Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 1:8 - ಕನ್ನಡ ಸತ್ಯವೇದವು C.L. Bible (BSI)

8 ಸೊಲೊಮೋನನು, “ನೀವು ನನ್ನ ತಂದೆ ದಾವೀದನಿಗೆ ಮಹಾಕೃಪೆಯನ್ನು ತೋರಿಸಿದಿರಿ. ಅವರ ಸ್ಥಾನದಲ್ಲಿ ನನ್ನನ್ನು ಅರಸನನ್ನಾಗಿ ನೇಮಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸೊಲೊಮೋನನು ದೇವರಿಗೆ, “ನೀನು ನನ್ನ ತಂದೆಯಾದ ದಾವೀದನಿಗೆ ಮಹಾ ದಯೆಯನ್ನು ತೋರಿಸಿ ಅವನಿಗೆ ಬದಲಾಗಿ ನಾನು ಅರಸನಾಗುವಂತೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನೀನು ನನ್ನ ತಂದೆಯಾದ ದಾವೀದನಿಗೆ ಮಹಾಕೃಪೆಯನ್ನು ತೋರಿಸಿ ಅವನಿಗೆ ಬದಲಾಗಿ ನನ್ನನ್ನು ಅರಸನನ್ನಾಗಿ ನೇವಿುಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ಸೊಲೊಮೋನನು ದೇವರಿಗೆ, “ನೀನು ನನ್ನ ತಂದೆಯಾದ ದಾವೀದನ ಮೇಲೆ ಮಹಾಕೃಪೆಯನ್ನು ತೋರಿ ಅವನ ಸ್ಥಾನದಲ್ಲಿ ಅರಸನಾಗುವದಕ್ಕೆ ನನ್ನನ್ನು ಆರಿಸಿಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅದಕ್ಕೆ ಸೊಲೊಮೋನನು ದೇವರಿಗೆ, “ನೀವು ನನ್ನ ತಂದೆ ದಾವೀದನಿಗೆ ಮಹಾಕರುಣೆಯನ್ನು ತೋರಿಸಿದ್ದೀರಿ, ಅವನಿಗೆ ಬದಲಾಗಿ ನಾನು ಆಳುವಂತೆ ಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 1:8
13 ತಿಳಿವುಗಳ ಹೋಲಿಕೆ  

ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗ ಸೊಲೊಮೋನನನ್ನು ಸರ್ವೇಶ್ವರನ ರಾಜ್ಯಸಿಂಹಾಸನವಾಗಿರುವ ಇಸ್ರಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೆ ಆರಿಸಿಕೊಂಡರು.


ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.


ದಾವೀದನಿಗೆ ಪ್ರಭು, ನೀನಿತ್ತ ವಾಗ್ದಾನವೆಲ್ಲಿ? I ಗತಕಾಲದಲಿ ನೀ ತೋರಿದಚಲ ಪ್ರೀತಿಯೆಲ್ಲಿ? II


ನೀನೆನಗೆ ತೋರಿಸಿರುವ ಕರುಣೆ ಮಹತ್ತರವಾದುದಯ್ಯಾ I ಪಾತಾಳದಿಂದ ನನ್ನ ಪ್ರಾಣವನು ಉಳಿಸಿದೆಯಯ್ಯಾ II


ಅಂದಿನಿಂದ ಸೊಲೊಮೋನನು ತನ್ನ ತಂದೆ ದಾವೀದನ ಸ್ಥಾನದಲ್ಲಿ ಅರಸನಾಗಿ, ಸರ್ವೇಶ್ವರನ ಸಿಂಹಾಸನದಲ್ಲಿ ಕುಳಿತುಕೊಂಡು, ವೃದ್ಧಿಯಾಗುತ್ತಾ ಬಂದನು. ಅರಸ ಸೊಲೊಮೋನನಿಗೆ ಇಸ್ರಯೇಲರೆಲ್ಲರೂ ವಿಧೇಯರಾಗಿ ನಡೆದರು.


ತಾನೇ ನೇಮಿಸಿದ ಅರಸನಿಗೆ ಆತನೀವನು ವಿಶೇಷ ರಕ್ಷಣೆ.


ಸೊಲೊಮೋನನು, “ನಿಮಗೆ ಪ್ರಾಮಾಣಿಕನಾಗಿ ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿಮ್ಮ ದಾಸನೂ ನನ್ನ ತಂದೆಯೂ ಆದ ದಾವೀದನಿಗೆ ನೀವು ಮಹಾಕೃಪೆಯನ್ನು ತೋರಿಸಿದಿರಿ; ಆ ಕೃಪೆಯನ್ನು ಮುಂದುವರಿಸುತ್ತಾ ಈಗ ಅವರ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿ ಅದನ್ನು ಸಂಪೂರ್ಣಗೊಳಿಸಿದ್ದೀರಿ.


ಬಳಿಕ ಅರಸ ದಾವೀದನು ಸರ್ವೇಶ್ವರನ ಸನ್ನಿಧಿಗೆ ಹೋಗಿ ಅಲ್ಲಿ ಕುಳಿತುಕೊಂಡು, “ದೇವರೇ, ಸರ್ವೇಶ್ವರಾ, ನನ್ನಂಥವನಿಗೆ ತಾವು ಈ ಪದವಿಯನ್ನು ಅನುಗ್ರಹಿಸಿದ್ದೀರಿ; ತಾವು ನನ್ನನ್ನು ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು! ನನ್ನ ಕುಟುಂಬ ಎಷ್ಟರದು!


ಸಿರಿಸಂಪತ್ತು, ಘನತೆ, ಗೌರವ ಹಾಗೂ ದೀರ್ಘಾಯುಷ್ಯ ಇವುಗಳನ್ನು ಅನುಭವಿಸಿದನಂತರ ದಾವೀದನು ಹಣ್ಣುಮುದುಕನಾಗಿ ಮರಣ ಹೊಂದಿದನು. ಅವನ ಉತ್ತರಾಧಿಕಾರಿಯಾಗಿ ಅವನ ಮಗ ಸೊಲೊಮೋನನು ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು