Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 12:10 - ಕನ್ನಡ ಸತ್ಯವೇದವು C.L. Bible (BSI)

10 ಅರಸ ರೆಹಬ್ಬಾಮನು ಅವುಗಳಿಗೆ ಬದಲಾಗಿ ಕಂಚಿನ ಗುರಾಣಿಗಳನ್ನು ಮಾಡಿಸಿ, ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳವಾಯಿಗಳಿಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳಪತಿಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳವಾಯಿಗಳಿಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ರೆಹಬ್ಬಾಮನು ಬಂಗಾರದ ಗುರಾಣಿಗಳ ಬದಲಾಗಿ ಕಂಚಿನ ಗುರಾಣಿಗಳನ್ನು ಮಾಡಿಸಿ ರಾಜನ ಅರಮನೆಯನ್ನು ಕಾಯುವ ಕಾವಲುಗಾರರ ವಶಕ್ಕೆ ಅವುಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದಕಾರಣ ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ಕಂಚಿನ ಗುರಾಣಿಗಳನ್ನು ಮಾಡಿಸಿ, ಅವುಗಳನ್ನು ಅರಮನೆಯ ಪ್ರವೇಶದ್ವಾರದ ಕರ್ತವ್ಯದಲ್ಲಿದ್ದ ಕಾವಲುಗಾರರ ಅಧಿಪತಿಗಳ ಕೈಯಲ್ಲಿ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 12:10
9 ತಿಳಿವುಗಳ ಹೋಲಿಕೆ  

ಅಕಟಕಟಾ! ಎಷ್ಟು ಮಸುಕಾಗಿದೆ ಬಂಗಾರ ಎಷ್ಟು ಕಾಂತಿಹೀನವಾಗಿಬಿಟ್ಟಿವೆ ಅಪ್ಪಟ ಚಿನ್ನ! ಪವಿತ್ರಾಲಯದ ಕಲ್ಲುಗಳೂ ಬಿದ್ದಿವೆ ಚೆಲ್ಲಾಪಿಲ್ಲಿಯಾಗಿ ಬೀದಿಬೀದಿಗಳ ಬದಿಯಲ್ಲಿ ರಾಶಿರಾಶಿಯಾಗಿ!


ಇವನು ‘ಮೂವತ್ತು ಪ್ರಮುಖ ವೀರರ’ ಪಡೆಯಲ್ಲಿ ಪ್ರಸಿದ್ಧನಾಗಿದ್ದನೇ ಹೊರತು, ‘ಮೂವರು ಪ್ರಮುಖ ವೀರರ’ ಪಡೆಯವರಷ್ಟು ಪ್ರಖ್ಯಾತನಾಗಲಿಲ್ಲ. ಅವನನ್ನು ದಾವೀದನು ತನ್ನ ಕಾವಲುಗಾರರಲ್ಲಿ ಮುಖ್ಯಸ್ಥನನ್ನಾಗಿ ಇಟ್ಟುಕೊಂಡಿದ್ದನು.


ಅರಸ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳವಾಯಿಗಳಿಗೆ ಒಪ್ಪಿಸಿದ್ದನು.


ಮೂವತ್ತು ಮಂದಿಯಲ್ಲಿ ಇವನು ವಿಶೇಷ ಕೀರ್ತಿಯನ್ನು ಹೊಂದಿದ್ದರೂ ಮೊದಲಿನ ಮೂವರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ನೇಮಿಸಿದ್ದನು.


ಯೆಹೋಯಾದಾವನ ಮಗ ಬೆನಾಯನು ‘ಕೆರೇತ್ಯ’, ‘ಪೆಲೇತ್ಯ,’ ಎಂಬ ಕಾವಲುದಂಡುಗಳ ಮುಖ್ಯಸ್ಥನಾಗಿದ್ದನು. ದಾವೀದನ ಮಕ್ಕಳೂ ಯಾಜಕರಾಗಿದ್ದರು.


ಅರಸ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು; ಪ್ರತಿಯೊಂದು ಗುರಾಣಿಗೆ ಸುಮಾರು ಏಳು ಕಿಲೋಗ್ರಾಂ ಬಂಗಾರ ಹಿಡಿಯಿತು.


ಹೀಗೆ ಜೆರುಸಲೇಮಿಗೆ ವಿರೋಧವಾಗಿ ಬಂದ ಈಜಿಪ್ಟಿನ ರಾಜ ಶೀಶಕನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಎಲ್ಲ ದ್ರವ್ಯವನ್ನೂ ಸೊಲೊಮೋನನು ಮಾಡಿಸಿದ್ದ ಬಂಗಾರದ ಗುರಾಣಿಗಳನ್ನೂ ದೋಚಿಕೊಂಡು ಹೋದನು.


ಅರಸನು ಸರ್ವೇಶ್ವರನ ಆಲಯಕ್ಕೆ ಹೋಗುವಾಗಲೆಲ್ಲಾ ಮೈಗಾವಲಿನವರು ಅವುಗಳನ್ನು ಹಿಡಿದುಕೊಂಡು ಹೋಗುತ್ತಿದ್ದರು; ಅಲ್ಲಿಂದ ಹಿಂದಕ್ಕೆ ಬಂದ ಮೇಲೆ ಅವುಗಳನ್ನು ತಮ್ಮ ಕೋಣೆಯಲ್ಲಿ ಇಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು