Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 1:9 - ಕನ್ನಡ ಸತ್ಯವೇದವು C.L. Bible (BSI)

9 ಹೀಗೆ ಇರಲಾಗಿ ದೇವರಾದ ಸರ್ವೇಶ್ವರಾ, ನೀವು ನನ್ನ ತಂದೆ ದಾವೀದನಿಗೆ ನುಡಿದದ್ದು ಸಾರ್ಥಕವಾಗಲಿ; ಧರೆಯ ಧೂಳಿನಷ್ಟು ಅಸಂಖ್ಯವಾದ ಜನಾಂಗದ ಮೇಲೆ ನನ್ನನ್ನು ಅರಸನನ್ನಾಗಿ ನೇಮಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈಗ ಯೆಹೋವನಾದ ದೇವರೇ, ನೀನು ನನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವು ನೆರವೇರಲಿ. ಏಕೆಂದರೆ ಭೂಮಿಯ ಧೂಳಿನಷ್ಟು ಅಸಂಖ್ಯವಾದ ಜನಾಂಗದವರಿಗೆ ನನ್ನನ್ನು ಅರಸನನ್ನಾಗಿ ನೇಮಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹೀಗಿರಲಾಗಿ ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ ನುಡಿದದ್ದು ಸಾರ್ಥಕವಾಗಲಿ; ಭೂವಿುಯ ಧೂಳಿನಷ್ಟು ಅಸಂಖ್ಯವಾದ ಜನಾಂಗದ ಮೇಲೆ ನನ್ನನ್ನು ಅರಸನನ್ನಾಗಿ ನೇವಿುಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರಾದ ಯೆಹೋವನೇ ನೀನು ನನ್ನ ತಂದೆಯಾದ ದಾವೀದನಿಗೆ ಮಾಡಿರುವ ವಾಗ್ದಾನವನ್ನು ನೆರವೇರಿಸು. ಒಂದು ದೊಡ್ಡ ರಾಜ್ಯಕ್ಕೆ ನನ್ನನ್ನು ಅರಸನನ್ನಾಗಿ ನೇಮಿಸಿರುತ್ತೀ. ಅದರಲ್ಲಿ ಭೂಮಿಯ ಧೂಳಿನೋಪಾದಿಯಲ್ಲಿ ಜನರು ತುಂಬಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈಗ ಯೆಹೋವ ದೇವರೇ, ನೀವು ನನ್ನ ತಂದೆ ದಾವೀದನಿಗೆ ಮಾಡಿದ ವಾಗ್ದಾನವು ದೃಢವಾಗಲಿ. ಏಕೆಂದರೆ ಭೂಮಿಯ ಧೂಳಿನಷ್ಟು ಅಸಂಖ್ಯಾತ ಜನರ ಮೇಲೆ ನನ್ನನ್ನು ಅರಸನನ್ನಾಗಿ ಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 1:9
14 ತಿಳಿವುಗಳ ಹೋಲಿಕೆ  

ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯಾತರನ್ನಾಗಿ ಮಾಡುತ್ತೇನೆ. ಭೂಮಿಯ ಧೂಳನ್ನು ಲೆಕ್ಕಿಸಲು ಸಾಧ್ಯವಾದಲ್ಲಿ ನಿನ್ನ ಸಂತಾನದವರನ್ನು ಲೆಕ್ಕಿಸಲು ಸಾಧ್ಯವಾದೀತು.


ನಿನ್ನ ಸಂತತಿಯನ್ನು ಹೆಚ್ಚಿಸಿಯೇ ಹೆಚ್ಚಿಸುತ್ತೇನೆ; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದ ಮರಳಿನಂತೆಯೂ ಅಸಂಖ್ಯವಾಗಿ ಮಾಡುತ್ತೇನೆ. ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಪಡಿಸಿಕೊಳ್ಳುವರು.


ಯಕೋಬ್ಯರು ಧೂಳಿನಷ್ಟು ಅಸಂಖ್ಯ ಅವರನ್ನು ಲೆಕ್ಕಿಸಲು ಯಾರಿಂದ ಸಾಧ್ಯ? ಕಾಲ್ಭಾಗವನ್ನಾದರೂ ಹೇಳಲು ಯಾರಿಂದ ಸಾಧ್ಯ? ನಾ ಸಾಯಬೇಕು ಆ ಸಜ್ಜನರು ಸಾಯುವ ರೀತಿ ನನ್ನದಾಗಬೇಕು ಅವರಿಗಾಗುವ ಅಂತ್ಯಗತಿ.”


ನಿನ್ನ ಸಂತತಿ ಭೂಮಿಯ ಧೂಳಿನಂತೆ ಅಸಂಖ್ಯ ಆಗುವುದು; ನೀನು ಪೂರ್ವಪಶ್ಚಿಮ - ದಕ್ಷಿಣೋತ್ತರ ದಿಕ್ಕುಗಳಿಗೆ ಹರಡಿಕೊಳ್ಳುವೆ. ನಿನ್ನ ಮುಖಾಂತರ ಹಾಗೂ ನಿನ್ನ ಸಂತತಿಯ ಮುಖಾಂತರ ಜಗದ ಎಲ್ಲ ರಾಷ್ಟ್ರಗಳೂ ಆಶೀರ್ವಾದ ಪಡೆಯುವುವು.


ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗ ಸೊಲೊಮೋನನನ್ನು ಸರ್ವೇಶ್ವರನ ರಾಜ್ಯಸಿಂಹಾಸನವಾಗಿರುವ ಇಸ್ರಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೆ ಆರಿಸಿಕೊಂಡರು.


ಐದು ತಲೆಂತು ಪಡೆದ ಸೇವಕ ಒಡನೇ ಹೋಗಿ ಆ ಮೊತ್ತದಿಂದ ವ್ಯಾಪಾರಮಾಡಿ ಇನ್ನೂ ಐದನ್ನು ಸಂಪಾದಿಸಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು