Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 2:7 - ಕನ್ನಡ ಸತ್ಯವೇದವು C.L. Bible (BSI)

7 ಅಧರ್ಮವು ಈಗಾಗಲೇ ಗುಪ್ತವಾಗಿ ತನ್ನ ಕೆಲಸವನ್ನು ಸಾಧಿಸುತ್ತಿದೆ; ತಡೆಗಟ್ಟಿರುವವನು ದಾರಿಬಿಡುವ ತನಕ ಅದು ಗುಪ್ತವಾಗಿಯೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಧರ್ಮವು ಈಗಲೂ ಗುಪ್ತವಾಗಿ ತನ್ನ ಕಾರ್ಯವನ್ನು ಸಾಧಿಸುತ್ತದೆ, ಆದರೆ ತಡೆಗಟ್ಟುವವನು ದಾರಿಬಿಡುವ ತನಕ ಅದು ಗುಪ್ತವಾಗಿಯೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಧರ್ಮವು ಈಗಲೂ ಗುಪ್ತವಾಗಿ ತನ್ನ ಕಾರ್ಯವನ್ನು ಸಾಧಿಸುತ್ತದೆ; ಆದರೆ ಇದುವರೆಗೆ ಅಡ್ಡಿಮಾಡುವವನು ತೆಗೆದುಬಿಡಲ್ಪಡುವ ತನಕ ಅದು ಗುಪ್ತವಾಗಿಯೇ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ರಹಸ್ಯವಾದ ದುಷ್ಟಶಕ್ತಿಯು ಈಗಾಗಲೇ ಪ್ರಪಂಚದಲ್ಲಿ ತನ್ನ ಕಾರ್ಯವನ್ನು ಸಾಧಿಸುತ್ತಾ ಇದೆ. ಆದರೆ ಆ ರಹಸ್ಯವಾದ ದುಷ್ಟಶಕ್ತಿಯನ್ನು ತಡೆಹಿಡಿಯುವ ಒಬ್ಬಾತನಿದ್ದಾನೆ. ಆತನು ತೆಗೆದುಬಿಡಲ್ಪಟ್ಟ ಕೂಡಲೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಏಕೆಂದರೆ, ನಿಯಮ ಮೀರುವ ರಹಸ್ಯ ಶಕ್ತಿಯು ಈಗಾಗಲೇ ಕಾರ್ಯಮಾಡುತ್ತಿದೆ. ಅವನನ್ನು ದಾರಿಯಿಂದ ತೆಗೆಯುವವರೆಗೆ ಈಗ ಅಡ್ಡಿಮಾಡುವಾತನು ಅಡ್ಡಿ ಮಾಡುತ್ತಲೇ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಘುಟಾನಿ ಹೊತ್ತೊ ಹ್ಯೊ ವಿರೊದಿ ಅಪ್ನಾಚೆ ಕಾಮ್ ಕರುನ್ಗೆತುಚ್ ಹಾಯ್. ಖರೆ ತ್ಯಾ ಘುಟಾನ್ ಹೊತ್ತ್ಯಾ ವಿರೊದಿಕ್ ಅಡ್ವುನ್ ಧರಲ್ಲೊ ಎಕ್ಲೊ ಹಾಯ್, ತೆನಿ ಅವ್ಕಾಸ್ ದಿ ನಸ್ತಾನಾ ತೊ ವಿರೊದಿ ಕಾಮ್ ಕರಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 2:7
9 ತಿಳಿವುಗಳ ಹೋಲಿಕೆ  

ನನ್ನ ಪ್ರಿಯ ಮಕ್ಕಳೇ, ಅಂತಿಮ ಕಾಲ ಸಮೀಪಿಸಿತು. ಕ್ರಿಸ್ತವಿರೋಧಿ ಬರುವನೆಂದು ನೀವು ಕೇಳಿದ್ದೀರಿ. ಈಗಾಗಲೇ ಅನೇಕ ಕ್ರಿಸ್ತವಿರೋಧಿಗಳು ತಲೆದೋರಿದ್ದಾರೆ. ಇದರಿಂದ ಅಂತಿಮಕಾಲ ಸನ್ನಿಹಿತವಾಯಿತೆಂದು ನಮಗೆ ತಿಳಿದುಬರುತ್ತದೆ.


ನಾನು ಹೋದ ಬಳಿಕ ಕ್ರೂರವಾದ ತೋಳಗಳು ನಿಮ್ಮ ಮಧ್ಯೆ ನುಗ್ಗುವುವು ಎಂದು ನಾನು ಬಲ್ಲೆ. ಅವು ಮಂದೆಗೆ ಹಾನಿಮಾಡದೆ ಬಿಡವು.


ಯೇಸುವನ್ನು ಒಪ್ಪಿಕೊಳ್ಳದ ಆತ್ಮ ದೇವರಿಂದ ಪ್ರೇರಿತವಾದುದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮ. ಅದು ಬರುವುದೆಂದು ನೀವು ಕೇಳಿದ್ದೀರಿ; ಈಗಾಗಲೇ ಅದು ಲೋಕದಲ್ಲಿ ತಲೆದೋರಿದೆ.


ಆ ದೇವದೂತನು ನನಗೆ ಹೀಗೆ ಹೇಳಿದನು : “ನೀನು ದಿಗ್ಭ್ರಮೆಗೊಂಡಿರುವುದೇಕೆ? ಆ ಸ್ತ್ರೀಯ ಹಾಗೂ ಅವಳ ವಾಹನವಾಗಿರುವ ಏಳು ತಲೆ, ಹತ್ತು ಕೊಂಬುಗಳುಳ್ಳ ಮೃಗದ ನಿಗೂಢತೆಯನ್ನು ನಾನು ನಿನಗೆ ವಿವರಿಸುತ್ತೇನೆ.


ಅವಳ ಹಣೆಯ ಮೇಲೆ : ಬಾಬಿಲೋನ್ ಮಹಾನಗರಿ ವೇಶ್ಯೆಯರ ಮಹಾತಾಯಿ ಜಗತ್ತಿನ ದುರ್ನಡತೆಗಳ ಜನನಿ,” ಎಂಬ ನಿಗೂಢವಾದ ಹೆಸರಿತ್ತು.


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ನಿಯಮಿತ ಕಾಲಕ್ಕೆ ಮುಂಚೆ ಕಾಣಿಸಿಕೊಳ್ಳದಂತೆ ಅವನನ್ನು ತಡೆಹಿಡಿದಿರುವುದು ಯಾವುದೆಂದು ನೀವು ಬಲ್ಲಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು