Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 1:14 - ಕನ್ನಡ ಸತ್ಯವೇದವು C.L. Bible (BSI)

14 ರಥಗಳನ್ನೂ ರಾಹುತರನ್ನೂ ಸಂಗ್ರಹಿಸಿದನು. ಅವನಿಗಿದ್ದ ರಥಗಳು ಸಾವಿರದ ನಾನೂರು; ರಾಹುತರು ಹನ್ನೆರಡು ಸಾವಿರ. ಇವುಗಳಲ್ಲಿ ಕೆಲವನ್ನು ಜೆರುಸಲೇಮಿನಲ್ಲೇ ಇಟ್ಟುಕೊಂಡನು. ಉಳಿದವುಗಳನ್ನು ರಥಗಳಿಗಾಗಿಯೇ ನೇಮಿಸಿದ್ದ ಪಟ್ಟಣಗಳಲ್ಲಿ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅರಸನಾದ ಸೊಲೊಮೋನನು ರಥಗಳನ್ನೂ ರಾಹುತರನ್ನೂ ಸಂಗ್ರಹಿಸಿದನು. ಸಾವಿರದ ನಾನೂರು ರಥಗಳೂ ಮತ್ತು ಹನ್ನೆರಡು ಸಾವಿರ ರಾಹುತರೂ ಅವನಿಗೆ ಇದ್ದರು. ಇವರನ್ನು ರಥದ ಪಟ್ಟಣಗಳಲ್ಲಿಯೂ ಕೆಲವರನ್ನು ಯೆರೂಸಲೇಮಿನಲ್ಲಿ ಅರಸನೊಂದಿಗೂ ಇರಿಸಿದನು. ಉಳಿದವುಗಳನ್ನು ರಥಗಳಿಗಾಗಿ ನೇಮಿಸಿದ ಪಟ್ಟಣದಲ್ಲಿ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅರಸನಾದ ಸೊಲೊಮೋನನು ರಥಗಳನ್ನೂ ರಾಹುತರನ್ನೂ ಸಂಗ್ರಹಿಸಿದನು. ಅವನ ರಥಗಳು ಸಾವಿರದ ನಾನೂರು, ರಾಹುತರು ಹನ್ನೆರಡು ಸಾವಿರ. ಇವುಗಳಲ್ಲಿ ಕೆಲವನ್ನು ಯೆರೂಸಲೇವಿುನಲ್ಲಿಟ್ಟುಕೊಂಡು ಉಳಿದವುಗಳನ್ನು ರಥಗಳಿಗೋಸ್ಕರ ನೇವಿುಸಿದ ಪಟ್ಟಣಗಳಲ್ಲಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸೊಲೊಮೋನನು ಕುದುರೆಗಳನ್ನೂ ರಥಗಳನ್ನೂ ಸಂಗ್ರಹಿಸಲು ಪ್ರಾರಂಭಿಸಿ ಒಂದು ಸಾವಿರದ ನಾನೂರು ರಥಗಳನ್ನೂ ಹನ್ನೆರಡು ಸಾವಿರ ರಾಹುತರನ್ನೂ ತನ್ನ ಸೈನ್ಯಕ್ಕೆ ಕೂಡಿಸಿಕೊಂಡನು. ಅವುಗಳನ್ನು ರಥಗಳನ್ನಿಡುವ ನಗರಗಳಲ್ಲಿ ಇರಿಸಿದನು. ಅದರಲ್ಲಿ ಕೆಲವನ್ನು ತನ್ನ ಅರಮನೆಯಿರುವ ಜೆರುಸಲೇಮಿನಲ್ಲಿ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇದಲ್ಲದೆ ಸೊಲೊಮೋನನು ರಥಗಳನ್ನೂ, ರಾಹುತರನ್ನೂ ಕೂಡಿಸಿದನು. ಸಾವಿರದ ನಾನೂರು ರಥಗಳು, ಹನ್ನೆರಡು ಸಾವಿರ ಕುದುರೆಯ ರಾಹುತರು ಇದ್ದರು. ಇವುಗಳಲ್ಲಿ ಕೆಲವನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೇ ಇರಿಸಿದನು, ಉಳಿದವುಗಳನ್ನು ರಥಗಳ ಪಟ್ಟಣಗಳಲ್ಲಿಯೂ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 1:14
8 ತಿಳಿವುಗಳ ಹೋಲಿಕೆ  

ಸೊಲೊಮೋನನ ಲಾಯಗಳಲ್ಲಿ ನಾಲ್ವತ್ತು ಸಾವಿರ ರಥಾಶ್ವಗಳಿಗೆ ಸ್ಥಳವಿತ್ತು; ಅವನಿಗೆ ಹನ್ನೆರಡು ಸಾವಿರ ಮಂದಿ ರಾಹುತರಿದ್ದರು.


ಸೊಲೊಮೋನನ ಅಶ್ವಸಹಿತವಾದ ರಥಗಳು ನಾಲ್ಕು ಸಾವಿರ ಹಾಗೂ ರಾಹುತರು ಹನ್ನೆರಡು ಸಾವಿರ. ಇವುಗಳನ್ನು ಜೆರುಸಲೇಮಿನಲ್ಲಿ ತನ್ನ ಬಳಿಯಲ್ಲೂ ರಥಗಳಿಗಾಗಿ ನೇಮಿಸಿದ್ದ ಪಟ್ಟಣಗಳಲ್ಲೂ ಇರಿಸಿದ್ದನು.


ಉಗ್ರಾಣ ಪಟ್ಟಣಗಳು, ಯುದ್ಧರಥಗಳನ್ನಿರಿಸುವ ಪಟ್ಟಣಗಳು ಹಾಗು ರಾಹುತರ ಪಟ್ಟಣಗಳು ಇವುಗಳನ್ನೆಲ್ಲಾ ಕಟ್ಟಿಸಿದವನು ಸೊಲೊಮೋನನೇ. ಜೆರುಸಲೇಮಿನಲ್ಲೂ ಲೆಬನೋನಿನಲ್ಲೂ ತನ್ನ ರಾಜ್ಯದ ಎಲ್ಲಾ ಪ್ರಾಂತ್ಯಗಳಲ್ಲೂ ತನಗೆ ಇಷ್ಟವಾದುವುಗಳನ್ನೆಲ್ಲಾ ಅವನು ಕಟ್ಟಿಸಿದನು.


ಅರಸ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು; ಪ್ರತಿಯೊಂದು ಗುರಾಣಿಗೆ ಸುಮಾರು ಏಳು ಕಿಲೋಗ್ರಾಂ ಬಂಗಾರ ಹಿಡಿಯಿತು.


“ಅವನು ಕುದುರೆಯ ದಂಡನ್ನು ಹೆಚ್ಚಿಸಿಕೊಳ್ಳಬಾರದು. ಕುದುರೆಗಳನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಈಜಿಪ್ಟ್ ದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಕೂಡದೆಂದು ಸರ್ವೇಶ್ವರ ಆಜ್ಞಾಪಿಸಿದ್ದಾರೆ.


ನೀನು ನನಗೋಸ್ಕರ ಲೆಬನೋನಿನ ದೇವದಾರು ವೃಕ್ಷಗಳನ್ನು ಕೊಯ್ಯಬೇಕೆಂದು ನಿನ್ನ ಆಳುಗಳಿಗೆ ಆಜ್ಞಾಪಿಸು; ಅವರ ಜೊತೆಯಲ್ಲಿ ನನ್ನ ಆಳುಗಳನ್ನೂ ಕಳುಹಿಸುವೆನು. ಮತ್ತು ನಿನ್ನ ಆಳುಗಳಿಗೆ ನೀನು ಹೇಳುವಷ್ಟು ಸಂಬಳವನ್ನು ಕೊಡುತ್ತೇನೆ. ಸಿದೋನ್ಯರಂತೆ ಮರಕೊಯ್ಯುವುದರಲ್ಲಿ ಜಾಣರು ನಮ್ಮಲ್ಲಿರುವುದಿಲ್ಲವೆಂದು ನಿನಗೆ ಗೊತ್ತಿದೆಯಲ್ಲವೆ?” ಎಂದು ಹೇಳಿಸಿದನು.


ಬಾಲಾ ತೂರು, ತನ್ನ ಎಲ್ಲ ಉಗ್ರಾಣದ ಪಟ್ಟಣಗಳು, ಯುದ್ಧರಥಗಳನ್ನಿರಿಸುವ ಪಟ್ಟಣ, ರಾಹುತರ ಪಟ್ಟಣ ಇವುಗಳನ್ನೂ ಕಟ್ಟಿಸಿದನು. ಜೆರುಸಲೇಮಿನಲ್ಲೂ ಲೆಬನೋನಿನಲ್ಲೂ ತನ್ನ ರಾಜ್ಯದ ಎಲ್ಲಾ ಪ್ರಾಂತಗಳಲ್ಲೂ ತನಗೆ ಇಷ್ಟವಾದುವುಗಳನ್ನೆಲ್ಲಾ ಕಟ್ಟಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು