Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 1:6 - ಕನ್ನಡ ಸತ್ಯವೇದವು C.L. Bible (BSI)

6 ಸೊಲೊಮೋನನು, ದೇವದರ್ಶನದ ಗುಡಾರದ ಬಳಿ ಸರ್ವೇಶ್ವರನ ಮುಂದಿದ್ದ ಆ ತಾಮ್ರದ ಪೀಠದ ಮೇಲೆ, ಸಾವಿರ ದಹನಬಲಿಗಳನ್ನು ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಸೊಲೊಮೋನನು ದೇವದರ್ಶನ ಗುಡಾರದ ಬಳಿಯಲ್ಲಿ ಯೆಹೋವನ ಮುಂದೆ ಇರುವ ತಾಮ್ರದ ಯಜ್ಞವೇದಿಯ ಬಳಿಗೆ ಹೋಗಿ ಅದರ ಮೇಲೆ ಸಾವಿರ ಸರ್ವಾಂಗಹೋಮಗಳನ್ನು ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸೊಲೊಮೋನನು ದೇವದರ್ಶನದ ಗುಡಾರದ ಬಳಿಯಲ್ಲಿ ಯೆಹೋವನ ಮುಂದಿದ್ದ ಆ ತಾಮ್ರವೇದಿಯ ಮೇಲೆ ಸಾವಿರ ಸರ್ವಾಂಗಹೋಮಗಳನ್ನು ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವದರ್ಶನ ಗುಡಾರದ ಮುಂಭಾಗದಲ್ಲಿದ್ದ ತಾಮ್ರದ ಯಜ್ಞವೇದಿಕೆಯ ಬಳಿಗೆ ಸೊಲೊಮೋನನು ಹೋಗಿ ಅದರ ಮೇಲೆ ಒಂದು ಸಾವಿರ ಸರ್ವಾಂಗಹೋಮಗಳನ್ನು ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಸೊಲೊಮೋನನು ಸಭೆಯ ಗುಡಾರದ ಬಳಿಯಲ್ಲಿ ಯೆಹೋವ ದೇವರ ಮುಂದೆ ಇರುವ ಕಂಚಿನ ಪೀಠದ ಬಳಿಗೆ ಹೋಗಿ, ಅದರ ಮೇಲೆ ಸಹಸ್ರ ದಹನಬಲಿಗಳನ್ನು ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 1:6
6 ತಿಳಿವುಗಳ ಹೋಲಿಕೆ  

ಒಮ್ಮೆ ಅರಸ ಸೊಲೊಮೋನನು ಬಲಿಯರ್ಪಿಸುವುದಕ್ಕಾಗಿ ಪೂಜಾಸ್ಥಳಗಳಲ್ಲೇ ಪ್ರಾಮುಖ್ಯವಾದ ಗಿಬ್ಯೋನಿಗೆ ಹೋದನು. ಅಲ್ಲಿನ ಪೀಠದ ಮೇಲೆ ಸಹಸ್ರಬಲಿಗಳನ್ನು ಸಮರ್ಪಿಸಿದಾಗ,


ಮರುದಿನ ಅವರು ಸರ್ವೇಶ್ವರನಿಗೆ ಬಲಿಗಳನ್ನೂ ದಹನಬಲಿಗಳನ್ನೂ ಸಮರ್ಪಿಸಿದರು. ಆ ದಿನ ಬಲಿದಾನಕ್ಕಾಗಿ ಸಾವಿರ ಹೋರಿಗಳನ್ನೂ ಸಾವಿರ ಟಗರುಗಳನ್ನೂ ಸಾವಿರ ಕುರಿಗಳನ್ನೂ ವಧಿಸಿದರು. ಇವುಗಳೊಡನೆ ಅರ್ಪಿಸತಕ್ಕ ಪಾನದ್ರವ್ಯಗಳನ್ನೂ ಇಸ್ರಯೇಲರೆಲ್ಲರಿಗೆ ಸಾಕಾಗುವಷ್ಟು ಸಮಾಧಾನ ಬಲಿಗಳನ್ನೂ ಸಮರ್ಪಿಸಿ


ಸೊಲೊಮೋನನು ಸರ್ವೇಶ್ವರನಿಗೆ ಅರ್ಪಿಸಿದ ಶಾಂತಿಸಮಾಧಾನ ಬಲಿಗಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ; ಕುರಿಗಳು ಒಂದು ಲಕ್ಷದ ಇಪ್ಪತ್ತುಸಾವಿರ; ಈ ಪ್ರಕಾರ ಅರಸನೂ ಇಸ್ರಯೇಲರೆಲ್ಲರೂ ಸರ್ವೇಶ್ವರನ ಆಲಯವನ್ನು ಪ್ರತಿಷ್ಠಿಸಿದರು.


ಲೆಬನೋನಿನ ಪಶುಗಳು ಸಾಲವು ದಹನಬಲಿಗೆ ಅಲ್ಲಿನ ಮರಗಳು ಸಾಲವು ಅದರ ಸೌದೆಗೆ.


ಅರಸ ಸೊಲೊಮೋನನು ಹಾಗು ಅಲ್ಲಿ ಕೂಡಿಬಂದಿದ್ದ ಎಲ್ಲ ಇಸ್ರಯೇಲರೂ ಮಂಜೂಷದ ಮುಂದೇ ಅಸಂಖ್ಯವಾದ ಕುರಿದನಗಳನ್ನು ಬಲಿದಾನಮಾಡಿದರು.


ಆ ಕಾಲದಲ್ಲಿ ಸೊಲೊಮೋನನು ತಾನು ಸರ್ವೇಶ್ವರನಿಗಾಗಿ ಮಂಟಪದ ಮುಂದೆ ಕಟ್ಟಿಸಿದ ಸರ್ವೇಶ್ವರನ ಬಲಿಪೀಠದ ಮೇಲೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು