Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 14:8 - ಕನ್ನಡ ಸತ್ಯವೇದವು C.L. Bible (BSI)

8 ಆಸನಿಗೆ ಸೈನ್ಯವಿತ್ತು; ಅದರಲ್ಲಿ ಗುರಾಣಿ ಬರ್ಜಿಗಳನ್ನು ಹಿಡಿದ ಮೂರು ಲಕ್ಷ ಮಂದಿ ಯೆಹೂದ್ಯರಿದ್ದರು. ಖೇಡ್ಯ ಹಿಡಿದವರೂ ಬಿಲ್ಲುಗಾರರೂ ಆದ ಎರಡು ಲಕ್ಷದ ಎಂಬತ್ತು ಸಾವಿರ ಮಂದಿ ಬೆನ್ಯಾಮೀನ್ಯರೂ ಇದ್ದರು. ಇವರೆಲ್ಲರು ರಣವೀರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಸನಿಗೆ ಸೈನ್ಯವಿತ್ತು; ಅದರಲ್ಲಿ ಗುರಾಣಿ ಬರ್ಜಿಗಳನ್ನು ಹಿಡಿದಿರುವ ಮೂರು ಲಕ್ಷ ಮಂದಿ ಯೆಹೂದ್ಯ ಸೈನಿಕರಿದ್ದರು. ಖೇಡ್ಯ ಹಿಡಿದವರೂ ಬಿಲ್ಲುಗಾರರೂ ಆದ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಬೆನ್ಯಾಮೀನ್ ಸೈನಿಕರೂ ಇದ್ದರು. ಇವರೆಲ್ಲರೂ ಯುದ್ಧವೀರರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಸನಿಗೆ ಸೈನ್ಯವಿತ್ತು; ಅದರಲ್ಲಿ ಗುರಾಣಿಬರ್ಜಿಗಳನ್ನು ಹಿಡಿದಿರುವ ಮೂರು ಲಕ್ಷ ಮಂದಿ ಯೆಹೂದ್ಯರೂ ಖೇಡ್ಯ ಹಿಡಿದವರೂ ಬಿಲ್ಲುಗಾರರೂ ಆಗಿರುವ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಬೆನ್ಯಾಮೀನ್ಯರೂ ಇದ್ದರು. ಇವರೆಲ್ಲರೂ ರಣವೀರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಸನ ಬಳಿ ಮೂರು ಲಕ್ಷ ಸೈನಿಕರಿದ್ದರು, ಯೆಹೂದಕುಲದ ಇವರು ಗುರಾಣಿಗಳನ್ನೂ ಬರ್ಜಿಗಳನ್ನೂ ಬಳಸಬಲ್ಲವರಾಗಿದ್ದರು. ಇವರಲ್ಲದೆ ಬೆನ್ಯಾಮೀನ್ ಕುಲದಿಂದ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಸೈನಿಕರಿದ್ದರು. ಇವರು ಸಣ್ಣ ಗುರಾಣಿಗಳನ್ನೂ ಬಿಲ್ಲುಬಾಣಗಳನ್ನೂ ಬಳಸಬಲ್ಲವರಾಗಿದ್ದರು. ಇವರೆಲ್ಲರೂ ರಣವೀರರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇದಲ್ಲದೆ ಆಸನಿಗೆ ದೊಡ್ಡ ಗುರಾಣಿಗಳನ್ನೂ, ಈಟಿಗಳನ್ನೂ ಹಿಡಿಯುವ ಸೈನ್ಯವಿತ್ತು. ಯೆಹೂದದವರು ಮೂರು ಲಕ್ಷ ಮಂದಿಯೂ, ಬೆನ್ಯಾಮೀನವರಲ್ಲಿ ಚಿಕ್ಕ ಗುರಾಣಿಗಳನ್ನು ಹಿಡಿಯುವ, ಬಿಲ್ಲುಗಳನ್ನು ಎಸೆಯುವ ಎರಡು ಲಕ್ಷದ ಎಂಬತ್ತು ಸಾವಿರ ಮಂದಿಯೂ ಇದ್ದರು. ಇವರೆಲ್ಲರು ಪರಾಕ್ರಮಶಾಲಿ ಯುದ್ಧವೀರರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 14:8
11 ತಿಳಿವುಗಳ ಹೋಲಿಕೆ  

ಅಬೀಯನು ನಾಲ್ಕು ಲಕ್ಷ ಮಂದಿ ರಣವೀರರನ್ನು ಆರಿಸಿಕೊಂಡು ಬಂದು ಯುದ್ಧ ಪ್ರಾರಂಭಿಸಿದನು. ಯಾರೊಬ್ಬಾಮನು ಎಂಟು ಲಕ್ಷ ಶ್ರೇಷ್ಠಯೋಧರೊಡನೆ ಅವನಿಗೆ ವಿರೋಧವಾಗಿ ಬಂದು ವ್ಯೂಹಕಟ್ಟಿದನು.


ಆಮೇಲೆ ಅಮಚ್ಯನು ಯೆಹೂದ್ಯರನ್ನು ಸಹಸ್ರಾಧಿಪತಿ ಹಾಗು ಶತಾಧಿಪತಿಗಳ ಕೈಕೆಳಗೆ ಒಟ್ಟುಗೂಡಿಸಿ, ಯೆಹೂದ ಮತ್ತು ಬೆನ್ಯಾಮೀನ್ ಕುಲಗಳ ಜನರನ್ನು ಆಯಾ ಗೋತ್ರಗಳ ಪ್ರಕಾರ ಅವರನ್ನು ನಿಲ್ಲಿಸಿ, ಇಪ್ಪತ್ತು ವರ್ಷದವರು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳವರನ್ನು ಲೆಕ್ಕಮಾಡಿಸಿದನು. ಅವರಲ್ಲಿ ಬರ್ಜಿ, ಗುರಾಣಿಗಳನ್ನು ಹಿಡಿದುಕೊಂಡು ಯುದ್ಧಕ್ಕೆ ಹೊರಡತಕ್ಕ ಶೂರರು ಮೂರು ಲಕ್ಷಮಂದಿ ಸಿಕ್ಕಿದರು.


ರೆಹಬ್ಬಾಮನು ಜೆರುಸಲೇಮನ್ನು ಮುಟ್ಟಿದ ನಂತರ ಇಸ್ರಯೇಲರಿಗೆ ವಿರುದ್ಧ ಯುದ್ಧಮಾಡುವುದಕ್ಕೂ ಅವರ ರಾಜ್ಯವನ್ನು ಮರಳಿ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಬತ್ತು ಸಾವಿರ ಮಂದಿ ಶ್ರೇಷ್ಟ ಸೈನಿಕರನ್ನು ಕೂಡಿಸಿದನು.


ಅರಸ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು; ಪ್ರತಿಯೊಂದು ಗುರಾಣಿಗೆ ಸುಮಾರು ಏಳು ಕಿಲೋಗ್ರಾಂ ಬಂಗಾರ ಹಿಡಿಯಿತು.


ಊಲಾಮನ ಮಕ್ಕಳು ಶೂರಸೈನಿಕರೂ ಬಿಲ್ಲುವಿದ್ಯೆಯಲ್ಲಿ ಪರಿಣಿತರೂ ಆಗಿದ್ದರು. ಅವನಿಗೆ ಒಟ್ಟು ಒಂದುನೂರ ಐವತ್ತು ಮಂದಿ ಮಕ್ಕಳು ಮೊಮ್ಮಕ್ಕಳೂ ಇದ್ದರು. ಇವರೆಲ್ಲರೂ ಬೆನ್ಯಾಮೀನ್ ಗೋತ್ರದವರು.


ಸರ್ವೇಶ್ವರನಿಗೆ ದ್ರೋಹಿಗಳಾದರು. ಅರಸ ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ


ಈಜಿಪ್ಟಿನ ಅರಸ ಶೀಶಕನು, ಸಾವಿರದ ಇನ್ನೂರು ರಥಗಳನ್ನೂ ಅರವತ್ತು ಸಾವಿರ ಮಂದಿ ರಾಹುತರನ್ನೂ ಈಜಿಪ್ಟಿನ, ಲಿಬ್ಯದ, ಸುಕ್ಕೀಯದ ಹಾಗೂ ಕೂಷ್ಯದ ಅಸಂಖ್ಯ ಸೈನಿಕರನ್ನೂ ಕೂಡಿಸಿಕೊಂಡು ಜೆರುಸಲೇಮಿಗೆ ಹೊರಟುಬಂದನು.


ಸುದಾನ್ ಹಾಗೂ ಲಿಬಿಯರ ಸೈನ್ಯ ಅಪರಿಮಿತ ರಥಾಶ್ವಬಲಗಳುಳ್ಳ ಮಹಾ ಸೈನ್ಯವಲ್ಲವೇ? ನೀವು ಸರ್ವೇಶ್ವರನನ್ನು ಆಶ್ರಯಿಸಿಕೊಂಡದ್ದರಿಂದ ಅವರು ಅದನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟರು.


ಸ್ವಲ್ಪಕಾಲವಾದ ಮೇಲೆ ಮೋವಾಬ್ಯರು, ಅಮ್ಮೋನಿಯರು ಹಾಗು ಮೆಗೂನ್ಯರಲ್ಲಿ ಕೆಲವರು ಯೆಹೋಷಾಫಾಟನಿಗೆ ವಿರುದ್ಧ ಯುದ್ಧಕ್ಕೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು