2 ಪೂರ್ವಕಾಲ ವೃತ್ತಾಂತ 13:10 - ಕನ್ನಡ ಸತ್ಯವೇದವು C.L. Bible (BSI)10 ನಮಗಾದರೋ ಸರ್ವೇಶ್ವರನೊಬ್ಬನೇ ದೇವರು; ನಾವು ಅವರನ್ನು ಬಿಡಲಿಲ್ಲ. ಸರ್ವೇಶ್ವರನ ಆರಾಧನೆ ನಡೆಸಲು ಆರೋನನ ಸಂತಾನದವರಾದ ಯಾಜಕರು ಹಾಗೂ ತಮಗೆ ನೇಮಕವಾದ ಕೆಲಸದಲ್ಲಿ ನಿರತರಾದ ಲೇವಿಯರು ನಮಗಿರುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಮಗಾದರೋ ಯೆಹೋವನು ದೇವರಾಗಿರುತ್ತಾನೆ; ನಾವು ಆತನನ್ನು ಬಿಡಲಿಲ್ಲ. ಯೆಹೋವನ ಆರಾಧನೆ ನಡೆಸಲು ಆರೋನನ ಸಂತಾನದವರಾದ ಯಾಜಕರೂ, ತಮಗೆ ನೇಮಕವಾದ ಕೆಲಸದಲ್ಲಿ ನಿರತರಾದ ಲೇವಿಯರೂ ನಮಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಮಗಾದರೋ ಯೆಹೋವನು ದೇವರಾಗಿರುತ್ತಾನೆ; ನಾವು ಆತನನ್ನು ಬಿಡಲಿಲ್ಲ. ಯೆಹೋವನ ಆರಾಧನೆ ನಡಿಸುವ ಆರೋನನ ಸಂತಾನದವರಾದ ಯಾಜಕರೂ ತಮಗೆ ನೇಮಕವಾದ ಕೆಲಸದಲ್ಲಿ ನಿರತರಾದ ಲೇವಿಯರೂ ನಮಗಿರುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ನಮಗಾದರೋ ಯೆಹೋವನೇ ದೇವರು. ಯೆಹೂದ್ಯ ಪ್ರಾಂತ್ಯದವರಾದ ನಾವು ದೇವರ ಕಟ್ಟಳೆಗೆ ವಿಧೇಯರಾಗಲು ನಿರಾಕರಿಸಲಿಲ್ಲ. ನಾವು ಆತನನ್ನು ತೊರೆಯಲಿಲ್ಲ. ಆತನ ಸೇವೆಮಾಡಲು ಲೇವಿಯರು ಮತ್ತು ಆರೋನನ ಸಂತತಿಯವರಾದ ಯಾಜಕರು ಸಹಾಯ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ನಮಗಾದರೋ ಯೆಹೋವ ದೇವರು ದೇವರಾಗಿದ್ದಾರೆ. ನಾವು ಅವರನ್ನು ಬಿಡಲಿಲ್ಲ. ಇದಲ್ಲದೆ ಯೆಹೋವ ದೇವರಿಗೆ ಸೇವೆ ಮಾಡುವ ಯಾಜಕರು ಆರೋನನ ಮಕ್ಕಳು. ಲೇವಿಯರು ಅವರಿಗೆ ಕೆಲಸದಲ್ಲಿ ಸಹಾಯ ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿ |
ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಸರ್ವೇಶ್ವರನಿಗಾಗಿ ದಹನಬಲಿಗಳನ್ನು ಸಮರ್ಪಿಸುತ್ತಾ, ಸುಗಂಧದ್ರವ್ಯಗಳ ಧೂಪಾರತಿ ಎತ್ತುತ್ತಾ, ಚೊಕ್ಕಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ, ಪ್ರತೀ ಸಾಯಂಕಾಲ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಸರ್ವೇಶ್ವರನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಅವರನ್ನು ತೊರೆದುಬಿಟ್ಟವರು.