Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 11:5 - ಕನ್ನಡ ಸತ್ಯವೇದವು C.L. Bible (BSI)

5 ರೆಹಬ್ಬಾಮನು ಜೆರುಸಲೇಮಿನಲ್ಲಿ ವಾಸವಾಗಿದ್ದು ಜುದೇಯದ ಈ ಕೆಳಕಂಡ ಪಟ್ಟಣಗಳನ್ನು ಭದ್ರಪಡಿಸಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸವಾಗಿದ್ದು ಯೆಹೂದ ಸಂರಕ್ಷಣೆಗಾಗಿ ಪಟ್ಟಣಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ರೆಹಬ್ಬಾಮನು ಯೆರೂಸಲೇವಿುನಲ್ಲಿ ವಾಸವಾಗಿದ್ದು ಯೆಹೂದದ ಪಟ್ಟಣಗಳನ್ನು ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ರೆಹಬ್ಬಾಮನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಯುದ್ಧದಲ್ಲಿ ರಕ್ಷಿಸಿಕೊಳ್ಳಲು ಅವನು ಯೆಹೂದದಲ್ಲಿ ಭದ್ರವಾದ ಪಟ್ಟಣಗಳನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸಮಾಡಿ, ಯೆಹೂದದಲ್ಲಿ ಕೋಟೆಯುಳ್ಳ ಪಟ್ಟಣಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 11:5
14 ತಿಳಿವುಗಳ ಹೋಲಿಕೆ  

ಇದಲ್ಲದೆ, ಇವನು ಜುದೇಯ ಪರ್ವತಪ್ರದೇಶದಲ್ಲಿ ಪಟ್ಟಣಗಳನ್ನೂ ಕಾಡುಗಳಲ್ಲಿ ದುರ್ಗಗಳನ್ನೂ ಬುರುಜುಗಳನ್ನೂ ಕಟ್ಟಿಸಿದನು.


ಉಜ್ಜೀಯನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೊರಟು ಗತ್‍ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.


ಹೀಗೆ ಯೆಹೋಷಾಫಾಟನು ಅತ್ಯಧಿಕವಾಗಿ ಅಭಿವೃದ್ಧಿಹೊಂದಿ ಜುದೇಯ ನಾಡಿನಲ್ಲಿ ಕೋಟೆಗಳನ್ನು ಮತ್ತು ಉಗ್ರಾಣದ ಪಟ್ಟಣಗಳನ್ನು ಕಟ್ಟಿಸಿದನು.


ಅನಂತರ ಅರಸ ಆಸನು ಎಲ್ಲಾ ಯೆಹೂದ್ಯರನ್ನು ಕರೆಸಿ ಬಾಷನು ರಾಮಕೋಟೆಗಾಗಿ ತರಿಸಿದ್ದ ಕಲ್ಲುಮರಗಳನ್ನು ಇವರ ಮುಖಾಂತರ ತೆಗೆದುಕೊಂಡು ಹೋಗಿ ಗೆಬ, ಮಿಚ್ಪ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.


ತನ್ನ ಉಳಿದ ಎಲ್ಲ ಮಕ್ಕಳನ್ನು ಜಾಣತನದಿಂದ ವಿಂಗಡಿಸಿ ಯೆಹೂದ-ಬೆನ್ಯಾಮೀನ್ ಕುಲಪ್ರದೇಶಗಳಲ್ಲಿ ಇದ್ದ ಕೋಟೆ ಕೊತ್ತಲುಗಳಿಂದ ಕೂಡಿದ ಆಯಾ ಪಟ್ಟಣಗಳಲ್ಲಿಟ್ಟು, ಅವರಿಗೆ ಬೇಕಾದಷ್ಟು ಜೀವನಾಂಶವನ್ನು ಏರ್ಪಡಿಸಿ, ಹಲವಾರು ಹೆಂಡತಿಯರನ್ನೂ ಗೊತ್ತುಮಾಡಿಕೊಟ್ಟನು.


ಜುದೇಯ ನಾಡಿನ ಕೋಟೆಕೊತ್ತಲುಗಳಿಂದ ಕೂಡಿದ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡ ನಂತರ ಜೆರುಸಲೇಮನ್ನು ಸಮೀಪಿಸಿದನು.


ಜುದೇಯದ ಕೋಟೆಕೊತ್ತಲುಗಳುಳ್ಳ ಎಲ್ಲ ಪಟ್ಟಣಗಳಲ್ಲೂ ಸೈನ್ಯವನ್ನಿರಿಸಿದನು. ಜುದೇಯ ನಾಡಿನಲ್ಲೂ ಹಾಗೂ ತನ್ನ ತಂದೆ ಆಸನು ಕಿತ್ತುಕೊಂಡಿದ್ದ ಎಫ್ರಯಿಮರ ಪಟ್ಟಣಗಳಲ್ಲೂ ಅಧಿಕಾರಿಗಳನ್ನು ನೇಮಿಸಿದನು.


ಇವರ ತಂದೆ ಇವರಿಗೆ ಜುದೇಯದ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನು ಅಲ್ಲದೆ, ಬೆಳ್ಳಿಬಂಗಾರ, ಅಮೂಲ್ಯ ವಸ್ತು ಇತ್ಯಾದಿ ವಿಶೇಷ ದಾನಗಳನ್ನು ಕೊಟ್ಟನು. ಆದರೆ ಯೆಹೋರಾಮನು ಹಿರಿಯ ಮಗನಾಗಿದ್ದುದರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.


ಆಗ ಬಾಬಿಲೋನಿನ ಅರಸನ ಸೈನ್ಯವು ಜೆರುಸಲೇಮಿಗೂ ಮತ್ತು ಜುದೇಯದೊಳಗೆ ಕೋಟೆಕೊತ್ತಲದ ನಗರಗಳಾಗಿದ್ದ ಲಾಕೀಷಿಗೂ ಅಜೇಕಕ್ಕೂ ವಿರುದ್ಧ ಯುದ್ಧಮಾಡುತ್ತಿತ್ತು.


ಜುದೇಯದ ಎಲ್ಲ ಪಟ್ಟಣಗಳಿಂದ ಪೂಜಾಸ್ಥಳಗಳನ್ನೂ ಸೂರ್ಯಸ್ತಂಭಗಳನ್ನೂ ತೆಗೆದು ಹಾಕಿಸಿದನು. ಇವನ ಆಳ್ವಿಕೆಯಲ್ಲಿ ರಾಜ್ಯದೊಳಗೆ ಸಮಾಧಾನ ವಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು