Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 11:11 - ಕನ್ನಡ ಸತ್ಯವೇದವು C.L. Bible (BSI)

11 ಅವನುಈ ಕೋಟೆಗಳನ್ನು ಬಲಪಡಿಸಿ, ನಾಯಕರ ವಶಕ್ಕೆ ಕೊಟ್ಟು, ಪ್ರತಿ ಒಂದರಲ್ಲಿ ಆಹಾರಪದಾರ್ಥ, ಎಣ್ಣೆ, ದ್ರಾಕ್ಷಾರಸ ಇವುಗಳನ್ನೂ ಗುರಾಣಿಬರ್ಜಿಗಳನ್ನೂ ಸಂಗ್ರಹಿಸಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವನು ಈ ಕೋಟೆಗಳನ್ನು ಬಲಪಡಿಸಿ, ನಾಯಕರ ವಶಕ್ಕೆ ಕೊಟ್ಟು, ಪ್ರತಿ ಒಂದರಲ್ಲಿ ಆಹಾರಪದಾರ್ಥ, ಎಣ್ಣೆ, ದ್ರಾಕ್ಷಾರಸವನ್ನು ಸಂಗ್ರಹಿಸಿಟ್ಟನು. ಗುರಾಣಿ ಬರ್ಜಿಗಳನ್ನೂ ಸಂಗ್ರಹಿಸಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವನು ಈ ಕೋಟೆಗಳನ್ನು ಬಲಪಡಿಸಿ ನಾಯಕರ ವಶಕ್ಕೆ ಕೊಟ್ಟು ಪ್ರತಿಯೊಂದರಲ್ಲಿ ಆಹಾರಪದಾರ್ಥ ಎಣ್ಣೆ ದ್ರಾಕ್ಷಾರಸ ಇವುಗಳನ್ನೂ ಗುರಾಣಿಬರ್ಜಿಗಳನ್ನೂ ಸಂಗ್ರಹಿಸಿಟ್ಟನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ರೆಹಬ್ಬಾಮನು ಈ ಪಟ್ಟಣಗಳಿಗೆ ಅಧಿಪತಿಗಳನ್ನು ನೇಮಿಸಿದನು; ಆಹಾರಸಾಮಾಗ್ರಿ, ಎಣ್ಣೆ, ದ್ರಾಕ್ಷಾರಸ ಮುಂತಾದವುಗಳನ್ನು ಸಂಗ್ರಹಿಸಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇದಲ್ಲದೆ ಅವನು ಕೋಟೆಗಳನ್ನು ಬಲಪಡಿಸಿ, ಅವುಗಳಲ್ಲಿ ನಾಯಕರನ್ನೂ, ಆಹಾರ, ಎಣ್ಣೆ, ದ್ರಾಕ್ಷಾರಸ ಇರುವ ಉಗ್ರಾಣಗಳನ್ನೂ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 11:11
7 ತಿಳಿವುಗಳ ಹೋಲಿಕೆ  

ಅರಸನಿಗೆ ತನ್ನ ಸನ್ನಿಧಿಯಲ್ಲಿ ಸೇವೆಮಾಡುತ್ತಿದ್ದ ಈ ಯೋಧರಲ್ಲದೆ ಕೋಟೆಕೊತ್ತಲಗಳಿದ್ದ ಬೇರೆ ಪಟ್ಟಣಗಳಲ್ಲಿಯೂ ಸೈನಿಕರಾಗಿ ಇದ್ದರು.


ತನ್ನ ಉಳಿದ ಎಲ್ಲ ಮಕ್ಕಳನ್ನು ಜಾಣತನದಿಂದ ವಿಂಗಡಿಸಿ ಯೆಹೂದ-ಬೆನ್ಯಾಮೀನ್ ಕುಲಪ್ರದೇಶಗಳಲ್ಲಿ ಇದ್ದ ಕೋಟೆ ಕೊತ್ತಲುಗಳಿಂದ ಕೂಡಿದ ಆಯಾ ಪಟ್ಟಣಗಳಲ್ಲಿಟ್ಟು, ಅವರಿಗೆ ಬೇಕಾದಷ್ಟು ಜೀವನಾಂಶವನ್ನು ಏರ್ಪಡಿಸಿ, ಹಲವಾರು ಹೆಂಡತಿಯರನ್ನೂ ಗೊತ್ತುಮಾಡಿಕೊಟ್ಟನು.


ಅಜೇಕ, ಚೊರ್ಗ, ಅಯ್ಯಾಲೋನ್ ಹಾಗೂ ಹೆಬ್ರೋನ್. ಕೋಟೆಕೊತ್ತಲಗಳಿಂದ ಕೂಡಿದ್ದ ಈ ಪಟ್ಟಣಗಳು ಯೆಹೂದ-ಬೆನ್ಯಾಮೀನ್ ಕುಲ ಪ್ರಾಂತ್ಯಗಳಾಗಿದ್ದವು.


ಹೀಗೆ ಇವುಗಳನ್ನು ಮತ್ತಷ್ಟು ಸುಭದ್ರಪಡಿಸಿದನು.


“ನರಪುತ್ರನೇ, ನೀನು ಒಂದು ದಂಡವನ್ನು ತೆಗೆದು ಅದರಲ್ಲಿ ‘ಜುದೇಯದ್ದು, ಜುದೇಯಕ್ಕೆ ಸೇರಿದ ಇಸ್ರಯೇಲರದು’ ಎಂದು ಬರೆ; ಇನ್ನೊಂದು ದಂಡವನ್ನು ತೆಗೆದು ಅದರಲ್ಲಿ, ‘ಜೋಸೆಫನದು, ಎಫ್ರಯಿಮಿನದು, ಜೊಸೇಫಿಗೆ ಸೇರಿದ ಎಲ್ಲ ಇಸ್ರಯೇಲರದು’ ಎಂದು ಬರೆ;


ಹೀಗೆ ಯೆಹೋಷಾಫಾಟನು ಅತ್ಯಧಿಕವಾಗಿ ಅಭಿವೃದ್ಧಿಹೊಂದಿ ಜುದೇಯ ನಾಡಿನಲ್ಲಿ ಕೋಟೆಗಳನ್ನು ಮತ್ತು ಉಗ್ರಾಣದ ಪಟ್ಟಣಗಳನ್ನು ಕಟ್ಟಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು