Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 14:13 - ಕನ್ನಡ ಸತ್ಯವೇದವು C.L. Bible (BSI)

13 ಅವರು ಸೋತು ಓಡಿಹೋದಾಗ ಆಸನೂ ಅವನ ಜನರೂ ಗೆರಾರಿನವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದರು. ಅವರಲ್ಲಿ ಯಾರೂ ಜೀವದಿಂದುಳಿಯಲಿಲ್ಲ. ಸರ್ವೇಶ್ವರನ ಮತ್ತು ಅವರ ಸೈನ್ಯದ ಮುಂದೆ ಸುಡಾನರು ಭಿನ್ನಭಿನ್ನರಾದರು. ಇಸ್ರಯೇಲರಿಗೆ ಅಪರಿಮಿತವಾದ ಕೊಳ್ಳೆಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕೂಷ್ಯರು ಸೋತು ಓಡಿಹೋದಾಗ ಆಸನೂ ಅವನ ಜನರೂ ಗೆರಾರಿನವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದರು; ಅವರಲ್ಲಿ ಯಾರೂ ಜೀವದಿಂದುಳಿಯಲಿಲ್ಲ. ಯೆಹೋವನ ಮತ್ತು ಆತನ ಸೈನ್ಯದ ಮುಂದೆ ನುಚ್ಚು ನೂರಾಗಿ ಹೋದರು. ಇಸ್ರಾಯೇಲರಿಗೆ ಅಪರಿಮಿತವಾದ ಕೊಳ್ಳೆ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕೂಷ್ಯರು ಓಡಿಹೋದಾಗ ಆಸನೂ ಅವನ ಜನರೂ ಗೆರಾರಿನವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದರು; ಅವರಲ್ಲಿ ಯಾರೂ ಜೀವದಿಂದುಳಿಯಲಿಲ್ಲ. ಯೆಹೋವನ ಮತ್ತು ಆತನ ಸೈನ್ಯದ ಮುಂದೆ ಚೂರು ಚೂರಾದರು. ಇಸ್ರಾಯೇಲ್ಯರಿಗೆ ಅಪರಿವಿುತವಾದ ಕೊಳ್ಳೆ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಸನ ಸೈನಿಕರು ಇಥಿಯೋಪಿಯಾದ ಸೈನ್ಯವನ್ನು ಗೆರಾರಿನ ತನಕ ಹಿಂದಟ್ಟಿಕೊಂಡು ಹೋದರು. ಅವರು ಮತ್ತೆ ಸೈನ್ಯವನ್ನು ಕಟ್ಟಿ ಯುದ್ಧಮಾಡಲು ಸಾಧ್ಯವಾಗದಷ್ಟು ಸೈನಿಕರು ಸತ್ತರು. ಅವರ ಬಲವನ್ನು ಮುರಿಯಲು ಯೆಹೋವನು ತನ್ನ ಸೈನ್ಯವನ್ನು ಬಳಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಆಸನೂ, ಅವನ ಸಂಗಡ ಇದ್ದ ಜನರೂ ಅವರನ್ನು ಗೆರಾರಿನವರೆಗೂ ಹಿಂದಟ್ಟಿದರು. ಹೆಚ್ಚಿನ ಸಂಖ್ಯೆಯಲ್ಲಿ ಕೂಷ್ಯರು ಸೋತುಹೋದರು. ಅವರು ಯೆಹೋವ ದೇವರ ಮುಂದೆಯೂ, ಅವರ ಸೈನ್ಯದ ಮುಂದೆಯೂ ನಾಶವಾದರು. ಯೆಹೂದ್ಯರು ಬಹು ಕೊಳ್ಳೆಯನ್ನು ಒಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 14:13
17 ತಿಳಿವುಗಳ ಹೋಲಿಕೆ  

ಕಾನಾನ್ಯರ ನಾಡು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿ ಇರುವ ಗಾಜಾ ಪಟ್ಟಣದವರೆಗೂ ಮತ್ತು ಸೊದೋಮ್, ಗೊಮೋರ, ಆದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿದ್ದ ಲೆಷಾ ಊರಿನವರೆಗೂ ಹಬ್ಬಿತ್ತು.


ಹಿಂದೆ ಅಬ್ರಹಾಮನ ಕಾಲದಲ್ಲಿ ಬಂದಿದ್ದ ಬರಗಾಲವು ಮತ್ತೊಮ್ಮೆ ಕಾನಾನ್ ನಾಡಿಗೆ ಬಂದಿತು. ಇಸಾಕನು ಫಿಲಿಷ್ಟಿಯರ ಅರಸ ಅಬೀಮೆಲೆಕನನ್ನು ಕಾಣಲು ಗೆರಾರಿಗೆ ಹೋದನು.


ಅಬ್ರಹಾಮನು ಅಲ್ಲಿಂದ ಕಾನಾನ್ ನಾಡಿನ ದಕ್ಷಿಣ ಪ್ರಾಂತಕ್ಕೆ ಪ್ರಯಾಣ ಮಾಡುತ್ತಾ ಕಾದೇಶಿಗೂ ಶೂರಿಗೂ ನಡುವೆ ವಾಸಮಾಡಿದನು. ಕೆಲವು ಕಾಲ ಗೆರಾರಿನಲ್ಲೂ ಇದ್ದನು.


ಇದಲ್ಲದೆ ಸರ್ವೇಶ್ವರನ ಭಯದಿಂದ ತಬ್ಬಿಬ್ಬಾದ ಗೆರಾರಿನ ಸುತ್ತಣ ಪಟ್ಟಣಗಳನ್ನು ಅವರು ವಶಪಡಿಸಿಕೊಂಡು, ಅವುಗಳನ್ನೆಲ್ಲಾ ಸುಲಿಗೆಮಾಡಿದರು. ಅವುಗಳಲ್ಲೂ ದೊಡ್ಡ ಕೊಳ್ಳೆ ಸಿಕ್ಕಿತು.


ಇವರು ಪ್ರಭುವಿನ ಸನ್ನಿಧಿಯಿಂದಲೂ ಅವರ ಪ್ರಭಾವದ ಮಹಿಮೆಯಿಂದಲೂ ಬಹಿಷ್ಕೃತರಾಗಿ, ನಿತ್ಯದಂಡನೆಗೆ ಗುರಿಯಾಗುವರು.


ದೇವಾ, ನೀ ನಮ್ಮನು ಕೈಬಿಟ್ಟಿರುವುದು ಸರಿಯೋ? I ನಮ್ಮ ಸೈನ್ಯಸಮೇತ ನೀ ಬರದೆ ಹೋದೆಯೋ? II


ದೇವರ ಹೃದಯ ಧೀಮಂತ, ಅವರ ಶಕ್ತಿ ಅತುಳ ಆತನನ್ನು ಪ್ರತಿಭಟಿಸಿ ಜಯಗಳಿಸಿದವನಿಲ್ಲ.


ದೇವರು ನನ್ನನ್ನು ನಸುಕಿಬಿಡಬಾರದೆ? ತನ್ನ ಕೈಯನ್ನು ಚಾಚಿ ಸಂಹರಿಸಿಬಿಡಬಾರದೆ?


ದಾವೀದನ ಸೈನ್ಯಕ್ಕೆ ಪ್ರತಿದಿನವೂ ಹೊಸಬರು ಬಂದು ಸೇರುತ್ತಾ ಇದ್ದುದರಿಂದ ಅವನ ಸೈನ್ಯವು ಸಂಖ್ಯೆಯಲ್ಲಿ ಅಧಿಕಾಧಿಕವಾಗಿ ಬೆಳೆಯಿತು.


ನಿಮ್ಮ ದಾಸಿಯ ಅಪರಾಧಕ್ಕೆ ಕ್ಷಮಾಪಣೆಯಾಗಲಿ; ಒಡೆಯಾ, ತಾವು ಸರ್ವೇಶ್ವರನ ಶತ್ರುಗಳೊಡನೆ ಯುದ್ಧಮಾಡುವುದರಿಂದ ಅವರು ನಿಮ್ಮ ಮನೆಯನ್ನು ಶಾಶ್ವತವಾಗಿ ಸ್ಥಿರಪಡಿಸುವರು. ಆದುದರಿಂದ ನಿಮ್ಮ ಜೀವಮಾನದಲ್ಲೆಲ್ಲಾ ನಮ್ಮಲ್ಲಿ ಕೆಟ್ಟತನ ಕಾಣದಿರಲಿ;


ಆಗ ಆ ವ್ಯಕ್ತಿ, “ನಾನು ಅಂಥವನಲ್ಲ; ನಾನು ಸರ್ವೇಶ್ವರನ ಸೇನಾಪತಿ. ಇದೀಗಲೆ ಬಂದವನು,’ ಎಂದು ಉತ್ತರಿಸಿದನು. ಕೂಡಲೆ ಯೆಹೋಶುವ ಅವನಿಗೆ ಸಾಷ್ಟಾಂಗವೆರಗಿ, “ಒಡೆಯಾ, ತಮ್ಮ ದಾಸನಾದ ನನಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ?” ಎಂದನು.


ನೋಹನ ಮಕ್ಕಳಾದ ಶೇಮ್, ಹಾಮ್ ಮತ್ತು ಯೆಫೆತರಿಗೆ ಜಲಪ್ರಳಯ ಮುಗಿದ ಮೇಲೆ ಮಕ್ಕಳಾದರು. ಅವರ ವಂಶಾವಳಿ ಇದು :


ಈಜಿಪ್ಟಿನ ಅರಸ ಶೀಶಕನು, ಸಾವಿರದ ಇನ್ನೂರು ರಥಗಳನ್ನೂ ಅರವತ್ತು ಸಾವಿರ ಮಂದಿ ರಾಹುತರನ್ನೂ ಈಜಿಪ್ಟಿನ, ಲಿಬ್ಯದ, ಸುಕ್ಕೀಯದ ಹಾಗೂ ಕೂಷ್ಯದ ಅಸಂಖ್ಯ ಸೈನಿಕರನ್ನೂ ಕೂಡಿಸಿಕೊಂಡು ಜೆರುಸಲೇಮಿಗೆ ಹೊರಟುಬಂದನು.


ತಾವು ತಂದ ಕೊಳ್ಳೆಯಿಂದ ಏಳು ನೂರು ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ಸರ್ವೇಶ್ವರನಿಗೆ ಆ ದಿನ ಬಲಿದಾನ ಮಾಡಿದರು.


ಅವರು ಪ್ರಯಾಣಮಾಡುತ್ತಿದ್ದಾಗ ದೇವರು ಸುತ್ತಮುತ್ತಣದ ಊರಿನವರಲ್ಲಿ ಭಯ ಹುಟ್ಟಿಸಿದರು. ಇದರಿಂದಾಗಿ ಆ ಊರಿವನರಾರೂ ಯಕೋಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.


ಜುದೇಯದ ಸುತ್ತಲಿನ ದೇಶಗಳ ರಾಜ್ಯಗಳವರೆಗೆ ಸರ್ವೇಶ್ವರನ ಭಯವಿತ್ತು. ಆದುದರಿಂದ ಅವರು ಯೆಹೋಷಾಫಾಟನೊಡನೆ ಯುದ್ಧಕ್ಕೆ ಬರಲಿಲ್ಲ.


ಸರ್ವೇಶ್ವರಾ ಸ್ವಾಮಿಯೇ ಇಸ್ರಯೇಲರ ಪರವಾಗಿ ಶತ್ರಗಳೊಡನೆ ಯುದ್ಧಮಾಡಿದರೆಂಬ ಸುದ್ದಿ ಅನ್ಯದೇಶಗಳ ರಾಜ್ಯಗಳವರೆಗೆ ಮುಟ್ಟಿದಾಗ, ಅವರೆಲ್ಲರು ಬಹಳ ಭಯಭೀತರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು