Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 3:15 - ಕನ್ನಡ ಸತ್ಯವೇದವು C.L. Bible (BSI)

15 ಆದರೂ ಅವನನ್ನು ಶತ್ರುವೆಂದು ಭಾವಿಸದೆ, ಸಹೋದರನಂತೆ ಕಂಡು, ಬುದ್ಧಿಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೂ ಅವನನ್ನು ವೈರಿಯೆಂದು ಭಾವಿಸದೆ ಸಹೋದರನೆಂದು ಎಣಿಸಿಕೊಂಡು ಬುದ್ಧಿಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೂ ಅವನನ್ನು ವೈರಿಯೆಂದು ಎಣಿಸದೆ ಸಹೋದರನೆಂದು ಎಣಿಸಿಕೊಂಡು ಬುದ್ಧಿಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ಅವನನ್ನು ವೈರಿಯೆಂದು ಎಣಿಸದೆ ಸಹೋದರನೆಂದು ಎಣಿಸಿಕೊಂಡು ಬುದ್ಧಿ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೂ ಅಂಥವರನ್ನು ವೈರಿಯೆಂದು ಎಣಿಸದೆ, ಜೊತೆ ವಿಶ್ವಾಸಿಯೆಂದು ಭಾವಿಸಿ ಬುದ್ಧಿಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಖರೆ ದುಸ್ಮಾನಾಂಚ್ಯಾ ಸರ್ಕೆ ತೆಂಕಾ ಬಗುನಕಾಸಿ, ಕ್ರಿಸ್ತಾಕ್ ವಿಶ್ವಾಸ್ ಕರಲ್ಲ್ಯಾ ಭಾವಾಂಚ್ಯಾ ಸಾರ್ಕೆ ತೆಂಕಾ ಬುದ್-ಬಾಳ್ ಸಾಂಗಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 3:15
17 ತಿಳಿವುಗಳ ಹೋಲಿಕೆ  

ಕ್ರೈಸ್ತಸಭೆಯಲ್ಲಿ ಭೇದಭಾವ ಹುಟ್ಟಿಸುವವನಿಗೆ ಒಂದೆರಡು ಸಾರಿ ಬುದ್ಧಿಹೇಳು. ಅನಂತರ ಅವನಷ್ಟಕ್ಕೇ ಬಿಟ್ಟುಬಿಡು.


ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ; ಮನಗುಂದಿದವರಿಗೆ ಧೈರ್ಯ ತುಂಬಿರಿ; ದುರ್ಬಲರಿಗೆ ನೆರವಾಗಿರಿ; ಎಲ್ಲರೊಡನೆ ಸಹನೆಯಿಂದಿರಿ. ಇದು ನಮ್ಮ ಪ್ರಬೋಧನೆ.


ಅವನ ದೇಹವು ದಂಡನೆಗೊಳಗಾದರೂ ಅವನ ಆತ್ಮ ಪ್ರಭು ಯೇಸುವಿನ ದಿನದಂದು ಉದ್ಧಾರವಾಗುವಂತೆ ಹೀಗೆ ಮಾಡಬೇಕು.


ನಿಮ್ಮನ್ನು ನಾಚಿಕೆಪಡಿಸುವುದಕ್ಕೆ ಇದನ್ನು ಬರೆಯಲಿಲ್ಲ. ನಮ್ಮ ನೆಚ್ಚಿನ ಮಕ್ಕಳಾದ ನಿಮ್ಮನ್ನು ಎಚ್ಚರಿಸಲೆಂದು ಬರೆದೆನು.


ಸಹೋದರರೇ, ನಿಮ್ಮಲ್ಲಿ ಯಾರಾದರೂ ತಪ್ಪಿತಸ್ಥರಾಗಿದ್ದರೆ, ಆಧ್ಯಾತ್ಮಿಕ ಜೀವಿಗಳಾದ ನೀವು ಅಂಥವನನ್ನು ನಯವಿನಯದಿಂದ ತಿದ್ದಿ ಸರಿಯಾದ ದಾರಿಗೆ ತರಬೇಕು. ಆದರೆ ನೀನೂ ಅವನಂತೆ ಪಾಪಪ್ರಚೋದನೆಗೆ ಒಳಗಾಗದಂತೆ ಎಚ್ಚರಿಕೆಯಿಂದಿರಬೇಕು.


ಕೇಳುವ ಕಿವಿಗೆ ಕೊಡುವ ಬುದ್ಧಿವಾದವು ಹೊನ್ನಿನ ಮುರುವು, ಅಪರಂಜಿಯ ಆಭರಣವು.


ಜ್ಞಾನಿಗೆ ಉಪದೇಶಿಸಿದರೆ ಅವನು ಹೆಚ್ಚು ಜ್ಞಾನಿಯಾಗುತ್ತಾನೆ; ಸತ್ಪುರುಷನಿಗೆ ಬೋಧಿಸಿದರೆ ಅವನು ಹೆಚ್ಚು ತಿಳುವಳಿಕೆ ಪಡೆಯುತ್ತಾನೆ.


“ನಿನ್ನ ಸೋದರನು ನಿನಗೆ ಅಪರಾಧಮಾಡಿದರೆ, ನೀನು ಹೋಗಿ ನೀವಿಬ್ಬರೇ ಇರುವಾಗ, ಅವನ ತಪ್ಪನ್ನು ಮನಗಾಣಿಸು. ಅವನು ನಿನಗೆ ಕಿವಿಗೊಟ್ಟರೆ ಅವನ ಸೋದರತ್ವವನ್ನು ನೀನು ಮತ್ತೆ ಗಳಿಸಿಕೊಂಡಂತಾಗುವುದು.


ಆದ್ದರಿಂದಲೇ ನಿಮ್ಮ ಬಳಿಗೆ ಬರುವುದಕ್ಕೆ ಮುಂಚೆಯೇ ಇದನ್ನೆಲ್ಲಾ ಬರೆಯುತ್ತಿದ್ದೇನೆ. ನಿಮ್ಮನ್ನು ಕೆಡವಿ ಹಾಳುಮಾಡುವುದಕ್ಕಲ್ಲ, ಕಟ್ಟಿ ಎಬ್ಬಿಸುವುದಕ್ಕಾಗಿಯೇ ಪ್ರಭು ನನಗೆ ಅಧಿಕಾರವನ್ನು ಕೊಟ್ಟಿರುವುದು. ಎಂದೇ, ನಿಮ್ಮ ಮಧ್ಯೆ ಬಂದಾಗ ಅಧಿಕಾರ ಪ್ರಯೋಗಿಸಿ ಕಠಿಣವಾಗಿ ವರ್ತಿಸಲು ಅವಕಾಶವಿರಬಾರದೆಂಬುದೇ ನನ್ನ ಅಪೇಕ್ಷೆ.


ಪ್ರಭು ನಮಗೆ ಅಧಿಕಾರವನ್ನು ಕೊಟ್ಟಿರುವುದು ನಿಮ್ಮನ್ನು ಕೆಡವಿ ಹಾಳುಮಾಡುವುದಕ್ಕಲ್ಲ, ಕಟ್ಟಿ ಎಬ್ಬಿಸುವುದಕ್ಕಾಗಿ. ಈ ಅಧಿಕಾರವನ್ನು ಕುರಿತು ಒಂದು ವೇಳೆ, ನಾವು ಕೊಂಚ ಹೆಚ್ಚಾಗಿ ಹೊಗಳಿಕೊಂಡಿದ್ದರೂ ಅದಕ್ಕಾಗಿ ಸಂಕೋಚಪಡುವುದಿಲ್ಲ.


ಸಜ್ಜನರು ವಿಧಿಸುವಾ ಶಿಕ್ಷೆ ಎನಗೆ ಕಟಾಕ್ಷ I ದುರ್ಜನರಿಂದ ನನಗಾಗದಿರಲಿ ಅಭಿಷೇಕ I ಸತತ ಪ್ರಾರ್ಥಿಸುವೆ ಆ ದುಷ್ಕೃತ್ಯಗಳ ವಿರುದ್ಧ II


ಪ್ರಿಯ ಸಹೋದರರೇ, ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ: ನಾವು ನಿಮಗೆ ಬೋಧಿಸಿದ ಸದಾಚಾರವನ್ನು ಪಾಲಿಸದೆ, ಮೈಗಳ್ಳತನದಿಂದ ದಿನಗಳೆಯುವ ಯಾವ ಸೋದರನೊಂದಿಗೂ ಸಂಪರ್ಕವಿಟ್ಟುಕೊಳ್ಳಬೇಡಿ.


ನೀವಾದರೋ ಸಹೋದರರೇ, ಸತ್ಕಾರ್ಯದ ಸಾಧನೆ ಸಾಕಾಯಿತೆಂದು ಹೇಳಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು