“ನರಪುತ್ರನೇ, ನೀನು ಟೈರ್ ನಗರದ ರಾಜನಿಗೆ ಹೀಗೆ ನುಡಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಗರ್ವದಿಂದ ‘ಆಹಾ, ನಾನೆ ದೇವರು, ಸಮುದ್ರ ಮಧ್ಯೆ ದೇವರ ಆಸನವನ್ನೇ ಅಲಂಕರಿಸಿದ್ದೇನೆ’, ಎಂದುಕೊಂಡೆ. ನೀನು ನಿನ್ನ ದೇವರಿಗೆ ಸಮನಾಗಿಸಿಕೊಂಡೆಯೋ? ನೀನು ಎಂದಿಗೂ ದೇವರಲ್ಲ, ನೀನೊಬ್ಬ ನರಪ್ರಾಣಿಯಷ್ಟೆ.


“ದೇವರುಗಳು” ಎನಿಸಿಕೊಳ್ಳುವವರು ಇಹಪರಗಳಲ್ಲಿ ಇರಬಹುದು; ಅಂಥ ಹಲವಾರು “ದೇವರು"ಗಳನ್ನೂ “ಪ್ರಭು"ಗಳನ್ನೂ ಪೂಜಿಸುವುದುಂಟು.


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ನಿನ್ನನ್ನೆ ದೇವರಿಗೆ ಸಮನಾಗಿಸಿಕೊಂಡಿರುವೆ.


ಕಡಲಿಗೂ ಚೆಲುವಿನ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ಗುಡಾರವನ್ನು ಹಾಕಿಸುವನು. ಆದರೂ ಸಹಾಯಕ್ಕೆ ಯಾರೂ ಇಲ್ಲದವನಾಗಿ ಸಾಯುವನು.


“(ಉತ್ತರದ) ರಾಜನು ಮನಸ್ಸು ಬಂದ ಹಾಗೆ ನಡೆದು ತಾನು ಎಲ್ಲ ದೇವರುಗಳಿಗಿಂತಲೂ ದೊಡ್ಡವನೆಂದು ತನ್ನನ್ನೇ ಹೆಚ್ಚಿಸಿಕೊಂಡು ಗರ್ವಿಷ್ಠನಾಗುವನು. ದೇವಾಧಿದೇವರನ್ನು ಅತಿಯಾಗಿ ದೂಷಿಸುವನು. ನಿಮ್ಮ ಮೇಲಿನ ದೈವಕೋಪ ತೀರುವ ತನಕ ಅವನು ವೃದ್ಧಿಯಾಗುವನು. ದೈವಸಂಕಲ್ಪ ನೆರವೇರಲೇಬೇಕು.


ನಾನು ಆ ಕೊಂಬುಗಳನ್ನು ಗಮನಿಸುತ್ತಿರುವಾಗಲೆ ಅವುಗಳ ನಡುವೆ ಇಗೋ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು. ಅದಕ್ಕೆ ಎಡೆಮಾಡಿಕೊಡಲು ಮುಂಚಿನ ಕೊಂಬುಗಳಲ್ಲಿ ಮೂರನ್ನು ಬೇರುಸಹಿತ ಕೀಳಲಾಯಿತು. ಆಶ್ಚರ್ಯವೆಂದರೆ, ಆ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳಿದ್ದವು. ಬಡಾಯಿ ಕೊಚ್ಚಿಕೊಳ್ಳುವ ಬಾಯೂ ಇತ್ತು.


ನಿನ್ನನ್ನು ಸಂಹರಿಸುವವನೆದುರಿಗೆ ನಿಂತು, ‘ನಾನು ದೇವರು’ ಎಂದು ಹೇಳಬಲ್ಲೆಯಾ? ಹತಿಸುವವನ ಕೈಗೆ ನೀನು ಎಂದಿಗೂ ದೇವರಲ್ಲ, ನರಪ್ರಾಣಿಯೇ!


ಈಜಿಪ್ಟಿನವರು ಕೇವಲ ಮನುಷ್ಯರೇ ಹೊರತು ದೇವರಲ್ಲ. ಅವರ ಅಶ್ವಗಳು ಮೂಳೆಮಾಂಸವೇ ಹೊರತು ಆಧ್ಯಾತ್ಮಿಕ ದಿವ್ಯಶಕ್ತಿಯಲ್ಲ. ಸರ್ವೇಶ್ವರ ಕೈಯೆತ್ತುವಾಗ ಅದಕ್ಕೆ ವಿರುದ್ಧ ಸಹಾಯ ಮಾಡಿದ ಅವನು ಮುಗ್ಗರಿಸುವನು. ಆ ಸಹಾಯ ಪಡೆದ ಅವನು ಬಿದ್ದುಹೋಗುವನು. ಎಲ್ಲರೂ ಒಟ್ಟಿಗೆ ಅಳಿದುಹೋಗುವರು.


ನಿಮ್ಮ ಪಟ್ಟಣದಲ್ಲಿ ನಾನು ತಿರುಗಾಡುತ್ತಾ, ನೀವು ಪೂಜಿಸುವ ವಿಗ್ರಹಗಳನ್ನು ಗಮನಿಸುತ್ತಾ ಇದ್ದಾಗ ಒಂದು ಬಲಿಪೀಠವು ಕಣ್ಣಿಗೆ ಬಿದ್ದಿತು. ಅದರ ಮೇಲೆ ‘ಅಜ್ಞಾತ ದೇವರಿಗೆ’ ಎಂಬ ಲಿಖಿತವಿತ್ತು. ನೀವು ಅರಿಯದೆ ಆರಾಧಿಸುವ ಆ ದೇವರನ್ನೇ ಅರುಹಿಸಲು ನಾನು ಬಂದಿರುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು