Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 15:6 - ಕನ್ನಡ ಸತ್ಯವೇದವು C.L. Bible (BSI)

6 ಒಂದು ಜನಾಂಗ ಇನ್ನೊಂದು ಜನಾಂಗವನ್ನೂ ಒಂದು ಪಟ್ಟಣದವರು ಇನ್ನೊಂದು ಪಟ್ಟಣದವರನ್ನೂ ಹಾಳುಮಾಡುತ್ತಿದ್ದರು. ದೇವರು ನಾನಾ ತರದ ಕಷ್ಟದಿಂದ ಅವರನ್ನು ತಳಮಳಗೊಳಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಒಂದು ಜನಾಂಗವು ಇನ್ನೊಂದು ಜನಾಂಗವನ್ನೂ, ಒಂದು ಪಟ್ಟಣದವರು ಇನ್ನೊಂದು ಪಟ್ಟಣದವರನ್ನೂ ಹಾಳು ಮಾಡುತ್ತಿದ್ದರು. ದೇವರು ಎಲ್ಲಾ ತರಹ ಕಷ್ಟದಿಂದಲೂ ಅವರನ್ನು ತಳಮಳಗೊಳಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಒಂದು ಜನಾಂಗವು ಇನ್ನೊಂದು ಜನಾಂಗವನ್ನೂ ಒಂದು ಪಟ್ಟಣದವರು ಇನ್ನೊಂದು ಪಟ್ಟಣದವರನ್ನೂ ಹಾಳು ಮಾಡುತ್ತಿದ್ದರು. ದೇವರು ಎಲ್ಲಾ ತರದ ಕಷ್ಟದಿಂದಲೂ ಅವರನ್ನು ತಳಮಳಗೊಳಿಸಿದನು. ನೀವಾದರೋ ಸ್ಥಿರಚಿತ್ತರಾಗಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಒಂದು ದೇಶವು ಇನ್ನೊಂದು ದೇಶವನ್ನು ನಾಶಮಾಡುತ್ತಿತ್ತು; ಒಂದು ಪಟ್ಟಣವು ಇನ್ನೊಂದು ಪಟ್ಟಣವನ್ನು ಸೂರೆಮಾಡುತ್ತಿತ್ತು. ಹೀಗೆ ದೇವರು ಎಲ್ಲಾ ಬಗೆಯ ತೊಂದರೆಗಳಿಂದ ಅವರನ್ನು ತಳಮಳಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಜನಾಂಗವು ಜನಾಂಗದಿಂದಲೂ, ಪಟ್ಟಣವು ಪಟ್ಟಣದಿಂದಲೂ ನಾಶವಾಯಿತು. ದೇವರು ಸಕಲ ಇಕ್ಕಟ್ಟುಗಳಿಂದ ಅವರನ್ನು ತೊಂದರೆಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 15:6
15 ತಿಳಿವುಗಳ ಹೋಲಿಕೆ  

ಜನಾಂಗಕ್ಕೆ ವಿರುದ್ಧ ಜನಾಂಗ, ರಾಷ್ಟ್ರಕ್ಕೆ ವಿರುದ್ಧ ರಾಷ್ಟ್ರ ಯುದ್ಧಕ್ಕೆ ಇಳಿಯುವುವು. ಅಲ್ಲಲ್ಲಿ ಭೂಕಂಪಗಳು ಆಗುವುವು. ಕ್ಷಾಮ-ಡಾಮರಗಳು ತಲೆದೋರುವುವು. ಇವೆಲ್ಲವೂ ಪ್ರಸವವೇದನೆಯ ಪ್ರಾರಂಭ ಮಾತ್ರ.


ಜನಾಂಗಕ್ಕೆ ವಿರುದ್ಧ ಜನಾಂಗವೂ ರಾಷ್ಟ್ರಕ್ಕೆ ವಿರುದ್ಧ ರಾಷ್ಟ್ರವೂ ಯುದ್ಧಕ್ಕಿಳಿಯುವುವು. ಅಲ್ಲಲ್ಲಿ ಕ್ಷಾಮಡಾಮರಗಳೂ ಭೂಕಂಪಗಳೂ ಸಂಭವಿಸುವುವು.


ರಣಕಹಳೆ ಮೊಳಗಲು ಜನರು ಬೆದರದೆ ಇರುವುದುಂಟೆ? ಸರ್ವೇಶ್ವರನಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೆ?


ಆ ಧರ್ಮಭ್ರಷ್ಟ ಪ್ರಜೆಗೆ ಇದಿರಾಗಿ ಅಸ್ಸೀರಿಯವನ್ನು ಕಳುಹಿಸುತ್ತೇನೆ. ನನ್ನ ಕೋಪಕ್ಕೆ ಗುರಿಯಾದ ಜನರಿಗೆ ವಿರುದ್ಧ ಕಾರ್ಯವನ್ನು ಕೈಗೊಳ್ಳಲು ಆಜ್ಞೆ ಮಾಡುತ್ತೇನೆ. ನನ್ನ ಪ್ರಜೆಯನ್ನು ಸೂರೆಮಾಡಲು, ಕೊಳ್ಳೆಹೊಡೆಯಲು, ಬೀದಿಯ ಕಸದಂತೆ ತುಳಿದುಬಿಡಲು ಅದಕ್ಕೆ ಆಜ್ಞೆಮಾಡುತ್ತೇನೆ.


ಎಂತಲೆ ಒಪ್ಪಿಸಿದನವರನು ಅನ್ಯರಾಷ್ಟ್ರಗಳ ಕೈಗೆ I ಹಗೆಮಾಡುತ್ತಿದ್ದವರೇ ಅಧಿಕಾರಿಗಳಾದರವರಿಗೆ II


ಸರ್ವೇಶ್ವರಸ್ವಾಮಿ ಬಾಬಿಲೋನಿಯದ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೊಪ್ಪಿಸಿದರು. ಅವನು ಅವರ ಯುವ ಯೋಧರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿದನು. ಯುವಕರನ್ನು, ಕನ್ಯೆಯರನ್ನು, ವೃದ್ಧರನ್ನು ಹಾಗು ಅತಿವೃದ್ಧರನ್ನು ಕನಿಕರಿಸದೆ ಎಲ್ಲರನ್ನು ಕೊಲ್ಲಿಸಿದನು.


ಆದುದರಿಂದ ಅಸ್ಸೀರಿಯದ ಅರಸನ ಸೈನ್ಯಾಧಿಪತಿಗಳನ್ನು ಅವನ ಮೇಲೆ ಬರಮಾಡಿದರು. ಆ ಸೇನಾಧಿಪತಿಗಳು ಮನಸ್ಸೆಯನ್ನು ಹಿಡಿದು ಅವನನ್ನು ಬಂಧಿಸಿ, ಬೇಡಿಹಾಕಿ, ಬಾಬಿಲೋನಿಗೆ ಒಯ್ದರು.


ಅಬೀಯನೂ ಅವನ ಜನರೂ ಅವರಲ್ಲಿ ಅನೇಕಾನೇಕರನ್ನು ಸದೆಬಡಿದರು. ಇಸ್ರಯೇಲ್ ಯೋಧರಲ್ಲಿ ಹತರಾಗಿ ಬಿದ್ದವರು ಐದು ಲಕ್ಷ ಮಂದಿ .


ರೆಹಬ್ಬಾಮನ ಪೂರ್ವೋತ್ತರ ಕೃತ್ಯಗಳು ಪ್ರವಾದಿಯಾದ ಶೆಮಾಯ ಹಾಗೂ ದರ್ಶಿಯಾದ ಇದ್ದೋ ಎಂಬುವರ ಚರಿತ್ರೆಗಳ ವಂಶಾವಳಿ ಭಾಗದಲ್ಲಿ ಬರೆದಿರುತ್ತವೆ. ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು.


ಆದ್ದರಿಂದ ಸರ್ವೇಶ್ವರನ ಕೋಪ ಅವರ ಮೇಲೆ ಉರಿಯಹತ್ತಿತು; ಅವರನ್ನು ಕೊಳ್ಳೆಹೊಡೆಯುವವರ ಕೈಗೆ ಒಪ್ಪಿಸಿದರು. ಶತ್ರುಗಳು ಅವರನ್ನು ಸುಲಿಗೆ ಮಾಡಿದರು. ಸರ್ವೇಶ್ವರ ಅವರನ್ನು ಅಕ್ಕಪಕ್ಕದ ವೈರಿಗಳಿಗೆ ಮಾರಿಬಿಟ್ಟರು. ಆ ಶತ್ರುಗಳ ಮುಂದೆ ಇಸ್ರಯೇಲರು ನಿಲ್ಲಲಾರದೆ ಹೋದರು.


ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: ‘ಹರಡುವುದು ಕೇಡು ಜನಾಂಗದಿಂದ ಜನಾಂಗಕ್ಕೆ ಏಳುವುದು ಚಂಡಮಾರುತ ಲೋಕದ ಕಟ್ಟಕಡೆಯಿಂದ’.”


ಸರ್ವೇಶ್ವರ ಇಂತೆನ್ನುತ್ತಾರೆ : “ನಾನು ಈಜಿಪ್ಟಿನವರಲ್ಲಿ ಒಳಜಗಳವನ್ನು ಎಬ್ಬಿಸುವೆನು. ಅಣ್ಣತಮ್ಮಂದಿರು, ನೆರೆಹೊರೆಯವರು, ನಗರನಗರಗಳು, ರಾಜರಾಜರುಗಳು ಪರಸ್ಪರ ಕಾದಾಡುವರು.


ರಾಜ್ಯಗಳ ಸಿಂಹಾಸನವನ್ನು ಕೆಡವಿಬಿಡುವೆನು. ರಾಷ್ಟ್ರಗಳ ಸಂಸ್ಥಾನಬಲವನ್ನು ಧ್ವಂಸಮಾಡುವೆನು. ರಥಗಳನ್ನೂ ರಥಾರೂಢರನ್ನೂ ದಬ್ಬಿಬಿಡುವೆನು. ಕುದುರೆಗಳೂ ರಾಹುತರೂ ಬಿದ್ದುಹೋಗುವರು; ಒಬ್ಬನು ಮತ್ತೊಬ್ಬನ ಕತ್ತಿಗೆ ತುತ್ತಾಗುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು