Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 12:7 - ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರ ಇದನ್ನು ನೋಡಿ ಶೆಮಾಯನಿಗೆ, “ಇವರು ತಮ್ಮನ್ನೇ ತಗ್ಗಿಸಿಕೊಂಡದ್ದರಿಂದ ಇವರನ್ನು ಸಂಹರಿಸುವುದಿಲ್ಲ; ಸ್ವಲ್ಪಕಾಲದಲ್ಲೇ ಇವರಿಗೆ ರಕ್ಷಣೆಯನ್ನು ಅನುಗ್ರಹಿಸುವೆನು; ಶೀಶಕನ ಮುಖಾಂತರ ನನ್ನ ರೌದ್ರವನ್ನು ಜೆರುಸಲೇಮಿನ ಮೇಲೆ ಸುರಿದುಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನ ವಾಕ್ಯವು ಶೆಮಾಯನಿಗೆ, “ಇವರು ತಮ್ಮನ್ನು ತಗ್ಗಿಸಿಕೊಂಡಿದ್ದರಿಂದ ಇವರನ್ನು ಸಂಹರಿಸುವುದಿಲ್ಲ; ಸ್ವಲ್ಪ ಕಾಲದಲ್ಲಿಯೇ ಇವರಿಗೆ ರಕ್ಷಣೆಯನ್ನು ಅನುಗ್ರಹಿಸುವೆನು; ಶೀಶಕನ ಮುಖಾಂತರವಾಗಿ ನನ್ನ ರೌದ್ರವನ್ನು ಯೆರೂಸಲೇಮಿನ ಮೇಲೆ ಸುರಿದು ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನು ಇದನ್ನು ನೋಡಿ ಶೆಮಾಯನಿಗೆ - ಇವರು ತಮ್ಮನ್ನು ತಗ್ಗಿಸಿಕೊಂಡದ್ದರಿಂದ ಇವರನ್ನು ಸಂಹರಿಸುವದಿಲ್ಲ; ಸ್ವಲ್ಪ ಕಾಲದಲ್ಲಿಯೇ ಇವರಿಗೆ ರಕ್ಷಣೆಯನ್ನು ಅನುಗ್ರಹಿಸುವೆನು; ಶೀಶಕನ ಮುಖಾಂತರವಾಗಿ ನನ್ನ ರೌದ್ರವನ್ನು ಯೆರೂಸಲೇವಿುನ ಮೇಲೆ ಸುರಿದುಬಿಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅರಸನೂ ಯೆಹೂದದ ನಾಯಕರೂ ತನ್ನೆದುರಿನಲ್ಲಿ ತಗ್ಗಿಸಿಕೊಂಡದ್ದನ್ನು ಯೆಹೋವನು ನೋಡಿ ಶೆಮಾಯನ ಮೂಲಕ ಈ ಸಂದೇಶವನ್ನು ಕಳುಹಿಸಿದನು. “ಅರಸನೂ ನಾಯಕರೂ ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವರನ್ನು ನಾಶಪಡಿಸದೆ ಬೇಗನೆ ರಕ್ಷಿಸುವೆನು. ಜೆರುಸಲೇಮಿನ ಮೇಲೆ ನನ್ನ ಕೋಪವು ಸುರಿಯುವಂತೆ ನಾನು ಶೀಶಕನನ್ನು ಉಪಯೋಗಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ತಮ್ಮನ್ನು ತಗ್ಗಿಸಿಕೊಂಡದ್ದನ್ನು ಯೆಹೋವ ದೇವರು ನೋಡಿದಾಗ, ಯೆಹೋವ ದೇವರ ವಾಕ್ಯವು ಶೆಮಾಯನಿಗೆ ಉಂಟಾಗಿ, “ಅವರು ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವರನ್ನು ನಾಶಮಾಡದೆ, ಅವರು ತಪ್ಪಿಸಿಕೊಳ್ಳುವಂತೆ ಮಾಡುವೆನು. ಶೀಶಕನ ಮುಖಾಂತರ ನನ್ನ ಕೋಪವನ್ನು ಯೆರೂಸಲೇಮಿನ ಮೇಲೆ ಸುರಿದುಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 12:7
21 ತಿಳಿವುಗಳ ಹೋಲಿಕೆ  

ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಾರತಿ ಎತ್ತಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದಾರೆ; ನನ್ನ ಕೋಪಾಗ್ನಿ ಈ ನಾಡಿನ ಮೇಲೆ ಉರಿಯುತ್ತಿರುವುದು ಆರಿಹೋಗುವುದಿಲ್ಲ,” ಎನ್ನುತ್ತಾರೆ.


ಎಂದೇ ಸುರಿಸಿದನಾತ ರೋಷಾಗ್ನಿಯನು, ಯುದ್ಧದ ರೌದ್ರವನು ಅವರ ಮೇಲೆಲ್ಲ; ಸುತ್ತಲು ಉರಿ ಹತ್ತಿದರೂ ಅವರು ಅರಿಯಲಿಲ್ಲ, ದಹಿಸಿದರೂ ಅವರು ಕಲಿಯಲಿಲ್ಲ.


ಅಂಥವನು ದೇವರ ಕೋಪಾಗ್ನಿಯೆಂಬ ಪಾತ್ರೆಯಲ್ಲಿ ದೇವರ ಅಪ್ಪಟ ರೋಷವೆಂಬ ಮದ್ಯವನ್ನು ಕುಡಿಯಬೇಕಾಗುತ್ತದೆ. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯ ಮುಂದೆಯೂ ಅಂಥವನು ಬೆಂಕಿಯಲ್ಲೂ ಗಂಧಕದಲ್ಲೂ ಬೆಂದು ನರಳುವನು.


“ಸರ್ವೇಶ್ವರನಾದ ನಾನು ಹೇಳುವುದನ್ನು ಗಮನಿಸಿರಿ; ಇಗೋ, ನನ್ನ ಕೋಪವೆಂಬ ರೋಷಾಗ್ನಿಯನ್ನು ಈ ಸ್ಥಳದ ಮೇಲೆ ಸುರಿಸುವೆನು. ನರಮಾನವರ ಮೇಲೂ ಪಶುಪ್ರಾಣಿಗಳ ಮೇಲೂ ಕಾಡುಮರಗಳ ಮೇಲೂ ಭೂಮಿಯ ಬೆಳೆಯ ಮೇಲೂ ಅದನ್ನು ಕಾರುವೆನು. ಅದು ಆರದೆ ದಹಿಸುವುದು!”


ನೀನು ನಿನ್ನ ತಪ್ಪನ್ನು ಮಾತ್ರ ಒಪ್ಪಿಕೊ. ಕಂಡ ಕಡೆಯೆಲ್ಲ ಅಲೆದಾಡಿ, ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೆ ಅನ್ಯದೇವರುಗಳನ್ನು ಸೇರಿ, ನನ್ನ ಮಾತುಗಳನ್ನು ಕೇಳದೆ, ನಿನ್ನ ದೇವರಾದ ಸರ್ವೇಶ್ವರ ಎಂಬ ನನಗೇ ದ್ರೋಹಮಾಡಿರುವೆ ಎಂಬುದನ್ನು ಒಪ್ಪಿಕೊ.


ಸುರಿ ರೌದ್ರವನು ನಿನ್ನನರಿಯದಾ ಮ್ಲೇಚ್ಛರ ಮೇಲೆ I ನಿನ್ನ ಶ್ರೀನಾಮವನು ಉಚ್ಚರಿಸದಾ ರಾಜ್ಯಗಳ ಮೇಲೆ II


ಆದರೂ ಕ್ಷಮಿಸಿದನವರನು ಆ ದಯಾಳು, ನಾಶಮಾಡದೆ I ಕೋಪವ ತಾಳಿಕೊಂಡನು ಹಲವು ವೇಳೆ, ಉದ್ರೇಕಗೊಳ್ಳದೆ II


“ನಮ್ಮ ಪೂರ್ವಜರು ಈ ಗ್ರಂಥದಲ್ಲಿ ಬರೆದಿರುವ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ಕೈಗೊಳ್ಳದೆ ಹೋದುದರಿಂದಲೇ ಸರ್ವೇಶ್ವರ ತಮ್ಮ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾರೆ. ಆದುದರಿಂದ ನೀವು ನನ್ನ ಪರವಾಗಿ, ಹಾಗು ಇಸ್ರಯೇಲರಲ್ಲಿ ಮತ್ತು ಯೆಹೂದ್ಯರಲ್ಲಿ ಉಳಿದಿರುವವರ ಪರವಾಗಿ ಸರ್ವೇಶ್ವರನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಬಗ್ಗೆ ವಿಚಾರಿಸಿರಿ,” ಎಂದು ಆಜ್ಞಾಪಿಸಿದನು.


ಆದರೂ ಸರ್ವೇಶ್ವರ ಅವರನ್ನು ಸಂಪೂರ್ಣವಾಗಿ ಹಾಳುಮಾಡಗೊಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತಮ್ಮ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾವು ಅಬ್ರಹಾಮ್, ಇಸಾಕ್, ಯಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿ, ಅವರಿಗೆ ದಯೆತೋರಿಸಿದರು; ಕರುಳುಕರಗಿದವರಾಗಿ ಅವರಿಗೆ ಪ್ರಸನ್ನರಾದರು.


ರೆಹಬ್ಬಾಮನು ತನ್ನನ್ನು ತಗ್ಗಿಸಿಕೊಂಡದ್ದರಿಂದ ಹಾಗೂ ಯೆಹೂದ್ಯರಲ್ಲಿ ಕೆಲವು ಸುಲಕ್ಷಣಗಳು ತೋರುತ್ತಿದ್ದುದರಿಂದ ಸರ್ವೇಶ್ವರಸ್ವಾಮಿ ರೆಹಬ್ಬಾಮನ ಮೇಲಿದ್ದ ಕೋಪವನ್ನು ತೊರೆದುಬಿಟ್ಟರು; ಅವನನ್ನು ಪೂರ್ತಿಯಾಗಿ ಹಾಳುಮಾಡಲಿಲ್ಲ.


ಈ ನಾಡಿನ ಮತ್ತು ಇದರ ನಿವಾಸಿಗಳ ಬಗ್ಗೆ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡೆ; ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದೆ; ಆದ್ದರಿಂದ ನಿನ್ನನ್ನು ಲಕ್ಷಿಸಿದೆನು


ಆಗ ಹಿಜ್ಕೀಯನ ಗರ್ವ ಇಳಿಯಿತು; ಜೆರುಸಲೇಮಿನವರೊಡನೆ ಅವನು ದೀನಮನಸ್ಕನಾದನು. ಈ ಕಾರಣ ಅವನ ಜೀವಮಾನದಲ್ಲಿ ಸರ್ವೇಶ್ವರನ ಕೋಪ ಅವರ ಮೇಲೆ ಬರಲಿಲ್ಲ.


ಆದರೆ ಆ ಕಷ್ಟದಲ್ಲಿ ಮನಸ್ಸೆ ತನ್ನ ದೇವರಾದ ಸರ್ವೇಶ್ವರನ ಪ್ರಸನ್ನತೆಯನ್ನು ಬೇಡಿಕೊಂಡನು; ತನ್ನ ಪಿತೃಗಳ ದೇವರ ಮುಂದೆ ತನ್ನನ್ನೇ ಬಹಳವಾಗಿ ತಗ್ಗಿಸಿಕೊಂಡು ಅವರನ್ನು ಪ್ರಾರ್ಥಿಸಿದನು.


ಅವರು ಆಲಿಸಿ, ಅವನಿಗೆ ಸದುತ್ತರವನ್ನು ದಯಪಾಲಿಸಿದರು. ಅವನನ್ನು ಮರಳಿ ಜೆರುಸಲೇಮಿಗೆ ಬರಮಾಡಿ ಅರಸುತನವನ್ನು ಕೊಟ್ಟರು. ಆಗ ಸರ್ವೇಶ್ವರಸ್ವಾಮಿಯೇ ದೇವರು ಎಂಬುದು ಅವನಿಗೆ ಮನದಟ್ಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು