Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 12:9 - ಕನ್ನಡ ಸತ್ಯವೇದವು C.L. Bible (BSI)

9 ಹೀಗೆ ಜೆರುಸಲೇಮಿಗೆ ವಿರೋಧವಾಗಿ ಬಂದ ಈಜಿಪ್ಟಿನ ರಾಜ ಶೀಶಕನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಎಲ್ಲ ದ್ರವ್ಯವನ್ನೂ ಸೊಲೊಮೋನನು ಮಾಡಿಸಿದ್ದ ಬಂಗಾರದ ಗುರಾಣಿಗಳನ್ನೂ ದೋಚಿಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೀಗೆ ಯೆರೂಸಲೇಮಿಗೆ ವಿರೋಧವಾಗಿ ಬಂದು ಐಗುಪ್ತ್ಯ ರಾಜನಾದ ಶೀಶಕನು ಯೆಹೋವನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನೂ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತೆಗೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹೀಗೆ ಯೆರೂಸಲೇವಿುಗೆ ವಿರೋಧವಾಗಿ ಬಂದ ಐಗುಪ್ತ್ಯ ರಾಜನಾದ ಶೀಶಕನು ಯೆಹೋವನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನೂ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತೆಗೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಶೀಶಕನು ಜೆರುಸಲೇಮಿನೊಳಗೆ ನುಗ್ಗಿ ದೇವಾಲಯದಲ್ಲಿಟ್ಟಿದ್ದ ಭಂಡಾರಗಳನ್ನೆಲ್ಲಾ ಸೂರೆಮಾಡಿದನು. ರಾಜನ ಅರಮನೆಯದಲ್ಲಿದ್ದ ವಸ್ತುಗಳನ್ನೂ ಸೊಲೊಮೋನನು ಮಾಡಿಸಿದ್ದ ಬಂಗಾರದ ಗುರಾಣಿಗಳನ್ನೂ ಸೂರೆಮಾಡಿ ತನ್ನ ದೇಶಕ್ಕೆ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈಜಿಪ್ಟಿನ ಅರಸನಾದ ಶೀಶಕನು ಯೆರೂಸಲೇಮಿನ ಮೇಲೆ ದಾಳಿಮಾಡಿ ಯೆಹೋವ ದೇವರ ಆಲಯ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ದೋಚಿಕೊಂಡನು, ಇದಲ್ಲದೆ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ಒಳಗೊಂಡಂತೆ ಅವನು ಸಮಸ್ತವನ್ನೂ ದೋಚಿಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 12:9
8 ತಿಳಿವುಗಳ ಹೋಲಿಕೆ  

ಇದಲ್ಲದೆ ಆಹಾಜನು ಸರ್ವೇಶ್ವರನ ಆಲಯದಲ್ಲೂ ಅರಮನೆಯ ಭಂಡಾರದಲ್ಲೂ ಇದ್ದ ಬೆಳ್ಳಿ ಬಂಗಾರವನ್ನು ತೆಗೆದುಕೊಂಡು ಅಸ್ಸೀರಿಯಾದ ಅರಸನಿಗೆ ಕಪ್ಪವಾಗಿ ಕಳುಹಿಸಿದನು.


ದೋಚಿಕೊಂಡನು ದ್ರೋಹಿ ಆಕೆಯ ಆಸ್ತಿಯನ್ನು ಕೈಚಾಚಿ. 'ಸೇರಿಸಬಾರದು ಸಭೆಗೆ ಮ್ಲೇಚ್ಛರನ್ನು’ ಎಂಬುದು ದೇವನ ಆಣತಿ. ಆದರಿಗೋ ಅಂಥವರೇ ಪವಿತ್ರಾಲಯ ಪ್ರವೇಶಿಸುವ ದುರ್ಗತಿ !


ಆಗ ಆಸನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಉಳಿದಿದ್ದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅದನ್ನು ದೂತರ ಮುಖಾಂತರ ದಮಸ್ಕದಲ್ಲಿದ್ದ ಸಿರಿಯಾದವರ ಅರಸನೂ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆದ ಬೆನ್ಹದದನಿಗೆ ಕೊಟ್ಟು ಕಳುಹಿಸಿದನು.


ಅರಸ ರೆಹಬ್ಬಾಮನು ಅವುಗಳಿಗೆ ಬದಲಾಗಿ ಕಂಚಿನ ಗುರಾಣಿಗಳನ್ನು ಮಾಡಿಸಿ, ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳವಾಯಿಗಳಿಗೆ ಒಪ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು