Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 12:3 - ಕನ್ನಡ ಸತ್ಯವೇದವು C.L. Bible (BSI)

3 ಈಜಿಪ್ಟಿನ ಅರಸ ಶೀಶಕನು, ಸಾವಿರದ ಇನ್ನೂರು ರಥಗಳನ್ನೂ ಅರವತ್ತು ಸಾವಿರ ಮಂದಿ ರಾಹುತರನ್ನೂ ಈಜಿಪ್ಟಿನ, ಲಿಬ್ಯದ, ಸುಕ್ಕೀಯದ ಹಾಗೂ ಕೂಷ್ಯದ ಅಸಂಖ್ಯ ಸೈನಿಕರನ್ನೂ ಕೂಡಿಸಿಕೊಂಡು ಜೆರುಸಲೇಮಿಗೆ ಹೊರಟುಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸಾವಿರದ ಇನ್ನೂರು ರಥಗಳನ್ನೂ, ಅರುವತ್ತು ಸಾವಿರ ಮಂದಿ ರಾಹುತರನ್ನೂ, ಐಗುಪ್ತದಿಂದ ಅಸಂಖ್ಯರಾದ ಲೂಬ್ಯ, ಸುಕ್ಕೀಯ, ಕೂಷ್ಯ ಸೈನಿಕರನ್ನೂ ಕೂಡಿಸಿಕೊಂಡು ಯೆರೂಸಲೇಮಿಗೆ ವಿರುದ್ಧವಾಗಿ ಹೊರಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಐಗುಪ್ತದ ಅರಸನಾದ ಶೀಶಕನು ಸಾವಿರದ ಇನ್ನೂರು ರಥಗಳನ್ನೂ ಅರುವತ್ತು ಸಾವಿರ ಮಂದಿ ರಾಹುತರನ್ನೂ ಐಗುಪ್ತದ ಅಸಂಖ್ಯರಾದ ಲೂಬ್ಯ ಸುಕ್ಕೀಯ ಕೂಷ್ಯ ಸೈನಿಕರನ್ನೂ ಕೂಡಿಸಿಕೊಂಡು ಯೆರೂಸಲೇವಿುಗೆ ವಿರೋಧವಾಗಿ ಹೊರಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಶೀಶಕನ ಬಳಿಯಲ್ಲಿ ಹನ್ನೆರಡು ಸಾವಿರ ರಥಗಳು, ಅರವತ್ತುಸಾವಿರ ರಾಹುತರು ಮತ್ತು ಲೆಕ್ಕಿಸಲಾರದಷ್ಟು ಸೈನಿಕರು ಇದ್ದರು. ಅವನ ಆ ದೊಡ್ಡ ಸೈನ್ಯದಲ್ಲಿ ಲಿಬ್ಯ, ಇಥಿಯೋಪ್ಯ ಮತ್ತು ಸುಕ್ಕೀಯ ದೇಶದ ಸಿಪಾಯಿಗಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನ ಸಂಗಡ ಸಾವಿರದ ಇನ್ನೂರು ರಥಗಳೂ, ಅರವತ್ತು ಸಾವಿರ ರಾಹುತರೂ ಇದ್ದರು. ಇದಲ್ಲದೆ ತನ್ನ ಸಂಗಡ ಈಜಿಪ್ಟಿನಿಂದ ಬಂದ ಲಿಬಿಯದವರೂ, ಸುಕ್ಕೀಯರೂ, ಕೂಷ್ಯರೂ ಲೆಕ್ಕವಿಲ್ಲದಷ್ಟು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 12:3
15 ತಿಳಿವುಗಳ ಹೋಲಿಕೆ  

ಸುಡಾನ್ ಮತ್ತು ಈಜಿಪ್ಟ್ ಅದಕ್ಕೆ ಬೆಂಬಲವಾಗಿದ್ದವು. ಪೂಟ್ ಮತ್ತು ಲಿಬ್ನ ಅದಕ್ಕೆ ಮಿತ್ರನಾಡುಗಳಾಗಿದ್ದವು


ಸುದಾನ್ ಹಾಗೂ ಲಿಬಿಯರ ಸೈನ್ಯ ಅಪರಿಮಿತ ರಥಾಶ್ವಬಲಗಳುಳ್ಳ ಮಹಾ ಸೈನ್ಯವಲ್ಲವೇ? ನೀವು ಸರ್ವೇಶ್ವರನನ್ನು ಆಶ್ರಯಿಸಿಕೊಂಡದ್ದರಿಂದ ಅವರು ಅದನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟರು.


ಬೆಳ್ಳಿಬಂಗಾರಗಳ ನಿಧಿನಿಕ್ಷೇಪಗಳನ್ನು ಹಾಗು ಈಜಿಪ್ಟಿನ ಒಳ್ಳೊಳ್ಳೆಯ ವಸ್ತುಗಳೆಲ್ಲವನ್ನು ವಶಮಾಡಿಕೊಳ್ಳುವನು. ಲಿಬ್ಯ ಮತ್ತು ಸುಡಾನಿನವರು ಅವನನ್ನು ಹಿಂಬಾಲಿಸುವರು.


ಕುದುರೆ ಸೈನ್ಯದ ಸಂಖ್ಯೆ ಇಪ್ಪತ್ತು ಕೋಟಿ ಎಂದು ಹೇಳಿದುದು ನನಗೆ ಕೇಳಿಸಿತು.


“ಸುಡಾನರು, ಲೀಡಿಯರು, ಲೂದ್ಯರು, ಬಗೆಬಗೆಯ ಸಕಲವಿದೇಶೀಯರು, ಕೂಬ್ಯರು, ಮಿತ್ರರಾಜ್ಯದವರು ಇವರೆಲ್ಲ ಈಜಿಪ್ಟಿನವರೊಂದಿಗೆ ಖಡ್ಗದಿಂದ ಹತರಾಗುವರು.”


ನಿನ್ನ ದೇವರಾದ ಸರ್ವೇಶ್ವರ ನಾನು, ಇಸ್ರಯೇಲರ ಪರಮಪಾವನ ಸ್ವಾಮಿ, ನಿನ್ನ ರಕ್ಷಕ ನಾನು. ಈಡುಮಾಡಿದ್ದೇನೆ ಈಜಿಪ್ಟನ್ನು ನಿನ್ನ ವಿಮೋಚನೆಗಾಗಿ ಕೊಟ್ಟಿದ್ದೇನೆ ಸುಡಾನ್ ಸೆಬಾ ನಾಡುಗಳನ್ನು ನಿನಗೆ ಈಡಾಗಿ.


ಸರ್ವೇಶ್ವರ ಅರಸನಿಂದಲೂ ಯೆಹೂದ್ಯರಿಂದಲೂ ಸುಡಾನರಿಗೆ ಅಪಜಯ ಉಂಟಾಗುವಂತೆ ಮಾಡಿದರು.


ಸುಡಾನಿನ ಜೆರಹನು ಹತ್ತು ಲಕ್ಷ ಸೈನ್ಯವನ್ನೂ ಮುನ್ನೂರು ರಥಗಳನ್ನೂ ತೆಗೆದುಕೊಂಡು ಇಸ್ರಯೇಲರಿಗೆ ವಿರುದ್ಧ ಯುದ್ಧಕ್ಕೆ ಹೊರಟು ಮಾರೇಷಕ್ಕೆ ಬಂದನು.


ಆದರೆ ಇಸ್ರಯೇಲರ ಮುಂದೆ ಸೋತು ಓಡಿಹೋದರು; ದಾವೀದನು ಸಿರಿಯಾದವರ ಏಳುನೂರು ರಥಗಳನ್ನು ಹಾಳುಮಾಡಿದನು. ನಾಲ್ವತ್ತು ಸಾವಿರ ಮಂದಿ ರಾಹುತರನ್ನು ಕೊಂದನು. ಸೇನಾಪತಿಯಾದ ಶೋಬಕನು ಗಾಯಗೊಂಡು ಅಲ್ಲೇ ಸತ್ತನು.


ಆಗ ಫಿಲಿಷ್ಟಿಯರು ಇಸ್ರಯೇಲರೊಡನೆ ಯುದ್ಧಮಾಡುವುದಕ್ಕಾಗಿ ಮೂವತ್ತು ಸಾವಿರ ರಥಬಲವನ್ನು, ಆರು ಸಾವಿರ ಅಶ್ವಬಲವನ್ನು ಹಾಗು ಸಮುದ್ರದ ಮರಳಿನಂತೆ ಅಸಂಖ್ಯವಾದ ಕಾಲಾಳುಗಳನ್ನು ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯ ಮಾಡಿಕೊಂಡರು.


ಆ ಶತ್ರುಗಳು ತಮ್ಮ ಕುರಿದನ ಗುಡಾರಗಳ ಸಮೇತ ಮಿಡತೆಗಳಂತೆ ಗುಂಪು ಗುಂಪಾಗಿ ಬರುತ್ತಿದ್ದರು. ಅವರ ಒಂಟೆಗಳೂ ಅಸಂಖ್ಯವಾಗಿದ್ದವು. ಆ ಗುಂಪುಗಳಿಂದ ನಾಡೆಲ್ಲ ನಾಶವಾಗುತ್ತಿತ್ತು.


ಅವನು ತನ್ನ ಒಂಬೈನೂರು ಕಬ್ಬಿಣದ ರಥಗಳನ್ನೂ ಎಲ್ಲಾ ಸೈನ್ಯವನ್ನೂ ತೆಗೆದುಕೊಂಡು ಮ್ಲೇಚ್ಛರ ಹರೋಷೆತಿನಿಂದ ಕೀಷೋನ್ ಹಳ್ಳಕ್ಕೆ ಬಂದನು.


ಸರ್ವೇಶ್ವರ ಸಿರಿಯಾದ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯಘೋಷವು ಕೇಳಿಸುವಂತೆ ಮಾಡಿದ್ದರು. ಆದ್ದರಿಂದ ಅವರು, “ಇಸ್ರಯೇಲರ ಅರಸನು ಹಿತ್ತಿಯ ಹಾಗು ಈಜಿಪ್ಟ್ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರುದ್ಧ ಕರೆದುತಂದಿದ್ದಾನೆ,” ಎಂದುಕೊಂಡು,


ಆಸನಿಗೆ ಸೈನ್ಯವಿತ್ತು; ಅದರಲ್ಲಿ ಗುರಾಣಿ ಬರ್ಜಿಗಳನ್ನು ಹಿಡಿದ ಮೂರು ಲಕ್ಷ ಮಂದಿ ಯೆಹೂದ್ಯರಿದ್ದರು. ಖೇಡ್ಯ ಹಿಡಿದವರೂ ಬಿಲ್ಲುಗಾರರೂ ಆದ ಎರಡು ಲಕ್ಷದ ಎಂಬತ್ತು ಸಾವಿರ ಮಂದಿ ಬೆನ್ಯಾಮೀನ್ಯರೂ ಇದ್ದರು. ಇವರೆಲ್ಲರು ರಣವೀರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು