2 ಪೂರ್ವಕಾಲ ವೃತ್ತಾಂತ 12:13 - ಕನ್ನಡ ಸತ್ಯವೇದವು C.L. Bible (BSI)13 ಅರಸ ರೆಹಬ್ಬಾಮನು ಜೆರುಸಲೇಮಿನಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಪಟ್ಟಕ್ಕೆ ಬಂದದ್ದು ತನ್ನ ನಲವತ್ತೊಂದನೆಯ ವರ್ಷದಲ್ಲಿ. ಸರ್ವೇಶ್ವರ ಎಲ್ಲಾ ಕುಲಪ್ರಾಂತ್ಯಗಳಿಂದ ತಮ್ಮ ಹೆಸರಿಗಾಗಿ ಆರಿಸಿಕೊಂಡ ಜೆರುಸಲೇಮಿನಲ್ಲಿ ಅವನು ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆ ಅವನ ತಾಯಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಆಳುವವನಾದನು. ಅವನು ತನ್ನ ನಲ್ವತ್ತೊಂದನೆಯ ವರ್ಷ ತುಂಬಿದ ಮೇಲೆ ಪಟ್ಟಕ್ಕೆ ಬಂದು ಯೆಹೋವನು ತನ್ನ ಹೆಸರಿಗೋಸ್ಕರ ಇಸ್ರಾಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅರಸನಾದ ರೆಹಬ್ಬಾಮನು ಯೆರೂಸಲೇವಿುನಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಆಳುವವನಾದನು. ಅವನು ತನ್ನ ನಾಲ್ವತ್ತೊಂದನೆಯ ವರುಷ ತುಂಬಿದ ಮೇಲೆ ಪಟ್ಟಕ್ಕೆ ಬಂದು ಯೆಹೋವನು ತನ್ನ ಹೆಸರಿಗೋಸ್ಕರ ಇಸ್ರಾಯೇಲ್ಯರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇವಿುನಲ್ಲಿ ಹದಿನೇಳು ವರುಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ರಾಜನಾದ ರೆಹಬ್ಬಾಮನು ತನ್ನ ರಾಜ್ಯವನ್ನು ಸ್ಥಿರಪಡಿಸಿಕೊಂಡು ಬಲಗೊಂಡನು. ಅವನು ಪಟ್ಟಕ್ಕೆ ಬಂದಾಗ ನಲವತ್ತೊಂದು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಹದಿನೇಳು ವರ್ಷ ಆಳಿದನು. ಯೆಹೋವನು ತಾನೇ ತನ್ನ ಹೆಸರನ್ನು ಸ್ಥಾಪಿಸುವದಕ್ಕೋಸ್ಕರ ಇಸ್ರೇಲಿನ ಎಲ್ಲಾ ಕುಲಗಳಲ್ಲಿ ಜೆರುಸಲೇಮನ್ನು ಆರಿಸಿಕೊಂಡಿದ್ದನು. ರೆಹಬ್ಬಾಮನ ತಾಯಿಯ ಹೆಸರು ನಯಮಾ. ಆಕೆ ಅಮ್ಮೋನ್ ದೇಶದವಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನನ್ನು ಬಲಪಡಿಸಿಕೊಂಡು ರಾಜ್ಯವನ್ನು ಆಳಿದನು. ರೆಹಬ್ಬಾಮನು ಆಳಲು ಆರಂಭಿಸಿದಾಗ, ನಲವತ್ತೊಂದು ವರ್ಷದವನಾಗಿದ್ದು, ಅಲ್ಲಿ ಯೆಹೋವ ದೇವರು ತಮ್ಮ ಹೆಸರಿಗೋಸ್ಕರ ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಆಯ್ದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ಅವನ ತಾಯಿಯ ಹೆಸರು ನಯಮಾ. ಅಧ್ಯಾಯವನ್ನು ನೋಡಿ |