Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 13:3 - ಕನ್ನಡ ಸತ್ಯವೇದವು C.L. Bible (BSI)

3 ಅಬೀಯನು ನಾಲ್ಕು ಲಕ್ಷ ಮಂದಿ ರಣವೀರರನ್ನು ಆರಿಸಿಕೊಂಡು ಬಂದು ಯುದ್ಧ ಪ್ರಾರಂಭಿಸಿದನು. ಯಾರೊಬ್ಬಾಮನು ಎಂಟು ಲಕ್ಷ ಶ್ರೇಷ್ಠಯೋಧರೊಡನೆ ಅವನಿಗೆ ವಿರೋಧವಾಗಿ ಬಂದು ವ್ಯೂಹಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅಬೀಯನು ನಾಲ್ಕು ಲಕ್ಷ ಮಂದಿ ಯುದ್ಧವೀರರನ್ನು ಆರಿಸಿಕೊಂಡು ಬಂದು ಯುದ್ಧ ಪ್ರಾರಂಭಿಸಿದನು; ಯಾರೊಬ್ಬಾಮನೂ ಎಂಟು ಲಕ್ಷ ಶ್ರೇಷ್ಠರಾದ ಭಟರೊಡನೆ ಅವನಿಗೆ ವಿರುದ್ಧವಾಗಿ ಬಂದು ವ್ಯೂಹಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅಬೀಯನು ನಾಲ್ಕು ಲಕ್ಷ ಮಂದಿ ರಣವೀರರನ್ನು ಆರಿಸಿಕೊಂಡು ಬಂದು ಯುದ್ಧ ಪ್ರಾರಂಭಿಸಿದನು; ಯಾರೊಬ್ಬಾಮನೂ ಎಂಟು ಲಕ್ಷ ಶ್ರೇಷ್ಠರಾದ ಭಟರೊಡನೆ ಅವನಿಗೆ ವಿರೋಧವಾಗಿ ಬಂದು ವ್ಯೂಹಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಬೀಯನ ಬಳಿ ನಾಲ್ಕು ಲಕ್ಷ ಮಂದಿ ವೀರ ಸೈನಿಕರಿದ್ದರು. ಅವನು ಸೈನ್ಯವನ್ನು ಯುದ್ಧದಲ್ಲಿ ಮುನ್ನಡೆಸಿದನು. ಯಾರೊಬ್ಬಾಮನ ಬಳಿಯಲ್ಲಿ ಎಂಟು ಲಕ್ಷ ಮಂದಿ ಸೈನಿಕರು ಇದ್ದರು. ಯಾರೊಬ್ಬಾಮನು ಅಬೀಯನ ಮೇಲೆ ಯುದ್ಧಕ್ಕೆ ತಯಾರಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಅಬೀಯನು ಯುದ್ಧಭಟರಾದ ಪರಾಕ್ರಮಶಾಲಿಗಳ ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡಿದನು. ಆಯ್ಕೆಯಾದ ನಾಲ್ಕು ಲಕ್ಷ ಜನರಿದ್ದರು. ಯಾರೊಬ್ಬಾಮನು ಅವನಿಗೆ ಎದುರಾಗಿ ಎಂಟು ಲಕ್ಷಮಂದಿ ಆಯ್ಕೆಯಾದ ಪರಾಕ್ರಮಶಾಲಿಗಳನ್ನು ಯುದ್ಧಕ್ಕೆ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 13:3
9 ತಿಳಿವುಗಳ ಹೋಲಿಕೆ  

ರೆಹಬ್ಬಾಮನು ಜೆರುಸಲೇಮನ್ನು ಮುಟ್ಟಿದ ನಂತರ ಇಸ್ರಯೇಲರಿಗೆ ವಿರುದ್ಧ ಯುದ್ಧಮಾಡುವುದಕ್ಕೂ ಅವರ ರಾಜ್ಯವನ್ನು ಮರಳಿ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಬತ್ತು ಸಾವಿರ ಮಂದಿ ಶ್ರೇಷ್ಟ ಸೈನಿಕರನ್ನು ಕೂಡಿಸಿದನು.


ಯೋವಾಬನು ದಾವೀದನಿಗೆ ಒಪ್ಪಿಸಿದ ಜನಗಣತಿಯ ಅಂಕೆಸಂಖ್ಯೆಗಳು ಇವು: ಇಸ್ರಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಹನ್ನೊಂದು ಲಕ್ಷ; ಯೆಹೂದ್ಯರಲ್ಲಿ ನಾಲ್ಕು ಲಕ್ಷದ ಎಪ್ಪತ್ತು ಸಾವಿರ.


ಅಬೀಯಾಮನ ಉಳಿದ ಚರಿತ್ರೆ ಹಾಗು ಅವನ ಎಲ್ಲಾ ಕೃತ್ಯಗಳು ಯೆಹೂದರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು.


ಜೆರುಸಲೇಮಿನಲ್ಲಿ ಮೂರು ವರ್ಷ ಆಳಿದನು. ಗಿಬೆಯದ ಊರೀಯೇಲನ ಮಗಳಾದ ಮೀಕಾಯ ಎಂಬಾಕೆ ಇವನ ತಾಯಿ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯಿತು.


ಆಗ ಅಬೀಯನು ಎಫ್ರಯಿಮ್ ಪರ್ವತಪ್ರದೇಶದಲ್ಲಿರುವ ಚೆಮಾರೈಮೆಂಬ ಬೆಟ್ಟದಲ್ಲಿ ನಿಂತು, “ಯಾರೊಬ್ಬಾಮನೇ, ಎಲ್ಲಾ ಇಸ್ರಯೇಲರೇ, ನನ್ನ ಮಾತಿಗೆ ಕಿವಿಗೊಡಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು