Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 2:5 - ಕನ್ನಡ ಸತ್ಯವೇದವು C.L. Bible (BSI)

5 ನಾನು ನಿಮ್ಮೊಡನೆ ಇದ್ದಾಗಲೇ ಇದೆಲ್ಲವನ್ನು ತಿಳಿಸಿದ ನೆನಪು ನಿಮಗಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ಹೇಳಿದ್ದು ಜ್ಞಾಪಕವಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ಹೇಳಿದ್ದು ಜ್ಞಾಪಕವಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಈ ಸಂಗತಿಗಳೆಲ್ಲವೂ ಸಂಭವಿಸುತ್ತವೆಯೆಂದು ನಾನು ನಿಮಗೆ ಮೊದಲೇ ತಿಳಿಸಿದ್ದೇನೆ. ಜ್ಞಾಪಕವಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾನು ನಿಮ್ಮ ಸಂಗಡ ಇರುವಾಗ ಈ ಸಂಗತಿಗಳನ್ನು ನಿಮಗೆ ಹೇಳಿದ್ದು ಜ್ಞಾಪಕವಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಮಿಯಾ ತುಮ್ಚ್ಯಾ ವಾಂಗ್ಡಾ ಹೊತ್ತ್ಯಾ ತನ್ನಾ ಹ್ಯಾ ಸಗ್ಳ್ಯಾಂಚ್ಯಾ ವಿಶಯಾತ್ ತುಮ್ಚ್ಯಾಕ್ಡೆ ಬೊಲಲ್ಲೊ ಮನುನ್ ತುಮ್ಕಾ ಯಾದ್ ಹಾಯ್ ಕಾಯ್ ನಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 2:5
11 ತಿಳಿವುಗಳ ಹೋಲಿಕೆ  

ನನ್ನ ಮರಣಾ ನಂತರವೂ ಈ ವಿಷಯಗಳನ್ನು ನೀವು ಯಾವಾಗಲೂ ಜ್ಞಾಪಕಕ್ಕೆ ತಂದುಕೊಳ್ಳಲು ಸಾಧ್ಯವಾಗುವಂತೆ ಈಗಲೇ ನನ್ನಿಂದಾದಷ್ಟು ಪ್ರಯತ್ನಿಸುತ್ತೇನೆ.


ನಾವು ನಿಮ್ಮೊಡನಿದ್ದಾಗ, “ದುಡಿಯಲೊಲ್ಲದವನು ಉಣಲೂಬಾರದು,” ಎಂದು ನಿಮಗೆ ಆಜ್ಞಾಪಿಸಿದ್ದೆವು.


ತಂದೆ ಮಕ್ಕಳನ್ನು ಕಾಣುವಂತೆ ನಾವು ಪ್ರತಿಯೊಬ್ಬನನ್ನೂ ಆದರದಿಂದ ಕಂಡೆವು; ಬುದ್ಧಿ ಹೇಳಿದೆವು; ಪ್ರೋತ್ಸಾಹಿಸಿದೆವು.


ಇಂಥ ಕೃತ್ಯಗಳನ್ನು ಮಾಡುವವರು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲ ಎಂದು ಈಗಾಗಲೇ ನಿಮ್ಮನ್ನು ಎಚ್ಚರಿಸಿದ್ದೇನೆ; ಈಗಲೂ ಎಚ್ಚರಿಸುತ್ತೇನೆ.


ಆದುದರಿಂದ ಎಚ್ಚರಿಕೆ! ನಾನು ಮೂರು ವರ್ಷಗಳ ಕಾಲ ಹಗಲಿರುಳು ಕಣ್ಣೀರಿಡುತ್ತಾ ಪ್ರತಿಯೊಬ್ಬನಿಗೂ ಬುದ್ಧಿ ಹೇಳಿದ್ದೇನೆಂಬುದನ್ನು ಮರೆಯಬೇಡಿ.


ಅಂಥಕಾಲ ಬಂದಾಗ ಇದನ್ನೆಲ್ಲಾ ಕುರಿತು ನಾನು ನಿಮ್ಮನ್ನು ಮೊದಲೇ ಎಚ್ಚರಿಸಿದ್ದೇನೆಂದು ನೀವು ನೆನಸಿಕೊಳ್ಳುವಂತೆ ಇದನ್ನು ಹೇಳುತ್ತಿದ್ದೇನೆ.


ಕಿವಿಗಳಿದ್ದೂ ಕೇಳಲಾರಿರಾ? ಕಣ್ಣುಗಳಿದ್ದೂ ನೋಡಲಾರಿರಾ?


ಏನು, ನಿಮಗಿನ್ನೂ ಅರಿವಿಲ್ಲವೆ? ಐದು ರೊಟ್ಟಿಗಳಿಂದ ನಾನು ಐದು ಸಾವಿರ ಜನರನ್ನು ತೃಪ್ತಿಪಡಿಸಿದ್ದು ನಿಮಗೆ ಜ್ಞಾಪಕವಿಲ್ಲವೆ? ಆಗ ಉಳಿದುದ್ದನ್ನು ಎಷ್ಟು ಬುಟ್ಟಿಗಳಲ್ಲಿ ತುಂಬಿಸಿಕೊಂಡಿರಿ?


ನಾವು ನಿಮ್ಮೊಂದಿಗಿದ್ದಾಗ, ಇಂಥ ವಿಪತ್ತುಗಳು ಖಂಡಿತವಾಗಿ ತಲೆದೋರುವುವೆಂದು ನಿಮಗೆ ಮೊದಲೇ ತಿಳಿಸಿದ್ದೆವು. ಈಗ ಹಾಗೆಯೇ ಸಂಭವಿಸಿದೆ; ನಿಮ್ಮ ಅನುಭವಕ್ಕೂ ಬಂದಿದೆ.


ನಿಯಮಿತ ಕಾಲಕ್ಕೆ ಮುಂಚೆ ಕಾಣಿಸಿಕೊಳ್ಳದಂತೆ ಅವನನ್ನು ತಡೆಹಿಡಿದಿರುವುದು ಯಾವುದೆಂದು ನೀವು ಬಲ್ಲಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು