Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 12:4 - ಕನ್ನಡ ಸತ್ಯವೇದವು C.L. Bible (BSI)

4 ಜುದೇಯ ನಾಡಿನ ಕೋಟೆಕೊತ್ತಲುಗಳಿಂದ ಕೂಡಿದ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡ ನಂತರ ಜೆರುಸಲೇಮನ್ನು ಸಮೀಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೂದ ದೇಶದ ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡ ನಂತರ ಯೆರೂಸಲೇಮನ್ನು ಸಮೀಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೂದದೇಶದ ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನ ಮಾಡಿಕೊಂಡನಂತರ ಯೆರೂಸಲೇಮನ್ನು ಸಮೀಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಶೀಶಕನು ಯೆಹೂದ ಪ್ರಾಂತ್ಯದ ಪಟ್ಟಣಗಳನ್ನು ವಶಪಡಿಸಿಕೊಂಡು ಜೆರುಸಲೇಮಿನತ್ತ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನು ಯೆಹೂದಕ್ಕೆ ಇದ್ದ ಕೋಟೆಯುಳ್ಳ ಪಟ್ಟಣಗಳನ್ನು ಹಿಡಿದು ಯೆರೂಸಲೇಮಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 12:4
7 ತಿಳಿವುಗಳ ಹೋಲಿಕೆ  

ಆಕ್ರಮಣಕಾರರಿಗೆ ಕರೆ; ಸಿಯೋನೆಂಬ ದ್ರಾಕ್ಷಾತೋಟದ ಸಾಲುಗಿಡಗಳನ್ನು ಹಾಳುಮಾಡಿ. ಆದರೆ ಅದನ್ನು ನಿರ್ಮೂಲಮಾಡಬೇಡಿ. ಅದರ ರೆಂಬೆಗಳನ್ನು ಕಿತ್ತುಹಾಕಿ. ಅವು ಸರ್ವೇಶ್ವರನಾದ ನನಗೆ ಸೇರಿದವುಗಳಲ್ಲ.


ಅರಸ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ, ಅಸ್ಸೀರಿಯದ ಅರಸ ಸನ್ಹೇರೀಬನು ಬಂದು ಜುದೇಯ ಪ್ರಾಂತ್ಯದ ಸುಭದ್ರ ಪಟ್ಟಣಗಳನ್ನೆಲ್ಲಾ ಸ್ವಾಧೀನಮಾಡಿಕೊಂಡನು.


ಸಮಾರ್ಯವನ್ನೂ ಅದರ ವಿಗ್ರಹಗಳನ್ನೂ ನಾಶಮಾಡಿದ ಪ್ರಕಾರ ಜೆರುಸಲೇಮನ್ನೂ ಅದರ ಮೂರ್ತಿಗಳನ್ನೂ ನಾಶಮಾಡುತ್ತೇನೆ” ಎಂದು ಅಸ್ಸೀರಿಯ ಕೊಚ್ಚಿಕೊಳ್ಳುತ್ತಿದೆ.


ಹದ್ದುಮೀರಿ ಜುದೇಯದೆಲ್ಲೆಡೆ ನುಗ್ಗಿ ಹಳ್ಳಕೊಳ್ಳಗಳನ್ನು ತುಂಬುವುದು. ಕುತ್ತಿಗೆಯ ತನಕ ಉಕ್ಕಿಬಂದು ದಿಣ್ಣೆದಿಬ್ಬಗಳನ್ನು ಮುಳುಗಿಸುವುದು. ದೇವರು ನಮ್ಮೊಡನೆ (ಇಮ್ಮಾನುವೇಲ್) ಇರುವರು. ಅವರ ಬಿಚ್ಚುರೆಕ್ಕೆಗಳು ನಾಡಿನ ಉದ್ದಗಲವನ್ನೂ ಆವರಿಸುವುವು, ಇಡೀ ನಾಡಿಗೆ ಆಶ್ರಯ ನೀಡುವುವು.


ಅಸ್ಸೀರಿಯದ ಅರಸನು ಲಾಕೀಷಿನಿಂದ ಮಹಾ ಸೈನ್ಯಸಹಿತರಾದ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬವರನ್ನು ಜೆರುಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ದಿಣ್ಣೆ ಹತ್ತಿ ಜೆರುಸಲೇಮಿಗೆ ಬಂದು, ಅಗಸರ ಹೊಲದ ಮೇಲೆ ಹಾದುಹೋಗುವ ರಾಜಮಾರ್ಗದ ಹತ್ತಿರವಿರುವ, ಕೆರೆಯ ಕಾಲುವೆಯ ಬಳಿ, ಪಾಳೆಯ ಮಾಡಿಕೊಂಡು ಅರಸನನ್ನು ಕೂಗಿ ಕರೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು