Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 14:11 - ಕನ್ನಡ ಸತ್ಯವೇದವು C.L. Bible (BSI)

11 ಆಸನು ತನ್ನ ದೇವರಾದ ಸರ್ವೇಶ್ವರನಿಗೆ, “ಸರ್ವೇಶ್ವರಾ, ಬಲಿಷ್ಠನು ಬಲಹೀನನ ಮೇಲೆ ಬೀಳುವಾಗ, ನಿಮ್ಮ ಹೊರತು ರಕ್ಷಕನಿಲ್ಲ. ನಿಮ್ಮಲ್ಲಿ ಭರವಸೆ ಇಟ್ಟು ನಿಮ್ಮ ಹೆಸರಿನಲ್ಲಿ ಈ ಮಹಾ ಸೇನೆಗೆ ವಿರುದ್ಧ ಯುದ್ಧಕ್ಕೆ ಬಂದಿದ್ದೇವೆ. ಸರ್ವೇಶ್ವರಾ, ನಮ್ಮ ದೇವರು ನೀವು; ನರರು ನಿಮ್ಮನ್ನು ಎದುರಿಸಿ ಗೆಲ್ಲಬಾರದು,” ಎಂದು ಮೊರೆ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಸನು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ, ರಕ್ಷಿಸಲು ನಿನ್ನ ಹೊರತು ಬೇರಾರೂ ರಕ್ಷಿಸುವುದಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನೆದುರು ಗೆಲ್ಲಬಾರದು” ಎಂದು ಮೊರೆಯಿಡಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಸನು ತನ್ನ ದೇವರಾದ ಯೆಹೋವನಿಗೆ - ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ ನಿನ್ನ ಹೊರತು ರಕ್ಷಕನಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾ ಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನನ್ನು ಎದುರಿಸಿ ಗೆಲ್ಲಬಾರದು ಎಂದು ಮೊರೆಯಿಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಸನು ದೇವರಾದ ಯೆಹೋವನನ್ನು ಪ್ರಾರ್ಥಿಸಿ, “ಯೆಹೋವನೇ, ಬಲಹೀನರಾದವರು ಬಲಿಷ್ಠರಾದವರನ್ನು ಸೋಲಿಸಲು ನೀನೇ ಸಹಾಯಿಸಬೇಕು. ದೇವರಾದ ಯೆಹೋವನೇ, ನಮಗೆ ಸಹಾಯಮಾಡು. ನೀನೇ ನಮ್ಮ ರಕ್ಷಕನು. ನಾವು ನಿನ್ನ ಮೇಲೆ ಭರವಸವಿಟ್ಟಿರುತ್ತೇವೆ. ನಿನ್ನ ಹೆಸರಿನಲ್ಲಿ ನಾವು ದೊಡ್ಡ ಸೈನ್ಯದೊಂದಿಗೆ ಯುದ್ಧಕ್ಕೆ ಹೊರಟಿರುತ್ತೇವೆ. ಯೆಹೋವನೇ, ನೀನೇ ನಮ್ಮ ದೇವರು. ನಿನ್ನನ್ನು ಸೋಲಿಸಲು ಯಾರಿಗೂ ಅವಕಾಶಕೊಡಬೇಡ” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಆಸನು ತನ್ನ ದೇವರಾದ ಯೆಹೋವ ದೇವರನ್ನು ಪ್ರಾರ್ಥಿಸಿ, “ಯೆಹೋವ ದೇವರೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯ ಕೊಡುವುದು ನಿಮಗೆ ಏನೂ ಅಲ್ಲ. ನಮ್ಮ ದೇವರಾದ ಯೆಹೋವ ದೇವರೇ, ನಮಗೆ ಸಹಾಯಮಾಡಿರಿ. ಏಕೆಂದರೆ ನಾವು ನಿಮ್ಮ ಮೇಲೆ ಆತುಕೊಂಡಿದ್ದೇವೆ. ನಿಮ್ಮ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ. ಯೆಹೋವ ದೇವರೇ, ನೀವೇ ನಮ್ಮ ದೇವರು. ಮನುಷ್ಯನು ನಿಮ್ಮೆದುರಿನಲ್ಲಿ ಬಲಗೊಳ್ಳದಿರಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 14:11
59 ತಿಳಿವುಗಳ ಹೋಲಿಕೆ  

ನಿನಗೆ ವಿರುದ್ಧವಾಗಿ ಅವರು ಯುದ್ಧಮಾಡುವರು; ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನು ಕಾಪಾಡಲು ನಾನೇ ನಿನ್ನೊಂದಿಗಿರುವೆನು. ಇದು ಸರ್ವೇಶ್ವರನಾದ ನನ್ನ ನುಡಿ".


ನಿನಗೆ ಮೊರೆಯಿಟ್ಟವರು ವಿಮುಕ್ತರಾದರಯ್ಯಾ I ವಿಶ್ವಾಸವಿಟ್ಟು ಹತಾಶರಾಗಲಿಲ್ಲವಯ್ಯಾ II


ಹೆಚ್ಚಳಪಡುತಿಹರು ಕೆಲವರು ರಥಗಳಲಿ, ಹಲವರು ಅಶ್ವಗಳಲಿ I ಹೆಮ್ಮೆಪಡುತಿಹೆವು ನಾವಾದರೋ, ನಮ್ಮ ದೇವರ ನಾಮದಲಿ II


ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


ಯೆಹೂದ್ಯರು ತಮ್ಮ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾಗಿರುವುದನ್ನು ಕಂಡು ಸರ್ವೇಶ್ವರನಿಗೆ ಅಭಿಮುಖರಾಗಿ ಮೊರೆಯಿಟ್ಟರು; ಯಾಜಕರು ಕಹಳೆಗಳನ್ನು ಊದಿದರು.


ಪ್ರಭುವಿನ ನಾಮಸ್ಮರಣೆ ಮಾಡುವವರೆಲ್ಲ ಪಡೆಯುವರಾಗ ಜೀವೋದ್ಧಾರ.


ಸರ್ವೇಶ್ವರನ ನಾಮ ಬಲವಾದ ಗೋಪುರ; ಅದರೊಳಗೆ ಓಡಿ ಆಶ್ರಯ ಪಡೆದರೆ ಸುಭದ್ರ.


ಹೀಗೆ ಇಸ್ರಯೇಲರು ಆ ಕಾಲದಲ್ಲಿ ಸೋಲು ಸವಿದರು; ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಸರ್ವೇಶ್ವರನಲ್ಲಿ ಭರವಸೆಯಿಟ್ಟದ್ದರಿಂದ ಜಯಶೀಲರಾದರು.


ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರೆಗೆ ನೇರವಾಗಿ ಹೋಗೋಣ ಬಾ; ಬಹುಶಃ ಸರ್ವೇಶ್ವರ ತಾವೇ ನಮ್ಮ ಪರವಾಗಿ ಕಾರ್ಯಸಾಧಿಸುವರು. ಬಹುಜನರಿಂದಾಗಲಿ, ಸ್ವಲ್ಪಜನರಿಂದಾಗಲಿ, ರಕ್ಷಿಸುವುದು ಸರ್ವೇಶ್ವರಸ್ವಾಮಿಗೆ ಅಸಾಧ್ಯವಲ್ಲ,” ಎಂದು ಹೇಳಿದನು.


ಸಂಕಟದಲಿ ಮೊರೆಯಿಟ್ಟೆನು ಪ್ರಭುವಿಗೆ I ಕೊಟ್ಟನು ಸದುತ್ತರವನು ಆತನೆನಗೆ II


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ನನಗೆ ಮೊರೆಯಿಟ್ಟಾಗ ಕಿವಿಗೊಡುವೆನು I ಸಂಕಟದೊಳು ಅವನ ಸಂಗಡವಿರುವೆನು I ಅವನನು ಉದ್ಧರಿಸಿ ಘನಪಡಿಸುವೆನು II


ಪ್ರಭುವಿಗೆ ಬಿಡು ಜೀವನಯಾತ್ರಾ ಚಿಂತೆಯನು I ಭರವಸೆಯಿಂದಿರು, ಆತನದನು ಸಾಗಿಸುವನು II


ಅವರು ದೇವರಲ್ಲಿ ನಂಬಿಕೆಯನ್ನಿಟ್ಟು ಸಹಾಯಕ್ಕಾಗಿ ಪ್ರಾರ್ಥಿಸಿದರು. ದೇವರು ಅವರ ಪ್ರಾರ್ಥನೆಯನ್ನು ಆಲಿಸಿ ಹಗ್ರೀಯರನ್ನೂ ಅವರೊಂದಿಗೆ ಒಪ್ಪಂದ ಮಾಡಿಕೊಂಡವರನ್ನೂ ಸೋಲಿಸಿ ಅವರ ಮೇಲೆ ಜಯಹೊಂದುವಂತೆ ಸಹಾಯ ಮಾಡಿದರು.


ಅವನಿಗಿರುವ ಸಹಾಯ ಮೂಳೆ ಮಾಂಸದ ತಡಿಕೆಯ ಬಲ; ನಮಗಿದ್ದಾರೆ ನಮ್ಮ ದೇವರಾದ ಸರ್ವೇಶ್ವರ. ಅವರೇ ನಮಗೆ ನೆರವಾಗಿ, ಯುದ್ಧಗಳಲ್ಲಿ ನಮ್ಮ ಪರವಾಗಿ ಕಾದಾಡುವರು,” ಎಂದು ಹೇಳಿ ಹುರಿದುಂಬಿಸಿದನು. ಜನರು ಜುದೇಯದ ಅರಸ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.


ನಾನು ಶಾಂತಿಸಮಾಧಾನವನ್ನು ನಿಮಗೆ ಬಿಟ್ಟುಹೋಗುತ್ತೇನೆ; ನನ್ನ ಶಾಂತಿಸಮಾಧಾನವನ್ನು ನಿಮಗೆ ಕೊಡುತ್ತೇನೆ. ಈ ಲೋಕವು ಕೊಡುವ ರೀತಿಯಲ್ಲಿ ನಾನದನ್ನು ನಿಮಗೆ ಕೊಡುವುದಿಲ್ಲ. ನೀವು ಹೃದಯದಲ್ಲಿ ಕಳವಳಗೊಳ್ಳದಿರಿ, ಭಯಪಡಬೇಡಿ.


ಇಂಥಾ ದುಸ್ಥಿತಿಯಲಿ ನಾ ಮೊರೆಯಿಟ್ಟೆ ಪ್ರಭುವಿಗೆ I ಪ್ರಾರ್ಥನೆ ಮಾಡಿದೆ ಆ ನನ್ನ ದೇವನಲಿ I ನನ್ನ ಪ್ರಾರ್ಥನೆ ಬಿದ್ದಿತು ಆತನ ಕಿವಿಯಲಿ II


ಎದ್ದೇಳು ಪ್ರಭೂ, ಜಯ ದೊರಕದಿರಲಿ ನರಮಾನವನಿಗೆ I ನಡೆಯಲಿ ನಿನ್ನ ಮುಂದೆಯೆ ನ್ಯಾಯನಿರ್ಣಯ ಜನಾಂಗಗಳಿಗೆ II


ಫರೋಹನು ಸಮೀಪಿಸುತ್ತಿರುವುದನ್ನು ಇಸ್ರಯೇಲರು ಕಣ್ಣೆತ್ತಿ ನೋಡಿದರು. ತಮ್ಮನ್ನು ಬೆನ್ನಟ್ಟಿ ಬಂದಿದ್ದ ಈಜಿಪ್ಟಿನವರನ್ನು ಕಂಡು ಬಹಳವಾಗಿ ಭಯಪಟ್ಟು ಸರ್ವೇಶ್ವರನಿಗೆ ಮೊರೆಯಿಟ್ಟರು.


ಯೇಸು ಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ ಶಿಷ್ಯರಿಗೆ, “ನೀವು ಹೃದಯದಲ್ಲಿ ಕಳವಳಗೊಳ್ಳದಿರಿ; ದೇವರಲ್ಲಿ ವಿಶ್ವಾಸವಿಡಿ; ನನ್ನಲ್ಲಿಯೂ ವಿಶ್ವಾಸವಿಡಿ.


ತಮ್ಮ ಮಹಿಮೆಯನ್ನು ತಿಳಿಸುವುದಕ್ಕಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನು ಸೂರೆಮಾಡಿದ ರಾಷ್ಟ್ರಗಳಿಗೆ ಕೊಡುವ ಎಚ್ಚರಿಕೆ ಇದು:


ನರಮಾನವರಲ್ಲಿ ಇಡದಿರು ಭರವಸೆಯನ್ನು; ಯಾವ ಗಣನೆಗೆ ಬಂದಾನು ಅವನು? ಮೂಗಿನಲ್ಲಿ ಉಸಿರಾಡುವ ಅಲ್ಪಪ್ರಾಣಿ ಅವನು!


ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು I ಸರ್ವಾಪತ್ತಿನಿಂದವನು ಮುಕ್ತಗೊಂಡನು II


ಆಗ ಸರ್ವೇಶ್ವರ ಗಿದ್ಯೋನನಿಗೆ, “ನೀರನ್ನು ನೆಕ್ಕಿದ ಆ ಮೂನ್ನೂರು ಮಂದಿಯಿಂದಲೇ ನಿಮಗೆ ಜಯವನ್ನುಂಟುಮಾಡಿ ಮಿದ್ಯಾನ್ಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಉಳಿದವರು ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ,” ಎಂದು ಆಜ್ಞಾಪಿಸಿದರು.


ಸ್ವತಂತ್ರರು, ಪರತಂತ್ರರು ನಿರಾಶ್ರಯರಾದಾಗ ಅವರೆಲ್ಲರು ನಿಶ್ಯೇಷರಾದವರು ಎಂದು ತಿಳಿದುಬಂದಾಗ ದೊರಕಿಸುವನು ಸರ್ವೇಶ್ವರನು ನ್ಯಾಯವನು ತನ್ನ ಪ್ರಜೆಗೆ ತೋರುವನು ಅನುಕಂಪವನು ತನ್ನ ಭಕ್ತಾದಿಗಳಿಗೆ.


ಒಬ್ಬನಿಂದ ಸಾವಿರ ಮಂದಿ ಸೋತುಹೋದುದು’ ಒಬ್ಬರಿಗಂಜಿ ಹತ್ತುಸಾವಿರ ಓಡಿಹೋದುದು, ಅವರ ಪೊರೆಬಂಡೆಯಾತ ಅವರನು ವೈರಿಗೊಪ್ಪಿಸಿದ್ದರಿಂದಲ್ಲವೆ? ಅವರ ಸರ್ವೇಶ್ವರನು ಅವರನು ಕೈಬಿಟ್ಟುದರಿಂದಲ್ಲವೆ?


ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನೂ, ನೂರು ಮಂದಿ ಹತ್ತು ಸಾವಿರ ಮಂದಿಯನ್ನೂ ಓಡಿಸುವರು. ಶತ್ರುಗಳು ನಿಮ್ಮ ಕತ್ತಿಯಿಂದ ಹತರಾಗುವರು.


ಅವನು ನೆಲಕ್ಕುರುಳಿದನು. “ಸೌಲನೇ, ಸೌಲನೇ, ನನ್ನನ್ನೇಕೆ ಹಿಂಸಿಸುತ್ತಿರುವೆ?” ಎಂಬ ವಾಣಿ ಅವನಿಗೆ ಕೇಳಿಸಿತು.


ನಿಮ್ಮ ಕಣ್ಣೆದುರಿಗಿರುವ ಈ ಮನುಷ್ಯನು ಯಾರೆಂದು ನಿಮಗೆ ಗೊತ್ತಿದೆ. ಯೇಸುವಿನ ನಾಮದಿಂದಲೇ, ಆ ನಾಮದ ಮೇಲಿಟ್ಟ ವಿಶ್ವಾಸದಿಂದಲೇ, ಈತನು ಶಕ್ತಿಪಡೆದಿದ್ದಾನೆ. ಯೇಸುವಿನಲ್ಲಿಟ್ಟ ಆ ವಿಶ್ವಾಸವೇ ಈತನಿಗೆ, ನೀವೇ ನೋಡುವಂತೆ, ಸಂಪೂರ್ಣ ಆರೋಗ್ಯವನ್ನು ದಯಪಾಲಿಸಿದೆ.


ಬಲಾಢ್ಯರನ್ನು ತಟ್ಟನೆ ಬಡಿದು ಕೋಟೆಗಳ ಕೆಡವುವಾತನು ಆತನೇ, ಸರ್ವೇಶ್ವರಸ್ವಾಮಿ ಎಂಬುದೇ ಆತನ ನಾಮಧೇಯ.


ಜಯಘೋಷ ಮಾಡುವೆವು, ನಿನ್ನ ಗೆಲುವಿನ ನಿಮಿತ್ತ I ಧ್ವಜ ಹಾರಿಪೆವು, ಎಮ್ಮ ದೇವನ ನಾಮದ ನಿಮಿತ್ತ I ನಿನ್ನ ಕೋರಿಕೆಗಳೆಲ್ಲವನು, ಕೈಗೂಡಿಸಲಿ ಆತ II


ಈ ಕಾರಣ ಅರಸ ಹಿಜ್ಕೀಯನು ಹಾಗು ಆಮೋಚನ ಮಗ ಯೆಶಾಯನೆಂಬ ಪ್ರವಾದಿಯು ಪರಲೋಕಕ್ಕೆ ಮೊರೆಯಿಟ್ಟು ಪ್ರಾರ್ಥಿಸಿದರು. ಸರ್ವೇಶ್ವರಸ್ವಾಮಿ ದೂತನನ್ನು ಕಳುಹಿಸಿ


ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿರೋ? ನಮ್ಮ ಮೇಲೆ ಬಂದಿರುವ ಈ ಮಹಾಸಮೂಹದ ಮುಂದೆ ನಿಲ್ಲುವುದಕ್ಕೆ ನಮ್ಮಲ್ಲಿ ಬಲವಿಲ್ಲ; ಏನು ಮಾಡಬೇಕೆಂದೂ ತಿಳಿಯದು; ನಮ್ಮ ಕಣ್ಣುಗಳು ನಿಮ್ಮನ್ನೇ ನೋಡುತ್ತಿವೆ,” ಎಂದು ಪ್ರಾರ್ಥಿಸಿದನು.


ಕಾಯುವನಾತ ತನ್ನ ಭಕ್ತರನು ಹೆಜ್ಜೆ ಹೆಜ್ಜೆಗು ದುರುಳರಾದರೋ ಮುಳುಗಿ ಮೌನ ತಾಳುವರು ಅಂಧಕಾರದೊಳು. ಕೇವಲ ಭುಜಬಲದಿಂದ ಜಯಹೊಂದಲಾರನು ನರಮಾನವನು!


ನಮ್ಮ ದೇವರಾದ ಸರ್ವೇಶ್ವರಾ, ಇಗೋ, ನೋಡು ನಮ್ಮನಾಳಿಹರು ಭೂರಾಜರು ನಿನ್ನ ಬಿಟ್ಟು, ಆದರೇನು, ಹೊಗಳುವೆವು ನಿನ್ನ ನಾಮವನೆ ಮುನ್ನಿಟ್ಟು.


ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಯೇಲರ ಅರಸನೆಂದು ನೆನಸಿ, ಅವನಿಗೆ ವಿರುದ್ಧ ಯುದ್ಧಮಾಡುವುದಕ್ಕೆ ಅವನನ್ನು ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಂಡನು. ಆಗ ದೇವರಾದ ಸರ್ವೇಶ್ವರ ಅವನಿಗೆ ನೆರವಾಗಿ, ಶತ್ರುಗಳನ್ನು ಅವನ ಕಡೆಯಿಂದ ತೊಲಗಿಸಿದರು.


ಇಗೋ, ದೇವರೇ ನಾಯಕರಾಗಿ ನಮ್ಮೊಂದಿಗಿರುತ್ತಾರೆ; ನಿಮಗೆ ವಿರುದ್ಧ ಯುದ್ಧ ಕಹಳೆಗಳನ್ನು ಮೊಳಗಿಸುವ ಯಾಜಕರೂ ನಮ್ಮೊಂದಿಗೆ ಇರುತ್ತಾರೆ. ಇಸ್ರಯೇಲರೇ, ನಿಮ್ಮ ಪೂರ್ವಜರ ದೇವರಾದ ಸರ್ವೇಶ್ವರನೊಡನೆ ಯುದ್ಧಮಾಡಬೇಡಿ; ನೀವು ಜಯಿಸಲಾರಿರಿ,” ಎಂದು ಕೂಗಿ ಹೇಳಿದನು.


ಆದರೆ ತಪ್ಪು ತಿಳಿಯುತ್ತಿದ್ದರು ಅವರ ವಿರೋಧಿಗಳು; ‘ಇದಾಯಿತು ನಮ್ಮ ಶಕ್ತಿಯಿಂದ, ಸರ್ವೇಶ್ವರನಿಂದಲ್ಲ’ವೆಂದುಕೊಂಡು ಈ ಕಾರಣ ಹಿಂತೆಗೆದುಕೊಂಡೆನು ನನ್ನ ನಿಗದಿನಿರ್ಣಯವನು.


ನಾನು ನಿನಗೆ ಹೇಳುತ್ತೇನೆ, ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು, ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು.


ಈಟಿ, ಕತ್ತಿಗಳಿಲ್ಲದೆ ಸರ್ವೇಶ್ವರ ರಕ್ಷಿಸಬಲ್ಲನೆಂಬುದು ಇಲ್ಲಿ ಕೂಡಿರುವವರೆಲ್ಲರಿಗೆ ಗೊತ್ತಾಗುವುದು. ಏಕೆಂದರೆ ಸಮರದ ಪರಿಣಾಮ ಇರುವುದು ಸರ್ವೇಶ್ವರನ ಕೈಯಲ್ಲಿ; ಅವರು ತಪ್ಪದೆ ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವರು,” ಎಂದನು.


“ನೀವು ನಿಮ್ಮ ಜನರನ್ನು ಶತ್ರುಗಳೊಡನೆ ಯುದ್ಧಮಾಡುವುದಕ್ಕೆ ಎಲ್ಲಿಗಾದರೂ ಕಳುಹಿಸಿದಾಗ ಅವರು ಅಲ್ಲಿಂದ ನೀವು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು, ಸರ್ವೇಶ್ವರನಾದ ನಿಮ್ಮನ್ನು ಪ್ರಾರ್ಥಿಸಿದರೆ,


ಆಸನು ಅವನನ್ನು ಎದುರುಗೊಳ್ಳಲು ಹೋದನು. ಮಾರೇಷದ ಬಳಿಯಲ್ಲಿದ್ದ ಚೆಫಾತಾ ಬಯಲಿನಲ್ಲಿ ಉಭಯರೂ ವ್ಯೂಹಕಟ್ಟಿದರು.


ಆ ಕಾಲದಲ್ಲಿ ದರ್ಶಿಯಾದ ಹನಾನಿಯು ಯೆಹೂದ್ಯರ ಅರಸ ಆಸನ ಬಳಿಗೆ ಬಂದು, “ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಆಶ್ರಯಿಸಿಕೊಳ್ಳದೆ ಸಿರಿಯಾದ ಅರಸನನ್ನು ಆಶ್ರಯಿಸಿಕೊಂಡದ್ದರಿಂದ ಸಿರಿಯಾ ರಾಜನ ಸೈನ್ಯವು ನಿಮ್ಮ ಕೈಗೆ ಬೀಳದಂತೆ ನುಣಿಚಿಕೊಂಡಿತು.


ನೀವೇ ಹೋಗಿ ಕಾರ್ಯವನ್ನು ನಿರ್ವಹಿಸಿರಿ. ಧೈರ್ಯದಿಂದ ಯುದ್ಧಮಾಡಿ. ಹಾಗೆ ಮಾಡದಿದ್ದರೆ ದೇವರು ಶತ್ರುಗಳಿಂದ ನಿಮ್ಮನ್ನು ಅಪಜಯಗೊಳಿಸುವರು. ಜಯಾಪಜಯಗಳನ್ನು ನೀಡಲು ಅವರು ಶಕ್ತರು ಆಗಿರುತ್ತಾರಲ್ಲವೆ?” ಎಂದನು.


ಆ ದಿನದಂದು ಅಳಿದುಳಿದ ಇಸ್ರಯೇಲರು, ತಪ್ಪಿಸಿಕೊಂಡ ಯಕೋಬ ಮನೆತನದವರು ತಮ್ಮನ್ನು ಬಾಧಿಸಿದವರನ್ನು ನೆಮ್ಮುವುದಿಲ್ಲ. ಬದಲಿಗೆ ಇಸ್ರಯೇಲರ ಪರಮಪಾವನ ಸ್ವಾಮಿಯಾದ ಸರ್ವೇಶ್ವರನನ್ನೇ ನಿಶ್ಚಯವಾಗಿ ಆಶ್ರಯಿಸುವರು.


ಅನಂತರ ಜನರು ಆರ್ಭಟಿಸಿದರು. ಅವರು ಆರ್ಭಟಿಸಿದ ಕೂಡಲೆ ದೇವರು ಯಾರೊಬ್ಬಾಮನನ್ನೂ ಎಲ್ಲಾ ಇಸ್ರಯೇಲರನ್ನೂ ಅಬೀಯನಿಂದ ಹಾಗೂ ಯೆಹೂದ್ಯರಿಂದ ಅಪಜಯಗೊಳಿಸಿದರು.


ತಂದೆ ಆಸನ ಮಾರ್ಗದಲ್ಲಿ ಇವನು ತಪ್ಪದೆ ನಡೆಯುತ್ತಾ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿ ಇದ್ದನು.


ಫಿಲಿಷ್ಟಿಯರೊಡನೆ ಗೂರ್‍ಬಾಳಿನಲ್ಲಿರುವ ಅರೇಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧಮಾಡುವಾಗ ಅವನಿಗೆ ದೇವರ ಸಹಾಯ ದೊರೆಯಿತು.


ಕೆಳಗಿಳಿವರವರು, ಕುಸಿದು ಬೀಳುವರವರು I ಏಳುವೆವು, ಸ್ಥಿರನಿಲ್ಲುವೆವು ನಾವೆಲ್ಲರು II


ಮನುಜ ನಾನು, ಕ್ರಿಮಿಕೀಟಕೆ ಸಮಾನನು I ಅಲಕ್ಷಿತನು, ಪರರಿಂದ ತಿರಸ್ಕೃತನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು