Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 13:5 - ಕನ್ನಡ ಸತ್ಯವೇದವು C.L. Bible (BSI)

5 ಮುರಿಯಲಾಗದ ಒಡಂಬಡಿಕೆಯಿಂದ ದಾವೀದನಿಗೂ ಅವನ ಸಂತಾನದವರಿಗೂ ಇಸ್ರಯೇಲರ ಮೇಲೆ ಸರ್ವೇಶ್ವರ ಶಾಶ್ವತವಾದ ಅರಸುತನವನ್ನು ಕೊಟ್ಟಿದ್ದಾರೆಂದು ನಿಮಗೆ ಗೊತ್ತಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನು ಉಪ್ಪಿನ ಒಡಂಬಡಿಕೆಯಿಂದ ದಾವೀದನಿಗೂ ಅವನ ಸಂತಾನದವರಿಗೂ ಇಸ್ರಾಯೇಲರ ಮೇಲೆ ಶಾಶ್ವತವಾದ ಅರಸುತನವನ್ನು ಕೊಟ್ಟಿದ್ದಾನೆಂದು ನಿಮಗೆ ಗೊತ್ತಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನು ಉಪ್ಪಿನ ಒಡಂಬಡಿಕೆಯಿಂದ ದಾವೀದನಿಗೂ ಅವನ ಸಂತಾನದವರಿಗೂ ಇಸ್ರಾಯೇಲ್ಯರ ಮೇಲೆ ಶಾಶ್ವತವಾದ ಅರಸುತನವನ್ನು ಕೊಟ್ಟಿದ್ದಾನೆಂದು ನಿಮಗೆ ಗೊತ್ತಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇಸ್ರೇಲರ ದೇವರಾದ ಯೆಹೋವನು ದಾವೀದನಿಗೂ ಅವನ ಗಂಡುಮಕ್ಕಳಿಗೂ ನಿರಂತರವಾಗಿ ಇಸ್ರೇಲನ್ನು ಆಳಲು ಉಪ್ಪಿನ ಒಡಂಬಡಿಕೆಯ ಮೂಲಕ ಅಧಿಕಾರ ಕೊಟ್ಟಿದ್ದಾನೆಂದು ನಿಮಗೆ ತಿಳಿದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇಸ್ರಾಯೇಲಿನ ದೇವರಾದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ರಾಜ್ಯವನ್ನು ಎಂದೆಂದಿಗೂ ದಾವೀದನಿಗೂ, ಅವನ ವಂಶದವರಿಗೂ ಉಪ್ಪಿನ ಒಡಂಬಡಿಕೆಯಿಂದ ಕೊಟ್ಟರೆಂದು ನಿಮಗೆ ಗೊತ್ತಿಲ್ಲವೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 13:5
24 ತಿಳಿವುಗಳ ಹೋಲಿಕೆ  

“ಇಸ್ರಯೇಲರು ನನಗೆ ಮೀಸಲಾಗಿಟ್ಟು ಸಮರ್ಪಿಸುವ ಪವಿತ್ರ ವಸ್ತುಗಳೆಲ್ಲಾ ನಿನಗೂ ನಿನ್ನ ಸಂತತಿಯವರಾದ ಸ್ತ್ರೀಪುರುಷರಿಗೂ ಸಲ್ಲಬೇಕು. ಸದಾಕಾಲಕ್ಕೂ ಇದನ್ನು ನಾನು ನಿನಗೆ ಅನುಗ್ರಹಿಸಿದ್ದೇನೆ. ಇದು ನನ್ನ ಸನ್ನಿಧಿಯಲ್ಲಿ ನಿನ್ನೊಡನೆ ಮತ್ತು ನಿನ್ನ ಸಂತತಿಯೊಡನೆ ಮಾಡಿಕೊಂಡ ಶಾಶ್ವತವಾದ ಉಪ್ಪಿನ ಒಡಂಬಡಿಕೆ.”


ನೈವೇದ್ಯವಾಗಿ ಸಮರ್ಪಿಸುವ ಎಲ್ಲ ಆಹಾರ ಪದಾರ್ಥಗಳಿಗೂ ಉಪ್ಪು ಹಾಕಿಯೆ ಸಮರ್ಪಿಸಬೇಕು. ಉಪ್ಪು ಸರ್ವೇಶ್ವರನ ಸಂಗಡ ನಿಮಗಿರುವ ಒಡಂಬಡಿಕೆಯ ಸೂಚನೆ. ಆದ್ದರಿಂದ ಅದು ಯಾವ ನೈವೇದ್ಯ ದ್ರವ್ಯವಾದರೂ ಉಪ್ಪಿಲ್ಲದೆ ಇರಬಾರದು. ನೀವು ಅರ್ಪಿಸುವ ಎಲ್ಲ ಪದಾರ್ಥಗಳಲ್ಲಿಯೂ ಉಪ್ಪು ಸೇರಿಸಿಯೇ ಇರಬೇಕು.


ಸರ್ವೇಶ್ವರ ತಾವು ಕೊಟ್ಟ ಮಾತನ್ನು ನೆರವೇರಿಸಿದ್ದಾರೆ. ಅವರ ವಾಗ್ದಾನದಂತೆ ನಾನು ನನ್ನ ತಂದೆ ದಾವೀದರ ಸ್ಥಾನದಲ್ಲಿ ಇಸ್ರಯೇಲ್ ಸಿಂಹಾಸನದ ಮೇಲೆ ಅರಸನಾಗಿ ಕುಳಿತುಕೊಂಡಿದ್ದೇನೆ; ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿಗೋಸ್ಕರ ಈ ಆಲಯವನ್ನು ಕಟ್ಟಿಸಿದ್ದೇನೆ;


ನೀನು ಅವುಗಳನ್ನು ಸರ್ವೇಶ್ವರನಿಗೆ ಸಮರ್ಪಿಸಿದಾಗ ಯಾಜಕರು ಅವುಗಳ ಮೇಲೆ ಉಪ್ಪನ್ನು ಚೆಲ್ಲಿ, ಸರ್ವೇಶ್ವರನಿಗಾಗಿ ದಹನಬಲಿ ಒಪ್ಪಿಸಬೇಕು.


ಅವನನ್ನು ನನ್ನ ಮನೆಯಲ್ಲೂ ನನ್ನ ರಾಜ್ಯದಲ್ಲೂ ಸದಾ ಸ್ಥಿರಗೊಳಿಸುವೆನು. ಅವನ ಸಿಂಹಾಸನ ಶಾಶ್ವತವಾಗಿರುವುದು’.”


ನಿನ್ನ ಆಯುಷ್ಕಾಲ ಮುಗಿದು ನೀನು ನಿನ್ನ ಪೂರ್ವಜರನ್ನು ಸೇರಿ ವಿಶ್ರಮಿಸುವಾಗ ನಿನ್ನ ಮಕ್ಕಳಲ್ಲಿ ಒಬ್ಬನನ್ನು ನಿನಗೆ ಉತ್ತರಾಧಿಕಾರಿಯನ್ನಾಗಿ ನೇಮಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ಪರಾತ್ಪರ ದೇವರು ನಿಮ್ಮ ತಂದೆಯಾದ ನೆಬೂಕದ್ನೆಚ್ಚರ್ ಅವರಿಗೆ ರಾಜ್ಯ ಮಹತ್ವವನ್ನು ಹಾಗೂ ಮಾನ ಸನ್ಮಾನಗಳನ್ನು ದಯಪಾಲಿಸಿದ್ದರು.


ಅಬ್ರಹಾಮ, ಇಸಾಕ, ಯಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.”


ಏಕೆಂದರೆ ಸುಜ್ಞಾನವನ್ನೇ ಅವರು ದ್ವೇಷಿಸಿದರು, ಸರ್ವೇಶ್ವರನಲ್ಲಿ ಭಯಭಕ್ತಿಯಿರಿಸದೆ ಹೋದರು.


ಆಮೇಲೆ ನಾನು ಅವರಿಗೆ, “ನೀವು ಮಾಡಿದ್ದು ಸರಿಯಲ್ಲ; ನಾವು ನಮ್ಮ ವಿರೋಧಿಗಳಾದ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ?


ಅವನು ಕೆಂಬಣ್ಣದವನು, ಸುಂದರ ನೇತ್ರನು, ಹಾಗು ನೋಟಕ್ಕೆ ರಮಣೀಯನು. ಸರ್ವೇಶ್ವರ ಸಮುವೇಲನಿಗೆ, “ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ,” ಎಂದು ಆಜ್ಞಾಪಿಸಿದರು.


ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು.


ಆದರೆ, ಅವರು ಒಂದು ವಿಷಯವನ್ನು ಉದ್ದೇಶಪೂರ್ವಕವಾಗಿ ಮರೆತುಬಿಡುತ್ತಾರೆ. ಅದೇನೆಂದರೆ, ಪ್ರಾರಂಭದಲ್ಲಿದ್ದ ಭೂಮ್ಯಾಕಾಶಗಳು ದೇವರ ವಾಕ್ಯದಿಂದಲೇ ಉಂಟಾದವು. ಜಲದಿಂದ, ಜಲದ ಮೂಲಕ ಭೂಮಿ ಉಂಟಾಯಿತು.


ಯೋವಾಬನೂ ಅವನ ಜನರೂ ಸಿರಿಯಾದವರಿಗೆ ವಿರೋಧವಾಗಿ ಯುದ್ಧ ಪ್ರಾರಂಭಿಸಿದಾಗ ಸಿರಿಯಾದವರು ಓಡಿಹೋದರು.


ಇಸ್ರಯೇಲ್ ದೇವರಾದ ಸರ್ವೇಶ್ವರಾ, ನೀವು ನನ್ನ ತಂದೆ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಕಟ್ಟಳೆಯನ್ನು ಅನುಸರಿಸಿ ನನ್ನ ಮಾರ್ಗದಲ್ಲಿ ನಡೆದುಕೊಂಡರೆ ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದು ತಪ್ಪದು’ ಎಂಬುದಾಗಿ ವಾಗ್ದಾನ ಮಾಡಿದ್ದೀರಿ; ಅದನ್ನು ನೆರವೇರಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು