Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 3:1 - ಕನ್ನಡ ಸತ್ಯವೇದವು C.L. Bible (BSI)

1 ಕೊನೆಯದಾಗಿ ಸಹೋದರರೇ, ನಮಗಾಗಿಯೂ ಪ್ರಾರ್ಥನೆಮಾಡಿ; ಪ್ರಭುವಿನ ಸಂದೇಶ ನಿಮ್ಮಲ್ಲಿ ಹಬ್ಬಿಹರಡಿದಂತೆ ಎಲ್ಲೆಲ್ಲಿಯೂ ಪಸರಿಸಿ ಪ್ರಖ್ಯಾತವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕಡೆಯದಾಗಿ, ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿಹರಡಿದ ಪ್ರಕಾರವೇ ಅದು ಬೇಗನೆ ಪಸರಿಸಿ ಮಹಿಮೆ ಹೊಂದಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕಡೇ ಮಾತೇನಂದರೆ, ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿದ ಪ್ರಕಾರ ಎಲ್ಲೆಲ್ಲಿಯೂ ಬೇಗನೆ ಹಬ್ಬಿ ಪ್ರಖ್ಯಾತಿ ಹೊಂದುವ ಹಾಗೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಹೋದರ ಸಹೋದರಿಯರೇ, ನಮಗೋಸ್ಕರ ಪ್ರಾರ್ಥಿಸಿರಿ. ಪ್ರಭುವಿನ ಉಪದೇಶವು ತ್ವರಿತಗತಿಯಲ್ಲಿ ಹಬ್ಬಲೆಂದು ಪ್ರಾರ್ಥಿಸಿ. ನಿಮ್ಮಂತೆಯೇ ಇತರ ಜನರು ಈ ಉಪದೇಶವನ್ನು ಗೌರವಿಸುವಂತೆ ಪ್ರಾರ್ಥಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕೊನೆಯದಾಗಿ ಪ್ರಿಯರೇ, ಕರ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಹಬ್ಬಿದಂತೆ ಎಲ್ಲ ಕಡೆಗಳಲ್ಲಿಯೂ ಅತಿವೇಗದಿಂದ ಹಬ್ಬಿ ಹರಡುವಂತೆ ನಮಗಾಗಿ ಬೇಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಆಕ್ರಿಕ್ ಅಮ್ಚ್ಯಾ ಭಾವಾ-ಭೆನಿಯಾನು, ಅಮ್ಚ್ಯಾಸಾಟ್ನಿ ಮಾಗ್ನಿ ಕರಾ. ತುಮ್ಚ್ಯಾ ಮದ್ದಿ ಕಶೆ ಧನಿಯಾಚಿ ಖಬರ್ ಪಾವ್ಲಿ, ಅನಿ ತಿಕಾ ತುಮಿ ಕಶೆ ಮಾನ್ ದಿಲ್ಯಾಸಿ ತಸೆಚ್ ತಿ ಲಗ್ಗು-ಲಗ್ಗುನಾ ಸಗ್ಳ್ಯಾಕ್ಡೆ ಜಾವ್ನ್ ಪಾವುಂದಿ, ಅನಿ ತಿಕಾ ಮಾನ್ ದಿವ್ನ್ ಸ್ವಿಕಾರ್ ಕರಿ ಸರ್ಕೆ ಹೊಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 3:1
22 ತಿಳಿವುಗಳ ಹೋಲಿಕೆ  

ಸಹೋದರರೇ, ನಮಗಾಗಿಯೂ ಪ್ರಾರ್ಥಿಸಿರಿ.


ಕ್ರಿಸ್ತಯೇಸುವಿನ ರಹಸ್ಯವನ್ನು ಪ್ರಚುರಪಡಿಸಲು ನಮಗೆ ಅವಕಾಶ ದೊರಕುವಂತೆ ಪ್ರಾರ್ಥಿಸಿರಿ. ಈ ಶುಭಸಂದೇಶದ ನಿಮಿತ್ತವೇ ನಾನು ಸೆರೆಯಲ್ಲಿ ಇದ್ದೇನೆಂಬುದು ನಿಮಗೆ ತಿಳಿದಿದೆ. ನಾನು ಶುಭಸಂದೇಶವನ್ನು ಸ್ಪಷ್ಟವಾಗಿಯೂ ಸರಳವಾಗಿಯೂ ಸಾರುವಂತೆ ಪ್ರಾರ್ಥಿಸಿರಿ.


ಇಲ್ಲಿ ಅನೇಕ ವಿರೋಧಿಗಳಿದ್ದರೂ ಶುಭಸಂದೇಶದ ಕಾರ್ಯವನ್ನು ಕೈಗೊಳ್ಳಲು ಮಹಾದ್ವಾರಗಳು ನನಗೆ ತೆರೆದಿವೆ.


ಪ್ರಭುವಿನ ಶುಭಸಂದೇಶ ನಿಮ್ಮಿಂದಲೇ ಘೋಷಿತವಾಯಿತು. ದೇವರಲ್ಲಿ ನೀವಿಟ್ಟಿರುವ ವಿಶ್ವಾಸ ಮಕೆದೋನಿಯ ಮತ್ತು ಅಖಾಯದಲ್ಲಿ ಮಾತ್ರವಲ್ಲದೆ ಎಲ್ಲೆಡೆಯಲ್ಲೂ ಪ್ರಸರಿಸಿತು. ಈ ನಿಮ್ಮ ವಿಶ್ವಾಸವನ್ನು ಕುರಿತು ನಾವು ಹೇಳಬೇಕಾದುದು ಏನೂ ಇಲ್ಲ; ಅಲ್ಲಿಯ ಜನರೇ ಹೇಳುತ್ತಾರೆ.


ಪ್ರಭುವಿನ ವಾಕ್ಯ ಹೀಗೆ ಹಬ್ಬಿಹರಡಿ ಪ್ರಬಲವಾಯಿತು.


ದೇವರ ಶುಭಸಂದೇಶವಾದರೋ ಹಬ್ಬಿ ಹರಡತೊಡಗಿತು.


ಕಡೆಯದಾಗಿ ಸಹೋದರರೇ, ನೀವು ಹೇಗೆ ಬಾಳಬೇಕು. ದೇವರು ಮೆಚ್ಚುವಂತೆ ಹೇಗೆ ನಡೆದುಕೊಳ್ಳಬೇಕು, ಎಂಬುದನ್ನು ನಮ್ಮಿಂದ ಕಲಿತುಕೊಂಡಿರಿ. ಅಂತೆಯೇ ಜೀವಿಸುತ್ತಿದ್ದೀರಿ. ನಿಮ್ಮ ನಡತೆ ಇನ್ನೂ ಉತ್ತಮಗೊಳ್ಳಬೇಕೆಂದು ಪ್ರಭು ಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ ಹಾಗೂ ಪ್ರಬೋಧಿಸುತ್ತೇವೆ.


ಇನ್ನೊಂದು ಕಾರಣಕ್ಕಾಗಿಯೂ ನಾವು ಸತತವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನೀವು ದೇವರ ಸಂದೇಶವನ್ನು ನಮ್ಮಿಂದ ಕೇಳಿದಾಗ, ಅದನ್ನು ಮನುಷ್ಯರ ಮಾತುಗಳೆಂದು ಪರಿಗಣಿಸದೆ, ದೇವರ ವಾಕ್ಯವೆಂದೇ ಅರಿತು ಅಂಗೀಕರಿಸಿದಿರಿ. ವಿಶ್ವಾಸಿಗಳಾದ ನಿಮ್ಮಲ್ಲಿ ಚೈತನ್ಯಪೂರ್ಣವಾಗಿರುವ ಈ ವಾಕ್ಯವು, ನಿಜವಾಗಿಯೂ ದೇವರ ಸಂದೇಶವೇ ಸರಿ.


ಸಹೋದರರೇ, ನಾವು ನಿಮ್ಮಲ್ಲಿಗೆ ಬಂದುದು ವ್ಯರ್ಥವಾಗಲಿಲ್ಲವೆಂಬುದು ನಿಮಗೆ ಗೊತ್ತು.


ನಮ್ಮ ಶುಭಸಂದೇಶ ಕೇವಲ ಬಾಯಿಮಾತಿನದಲ್ಲ; ಅದು ಶಕ್ತಿಪೂರ್ಣವಾಗಿ ಪವಿತ್ರಾತ್ಮರ ಸಮೇತವಾಗಿ ಪೂರ್ಣ ಪ್ರಮಾಣದಿಂದ ಬಂದದ್ದು. ನಾವು ನಿಮ್ಮ ನಡುವೆಯಿದ್ದಾಗ, ನಿಮಗೋಸ್ಕರ ಹೇಗೆ ವರ್ತಿಸಿದೆವು ಎಂದು ನೀವೇ ಬಲ್ಲಿರಿ.


ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲೂ ಪವಿತ್ರಾತ್ಮ ಪ್ರೇರಿತವಾದ ಪ್ರೀತಿಯಿಂದಲೂ ನಾನು ನಿಮ್ಮಲ್ಲಿ ಕೇಳಿಕೊಳ್ಳುವುದೇನೆಂದರೆ: ನೀವು ನನಗೋಸ್ಕರ ದೇವರಲ್ಲಿ ಪ್ರಾರ್ಥಿಸಿ ನನ್ನ ಹೋರಾಟದಲ್ಲಿ ಸಹಕರಿಸಿರಿ.


ದೇವರವಾಕ್ಯವು ಪ್ರವರ್ಧಿಸತೊಡಗಿತು. ವಿಶ್ವಾಸಿಗಳ ಸಂಖ್ಯೆ ಜೆರುಸಲೇಮಿನಲ್ಲಿ ಬಹಳವಾಗಿ ಹೆಚ್ಚಿತು. ಬಹುಮಂದಿ ಯಾಜಕರೂ ಆ ವಿಶ್ವಾಸಕ್ಕೆ ಶರಣಾದರು.


ಆದುದರಿಂದ ಯೇಸು ತಮ್ಮ ಶಿಷ್ಯರಿಗೆ, “ಬೆಳೆಯೇನೋ ಹೇರಳ; ಕೊಯಿಲುಗಾರರೋ ವಿರಳ; ಈ ಕಾರಣ ತನ್ನ ಕೊಯಿಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಪ್ರಾರ್ಥಿಸಿರಿ,” ಎಂದರು.


ಪೊಗಳುವೆ ನಿನ್ನ ನಾಮವನು ತಲೆಬಾಗಿ ನಿನ್ನ ಪವಿತ್ರಾಲಯದತ್ತ I ನಿನ್ನ ಪ್ರೀತಿಸತ್ಯತೆಗಳ, ನಾಮ ನುಡಿಗಳ ಮಹತ್ವದ ಪ್ರಯುಕ್ತ II


ಕಳುಹಿಸುವಾಗ ಅವರಿಗೆ ಹೇಳಿದ್ದೇನೆಂದರೆ, “ಬೆಳೆಯೇನೋ ಹೇರಳವಾಗಿದೆ; ಕೊಯ್ಲುಗಾರರೊ ವಿರಳ. ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಬೇಡಿಕೊಳ್ಳಿ.


ಕೊನೆಯದಾಗಿ ಪ್ರಿಯ ಸಹೋದರರೇ, ಸಂತೋಷದಿಂದಿರಿ, ಪರಿಪೂರ್ಣರಾಗಲು ಪ್ರಯತ್ನಿಸಿರಿ. ನನ್ನ ಬುದ್ಧಿಮಾತುಗಳಿಗೆ ಕಿವಿಗೊಡಿ; ಒಮ್ಮನಸ್ಸಿನಿಂದ ಬಾಳಿರಿ; ಸಮಾಧಾನದಿಂದ ಜೀವಿಸಿರಿ; ಆಗ ಪ್ರೀತಿ ಮತ್ತು ಶಾಂತಿ ಸ್ವರೂಪರಾದ ದೇವರು ನಿಮ್ಮೊಡನೆ ಇರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು