Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 3:7 - ಕನ್ನಡ ಸತ್ಯವೇದವು C.L. Bible (BSI)

7 ನಾವು ಹೇಗೆ ನಡೆದುಕೊಂಡೆವೋ ಹಾಗೆಯೇ, ನೀವು ಸಹ ನಡೆದುಕೊಳ್ಳಬೇಕೆಂಬುದು ನಿಮಗೆ ತಿಳಿದ ವಿಷಯ. ನಾವು ನಿಮ್ಮ ಬಳಿಯಿದ್ದಾಗ ಸೋಮಾರಿಗಳಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂಬುದನ್ನು ನೀವೇ ಬಲ್ಲಿರಿ, ನಾವು ನಿಮ್ಮಲ್ಲಿ ಸೋಮಾರಿಯಾಗಿ ನಡೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂದು ನೀವೇ ಬಲ್ಲಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾವು ಜೀವಿಸುವಂತೆಯೇ ನೀವೂ ಜೀವಿಸಬೇಕೆಂದು ನಿಮಗೆ ಗೊತ್ತಿದೆ. ನಾವು ನಿಮ್ಮ ಜೊತೆಯಲ್ಲಿದ್ದಾಗ ಸೋಮಾರಿಗಳಾಗಿರಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀವು ನಮ್ಮ ಮಾದರಿಯನ್ನು ಅನುಸರಿಸಿ ಹೇಗೆ ನಡೆಯಬೇಕೆಂದು ನೀವೇ ಬಲ್ಲಿರಿ. ಏಕೆಂದರೆ ನಾವು ನಿಮ್ಮಲ್ಲಿರುವಾಗ ಸೋಮಾರಿಗಳಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅಮಿ ತುಮ್ಚ್ಯಾ ವಾಂಗ್ಡಾ ಹೊತ್ತ್ಯಾ ತನ್ನಾ ಆಳ್ಸಿಪಾನಾನ್ ರ್‍ಹಾಯ್‍ನಸಿ. ಅಮಿ ಕಶೆ ಅನಿ ಕಾಯ್-ಕಾಯ್ ಕರ್ಲಾಂವ್ ಮನ್ತಲೆ ತುಮ್ಕಾಚ್ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 3:7
13 ತಿಳಿವುಗಳ ಹೋಲಿಕೆ  

ಪ್ರಿಯ ಸಹೋದರರೇ, ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ: ನಾವು ನಿಮಗೆ ಬೋಧಿಸಿದ ಸದಾಚಾರವನ್ನು ಪಾಲಿಸದೆ, ಮೈಗಳ್ಳತನದಿಂದ ದಿನಗಳೆಯುವ ಯಾವ ಸೋದರನೊಂದಿಗೂ ಸಂಪರ್ಕವಿಟ್ಟುಕೊಳ್ಳಬೇಡಿ.


ನಿಮ್ಮಿಂದ ಪೋಷಣೆ ಪಡೆಯಲು ನಮಗೆ ಹಕ್ಕಿಲ್ಲವೆಂದಲ್ಲ; ನೀವು ನಮ್ಮನ್ನು ಅನುಸರಿಸಿ ನಡೆಯುವಂತೆ, ನಿಮಗೆ ಆದರ್ಶವಾಗಿ ಇರಬೇಕೆಂದೇ ನಾವು ಹೀಗೆ ಮಾಡಿದೆವು.


ಆದ್ದರಿಂದ ನನ್ನನ್ನು ಅನುಸರಿಸಿ ಬಾಳಬೇಕೆಂದು ನಿಮ್ಮನ್ನು ಒತ್ತಾಯಿಸುತ್ತೇನೆ.


ನಾನು ಕ್ರಿಸ್ತಯೇಸುವನ್ನು ಅನುಸರಿಸುವಂತೆ, ನೀವೂ ನನ್ನನ್ನೂ ಅನುಸರಿಸಿರಿ.


ಸಹೋದರರೇ, ನೀವು ನನ್ನನ್ನು ಅನುಸರಿಸಿರಿ. ನಮ್ಮಂತೆ ಆದರ್ಶಜೀವನ ನಡೆಸುವವರನ್ನು ಅನುಸರಿಸಿ ಬಾಳಿರಿ.


ಸತ್ಕಾರ್ಯಗಳನ್ನು ಮಾಡುವುದರಲ್ಲಿ ನೀನೇ ಮಾದರಿಯಾಗಿರಬೇಕು ಎಂಬುದನ್ನು ಮರೆಯಬೇಡ. ನಿನ್ನ ಬೋಧನೆ ಯಥಾರ್ಥವೂ ಗಂಭೀರವೂ ಕಳಂಕರಹಿತವೂ ಆಗಿರಲಿ. ಆಗ ನಮ್ಮ ವಿರೋಧಿಗಳು ನಮ್ಮಲ್ಲಿ ತಪ್ಪು ಕಂಡುಹಿಡಿಯಲಾಗದೆ ತಾವೇ ಅಪಮಾನಿತರಾಗುತ್ತಾರೆ.


ನೀನಿನ್ನೂ ಯುವಕನೆಂದು ನಿನ್ನನ್ನು ತಾತ್ಸಾರ ಮಾಡುವುದಕ್ಕೆ ಯಾರಿಗೂ ಅವಕಾಶ ಕೊಡಬೇಡ. ನಿನ್ನ ನಡೆನುಡಿ, ಪ್ರೀತಿವಿಶ್ವಾಸ ಹಾಗೂ ಪರಿಶುದ್ಧತೆಯ ವಿಷಯದಲ್ಲಿ ವಿಶ್ವಾಸಿಗಳಿಗೆಲ್ಲರಿಗೂ ನೀನೇ ಆದರ್ಶಪ್ರಾಯನಾಗಿರು.


ವಿಶ್ವಾಸಿಗಳಾದ ನಿಮ್ಮ ನಡುವೆ ನಾವು ಎಷ್ಟು ಶುದ್ಧರಾಗಿ, ನೀತಿವಂತರಾಗಿ, ನಿರ್ದೋಷಿಗಳಾಗಿ ನಡೆದುಕೊಂಡೆವು ಎಂಬುದಕ್ಕೆ ನೀವೇ ಸಾಕ್ಷಿಗಳು, ಮಾತ್ರವಲ್ಲದೆ ದೇವರೂ ಸಾಕ್ಷಿಯೇ.


ನೀವು ನನ್ನಿಂದ ಕಲಿತವು ಹಾಗೂ ಅರಿತವುಗಳನ್ನು, ಕೇಳಿದವು ಹಾಗೂ ಕಂಡವುಗಳನ್ನು ನಿಮ್ಮ ಜೀವಿತದಲ್ಲಿ ಕಾರ್ಯರೂಪಕ್ಕೆ ತನ್ನಿರಿ. ಆಗ ಶಾಂತಿದಾಯಕ ದೇವರು ನಿಮ್ಮ ಸಂಗಡ ಇರುವರು.


ನಿಮ್ಮ ಪಾಲನೆಗೆ ಒಳಗಾಗಿರುವವರ ಮೇಲೆ ದರ್ಪದಿಂದ ದೊರೆತನಮಾಡದೆ ದೇವರ ಮಂದೆಗೆ ಆದರ್ಶ ಮಾದರಿಗಳಾಗಿರಿ.


ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ; ಮನಗುಂದಿದವರಿಗೆ ಧೈರ್ಯ ತುಂಬಿರಿ; ದುರ್ಬಲರಿಗೆ ನೆರವಾಗಿರಿ; ಎಲ್ಲರೊಡನೆ ಸಹನೆಯಿಂದಿರಿ. ಇದು ನಮ್ಮ ಪ್ರಬೋಧನೆ.


ತನ್ನ ಕೆಲಸದಿಂದ ಲಭಿಸುವ ಆದಾಯದ ರುಚಿ ಆಕೆಗಿದೆ; ಆಕೆಯ ಮನೆದೀಪ ರಾತ್ರಿಯೆಲ್ಲ ಆರದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು