Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 14:15 - ಕನ್ನಡ ಸತ್ಯವೇದವು C.L. Bible (BSI)

15 ದನಕಾಯುವವರ ಗುಡಾರಗಳ ಮೇಲೆ ದಾಳಿಮಾಡಿ ಎಷ್ಟೋ ಒಂಟೆಕುರಿಗಳನ್ನು ಜೆರುಸಲೇಮಿಗೆ ಹೊಡೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದನ ಕಾಯುವವರ ಗುಡಾರಗಳ ಮೇಲೂ ದಾಳಿಮಾಡಿ ಸಾಕಷ್ಟು ಒಂಟೆ ಕುರಿಗಳನ್ನು ಯೆರೂಸಲೇಮಿಗೆ ಹೊಡೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ದನಕಾಯುವವರ ಗುಡಾರಗಳ ಮೇಲೆ ಬಿದ್ದು ಎಷ್ಟೋ ಒಂಟೆ ಕುರಿಗಳನ್ನು ಯೆರೂಸಲೇವಿುಗೆ ಹೊಡೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಸನ ಸೈನಿಕರು ಕುರುಬರ ಪಾಳೆಯವನ್ನು ಧ್ವಂಸಮಾಡಿ ಅನೇಕಾನೇಕ ಕುರಿಗಳನ್ನೂ ಒಂಟೆಗಳನ್ನೂ ಸೂರೆಮಾಡಿ ಜೆರುಸಲೇಮಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಪಶುಗಳಿದ್ದ ಡೇರೆಗಳನ್ನೂ, ಕುರಿಗಳನ್ನೂ, ಒಂಟೆಗಳನ್ನೂ ಬಹಳವಾಗಿ ತೆಗೆದುಕೊಂಡು ಯೆರೂಸಲೇಮಿಗೆ ತಿರುಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 14:15
7 ತಿಳಿವುಗಳ ಹೋಲಿಕೆ  

ಅವರು ವೈರಿಗಳಿಂದ ಐವತ್ತು ಸಾವಿರ ಒಂಟೆಗಳನ್ನೂ ಎರಡು ಲಕ್ಷ ಐವತ್ತು ಸಾವಿರ ಕುರಿಗಳನ್ನೂ ಎರಡು ಸಾವಿರ ಕತ್ತೆಗಳನ್ನೂ ವಶಪಡಿಸಿಕೊಂಡರಲ್ಲದೆ, ಒಂದು ಲಕ್ಷ ಜನರನ್ನು ಯುದ್ಧಕೈದಿಗಳನ್ನಾಗಿ ಸೆರೆಹಿಡಿದರು.


ಯೆಹೂದದ ಅರಸ ಹಿಜ್ಕೀಯನ ಕಾಲದಲ್ಲಿ ಮೇಲೆ ನಮೂದಿಸಿದ ಪುರುಷರು ಅಲ್ಲಿ ವಾಸಿಸುತ್ತಿದ್ದ ಹಾಮ್ಯರನ್ನೂ ಮೆಗೂನ್ಯರನ್ನೂ ಜಯಿಸಿ ಎಲ್ಲರನ್ನೂ ನಿರ್ನಾಮ ಮಾಡಿದರು. ತಮ್ಮ ಆಡುಕುರಿಗಳಿಗಾಗಿ ಧಾರಾಳವಾಗಿ ಹುಲ್ಲುಗಾವಲುಗಳಿದ್ದುದರಿಂದ ಅಲ್ಲಿಯೇ ಸ್ಥಿರವಾಗಿ ನೆಲೆಸಿದರು.


ಇದಲ್ಲದೆ, ದಾವೀದನು ಶತ್ರುಗಳ ದನಕುರಿಗಳನ್ನೂ ತೆಗೆದುಕೊಂಡನು. ಅವನ ಜನರು, “ಇವು ದಾವೀದನ ಕೊಳ್ಳೆ,” ಎಂದು ಹೇಳಿ ಅವುಗಳನ್ನು ತಮ್ಮ ದನಗಳ ಸಮೇತ ಹೊಡೆದುಕೊಂಡು ಬಂದರು.


ಇಸ್ರಯೇಲರು ಮಿದ್ಯಾನರ ಎಲ್ಲಾ ಮಡದಿ ಮಕ್ಕಳನ್ನೂ ಸೆರೆಹಿಡಿದರು; ಎಲ್ಲಾ ದನಕುರಿಗಳನ್ನೂ ಆಸ್ತಿಪಾಸ್ತಿಯನ್ನೂ ಸೂರೆಮಾಡಿದರು.


ಇದಲ್ಲದೆ ಸರ್ವೇಶ್ವರನ ಭಯದಿಂದ ತಬ್ಬಿಬ್ಬಾದ ಗೆರಾರಿನ ಸುತ್ತಣ ಪಟ್ಟಣಗಳನ್ನು ಅವರು ವಶಪಡಿಸಿಕೊಂಡು, ಅವುಗಳನ್ನೆಲ್ಲಾ ಸುಲಿಗೆಮಾಡಿದರು. ಅವುಗಳಲ್ಲೂ ದೊಡ್ಡ ಕೊಳ್ಳೆ ಸಿಕ್ಕಿತು.


ಓದೇದನ ಮಗ ಅಜರ್ಯನ ಮೇಲೆ ದೇವರ ಆತ್ಮವು ಬಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು