Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 3:10 - ಕನ್ನಡ ಸತ್ಯವೇದವು C.L. Bible (BSI)

10 ನಾವು ನಿಮ್ಮೊಡನಿದ್ದಾಗ, “ದುಡಿಯಲೊಲ್ಲದವನು ಉಣಲೂಬಾರದು,” ಎಂದು ನಿಮಗೆ ಆಜ್ಞಾಪಿಸಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ, “ಕೆಲಸ ಮಾಡಲೊಲ್ಲದವನು ಊಟಮಾಡಬಾರದು” ಎಂದು ನಿಮಗೆ ಆಜ್ಞಾಪಿಸಿದೆವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ - ಕೆಲಸ ಮಾಡಲೊಲ್ಲದವನು ಊಟಮಾಡಬಾರದೆಂದು ನಿಮಗೆ ಆಜ್ಞಾಪಿಸಿದೆವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾವು ನಿಮ್ಮ ಸಂಗಡವಿದ್ದಾಗ, “ಕೆಲಸ ಮಾಡದವನು ಊಟವನ್ನೂ ಮಾಡಕೂಡದು” ಎಂಬ ನಿಯಮವನ್ನು ವಿಧಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾವು ನಿಮ್ಮ ಸಂಗಡ ಇದ್ದಾಗ, “ಕೆಲಸ ಮಾಡಲೊಲ್ಲದವನು ಉಣ್ಣಲೂಬಾರದು,” ಎಂದು ನಿಮಗೆ ಆಜ್ಞಾಪಿಸಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅಮಿ ತುಮ್ಚ್ಯಾ ವಾಂಗ್ಡಾ ಹೊತ್ತ್ಯಾ ತನ್ನಾ ಅಮಿ ಕನ್ನಾಬಿ ಸಾಂಗುಕ್ ಲಾಗಲ್ಲಾಂವ್, ಜೊ ಕೊನ್ ಕಾಮ್ ಕರಿನಾ ಮನ್ತಾ ತೆಕಾ ಉಪ್ಪಾಸಿ ಟಾಕಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 3:10
11 ತಿಳಿವುಗಳ ಹೋಲಿಕೆ  

ನೀನುತ್ಪತ್ತಿಯಾದ ಮಣ್ಣಿಗೆ ಮರಳಿ ಸೇರುವ ತನಕ ಗಳಿಸಬೇಕು ಕವಳವನ್ನು ನೆತ್ತಿಬೆವರಿಡುತ. ಮಣ್ಣಿನಿಂದಲೇ ಬಂದವನು ನೀನು ಮರಳಿ ಮಣ್ಣಿಗೆ ಸೇರತಕ್ಕವನು."


ಮೈಗಳ್ಳನು ಮಳೆಗಾಲದಲ್ಲೂ ಹೊಲ ಉಳಲಾರನು; ಸುಗ್ಗಿಕಾಲದಲ್ಲಿ ಅಂಗಲಾಚಿದರೂ ಅವನಿಗೆ ಬೆಳೆಸಿಗಲಾರದು.


ಮತ್ತೊಬ್ಬರ ವಿಷಯದಲ್ಲಿ ನೀವು ತಲೆಹಾಕದೆ ನಿಮ್ಮ ಸ್ವಂತಕಾರ್ಯಗಳಲ್ಲೇ ಮಗ್ನರಾಗಿರಿ. ನೆಮ್ಮದಿಯ ಜೀವನವೇ ನಿಮ್ಮ ಗುರಿಯಾಗಿರಲಿ. ನಿಮ್ಮ ಸ್ವಂತ ದುಡಿಮೆಯಿಂದ ಬದುಕನ್ನು ಸಾಗಿಸಿರಿ. ಇದೇ ನಿಮಗೆ ನಮ್ಮ ಆದೇಶ.


ಸೋಮಾರಿಗೆ ಹಸಿದಿದ್ದರೂ ಊಟವಿಲ್ಲ; ಶ್ರಮಜೀವಿಗಳಿಗಾದರೋ ಬಲಿಷ್ಠರನ್ನಾಗಿಸುವ ಮೃಷ್ಟಾನ್ನ.


ಮೈಗಳ್ಳನನ್ನು ಕೊಲ್ಲುವುದು ಅವನ ಇಚ್ಛೆಯೆ; ಬಗ್ಗದು ಅವನ ಕೈ ದುಡಿಮೆಗೆ.


ನಾವು ನಿಮ್ಮೊಂದಿಗಿದ್ದಾಗ, ಇಂಥ ವಿಪತ್ತುಗಳು ಖಂಡಿತವಾಗಿ ತಲೆದೋರುವುವೆಂದು ನಿಮಗೆ ಮೊದಲೇ ತಿಳಿಸಿದ್ದೆವು. ಈಗ ಹಾಗೆಯೇ ಸಂಭವಿಸಿದೆ; ನಿಮ್ಮ ಅನುಭವಕ್ಕೂ ಬಂದಿದೆ.


ಅಂಥಕಾಲ ಬಂದಾಗ ಇದನ್ನೆಲ್ಲಾ ಕುರಿತು ನಾನು ನಿಮ್ಮನ್ನು ಮೊದಲೇ ಎಚ್ಚರಿಸಿದ್ದೇನೆಂದು ನೀವು ನೆನಸಿಕೊಳ್ಳುವಂತೆ ಇದನ್ನು ಹೇಳುತ್ತಿದ್ದೇನೆ.


ಬಂದಮೇಲೆ ಅವರಿಗೆ ಹೀಗೆಂದನು : “ನಾನು ಏಷ್ಯಪ್ರಾಂತ್ಯದಲ್ಲಿ ಕಾಲಿಟ್ಟ ದಿನ ಮೊದಲ್ಗೊಂಡು ಇಂದಿನವರೆಗೆ ನಿಮ್ಮ ಮಧ್ಯೆ ಹೇಗೆ ಬಾಳಿದೆನೆಂದು ನಿಮಗೆ ತಿಳಿದಿದೆ.


ತರುವಾಯ ಯೇಸುಸ್ವಾಮಿ, “ನಾನು ನಿಮ್ಮೊಡನೆ ಇದ್ದಾಗಲೇ ನಿಮಗೆ ತಿಳಿಸಿದ ವಿಷಯ ಇದು: ಮೋಶೆಯ ನಿಯಮದಲ್ಲೂ ಪ್ರವಾದಿಗಳ ಗ್ರಂಥಗಳಲ್ಲೂ ಕೀರ್ತನೆಗಳಲ್ಲೂ ನನ್ನ ವಿಷಯವಾಗಿ ಬರೆದಿರುವುದೆಲ್ಲಾ ನೆರವೇರಲೇಬೇಕಾಗಿತ್ತು,” ಎಂದರು.


ನಾನು ನಿಮ್ಮೊಡನೆ ಇದ್ದಾಗಲೇ ಇದೆಲ್ಲವನ್ನು ತಿಳಿಸಿದ ನೆನಪು ನಿಮಗಿಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು