Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 3:14 - ಕನ್ನಡ ಸತ್ಯವೇದವು C.L. Bible (BSI)

14 ಈ ಪತ್ರದ ಮೂಲಕ ನಾವು ಹೇಳಿರುವ ಮಾತನ್ನು ಯಾರಾದರೂ ಕೇಳದಿದ್ದರೆ, ಅಂಥವನನ್ನು ಗುರುತಿಸಿ ಅವನ ಸಹವಾಸವನ್ನೇ ತೊರೆದುಬಿಡಿ. ಹೀಗೆ ಮಾಡಿದರೆ, ಅವನಿಗೆ ನಾಚಿಕೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಈ ಪತ್ರಿಕೆಯ ಮೂಲಕವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತಿಸಿ ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಈ ಪತ್ರಿಕೆಯ ಮೂಲಕವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತು ಇಟ್ಟುಕೊಂಡು ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಈ ಪತ್ರದ ಮೂಲಕ ನಿಮಗೆ ತಿಳಿಸಿರುವ ಮಾತುಗಳಿಗೆ ಯಾವನಾದರೂ ವಿಧೇಯನಾಗದಿದ್ದರೆ, ಅವನು ಯಾರೆಂಬುದನ್ನು ಜ್ಞಾಪಕದಲ್ಲಿಟ್ಟುಕೊಂಡಿರಿ. ಅವನ ಸಹವಾಸಮಾಡಬೇಡಿ. ಆಗ ಅವನಿಗೆ ನಾಚಿಕೆ ಆಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಈ ಪತ್ರದ ಮೂಲಕ ಹೇಳಿರುವ ನಮ್ಮ ಮಾತಿಗೆ ಯಾರಾದರೂ ವಿಧೇಯರಾಗದಿದ್ದರೆ ಅಂಥವರನ್ನು ಗುರುತಿಸಿ ಅವರಿಗೆ ನಾಚಿಕೆಯಾಗುವಂತೆ ಅವರ ಸಹವಾಸದಲ್ಲಿ ಸೇರಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅಮಿ ಲಿವಲ್ಲ್ಯಾ ಹ್ಯಾ ಚಿಟಿತ್ಲ್ಯಾ ಗೊಸ್ಟಿಯಾ ತುಮ್ಚ್ಯಾತ್ಲಿ ಉಲ್ಲಿ ಲೊಕಾ ಆಯ್ಕಿನಸ್ತಾನಾ ರ್‍ಹಾತ್ಯಾತ್, ತೆಂಚಿ ಫಾಟ್ ಸೊಡುನ್ ಸೊಡಾ, ತೆಂಕಾ ಕಾಯ್ಬಿ ಕರುಕ್ ಜಾವ್‍ನಕಾಶಿ, ಅಶೆ ತೆಂಚಿ ತೆಂಕಾಚ್ ಲಜ್ಜಾ ದಿಸ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 3:14
29 ತಿಳಿವುಗಳ ಹೋಲಿಕೆ  

ಕ್ರೈಸ್ತಸಭೆಯಲ್ಲಿ ಭೇದಭಾವ ಹುಟ್ಟಿಸುವವನಿಗೆ ಒಂದೆರಡು ಸಾರಿ ಬುದ್ಧಿಹೇಳು. ಅನಂತರ ಅವನಷ್ಟಕ್ಕೇ ಬಿಟ್ಟುಬಿಡು.


ಆದರೆ ತಾನು ಕ್ರೈಸ್ತ ಸಹೋದರ ಎನಿಸಿಕೊಂಡು, ದುರಾಚಾರಿಯಾಗಿಯೋ ಲೋಭೀಯಾಗಿಯೋ ವಿಗ್ರಹಾರಾಧಕನಾಗಿಯೋ ಪರನಿಂದಕನಾಗಿಯೋ ಕುಡುಕನಾಗಿಯೋ ಸುಲಿಗೆಗಾರನಾಗಿಯೋ ಯಾರಾದರೂ ಇದ್ದರೆ, ಅಂಥವನ ಸಹವಾಸ ನಿಮಗೆ ಸಲ್ಲದು. ಇದು ನನ್ನ ಪತ್ರದ ಉದ್ದೇಶ.


ಪ್ರಿಯ ಸಹೋದರರೇ, ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ: ನಾವು ನಿಮಗೆ ಬೋಧಿಸಿದ ಸದಾಚಾರವನ್ನು ಪಾಲಿಸದೆ, ಮೈಗಳ್ಳತನದಿಂದ ದಿನಗಳೆಯುವ ಯಾವ ಸೋದರನೊಂದಿಗೂ ಸಂಪರ್ಕವಿಟ್ಟುಕೊಳ್ಳಬೇಡಿ.


ಕವಿಯಲಿ ಅವಮಾನ ನಿಂದೆ ಇವರ ಮುಖವನು I ಅರಸುವರಾಗ ಪ್ರಭೂ, ನಿನ್ನ ಸಿರಿನಾಮವನು II


ಅಂದಮೇಲೆ, ಈ ಬೋಧನೆಯನ್ನು ತಿರಸ್ಕರಿಸುವವನು ಮನುಷ್ಯನನ್ನು ಮಾತ್ರವಲ್ಲ, ನಿಮಗೆ ಪವಿತ್ರಾತ್ಮರನ್ನು ಪ್ರದಾನ ಮಾಡಿರುವ ದೇವರನ್ನೇ ತಿರಸ್ಕರಿಸುತ್ತಾನೆ.


ಗುರುಗಳ ಮಾತನ್ನು ಗಮನಿಸದೆ ಹೋದೆನಲ್ಲಾ! ಬೋಧಕರಿಗೆ ಕಿವಿಗೊಡದೆ ಹೋದೆನಲ್ಲಾ!


ನನ್ನ ಕೋರಿಕೆಯನ್ನು ನೆರವೇರಿಸುವೆ ಎಂಬ ಭರವಸೆಯಿಂದ ಈ ಪತ್ರವನ್ನು ಬರೆಯುತ್ತಿದ್ದೇನೆ. ನಾನು ಕೇಳಿದ್ದಕ್ಕಿಂತಲೂ ಹೆಚ್ಚಾಗಿಯೇ ಮಾಡುವೆಯೆಂದು ನನಗೆ ಗೊತ್ತಿದೆ.


ನೀವು ಸಂಪೂರ್ಣರಾಗಿ ವಿಧೇಯರಾದ ಮೇಲೆ ಪ್ರತಿಯೊಂದು ಅವಿಧೇಯ ಕೃತ್ಯವನ್ನು ಶಿಕ್ಷಿಸಲು ನಾವು ಹಿಂಜರಿಯೆವು.


ನೀವು ಎಲ್ಲ ವಿಷಯಗಳಲ್ಲೂ ನನಗೆ ವಿಧೇಯರಾಗಿದ್ದೀರೋ ಇಲ್ಲವೋ ಎಂದು ಪರೀಕ್ಷಿಸಲು ನಾನು ಬರೆದದ್ದು.


ದುರಾಚಾರಿಗಳ ಸಹವಾಸ ನಿಮಗೆ ಸಲ್ಲದು, ಎಂದು ನಾನು ಬರೆದಿದ್ದೆ.


ಸಹೋದರರೇ, ನೀವು ಪಡೆದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರ ಬಗ್ಗೆ ಎಚ್ಚರಿಕೆಯಿಂದಿರಿ. ಅಂಥವರ ಸಹವಾಸವನ್ನೇ ಮಾಡಬೇಡಿರೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ಅದು ಯಾರ ಬುದ್ಧಿಮಾತಿಗೂ ಕಿವಿಗೊಡಲಿಲ್ಲ. ಶಿಕ್ಷಣಕ್ಕೆ ಒಳಪಡಲಿಲ್ಲ. ಸರ್ವೇಶ್ವರಸ್ವಾಮಿಯಲ್ಲಿ ಭರವಸೆ ಇಡಲಿಲ್ಲ, ತನ್ನ ದೇವರ ಸನ್ನಿಧಿಗೆ ಬರಲಿಲ್ಲ.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಅವರಿಗೆ ಲಜ್ಜೆಯ ಗಂಧವೂ ಇಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ,” ಎಂದರು.


ಅವರಿಗೂ ಅವನು ಕಿವಿಗೊಡದೆಹೋದಲ್ಲಿ ಧರ್ಮಸಭೆಗೆ ತಿಳಿಸು. ಧರ್ಮಸಭೆಗೂ ಅವನು ಕಿವಿಗೊಡದೆಹೋದರೆ ಅವನನ್ನು ಧರ್ಮಭ್ರಷ್ಟನೆಂದು ಹಾಗೂ ಬಹಿಷ್ಕೃತನೆಂದು ಪರಿಗಣಿಸು.


ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದೆವೆಂಬುದನ್ನು ನೀವು ನೆನಪಿಗೆ ತಂದುಕೊಂಡು ಈ ವಿಧಿಗಳನ್ನು ಆಚರಿಸಬೇಕು.


ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ. ಅವರ ಆಜ್ಞೆಗಳನ್ನು ಪಾಲಿಸಿರಿ. ಅವರು ನಿಮ್ಮ ಆತ್ಮಗಳ ಪಾಲಕರು; ದೇವರಿಗೆ ಲೆಕ್ಕ ಒಪ್ಪಿಸಬೇಕಾದವರು. ಈ ಸೇವೆಯನ್ನು ಅವರು ಸಂತೋಷದಿಂದ ಮಾಡುವಂತೆ ನೀವು ನಡೆದುಕೊಳ್ಳಿ. ಅವರು ಮನನೊಂದುಕೊಂಡು ಮಾಡುವ ಸೇವೆಯಿಂದ ನಿಮಗೆ ಒಳಿತಾಗದು.


ಪ್ರಿಯ ಸಹೋದರರೇ, ನಾನು ನಿಮ್ಮಲ್ಲಿದ್ದಾಗ ನೀವು ಯಾವಾಗಲೂ ನನ್ನ ಮಾತಿನಂತೆ ನಡೆದುಕೊಂಡಿರಿ. ಈಗ, ನಾನು ದೂರವಿರುವಾಗ ಇನ್ನೂ ಹೆಚ್ಚಿನ ಆಸಕ್ತಿಯಿಂದ ನಡೆದುಕೊಳ್ಳಿ. ನಿಮ್ಮ ಜೀವೋದ್ಧಾರಕ್ಕಾಗಿ ಭಯಭಕ್ತಿಯಿಂದ ಶ್ರಮಿಸಿರಿ.


ನಿಮ್ಮೆಲ್ಲರ ವಿನಯ-ವಿಧೇಯತೆಯನ್ನು, ಭಯಭಕ್ತಿಯಿಂದ ನೀವು ನೀಡಿದ ಸ್ವಾಗತವನ್ನು ಸ್ಮರಿಸಿಕೊಳ್ಳುವಾಗಲೆಲ್ಲ ನಿಮ್ಮ ಮೇಲೆ ಆತನಿಗಿರುವ ಪ್ರೀತಿ ಉಕ್ಕಿ ಹರಿಯುತ್ತದೆ.


ಆದಕಾರಣವೇ ಹದಮಳೆಗೆ ಅಡ್ಡಿಯಾಯಿತು. ವಸಂತಕಾಲದ ಮಳೆ ಬರದೆಹೋಯಿತು. ಇನ್ನೂ ನೀನು ವೇಶ್ಯೆ ಮುಖದವಳು, ಲಜ್ಜೆಗೆಟ್ಟವಳು !


“ನನ್ನ ದೇವರೇ, ನಾನು ಮನಗುಂದಿದವನು ಆಗಿದ್ದೇನೆ; ನಿಮ್ಮ ಕಡೆಗೆ ಮುಖವನ್ನು ಎತ್ತುವುದಕ್ಕೆ ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ; ನಮ್ಮ ಅಪರಾಧ ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ!


ಅದಕ್ಕೆ ಸರ್ವೇಶ್ವರ, “ಅವಳ ತಂದೆ ಅವಳ ಮುಖದ ಮೇಲೆ ಉಗುಳಿದ್ದರೆ ಏಳು ದಿವಸ ಅವಳು ನಾಚಿಕೆಯಿಂದ ಮರೆಯಾಗುತ್ತಿದ್ದಳಲ್ಲವೆ? ಅಂತೆಯೇ ಅವಳು ಏಳು ದಿವಸ ಪಾಳೆಯದಿಂದ ಹೊರಗಿರಲಿ. ಅನಂತರ ಅವಳನ್ನು ನೀನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು,” ಎಂದು ಉತ್ತರಕೊಟ್ಟರು.


ನಿಮ್ಮನ್ನು ನಾಚಿಕೆಪಡಿಸುವುದಕ್ಕೆ ಇದನ್ನು ಬರೆಯಲಿಲ್ಲ. ನಮ್ಮ ನೆಚ್ಚಿನ ಮಕ್ಕಳಾದ ನಿಮ್ಮನ್ನು ಎಚ್ಚರಿಸಲೆಂದು ಬರೆದೆನು.


ಈ ಪತ್ರವನ್ನು ನೀವು ಓದಿದ ಬಳಿಕ ಲವೊದಿಕೀಯದ ಸಭೆಯವರಿಗೆ ಓದಿ ಹೇಳುವ ವ್ಯವಸ್ಥೆಮಾಡಿರಿ. ಅಂತೆಯೇ, ಲವೊದಿಕೀಯದಿಂದ ಕಳಿಸಲಾಗುವ ಪತ್ರವನ್ನು ತರಿಸಿಕೊಂಡು ಓದಿರಿ.


ಈ ಉಪದೇಶವನ್ನು ಒಪ್ಪದಿರುವ ಯಾವನಾದರೂ ನಿಮಗೆ ಉಪದೇಶಮಾಡಬಂದರೆ, ಮನೆಯೊಳಗೆ ಸೇರಿಸಬೇಡಿ; ಅವನನ್ನು ಹರಸಲೂಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು