Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 14:6 - ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರನ ಅನುಗ್ರಹದಿಂದ ಶತ್ರುಭಯ ತಪ್ಪಿ, ಆ ವರ್ಷಗಳಲ್ಲಿ ಯಾವ ಯುದ್ಧವೂ ಇಲ್ಲದೆ, ನಾಡಿನಲ್ಲಿ ಸಮಾಧಾನವಿದ್ದುದರಿಂದ ಇವನು ಜುದೇಯದಲ್ಲಿ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನ ಅನುಗ್ರಹದಿಂದ ಶತ್ರುಭಯ ತಪ್ಪಿ ಯಾವ ಯುದ್ಧವೂ ಇಲ್ಲದೆ ದೇಶದಲ್ಲಿ ಸಮಾಧಾನವಿದ್ದುದರಿಂದ ಇವನು ಯೆಹೂದದಲ್ಲಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನ ಅನುಗ್ರಹದಿಂದ ಶತ್ರುಭಯ ತಪ್ಪಿ ಆ ವರುಷಗಳಲ್ಲಿ ಯಾವ ಯುದ್ಧವೂ ಇಲ್ಲದೆ ದೇಶದಲ್ಲಿ ಸಮಾಧಾನವಿದ್ದದರಿಂದ ಇವನು ಯೆಹೂದದಲ್ಲಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ಕಾಲದಲ್ಲಿ ಆಸನು ಯೆಹೂದ ಪ್ರಾಂತ್ಯದಲ್ಲಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು. ಆಸನ ಆಳ್ವಿಕೆಯಲ್ಲಿ ಯುದ್ಧವೇ ಇರಲಿಲ್ಲ. ಯಾಕೆಂದರೆ ಯೆಹೋವನು ಅವನಿಗೆ ಸಮಾಧಾನವನ್ನು ಅನುಗ್ರಹಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇದಲ್ಲದೆ ಅವನು ಯೆಹೂದದಲ್ಲಿ ಕೋಟೆಗಳುಳ್ಳ ಪಟ್ಟಣಗಳನ್ನು ಕಟ್ಟಿದನು. ಏಕೆಂದರೆ ದೇಶವು ಶಾಂತವಾಗಿತ್ತು. ಯೆಹೋವ ದೇವರು ಅವನಿಗೆ ವಿಶ್ರಾಂತಿ ಕೊಟ್ಟದ್ದರಿಂದ ಆ ವರ್ಷಗಳಲ್ಲಿ ಅವನಿಗೆ ಯುದ್ಧವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 14:6
17 ತಿಳಿವುಗಳ ಹೋಲಿಕೆ  

ಈ ಪ್ರಮಾಣದ ನಿಮಿತ್ತ ಯೆಹೂದ್ಯರೆಲ್ಲರಿಗೆ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಲವಲವಿಕೆಯಿಂದ ಸರ್ವೇಶ್ವರನನ್ನು ಬಯಸಿದ ಕಾರಣ, ಸರ್ವೇಶ್ವರ ಅವರಿಗೆ ಪ್ರಸನ್ನರಾಗಿ ಎಲ್ಲಾ ಕಡೆಗಳಲ್ಲೂ ಶಾಂತಿಸಮಾಧಾನವನ್ನು ಅನುಗ್ರಹಿಸಿದರು.


ವ್ಯಕ್ತಿಯಾಗಿರಲಿ, ರಾಷ್ಟ್ರವಾಗಿರಲಿ, ಯಾರಾಗಿದ್ದರೇನು? ದೇವರು ಸುಮ್ಮನಿದ್ದರೆ ತಪ್ಪುಹೊರಿಸುವವರಾರು? ವಿಮುಖನಾದರೆ ಆತನ ದರ್ಶನ ಪಡೆಯಬಲ್ಲವರಾರು?


ನಿನಗೆ ಒಬ್ಬ ಮಗ ಹುಟ್ಟುವನು; ಅವನು ಸಮಾಧಾನ ಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲ ವಿರೋಧಿಗಳನ್ನು ಅಡಗಿಸಿ ಅವನಿಗೆ ಶಾಂತಿ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನ ಎಂಬ ಹೆಸರಿರುವುದು. ಅವನ ಕಾಲದಲ್ಲಿ ಇಸ್ರಯೇಲರಿಗೆ ಶಾಂತಿಸಮಾಧಾನವನ್ನೂ ಸೌಭಾಗ್ಯವನ್ನೂ ದಯಪಾಲಿಸುವೆನು.


ಜಗದೆಲ್ಲೆಡೆ ಕದನ ಕಾಳಗ ನಿಲ್ಲಿಸಿಹನು I ಬಿಲ್ಲು ಭಲ್ಲೆಗಳನು ಮುರಿದು ಹಾಕಿದನು I ರಥಗಳನು ಬೆಂಕಿಯಿಂದ ಸುಟ್ಟುಹಾಕಿದನು II


ನನಗಾದರೋ ನನ್ನ ದೇವರಾದ ಸರ್ವೇಶ್ವರ ಎಲ್ಲ ಕಡೆಗಳಲ್ಲೂ ಸಮಾಧಾನವನ್ನು ಅನುಗ್ರಹಿಸಿದ್ದಾರೆ; ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ; ಆಪತ್ತು ವಿಪತ್ತು ದೂರವಾಗಿವೆ.


ಸರ್ವೇಶ್ವರನ ಶತ್ರುಗಳೆಲ್ಲರು ನಾಶವಾಗಲಿ ಇವರಂತೆ ಆತನ ಭಕ್ತರು ಬೆಳಗಲಿ ಉದಯಕಾಲದ ಸೂರ್ಯನಂತೆ! ನಾಡಿನಲಿ ನಾಲ್ವತ್ತು ವರ್ಷಕಾಲ ಶಾಂತಿ ನೆಲಸಿತ್ತು!


ಮೋವಾಬ್ಯರು ಇಸ್ರಯೇಲರಿಗೆ ಶರಣಾದರು; ನಾಡಿನಲ್ಲಿ ಎಂಬತ್ತು ವರ್ಷ ನೆಮ್ಮದಿ ಇತ್ತು.


ನಾಡಿನಲ್ಲಿ ನಾಲ್ವತ್ತು ವರ್ಷಗಳ ಕಾಲ ನೆಮ್ಮದಿ ನೆಲಸಿತ್ತು. ತರುವಾಯ ಕೆನಜನ ಮಗ ಒತ್ನೀಯೇಲನು ಮರಣ ಹೊಂದಿದನು.


ಸರ್ವೇಶ್ವರಸ್ವಾಮಿ ಸುತ್ತಮುತ್ತಲಿನ ಶತ್ರುಗಳನ್ನು ನಿರ್ಮೂಲಮಾಡಿ ಇಸ್ರಯೇಲರಿಗೆ ನೆಮ್ಮದಿಯಿತ್ತರು. ಬಹಳ ದಿನಗಳಾದ ತರುವಾಯ ಯೆಹೋಶುವ ಹಣ್ಣುಹಣ್ಣು ಮುದುಕನಾದ.


ಹೀಗೆ ದೇವ ಅನುಗ್ರಹದಿಂದ ಸುತ್ತಮುತ್ತಲಿನ ವೈರಿಗಳ ಭಯ ತಪ್ಪಿ, ಯೆಹೋಷಾಫಾಟನ ರಾಜ್ಯಕ್ಕೆ ಸಮಾಧಾನ ಉಂಟಾಯಿತು.


ಮೋಶೆಯ ಮುಖಾಂತರ ಸರ್ವೇಶ್ವರ ಇಸ್ರಯೇಲರಿಗೆ ಕೊಟ್ಟ ನ್ಯಾಯವಿಧಿಗಳನ್ನು ನೀನು ಕೈಗೊಳ್ಳುವುದಾದರೆ ಸಫಲನಾಗುವೆ. ಸ್ಥಿರಚಿತ್ತನಾಗಿರು, ಧೈರ್ಯದಿಂದ ಇರು; ಅಂಜಬೇಡ, ಕಳವಳಗೊಳ್ಳಬೇಡ.


ಇವನು ಇಸ್ರಯೇಲರಂತೆ ನಡೆಯದೆ, ತನ್ನ ಪಿತೃವಿನ ದೇವರಲ್ಲಿ ಭಕ್ತಿಯಿಟ್ಟು ಅವರ ಆಜ್ಞೆಗಳನ್ನು ಅನುಸರಿಸಿದನು.


ದೇವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನ ಕಾಲದಲ್ಲಿ ಅವನು ದೇವರನ್ನು ಅವಲಂಬಿಸಿದ್ದ ಕಾಲಾವಧಿಯಲ್ಲೇ ದೇವರಾದ ಸರ್ವೇಶ್ವರ ಅವನನ್ನು ಅಭಿವೃದ್ಧಿಗೆ ತಂದದ್ದು.


ದೇವಾಲಯದ ಸೇವಾಸಂಬಂಧದಲ್ಲೂ ಧರ್ಮಶಾಸ್ತ್ರವಿಧಿಗಳ ಸಂಬಂಧದಲ್ಲೂ ತಾನು ಪ್ರಾರಂಭಿಸಿದ ಎಲ್ಲಾ ಕಾರ್ಯಗಳನ್ನು ಯಥಾರ್ಥಚಿತ್ತದಿಂದ ಮಾಡಿ ಮುಗಿಸಿ, ತನ್ನ ದೇವರ ಒಲುಮೆಯನ್ನು ಗಳಿಸಿಕೊಂಡನು.


ಯೋಷೀಯನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ, ಇನ್ನೂ ಯೌವನಸ್ಥನಾಗಿರುವಾಗಲೇ, ತನ್ನ ಪೂರ್ವಜನಾದ ದಾವೀದನ ದೇವರನ್ನು ಅವಲಂಬಿಸುವವನಾದನು; ಹನ್ನೆರಡನೆಯ ವರ್ಷ ಜುದೇಯದಲ್ಲೂ, ಜೆರುಸಲೇಮಿನಲ್ಲೂ ಇದ್ದ ಪೂಜಾಸ್ಥಳಗಳನ್ನು, ಆಶೇರಸ್ತಂಭಗಳನ್ನು ಹಾಗು ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನು ತೆಗೆದುಹಾಕಿ ನಾಡನ್ನು ಶುದ್ಧಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು