Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 13:11 - ಕನ್ನಡ ಸತ್ಯವೇದವು C.L. Bible (BSI)

11 ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಸರ್ವೇಶ್ವರನಿಗಾಗಿ ದಹನಬಲಿಗಳನ್ನು ಸಮರ್ಪಿಸುತ್ತಾ, ಸುಗಂಧದ್ರವ್ಯಗಳ ಧೂಪಾರತಿ ಎತ್ತುತ್ತಾ, ಚೊಕ್ಕಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ, ಪ್ರತೀ ಸಾಯಂಕಾಲ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಸರ್ವೇಶ್ವರನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಅವರನ್ನು ತೊರೆದುಬಿಟ್ಟವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗು ಸಾಯಂಕಾಲ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧದ್ರವ್ಯ ಧೂಪವನ್ನು ಹಾಕುತ್ತಾ ಶುದ್ಧ ಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ಯಾಜಕರು ಪ್ರತಿದಿನ ಪ್ರಾತಃಸ್ಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧ ದ್ರವ್ಯಧೂಪವನ್ನು ಹಾಕುತ್ತಾ ಚೊಕ್ಕ [ಬಂಗಾರದ] ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವರು ಪ್ರತಿದಿನವೂ ಮುಂಜಾನೆ ಸಾಯಂಕಾಲಗಳಲ್ಲಿ ಸರ್ವಾಂಗಹೋಮಗಳನ್ನೂ ಧೂಪಗಳನ್ನೂ ಅರ್ಪಿಸುವರು; ಮೇಜಿನ ಮೇಲೆ ನೈವೇದ್ಯದ ರೊಟ್ಟಿಗಳನ್ನಿಡುವರು. ಅವರು ಬಂಗಾರದ ದೀಪಸ್ತಂಭಗಳ ಮೇಲಿನ ಆರತಿಗಳನ್ನು ಸರಿಯಾಗಿ ನೋಡಿಕೊಳ್ಳುವುದರಿಂದ ಅವು ಹಗಲಿನಲ್ಲಿಯೂ ಸಾಯಂಕಾಲದಲ್ಲಿಯೂ ಪ್ರಕಾಶಮಾನವಾಗಿ ಉರಿಯುವವು. ನಾವು ಬಹಳ ಎಚ್ಚರಿಕೆಯಿಂದ ನಮ್ಮ ದೇವರ ಸೇವೆಮಾಡುತ್ತೇವೆ. ಆದರೆ ನೀವು ಆತನನ್ನು ತೊರೆದುಬಿಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ಪ್ರತಿ ಉದಯದಲ್ಲಿಯೂ, ಪ್ರತಿ ಸಾಯಂಕಾಲದಲ್ಲಿಯೂ ಯೆಹೋವ ದೇವರಿಗೆ ದಹನಬಲಿಗಳನ್ನೂ, ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುತ್ತಾ, ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭವನ್ನೂ, ಅದರ ದೀಪಗಳನ್ನೂ ಸಿದ್ಧಮಾಡಿ ಹಚ್ಚುತ್ತಾ ಇರುತ್ತಾರೆ. ನಾವು ನಮ್ಮ ದೇವರಾದ ಯೆಹೋವ ದೇವರ ಕಟ್ಟಳೆಯನ್ನು ಕೈಗೊಳ್ಳುತ್ತೇವೆ, ಆದರೆ ನೀವು ಅವರನ್ನು ಬಿಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 13:11
20 ತಿಳಿವುಗಳ ಹೋಲಿಕೆ  

ಈಗ ನಾನು ನನ್ನ ದೇವರಾದ ಸರ್ವೇಶ್ವರನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಬೇಕೆಂದಿದ್ದೇನೆ. ಇಸ್ರಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ ಅವರ ಸನ್ನಿಧಿಯಲ್ಲಿ ಸುಗಂಧ ದ್ರವ್ಯಗಳಿಂದ ಧೂಪಾರತಿ ಎತ್ತಬೇಕಾಗಿದೆ. ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡಬೇಕಾಗಿದೆ; ಬೆಳಿಗ್ಗೆ, ಸಂಜೆ, ಸಬ್ಬತ್‍ದಿನ, ಅಮಾವಾಸ್ಯೆ ಹಾಗೂ ನಮ್ಮ ದೇವರಾದ ಸರ್ವೇಶ್ವರನ ಜಾತ್ರೆಯ ವೇಳೆಗಳಲ್ಲಿ ದಹನಬಲಿಗಳನ್ನು ಅರ್ಪಿಸಬೇಕಾಗಿದೆ. ಇದಕ್ಕಾಗಿ ಒಂದು ಆಲಯವನ್ನು ಅವರಿಗೆ ಪ್ರತಿಷ್ಠಿಸಬೇಕೆಂದಿದ್ದೇನೆ.


ಬಲಿಪೀಠದ ಮೇಲೆ ಅನುದಿನವೂ ಸಮರ್ಪಿಸಬೇಕಾದುವುಗಳು ಇವು: ಒಂದು ವರ್ಷದ ಎರಡು ಕುರಿಗಳನ್ನು ದಿನಂಪ್ರತಿ ಬಲಿದಾನ ಮಾಡಬೇಕು.


ಮಹಾದೇವಾಲಯದ ಗರ್ಭಗುಡಿಯನ್ನು ಪ್ರವೇಶಿಸಿ ಧೂಪಾರತಿಯನ್ನು ಅರ್ಪಿಸುವ ಸರದಿಗೆ, ಯಾಜಕರ ಸಂಪ್ರದಾಯದ ಪ್ರಕಾರ, ಚೀಟು ಹಾಕಿದಾಗ ಅದು ಜಕರೀಯನ ಪಾಲಿಗೆ ಬಂದಿತು. ಅಂತೆಯೇ, ಅವನು ಧೂಪಾರತಿಯನ್ನು ಅರ್ಪಿಸುತ್ತಿದ್ದಾಗ


ಆ ಕ್ಷೇತ್ರ ಚಾದೋಕನ ಸಂತಾನದವರಲ್ಲಿ ನನಗಾಗಿ ಪ್ರತಿಷ್ಠಿತರು ಹಾಗು ನನ್ನ ಆಲಯದ ಪಾರುಪತ್ಯವನ್ನು ನೆರವೇರಿಸಿದವರು ಆದ ಯಾಜಕರಿಗೇ ಸೇರತಕ್ಕದ್ದು. ಇಸ್ರಯೇಲರು ನನ್ನನ್ನು ತೊರೆದಾಗ ಲೇವಿಯರೂ ತೊರೆದಂತೆ ಇವರು ತೊರೆಯಲಿಲ್ಲ.


“ಆದರೆ ಇಸ್ರಯೇಲರು ನನ್ನನ್ನು ತೊರೆದಾಗ ಲೇವಿಯರೂ ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದರು. ಆದ್ದರಿಂದ ಅವರು ನನ್ನ ಸೇವೆಮಾಡಲು ನನ್ನ ಸನ್ನಿಧಿಗೆ ಬರುವರು, ನನಗೆ ರಕ್ತಮೇದಸ್ಸುಗಳನ್ನು ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು; ಇದು ಸರ್ವೇಶ್ವರನಾದ ದೇವರ ನುಡಿ.


ನೀವು ನನ್ನ ಪರಿಶುದ್ಧ ವಸ್ತುಗಳ ಪಾರುಪತ್ಯ ಮಾಡಲಿಲ್ಲ; ಈ ಮ್ಲೇಚ್ಛರನ್ನು ನನ್ನ ಪವಿತ್ರಾಲಯದಲ್ಲಿ ನನ್ನ ವಸ್ತುಗಳ ಮೇಲೆ ಪಾರುಪತ್ಯಗಾರರನ್ನಾಗಿ ನೇಮಿಸಿಕೊಂಡಿರಿ; ನಿಮ್ಮ ಅಪಾರ ದುರಾಚಾರಗಳು ಇನ್ನು ಸಾಕು.


ಮೋಶೆ, ಆರೋನನನ್ನು ಉದ್ದೇಶಿಸಿ, “ಸರ್ವೇಶ್ವರನಿಗೆ ಕೋಪವುಂಟಾಗಿದೆ: ಈ ಜನರೊಳಗೆ ಘೋರ ವ್ಯಾಧಿಯೊಂದು ಪ್ರಾರಂಭವಾಗಿಬಿಟ್ಟಿದೆ. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಬಲಿಪೀಠದಿಂದ ಕೆಂಡಗಳನ್ನು ಇಟ್ಟು ಧೂಪ ಹಾಕಿ ಸಮುದಾಯದವರ ಬಳಿಗೆ ಬೇಗ ಹೋಗು; ಅವರ ಪರವಾಗಿ ದೋಷಪರಿಹಾರವನ್ನು ಮಾಡು,” ಎಂದು ಹೇಳಿದನು.


ನೀವು ಮಾಡಬೇಕಾದುದಿಷ್ಟು - ಕೋರಹನು ಮತ್ತು ಅವನ ಪಂಗಡದವರಾದ ನೀವೆಲ್ಲರೂ ಧೂಪಾರತಿಗಳನ್ನು ತಂದು ಅವುಗಳಲ್ಲಿ ಕೆಂಡವನ್ನಿಟ್ಟು ನಾಳೆ ಸರ್ವೇಶ್ವರನ ಸನ್ನಿಧಿಯಲ್ಲಿ ಧೂಪ ಹಾಕಬೇಕು.


ಅದು ಬಹುದಿನದವರೆಗೂ ದೇವದರ್ಶನದ ಗುಡಾರದ ಮೇಲೆ ಇರುತ್ತಿದ್ದ ಸಂದರ್ಭದಲ್ಲಿ ಇಸ್ರಯೇಲರು ಸರ್ವೇಶ್ವರನ ಸೂಚನೆಯನ್ನು ಅನುಸರಿಸಿ ಪ್ರಯಾಣಮಾಡದೆ ಇರುತ್ತಿದ್ದರು.


ನಿನ್ನ ಸಂತತಿಯನ್ನು ಆಕಾಶದಲ್ಲಿರುವ ನಕ್ಷತ್ರಗಳಂತೆ ಅಸಂಖ್ಯಾತವಾಗಿಸುತ್ತೇನೆ; ಅವರಿಗೆ ಈ ನಾಡೆಲ್ಲವನ್ನು ಕೊಡುತ್ತೇನೆ. ಜಗದ ಜನಾಂಗಗಳಿಗೆಲ್ಲ ನಿನ್ನ ಸಂತತಿಯ ಮುಖಾಂತರ ಆಶೀರ್ವಾದ ದೊರಕುವುದು.”


ನಮಗಾದರೋ ಸರ್ವೇಶ್ವರನೊಬ್ಬನೇ ದೇವರು; ನಾವು ಅವರನ್ನು ಬಿಡಲಿಲ್ಲ. ಸರ್ವೇಶ್ವರನ ಆರಾಧನೆ ನಡೆಸಲು ಆರೋನನ ಸಂತಾನದವರಾದ ಯಾಜಕರು ಹಾಗೂ ತಮಗೆ ನೇಮಕವಾದ ಕೆಲಸದಲ್ಲಿ ನಿರತರಾದ ಲೇವಿಯರು ನಮಗಿರುತ್ತಾರೆ.


ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗೆ ಮಾಡಿದರೆ ನನ್ನ ಕೋಪ ಇಸ್ರಯೇಲರ ಮೇಲೆ ಎರಗಲು ಆಸ್ಪದವಿರದು. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”


ಇದಲ್ಲದೆ, ಟೈರಿನ ಅರಸ ಹೂರಾಮನಿಗೆ ದೂತರ ಮುಖಾಂತರ, “ನನ್ನ ತಂದೆ ದಾವೀದ ತಮ್ಮ ವಾಸಕ್ಕೆ ಅರಮನೆಯನ್ನು ಕಟ್ಟಿಸಿಕೊಳ್ಳುವುದಕ್ಕಾಗಿ ನೀನು ದೇವದಾರು ಮರಗಳನ್ನು ಕಳುಹಿಸಿದೆ.


ನಿಯಮದ ಪ್ರಕಾರ ಮಹಾಪರಿಶುದ್ಧ ಸ್ಥಳದ ಮುಂದೆ ಉರಿಯುತ್ತಿರುವುದಕ್ಕಾಗಿ ಪುಷ್ಪಾಲಂಕಾರವುಳ್ಳ ಬಂಗಾರದ ದೀಪಸ್ತಂಭಗಳು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು