Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 12:1 - ಕನ್ನಡ ಸತ್ಯವೇದವು C.L. Bible (BSI)

1 ರೆಹಬ್ಬಾಮನು ತನ್ನ ರಾಜ್ಯಾಧಿಕಾರವನ್ನು ಸುಭದ್ರಪಡಿಸಿಕೊಂಡ ಮೇಲೆ ಅವನೂ ಅವನ ಪ್ರಜೆಗಳಾದ ಇಸ್ರಯೇಲರೆಲ್ಲರೂ ಸರ್ವೇಶ್ವರನ ಧರ್ಮೋಪದೇಶವನ್ನು ಬಿಟ್ಟುಬಿಟ್ಟರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ರೆಹಬ್ಬಾಮನು ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಬಲಗೊಂಡ ಮೇಲೆ ಅವನೂ ಮತ್ತು ಅವನ ಪ್ರಜೆಗಳಾದ ಎಲ್ಲಾ ಇಸ್ರಾಯೇಲರೂ ಯೆಹೋವನ ಧರ್ಮೋಪದೇಶವನ್ನು ಬಿಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ರೆಹಬ್ಬಾಮನು ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಬಲಗೊಂಡ ಮೇಲೆ ಅವನೂ ಅವನ ಪ್ರಜೆಗಳಾದ ಎಲ್ಲಾ ಇಸ್ರಾಯೇಲ್ಯರೂ ಯೆಹೋವನ ಧರ್ಮೋಪದೇಶವನ್ನು ಬಿಟ್ಟುಬಿಟ್ಟರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ರೆಹಬ್ಬಾಮನು ಬಲಾಢ್ಯನಾದ ರಾಜನಾಗಿ ತನ್ನ ರಾಜ್ಯವನ್ನು ಬಲಗೊಳಿಸಿದ ನಂತರ ಅವನೂ ಯೆಹೂದದ ಜನರೂ ದೇವರಾದ ಯೆಹೋವನ ಕಟ್ಟಳೆಗಳನ್ನು ಅನುಸರಿಸಲು ನಿರಾಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ರೆಹಬ್ಬಾಮನು ರಾಜ್ಯವನ್ನು ಸ್ಥಿರಮಾಡಿ ತನ್ನನ್ನು ಬಲಪಡಿಸಿಕೊಂಡಾಗ, ಅವನೂ, ಅವನ ಸಂಗಡ ಸಮಸ್ತ ಇಸ್ರಾಯೇಲರೂ ಯೆಹೋವ ದೇವರ ನಿಯಮವನ್ನು ಬಿಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 12:1
22 ತಿಳಿವುಗಳ ಹೋಲಿಕೆ  

ಇವರೆಲ್ಲರು ಮೊದಲನೆಯ ಮೂರು ವರ್ಷಗಳಲ್ಲಿ ದಾವೀದ ಹಾಗೂ ಸೊಲೊಮೋನರ ಮಾರ್ಗದಲ್ಲೇ ನಡೆಯುತ್ತಿದ್ದರು. ಎಂದೇ ಜುದೇಯರಾಜ್ಯವು ಆ ವರ್ಷಗಳಲ್ಲಿ ವೃದ್ಧಿಯಾಗಿ, ಸೊಲೊಮೋನನ ಮಗ ರೆಹಬ್ಬಾಮನು ಬಲಿಷ್ಠನಾದನು.


ಅರಸ ರೆಹಬ್ಬಾಮನು ಜೆರುಸಲೇಮಿನಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಪಟ್ಟಕ್ಕೆ ಬಂದದ್ದು ತನ್ನ ನಲವತ್ತೊಂದನೆಯ ವರ್ಷದಲ್ಲಿ. ಸರ್ವೇಶ್ವರ ಎಲ್ಲಾ ಕುಲಪ್ರಾಂತ್ಯಗಳಿಂದ ತಮ್ಮ ಹೆಸರಿಗಾಗಿ ಆರಿಸಿಕೊಂಡ ಜೆರುಸಲೇಮಿನಲ್ಲಿ ಅವನು ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆ ಅವನ ತಾಯಿ.


“ಒಮ್ರಿ ಅರಸನ ಆಜ್ಞೆಗಳನ್ನೂ ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದಕಾರಣ ನಿಮ್ಮನ್ನು ವಿನಾಶಗೊಳಿಸುವೆನು; ನಿಮ್ಮ ಜನರನ್ನು ಅಪಹಾಸ್ಯಕ್ಕೆ ಈಡುಮಾಡುವೆನು. ನೀವು ಜನಾಂಗಗಳ ನಿಂದೆಗೆ ಗುರಿಯಾಗುವಿರಿ.”


ಪೂರ್ವದಲ್ಲಿ ಎಫ್ರಯಿಮ್ ಮಾತನಾಡಿದಾಗ ಎಲ್ಲರೂ ನಡುಗುತ್ತಿದ್ದರು. ಅದು ಇಸ್ರಯೇಲಿನಲ್ಲಿ ಅಷ್ಟು ಉನ್ನತ ಸ್ಥಿತಿಗೆ ಏರಿತ್ತು. ಆದರೆ ಅದು ಬಾಳ್ ದೇವತೆಗೆ ಆರಾಧನೆ ಸಲ್ಲಿಸಿದ್ದರಿಂದ ಪಾಪಕಟ್ಟಿಕೊಂಡು ಪತನವಾಯಿತು.


ಇಸ್ರಯೇಲ್ ಜನರೇ, ದುಷ್ಟಸಂತತಿಯವರೇ, ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳಿರಿ : ನಾನು ನಿಮಗೆ ಬೆಂಗಾಡಾಗಿಯೂ ಗಾಢಾಂಧಕಾರವಾಗಿಯೂ ಪರಿಣಮಿಸಿದ್ದೇನೊ? ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ; ನಿನ್ನ ಬಳಿಗೆ ಇನ್ನು ಬಾರೆವು’ ಎಂದು ನನ್ನ ಜನರಾದ ನೀವು ಹೇಳುವುದು ಹೇಗೆ?


“ನೀನು ಹೋಗಿ ಸೊಲೊಮೋನನ ಮಗನೂ ಜುದೇಯದ ಅರಸನೂ ಆದ ರೆಹಬ್ಬಾಮನಿಗೂ ಯೆಹೂದ ಬೆನ್ಯಾಮೀನ್ ಕುಲಗಳ ಇಸ್ರಯೇಲರೆಲ್ಲರಿಗೂ,


ಜುದೇಯದವರು ಸಹ ತಮ್ಮ ದೇವರಾದ ಸರ್ವೇಶ್ವರನ ಆಜ್ಞೆಯನ್ನು ಕೈಕೊಳ್ಳದೆ ಇಸ್ರಯೇಲರ ಪದ್ಧತಿಯನ್ನು ಅನುಸರಿಸಿದ್ದರಿಂದ,


ಜುದೇಯ ಪ್ರಾಂತ್ಯದಲ್ಲಿದ್ದ ಇಸ್ರಯೇಲರಾದರೋ ರೆಹಬ್ಬಾಮನ ಅಧೀನದಲ್ಲಿದ್ದರು.


ಆಗ ಅವರಿಗೆ, ‘ಈ ನಾಡಿನವರು ತಮ್ಮ ಪೂರ್ವಜರನ್ನು ಈಜಿಪ್ಟಿನಿಂದ ಬರಮಾಡಿದ ದೇವರಾದ ಸರ್ವೇಶ್ವರನನ್ನು ಬಿಟ್ಟು ಅನ್ಯದೇವತೆಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಆರಾಧಿಸಿದ್ದರಿಂದಲೇ ಸರ್ವೇಶ್ವರ ಈ ಎಲ್ಲಾ ಆಪತ್ತು-ವಿಪತ್ತುಗಳನ್ನು ಬರಮಾಡಿದ್ದಾರೆ’ ಎಂಬ ಉತ್ತರಸಿಕ್ಕುವುದು,” ಎಂದರು.


ಎಲೈ ಇಸ್ರಯೇಲರೇ, ಮರೆತಿರಾ ಜನ್ಮವಿತ್ತ ಪೊರೆಬಂಡೆಯನು ಸ್ಮರಿಸಲಿಲ್ಲ ನೀವು ಹೆತ್ತತಾಯಂತಿದ್ದಾ ದೇವರನು.


“ತೃಪ್ತಿಯಾಗಿ ತಿಂದನು ಯಕೋಬನು, ಕೊಬ್ಬಿಹೋದನು ಆ ಯೆಶೂರನು; ತೊರೆದುಬಿಟ್ಟನು ತನ್ನ ಪೊರೆಬಂಡೆಯನು ಮರೆತುಬಿಟ್ಟನು ತನ್ನ ಸೃಷ್ಟಿಕರ್ತನನು.


ತನ್ನ ಉಳಿದ ಎಲ್ಲ ಮಕ್ಕಳನ್ನು ಜಾಣತನದಿಂದ ವಿಂಗಡಿಸಿ ಯೆಹೂದ-ಬೆನ್ಯಾಮೀನ್ ಕುಲಪ್ರದೇಶಗಳಲ್ಲಿ ಇದ್ದ ಕೋಟೆ ಕೊತ್ತಲುಗಳಿಂದ ಕೂಡಿದ ಆಯಾ ಪಟ್ಟಣಗಳಲ್ಲಿಟ್ಟು, ಅವರಿಗೆ ಬೇಕಾದಷ್ಟು ಜೀವನಾಂಶವನ್ನು ಏರ್ಪಡಿಸಿ, ಹಲವಾರು ಹೆಂಡತಿಯರನ್ನೂ ಗೊತ್ತುಮಾಡಿಕೊಟ್ಟನು.


ಮೊದಲೇ ಆಣೆಯಿಟ್ಟು ಹೇಳಿದಂತೆ ಅವರು ಎಲ್ಲಿಗೆ ಹೋದರೂ ಸರ್ವೇಶ್ವರನ ಕೈ ಅವರಿಗೆ ವಿರೋಧವಾಗಿಯೇ ಇತ್ತು. ಅವರಿಗೆ ಬಹಳ ದುಃಖ ಉಂಟಾಯಿತು.


ಸೊಲೊಮೋನನ ಮಗ ರೆಹಬ್ಬಾಮನು ಜುದೇಯದ ಅರಸನಾದನು. ಅವನು ಪಟ್ಟಕ್ಕೆ ಬಂದಾಗ ಅವನಿಗೆ ನಾಲ್ವತ್ತೊಂದು ವರ್ಷ ವಯಸ್ಸು. ಸರ್ವೆಶ್ವರ ತಮ್ಮ ಹೆಸರನ್ನು ನೆಲೆಗೊಳಿಸುವುದಕ್ಕಾಗಿ, ಇಸ್ರಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಜೆರುಸಲೇಮ್ ಪಟ್ಟಣದಲ್ಲಿ ಅವನು ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆ ಅವನ ತಾಯಿ.


ಅಂದಿನಿಂದ ಅವರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನ ಆಲಯವನ್ನು ನಿರಾಕರಿಸಿ, ಅಶೇರ ಸ್ತಂಭಗಳನ್ನೂ ವಿಗ್ರಹಗಳನ್ನೂ ಪೂಜಿಸ ತೊಡಗಿದರು. ಅವರ ಈ ಅಪರಾಧದಿಂದ ಜುದೇಯದ ಮೇಲೂ ಜೆರುಸಲೇಮಿನ ಮೇಲೂ ದೈವಕೋಪ ಎರಗಿತು.


ಎಲೈ ಪಾಪಿಷ್ಠ ಜನವೇ, ದೋಷಭರಿತ ಪ್ರಜೆಯೇ, ದುಷ್ಟಪೀಳಿಗೆಯೇ, ಭ್ರಷ್ಟಸಂತಾನವೇ, ನಿಮ್ಮ ಗತಿಯನ್ನು ಏನೆಂದು ಹೇಳಲಿ. ನೀವು ಸರ್ವೇಶ್ವರನನ್ನು ತೊರೆದಿದ್ದೀರಿ. ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಧಿಕ್ಕರಿಸಿದ್ದೀರಿ. ಅವರಿಗೆ ಬೆನ್ನುಮಾಡಿ ಬೇರೆಯಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು