Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 10:17 - ಕನ್ನಡ ಸತ್ಯವೇದವು C.L. Bible (BSI)

17 ಜುದೇಯ ಪ್ರಾಂತ್ಯದಲ್ಲಿದ್ದ ಇಸ್ರಯೇಲರಾದರೋ ಅರಸ ರೆಹಬ್ಬಾಮನ ಅಧೀನದಲ್ಲೆ ಉಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೂದ ಪಟ್ಟಣದಲ್ಲಿದ್ದ ಇಸ್ರಾಯೇಲರಾದರೋ ಅರಸನಾದ ರೆಹಬ್ಬಾಮನ ಅಧೀನದಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೂದ ಪ್ರಾಂತದಲ್ಲಿದ್ದ ಇಸ್ರಾಯೇಲ್ಯರಾದರೋ ಅರಸನಾದ ರೆಹಬ್ಬಾಮನ ಅಧೀನದಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಇಸ್ರೇಲರಲ್ಲಿ ಕೆಲವರು ಯೆಹೂದದ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು. ಇವರಿಗೆ ರೆಹಬ್ಬಾಮನೇ ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲರ ಮೇಲೆ ರೆಹಬ್ಬಾಮನು ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 10:17
8 ತಿಳಿವುಗಳ ಹೋಲಿಕೆ  

ರೆಹಬ್ಬಾಮನು ಜೆರುಸಲೇಮನ್ನು ಮುಟ್ಟಿದ ನಂತರ ಇಸ್ರಯೇಲರಿಗೆ ವಿರುದ್ಧ ಯುದ್ಧಮಾಡುವುದಕ್ಕೂ ಅವರ ರಾಜ್ಯವನ್ನು ಮರಳಿ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಬತ್ತು ಸಾವಿರ ಮಂದಿ ಶ್ರೇಷ್ಟ ಸೈನಿಕರನ್ನು ಕೂಡಿಸಿದನು.


ಜುದೇಯ ಪ್ರಾಂತ್ಯದಲ್ಲಿದ್ದ ಇಸ್ರಯೇಲರಾದರೋ ರೆಹಬ್ಬಾಮನ ಅಧೀನದಲ್ಲಿದ್ದರು.


ನಾನು ನನ್ನ ಹೆಸರಿಗಾಗಿ ಆರಿಸಿಕೊಂಡ ಜೆರುಸಲೇಮ್ ಪಟ್ಟಣದಲ್ಲಿ ನನ್ನ ದಾಸ ದಾವೀದನ ದೀಪ ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು.


ತಮ್ಮ ಮಾತನ್ನು ಅರಸನು ಲಕ್ಷಿಸಲಿಲ್ಲ ಎಂದು ತಿಳಿದು, ಇಸ್ರಯೇಲರೆಲ್ಲರು ಅವನಿಗೆ, “ದಾವೀದನಿಗೂ ನಮಗೂ ಇನ್ನು ಮೇಲೆ ಏನೂ ಸಂಬಂಧವಿಲ್ಲ, ಜೆಸ್ಸೆಯ ಮಗನಿಗೂ ನಮಗೂ ಯಾವ ಬಾಧ್ಯತೆಯೂ ಇಲ್ಲ. ಇಸ್ರಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ತೆರಳಿರಿ; ದಾವೀದನ ಕಡೆಯವರೇ, ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿ,” ಎಂದು ಪ್ರತಿಭಟಿಸಿ ತಮ್ಮ ತಮ್ಮ ನಿವಾಸಗಳಿಗೆ ಹೊರಟುಹೋದರು.


ರೆಹಬ್ಬಾಮನು ಬಿಟ್ಟೀಕೆಲಸದವರ ಮೇಲ್ವಿಚಾರಕರಾದ ಹದೋರಾಮನನ್ನು ಇಸ್ರಯೇಲರ ಬಳಿಗೆ ಕಳುಹಿಸಿದಾಗ, ಅವರು ಇವನನ್ನು ಕಲ್ಲೆಸೆದು ಕೊಂದರು. ಆಗ ಅರಸ ರೆಹಬ್ಬಾಮನು ಬೇಗನೆ ರಥವನ್ನೇರಿ ಜೆರುಸಲೇಮಿಗೆ ಓಡಿಹೋದನು.


“ನರಪುತ್ರನೇ, ನೀನು ಒಂದು ದಂಡವನ್ನು ತೆಗೆದು ಅದರಲ್ಲಿ ‘ಜುದೇಯದ್ದು, ಜುದೇಯಕ್ಕೆ ಸೇರಿದ ಇಸ್ರಯೇಲರದು’ ಎಂದು ಬರೆ; ಇನ್ನೊಂದು ದಂಡವನ್ನು ತೆಗೆದು ಅದರಲ್ಲಿ, ‘ಜೋಸೆಫನದು, ಎಫ್ರಯಿಮಿನದು, ಜೊಸೇಫಿಗೆ ಸೇರಿದ ಎಲ್ಲ ಇಸ್ರಯೇಲರದು’ ಎಂದು ಬರೆ;


“ನೀನು ಹೋಗಿ ಸೊಲೊಮೋನನ ಮಗನೂ ಜುದೇಯದ ಅರಸನೂ ಆದ ರೆಹಬ್ಬಾಮನಿಗೂ ಯೆಹೂದ ಬೆನ್ಯಾಮೀನ್ ಕುಲಗಳ ಇಸ್ರಯೇಲರೆಲ್ಲರಿಗೂ,


ಹೀಗೆ ಇವುಗಳನ್ನು ಮತ್ತಷ್ಟು ಸುಭದ್ರಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು