Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 15:17 - ಕನ್ನಡ ಸತ್ಯವೇದವು C.L. Bible (BSI)

17 ಇಸ್ರಯೇಲ್ ಪ್ರಾಂತ್ಯದಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದೆ ಇದ್ದರೂ ಆಸನು ತನ್ನ ಜೀವಮಾನದಲ್ಲೆಲ್ಲಾ ಯಥಾರ್ಥಚಿತ್ತನಾಗಿ ನಡೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನು ಇಸ್ರಾಯೇಲ್ ಪ್ರಾಂತ್ಯದಲ್ಲಿದ್ದ ಪೂಜಾಸ್ಥಳಗಳನ್ನು ಹಾಳು ಮಾಡದೆ ಇದ್ದರೂ ಆಸನು ತನ್ನ ಜೀವಮಾನದಲ್ಲೆಲ್ಲಾ ಯೆಹೋವನಿಗೆ ಯಥಾರ್ಥಚಿತ್ತನಾಗಿ ನಡೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇಸ್ರಾಯೇಲ್‍ಪ್ರಾಂತದಲ್ಲಿದ್ದ ಪೂಜಾಸ್ಥಳಗಳು ತೆಗೆದುಹಾಕಲ್ಪಡದಿದ್ದರೂ ಆಸನು ತನ್ನ ಜೀವಮಾನದಲ್ಲೆಲ್ಲಾ ಯಥಾರ್ಥಚಿತ್ತನಾಗಿ ನಡೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೂ ಯೆಹೂದದ ಎಲ್ಲಾ ಉನ್ನತಸ್ಥಳಗಳು ತೆಗೆಯಲ್ಪಡಲಿಲ್ಲ, ಆದರೆ ಆಸನು ತನ್ನ ಜೀವಮಾನದಲ್ಲೆಲ್ಲಾ ಯೆಹೋವನಿಗೆ ನಂಬಿಗಸ್ತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಇಸ್ರಾಯೇಲಿನೊಳಗಿಂದ ಪೂಜಾಸ್ಥಳಗಳನ್ನು ತೆಗೆದು ಹಾಕದಿದ್ದರೂ ಆಸನ ಹೃದಯವು ತನ್ನ ಜೀವಮಾನದಲ್ಲೆಲ್ಲಾ ಯೆಹೋವ ದೇವರಿಗೆ ಸಮರ್ಪಿತವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 15:17
15 ತಿಳಿವುಗಳ ಹೋಲಿಕೆ  

ಇವನ ಕಾಲದಲ್ಲೂ ಪೂಜಾಸ್ಥಳಗಳು ಹಾಗೆಯೇ ಇದ್ದವು. ಜನರು ಅವುಗಳಲ್ಲಿ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು.


ಆದರೆ ಅವನು ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ. ಆದುದರಿಂದ ಜನರು ಅವುಗಳಲ್ಲಿ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು.


ತನ್ನ ತಂದೆ ಆಸನ ಮಾರ್ಗದಲ್ಲಿ ಇವನು ತಪ್ಪದೆ ನಡೆಯುತ್ತಾ, ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿ ಇದ್ದನು. ಆದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ಆ ಸ್ಥಳಗಳಲ್ಲಿ ಬಲಿಕೊಡುತ್ತಾ, ಧೂಪಾರತಿ ಎತ್ತುತ್ತಾ ಇದ್ದರು.


ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣ ಅವನು ತನ್ನ ದೇವರಾದ ಸರ್ವೇಶ್ವರನಲ್ಲಿಟ್ಟಿದ್ದ ಯಥಾರ್ಥ ಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡೆಯಲಿಲ್ಲ.


ಅರಸನಾದ ಆಸನ ತಾಯಿ ಮಾಕಳು ಅಶೇರ ದೇವತೆಯ ಒಂದು ಅಸಹ್ಯ ಮೂರ್ತಿಯನ್ನು ಮಾಡಿಸಿದ್ದಳು. ಆದ್ದರಿಂದ ಅವನು ಆಕೆಯನ್ನು ‘ರಾಜಮಾತೆ’ ಎಂಬ ಪದವಿಯಿಂದ ತೆಗೆದುಹಾಕಿದನು. ಆ ಮೂರ್ತಿಯನ್ನು ತೆಗೆಸಿ ಕಿದ್ರೋನ್ ಹಳ್ಳದ ಬಳಿಯಲ್ಲಿ ಚೂರುಚೂರು ಮಾಡಿ ಸುಡಿಸಿದನು.


ತಾನೂ ತನ್ನ ತಂದೆಯೂ ತಾನೂ ಪ್ರತಿಷ್ಠಿಸಿದ ಬೆಳ್ಳಿ ಬಂಗಾರವನ್ನೂ ಪಾತ್ರೆಗಳನ್ನೂ ದೇವಾಲಯದಲ್ಲಿ ತಂದಿಟ್ಟನು.


ಇವನು ಸರ್ವೇಶ್ವರನ ಮಾರ್ಗದಲ್ಲಿ ನಡೆದು, ಧೈರ್ಯದಿಂದ ಜುದೇಯ ನಾಡಿನಲ್ಲಿದ್ದ ಪೂಜಾಸ್ಥಳಗಳನ್ನೂ ಆಶೇರ ವಿಗ್ರಹಸ್ತಂಭಗಳನ್ನೂ ತೆಗೆದುಹಾಕಿಸಿದನು.


ತಂದೆ ಆಸನ ಮಾರ್ಗದಲ್ಲಿ ಇವನು ತಪ್ಪದೆ ನಡೆಯುತ್ತಾ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿ ಇದ್ದನು.


ಆದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರ ಮನಸ್ಸು ಇನ್ನೂ ತಮ್ಮ ಪಿತೃಗಳ ದೇವರ ಮೇಲೆ ನಾಟಿರಲಿಲ್ಲ.


ಪೂಜಾಸ್ಥಳಗಳಲ್ಲೂ, ದಿನ್ನೆಗಳ ಮೇಲೂ ಹಾಗು ಎಲ್ಲ ಹಸಿರು ಮರಗಳ ಕೆಳಗೂ ಬಲಿಗಳನ್ನೂ ಧೂಪಗಳನ್ನೂ ಸಮರ್ಪಿಸುತ್ತಿದ್ದನು.


ಅವರು ಈ ಪ್ರಕಾರ ದೇವರಾದ ಸರ್ವೇಶ್ವರಸ್ವಾಮಿಯೊಬ್ಬರಿಗೇ ಬಲಿಯನ್ನು ಅರ್ಪಿಸುವವರಾದರು. ಅವರು ಆ ಬಲಿಗಳನ್ನು ಇನ್ನೂ ಪೂಜಾಸ್ಥಳಗಳಲ್ಲಿಯೇ ಸಮರ್ಪಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು