Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 1:10 - ಕನ್ನಡ ಸತ್ಯವೇದವು C.L. Bible (BSI)

10 ನಿಮ್ಮ ಪ್ರಜೆಯಾದ ಈ ಮಹಾಜನಾಂಗವನ್ನು ಆಳುವುದಕ್ಕೆ ಸಮರ್ಥರಾರು! ನಾನು ಈ ಜನರ ನಾಯಕನಾಗಿ ಇವರನ್ನು ಪರಿಪಾಲಿಸುವುದಕ್ಕೆ ಬೇಕಾದ ಜ್ಞಾನ ವಿವೇಕಗಳನ್ನು ನನಗೆ ಅನುಗ್ರಹಿಸಿರಿ,” ಎಂದು ದೇವರನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿನ್ನ ಪ್ರಜೆಗಳಾದ ಈ ಮಹಾ ಜನಾಂಗವನ್ನು ಮುನ್ನಡೆಸುವುದಕ್ಕೂ, ಆಳುವುದಕ್ಕೂ, ನ್ಯಾಯತೀರಿಸುವುದಕ್ಕೂ ಜ್ಞಾನ ವಿವೇಕಗಳನ್ನು ಅನುಗ್ರಹಿಸು” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿನ್ನ ಪ್ರಜೆಯಾದ ಈ ಮಹಾಜನಾಂಗವನ್ನು ಆಳುವದಕ್ಕೆ ಸಮರ್ಥರಾರು! ನಾನು ಈ ಜನರ ನಾಯಕನಾಗಿ ಹೋಗುತ್ತಾ ಬರುತ್ತಾ ಇರುವದಕ್ಕೋಸ್ಕರ ನನಗೆ ಜ್ಞಾನವಿವೇಕಗಳನ್ನು ಅನುಗ್ರಹಿಸಬೇಕು ಎಂದು ದೇವರನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಈ ಜನರನ್ನು ಸರಿಯಾದ ರೀತಿಯಲ್ಲಿ ಆಳುವ ಹಾಗೆ ನನಗೆ ಜ್ಞಾನವನ್ನೂ ವಿವೇಕವನ್ನೂ ದಯಪಾಲಿಸು. ನಿನ್ನ ಸಹಾಯವಿಲ್ಲದೆ ಈ ನಿನ್ನ ಜನರನ್ನು ಆಳಲು ಯಾರಿಗೂ ಸಾಧ್ಯವಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾನು ಈ ಜನರನ್ನು ಪರಿಪಾಲಿಸುವುದಕ್ಕೆ ಜ್ಞಾನವನ್ನೂ, ತಿಳುವಳಿಕೆಯನ್ನೂ ಕೊಡಿರಿ. ಏಕೆಂದರೆ ಈ ನಿಮ್ಮ ಮಹಾಜನರ ನ್ಯಾಯತೀರಿಸುವುದಕ್ಕೆ ಸಾಮರ್ಥ್ಯವುಳ್ಳವರು ಯಾರು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 1:10
14 ತಿಳಿವುಗಳ ಹೋಲಿಕೆ  

ಆದುದರಿಂದ ಅದನ್ನು ಆಳುವುದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸಿರಿ. ಈ ಮಹಾಜನಾಂಗವನ್ನು ಆಳಲು ಯಾರೂ ಸಮರ್ಥರಲ್ಲ,” ಎಂದು ಬೇಡಿಕೊಂಡನು.


ಜ್ಞಾನ ಪಡೆಯಬೇಕೆಂಬುದೇ ಜ್ಞಾನಬೋಧೆಯ ಮೂಲಾಂಶ; ನಿನ್ನ ಸರ್ವಸಂಪತ್ತಿನಿಂದ ವಿವೇಕವನ್ನು ಗಳಿಸಿಕೊ.


ಹಿಂದಿನ ದಿವಸಗಳಲ್ಲಿ, ಅಂದರೆ ಸೌಲನ ಆಳ್ವಿಕೆಯಲ್ಲಿ, ಇಸ್ರಯೇಲರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವರು ನೀವೇ. ನಿಮ್ಮನ್ನು ಕುರಿತು ಸರ್ವೇಶ್ವರಸ್ವಾಮಿ, ‘ನೀನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನೂ ಪಾಲಕನೂ ಆಗಿರುವೆ,’ ಎಂದು ವಾಗ್ದಾನಮಾಡಿದ್ದಾರೆ,” ಎಂದರು.


ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.


ನಮ್ಮ ಸ್ವಂತ ಶಕ್ತಿಯಿಂದಲೇ ಏನನ್ನೋ ಸಾಧಿಸಿಬಿಟ್ಟಿದ್ದೇವೆ ಎಂದು ಹೇಳಿಕೊಳ್ಳುವ ಸಾಮರ್ಥ್ಯ ನಮಗಿಲ್ಲ. ನಮ್ಮ ಸಾಮರ್ಥ್ಯವೆಲ್ಲ ದೇವರಿಂದಲೇ ಬಂದುದು.


ನನ್ನನು ನಿರ್ಮಿಸಿ ರೂಪಿಸಿವೆ ನಿನ್ನ ಕೈಗಳು I ನೀಡು ಬುದ್ಧಿಯನು ನಿನ್ನಾಜ್ಞೆಗಳನು ಕಲಿಯಲು II


ನೀಡೆನಗೆ ನಿನ್ನ ಶಾಸ್ತ್ರದ ಅರಿವನು I ಪೂರ್ಣಮನದಿಂದ ಆಚರಿಸುವೆನದನು II


ಆದುದರಿಂದ ಅವರ ಕೆಲಸಕಾರ್ಯಗಳನ್ನು ನಿರ್ವಹಿಸುವುದಕ್ಕೂ ಅವರನ್ನು ಮುನ್ನಡೆಸುವುದಕ್ಕೂ ಹಿಂದಕ್ಕೆ ಕರೆದುತರುವುದಕ್ಕೂ ಒಬ್ಬ ನಾಯಕನನ್ನು ನೇಮಿಸಿ,” ಎಂದು ಮನವಿಮಾಡಿಕೊಂಡನು.


“ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ; ವಿಶೇಷವಾದ ಕಾರ್ಯಗಳನ್ನು ನಿರ್ವಹಿಸುವುದು ಇನ್ನು ನನ್ನಿಂದಾಗದು; ಸರ್ವೇಶ್ವರ ನನಗೆ, ‘ನೀನು ಈ ಜೋರ್ಡನ್ ನದಿಯನ್ನು ದಾಟಕೂಡದು’ ಎಂದು ಆಜ್ಞಾಪಿಸಿದ್ದಾರೆ.


ವಿನಾಶ ಮಾರ್ಗದಲ್ಲಿರುವವರಿಗೆ ಇದು ಮೃತ್ಯುಕಾರಕ ಗಂಧ; ಉದ್ಧಾರ ಮಾರ್ಗದಲ್ಲಿರುವವರಿಗೆ ಇದು ಸಜ್ಜೀವದಾಯಕ ಸುಗಂಧ. ಇಂಥ ಕಾರ್ಯಕ್ಕೆ ಸಮರ್ಥರು ಯಾರು?


ನೀನು ನಿನ್ನ ದೇವರಾದ ಸರ್ವೇಶ್ವರನ ಧರ್ಮಶಾಸ್ತ್ರವನ್ನು ಕೈಗೊಳ್ಳುವಂತೆ ಅವರು ನಿನಗೆ ಜ್ಞಾನವಿವೇಕಗಳನ್ನು ದಯಪಾಲಿಸಲಿ! ಇಸ್ರಯೇಲರನ್ನು ಆಳುವುದಕ್ಕೆ ನಿನ್ನನ್ನು ನೇಮಿಸಲಿ!


ರಾಜರು ಆಳುವುದು ನನ್ನ ಸಹಾಯದಿಂದ ಅಧಿಪತಿಗಳು ನ್ಯಾಯತೀರ್ಪು ಮಾಡುವುದು ನನ್ನಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು