Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 3:4 - ಕನ್ನಡ ಸತ್ಯವೇದವು C.L. Bible (BSI)

4 ನಾವು ನಿಮಗಿತ್ತ ಆಜ್ಞೆಗಳನ್ನು ಪಾಲಿಸಿಕೊಂಡು ಬರುತ್ತಿದ್ದೀರಿ; ಇನ್ನು ಮುಂದೆಯೂ ಪಾಲಿಸುತ್ತೀರಿ ಎಂದು ನಿಮ್ಮ ವಿಷಯವಾಗಿ ಪ್ರಭುವಿನಲ್ಲಿ ನಮಗೆ ಭರವಸೆಯಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾವು ಆಜ್ಞಾಪಿಸುವ ಪ್ರಕಾರ ನೀವು ಮಾಡುತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ, ನಿಮ್ಮ ವಿಷಯದಲ್ಲಿ ಕರ್ತನ ಮೂಲಕವಾಗಿ ನಮಗೆ ಭರವಸವುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾವು ಆಜ್ಞಾಪಿಸುವ ಪ್ರಕಾರ ನೀವು ಮಾಡುತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ ನಿಮ್ಮ ವಿಷಯದಲ್ಲಿ ಕರ್ತನ ಮೂಲಕವಾಗಿ ನಮಗೆ ಭರವಸವುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾವು ನಿಮಗೆ ತಿಳಿಸಿದ ಸಂಗತಿಗಳನ್ನು ನೀವು ಮಾಡುತ್ತಿದ್ದೀರೆಂಬ ಭರವಸೆಯನ್ನು ಪ್ರಭುವೇ ನಮಗೆ ಕೊಟ್ಟಿದ್ದಾನೆ. ನೀವು ಇನ್ನು ಮುಂದೆಯೂ ಇವುಗಳನ್ನು ಮಾಡುವಿರೆಂದು ನಮಗೆ ತಿಳಿದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾವು ನಿಮಗೆ ಆಜ್ಞಾಪಿಸಿದವುಗಳನ್ನು ನೀವು ಮಾಡುತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ ನಿಮ್ಮ ವಿಷಯವಾಗಿ ಕರ್ತ ಯೇಸುವಿನಲ್ಲಿ ನಮಗೆ ಭರವಸೆಯಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಧನಿ ತುಮ್ಚ್ಯಾ ವಿಶಯಾತ್ ಲೈ ವಿಶ್ವಾಸ್ ಅಮ್ಕಾ ದಿತಾ ಅನಿ ಅಮಿ ತುಮ್ಕಾ ಕಾಯ್ ಸಾಂಗಟ್ಲ್ಯಾಂವ್ ತಸೆ ತುಮಿ ಚಲುಲ್ಯಾಸಿ, ಅನಿ ಫಿಡೆಬಿ ತಸೆಚ್ ಚಲ್ತ್ಯಾಸಿ ಮನ್ತಲೆ ಅಮ್ಕಾ ಖರೆಚ್ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 3:4
18 ತಿಳಿವುಗಳ ಹೋಲಿಕೆ  

ಮಕೆದೋನಿಯದಲ್ಲಿ ವಾಸಿಸುವ ಎಲ್ಲ ಸಹೋದರರನ್ನೂ ನೀವು ಪ್ರೀತಿಸುತ್ತಿರುವುದೇನೋ ನಿಜ. ಆದರೂ ಸಹೋದರರೇ, ನಿಮ್ಮ ಈ ಪ್ರೀತಿ ಇನ್ನೂ ಅಧಿಕಾಧಿಕವಾಗಬೇಕೆಂಬುದೇ ನಮ್ಮ ಆಶಯ.


ಈ ಸತ್ಕಾರ್ಯವನ್ನು ನಿಮ್ಮಲ್ಲಿ ಪ್ರಾರಂಭಿಸಿದ ದೇವರು ಅದನ್ನು ಮುಂದುವರೆಸುತ್ತಾ, ಯೇಸುಕ್ರಿಸ್ತರು ಪುನರಾಗಮಿಸುವಷ್ಟರಲ್ಲಿ ಪೂರೈಸುವರು ಎಂಬುದೇ ನನ್ನ ದೃಢ ನಂಬಿಕೆ.


ನನ್ನ ಕೋರಿಕೆಯನ್ನು ನೆರವೇರಿಸುವೆ ಎಂಬ ಭರವಸೆಯಿಂದ ಈ ಪತ್ರವನ್ನು ಬರೆಯುತ್ತಿದ್ದೇನೆ. ನಾನು ಕೇಳಿದ್ದಕ್ಕಿಂತಲೂ ಹೆಚ್ಚಾಗಿಯೇ ಮಾಡುವೆಯೆಂದು ನನಗೆ ಗೊತ್ತಿದೆ.


ಪ್ರಿಯ ಸಹೋದರರೇ, ನಾನು ನಿಮ್ಮಲ್ಲಿದ್ದಾಗ ನೀವು ಯಾವಾಗಲೂ ನನ್ನ ಮಾತಿನಂತೆ ನಡೆದುಕೊಂಡಿರಿ. ಈಗ, ನಾನು ದೂರವಿರುವಾಗ ಇನ್ನೂ ಹೆಚ್ಚಿನ ಆಸಕ್ತಿಯಿಂದ ನಡೆದುಕೊಳ್ಳಿ. ನಿಮ್ಮ ಜೀವೋದ್ಧಾರಕ್ಕಾಗಿ ಭಯಭಕ್ತಿಯಿಂದ ಶ್ರಮಿಸಿರಿ.


ಇದಕ್ಕಾಗಿಯೇ ನಾನು ಆ ಪತ್ರವನ್ನು ಬರೆದದ್ದು; ನನ್ನನ್ನು ಸಂತೋಷಪಡಿಸಬೇಕಾದವರೇ ನನ್ನನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ಬರಲಿಲ್ಲ. ನನ್ನ ಸಂತೋಷವೇ ನಿಮ್ಮ ಸಂತೋಷವೆಂದು ನೀವು ಭಾವಿಸುತ್ತೀರೆಂದು ಬಲ್ಲೆ.


ಇಂಥವರು ತಮ್ಮ ಜೀವನೋಪಾಯಕ್ಕಾಗಿ ತಾವೇ ದುಡಿದು ಸಂಪಾದಿಸಬೇಕೆಂದು ಪ್ರಭು ಯೇಸುವಿನ ಹೆಸರಿನಲ್ಲಿ ಎಚ್ಚರಿಸಿ ಆಜ್ಞಾಪಿಸುತ್ತೇವೆ.


ಪ್ರಿಯ ಸಹೋದರರೇ, ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ: ನಾವು ನಿಮಗೆ ಬೋಧಿಸಿದ ಸದಾಚಾರವನ್ನು ಪಾಲಿಸದೆ, ಮೈಗಳ್ಳತನದಿಂದ ದಿನಗಳೆಯುವ ಯಾವ ಸೋದರನೊಂದಿಗೂ ಸಂಪರ್ಕವಿಟ್ಟುಕೊಳ್ಳಬೇಡಿ.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಭಿನ್ನಾಭಿಪ್ರಾಯಗಳಿಗೆ ನೀವು ಮಣಿಯುವುದಿಲ್ಲವೆಂದು ನಿಮ್ಮನ್ನು ಕುರಿತು ಪ್ರಭುವಿನಲ್ಲಿ ನನಗೆ ದೃಢವಾದ ನಂಬಿಕೆ ಇದೆ. ನಿಮ್ಮಲ್ಲಿ ಗೊಂದಲ ಎಬ್ಬಿಸುವವನು ಯಾರೇ ಆಗಿರಲಿ, ಅವನು ದೈವದಂಡನೆಗೆ ಗುರಿಯಾಗುತ್ತಾನೆ.


ಇವರಿಬ್ಬರ ಸಂಗಡ ಮತ್ತೊಬ್ಬ ಸಹೋದರನನ್ನೂ ಕಳುಹಿಸುತ್ತಿದ್ದೇವೆ. ಈತನು ಆಸಕ್ತಿ ಉಳ್ಳವನೆಂದು ಅನುಭವದಿಂದ ಕಂಡುಕೊಂಡಿದ್ದೇವೆ. ನಿಮ್ಮಲ್ಲಿ ಪೂರ್ಣ ಭರವಸೆಯಿಟ್ಟು ನಿಮಗೆ ನೆರವಾಗಲು ಆತನು ಹೆಚ್ಚು ಉತ್ಸುಕನಾಗಿದ್ದಾನೆ.


ನೀವು ಎಲ್ಲ ವಿಷಯಗಳಲ್ಲೂ ನನಗೆ ವಿಧೇಯರಾಗಿದ್ದೀರೋ ಇಲ್ಲವೋ ಎಂದು ಪರೀಕ್ಷಿಸಲು ನಾನು ಬರೆದದ್ದು.


ನಿಮ್ಮಲ್ಲಿ ಯಾರಾದರೊಬ್ಬನು ತಾನು ದೇವರ ವಾಕ್ಯವನ್ನು ಬೋಧಿಸುವವನು ಅಥವಾ ಪವಿತ್ರಾತ್ಮ ಪ್ರೇರಣೆಯನ್ನು ಹೊಂದಿದವನು ಎಂದು ಭಾವಿಸುವುದಾದರೆ, ನಾನು ನಿಮಗೆ ಬರೆದಿರುವುದೆಲ್ಲ ಪ್ರಭುವಿನ ಆಜ್ಞೆಯೆಂದು ಚೆನ್ನಾಗಿ ತಿಳಿದುಕೊಳ್ಳಲಿ.


ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ, ದೇವರ ಆಜ್ಞೆಗಳಿಗೆ ವಿಧೇಯನಾಗಿರುವುದೇ ಮುಖ್ಯ.


ಕ್ರಿಸ್ತಯೇಸು ನನ್ನ ಮುಖಾಂತರ ಅಂದರೆ, ನನ್ನ ಬೋಧನೆ ಹಾಗು ಸಾಧನೆಗಳ ಮೂಲಕ, ಸೂಚಕ ಹಾಗೂ ಅದ್ಭುತಕಾರ್ಯಗಳ ಮೂಲಕ ಮತ್ತು ಪವಿತ್ರಾತ್ಮರ ಶಕ್ತಿಯ ಮೂಲಕ ಯೆಹೂದ್ಯರಲ್ಲದವರನ್ನೂ ತಮ್ಮ ಶರಣರನ್ನಾಗಿಸಿಕೊಂಡಿದ್ದಾರೆ. ಇದೊಂದನ್ನು ಬಿಟ್ಟು ಬೇರೆ ಯಾವುದನ್ನು ಕುರಿತು ಹೊಗಳಿಕೊಳ್ಳಲು ನಾನು ಧೈರ್ಯಗೊಳ್ಳುವುದಿಲ್ಲ.


ಸಹೋದರರೇ, ನೀವು ಗುಣಸಂಪನ್ನರೂ ಜ್ಞಾನಸಂಪನ್ನರೂ ಒಬ್ಬರಿಗೊಬ್ಬರು ಬುದ್ಧಿಹೇಳಿಕೊಳ್ಳಲು ಸಮರ್ಥರೂ ಆಗಿದ್ದೀರಿ ಎಂದು ನಾನು ಚೆನ್ನಾಗಿ ಬಲ್ಲೆ.


ಸತ್ಕಾರ್ಯಗಳಲ್ಲಿ ನಿರತರಾಗಿದ್ದು, ಮಹಿಮೆಯನ್ನು, ಗೌರವವನ್ನು, ಅಮರತ್ವವನ್ನು ಅರಸುತ್ತಾ ಬಾಳುವವರಿಗೆ ದೇವರು ನಿತ್ಯಜೀವವನ್ನು ದಯಪಾಲಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು