Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 15:7 - ಕನ್ನಡ ಸತ್ಯವೇದವು C.L. Bible (BSI)

7 ನೀವಾದರೋ ಸ್ಥಿರಚಿತ್ತರಾಗಿರಿ; ನಿಮ್ಮ ಕೈಗಳು ಜೋಲುಬೀಳದಿರಲಿ. ನಿಮ್ಮ ಪ್ರಯತ್ನಕ್ಕೆ ಫಲತಪ್ಪದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀವಾದರೋ ಸ್ಥಿರಚಿತ್ತರಾಗಿರಿ; ನಿಮ್ಮ ಕೈಗಳು ಜೋಲು ಬೀಳದಿರಲಿ. ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಕ್ಕುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿಮ್ಮ ಕೈಗಳು ಜೋಲು ಬೀಳದಿರಲಿ. ನಿಮ್ಮ ಪ್ರಯತ್ನಕ್ಕೆ ಫಲತಪ್ಪದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೂದದ ಜನರೇ, ಬೆನ್ಯಾಮೀನ್ ಜನರೇ, ನೀವು ಶಕ್ತರಾಗಿರಿ, ನಿರಾಶರಾಗಬೇಡಿರಿ; ಯಾಕೆಂದರೆ ನಿಮ್ಮ ಒಳ್ಳೆಯ ಕೆಲಸಕ್ಕೆ ನಿಮಗೆ ಪ್ರತಿಫಲ ದೊರೆಯುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದ್ದರಿಂದ ನೀವು ಬಲಗೊಳ್ಳಿರಿ. ನಿಮ್ಮ ಕೈಗಳು ಬಲಹೀನವಾಗದೆ ಇರಲಿ. ನಿಮ್ಮ ಕೆಲಸಕ್ಕೆ ಪ್ರತಿಫಲ ಸಿಕ್ಕುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 15:7
35 ತಿಳಿವುಗಳ ಹೋಲಿಕೆ  

ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿರಿ; ನಿಶ್ಚಲರಾಗಿರಿ. ಪ್ರಭುವಿನ ಸೇವೆಯಲ್ಲಿ ನೀವು ಪಡುವ ಪ್ರಯಾಸ ಎಂದಿಗೂ ನಿಷ್ಫಲವಾಗದು. ಆದ್ದರಿಂದ ಅವರ ಸೇವೆಯಲ್ಲಿ ನಿರಂತರ ಶ್ರದ್ಧೆಯುಳ್ಳವರಾಗಿರಿ.


ನನ್ನ ದಾಸನಾದ ಮೋಶೆ ನಿನಗೆ ಬೋಧಿಸಿದ ಧರ್ಮೋಪದೇಶವನ್ನು ಮಾತ್ರ ಧೈರ್ಯಸ್ಥೈರ್ಯದಿಂದ ಪರಿಪಾಲಿಸು. ಅದನ್ನು ಬಿಟ್ಟು ಎಡಕ್ಕಾಗಲಿ, ಬಲಕ್ಕಾಗಲಿ ಹೋಗಬೇಡ. ಆಗ ನೀನು ಎಲ್ಲಿಹೋದರೂ ಕೃತಾರ್ಥನಾಗುವೆ.


ಆ ದೃಢ ನಂಬಿಕೆಯನ್ನು ಕಳೆದುಕೊಳ್ಳಬೇಡಿ; ಅದರ ಪ್ರತಿಫಲ ಮಹತ್ತಾದುದು.


ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವ ಎಡೆಗಳಲ್ಲೆಲ್ಲ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನ್ನ ಸಂಗಡ ಇರುತ್ತೇನೆ,” ಎಂದು ಹೇಳಿದರು.


ಆಮೇಲೆ ದಾವೀದನು ತನ್ನ ಮಗ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು; ಅಂಜಬೇಡ, ಕಳವಳಗೊಳ್ಳಬೇಡ. ನನ್ನ ದೇವರಾಗಿರುವ ಸರ್ವೇಶ್ವರಸ್ವಾಮಿ ನಿನ್ನೊಂದಿಗೆ ಇರುತ್ತಾರೆ; ಅವರು ತಮ್ಮ ಆಲಯದ ಎಲ್ಲಾ ಕೆಲಸ ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ.


ನಿಮ್ಮ ದುಡಿಮೆಯ ಫಲವನ್ನು ಕಳೆದುಕೊಳ್ಳದೆ ಅದನ್ನು ಪೂರ್ಣವಾಗಿ ಪಡೆಯುವಂತೆ ನೀವು ಎಚ್ಚರಿಕೆ ವಹಿಸಬೇಕು.


ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯದರ್ಶನ ಆಯಿತು. ಅದರಲ್ಲಿ ಸರ್ವೇಶ್ವರ ಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ".


“ನ್ಯಾಯ ನಿರ್ಣಯಿಸುವಂಥ ದೇವನಿಹನು ಜಗದಲಿ I ಸಜ್ಜನರಿಗೆ ಸತ್ಫಲ ಕಟ್ಟಿಟ್ಟ ಬುತ್ತಿ,” ಇದು ನಾಣ್ನುಡಿ II


ನೀವು ದೇವಜನರಿಗೆ ಉಪಚಾರಮಾಡಿದ್ದೀರಿ, ಮಾಡುತ್ತಲೂ ಇದ್ದೀರಿ. ದೇವರ ಹೆಸರಿನಲ್ಲಿ ನೀವು ಮಾಡಿದ ಪ್ರೀತಿಪೂರ್ವಕವಾದ ಸೇವೆಯನ್ನು ದೇವರು ಮರೆಯುವಂತಿಲ್ಲ, ಅವರು ಅನ್ಯಾಯ ಮಾಡುವವರೇನೂ ಅಲ್ಲ.


ಅದಕ್ಕೆ ಪ್ರತಿಫಲವಾಗಿ ಪ್ರಭುವಿನಿಂದ ನೀವು ಸ್ವರ್ಗೀಯ ಬಾಧ್ಯತೆಯನ್ನು ಪಡೆಯುವಿರೆಂದು ನಿಮಗೆ ತಿಳಿದೇ ಇದೆ.


ನೀನು ಮಾಡಿದ್ದಕ್ಕೆಲ್ಲಾ ದೇವರು ನಿನಗೆ ತಕ್ಕ ಪ್ರತಿಫಲವನ್ನೀಯಲಿ. ಇಸ್ರಯೇಲಿನ ದೇವರಾದ ಸರ್ವೇಶ್ವರಸ್ವಾಮಿಯ ಆಶ್ರಯವನ್ನರಸಿ ಬಂದಿರುವೆ. ಅವರು ನಿನಗೆ ಹೇರಳವಾದ ಆಶೀರ್ವಾದವನ್ನು ಅನುಗ್ರಹಿಸಲಿ!” ಎಂದನು.


ಕೊನೆಯದಾಗಿ, ಪ್ರಭುವಿನ ಅನ್ಯೋನ್ಯತೆಯಲ್ಲಿ ಬಲಾಢ್ಯರಾಗಿರಿ. ಅವರ ಪರಾಕ್ರಮ ಶಕ್ತಿಯನ್ನು ಆಶ್ರಯಿಸಿರಿ.


ನೆಡುವವನೂ ನೀರೆರೆಯುವವನೂ ಇಬ್ಬರೂ ಅಗತ್ಯವಾಗಿ ಬೇಕಾದವರೇ. ಅವನವನ ದುಡಿಮೆಗೆ ತಕ್ಕ ಹಾಗೆ ಪ್ರತಿಯೊಬ್ಬನೂ ಸಂಭಾವನೆ ಪಡೆಯುತ್ತಾನೆ.


ಕಟ್ಟಡವು ಸುಟ್ಟುಹೋಗದೆ ಅಸ್ತಿವಾರದ ಮೇಲೆ ನೆಲೆಯಾಗಿ ನಿಂತರೆ ಕಟ್ಟಿದವನಿಗೆ ಸಂಭಾವನೆ ದೊರಕುತ್ತದೆ.


ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೊಠಡಿಗೆ ಹೋಗು; ಬಾಗಿಲನ್ನು ಮುಚ್ಚು; ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.”


ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.


ಪ್ರಭುವನು ಎದುರುನೋಡುತ್ತಿರು ಮನವೇ I ಧೈರ್ಯದಿಂದ ನಿರೀಕ್ಷಿಸುತ್ತಿರು ಎದೆಗುಂದದೆ II


ನಿಮ್ಮನ್ನು ಪ್ರೀತಿಸುವವರನ್ನು ಮಾತ್ರ ನೀವು ಪ್ರೀತಿಸಿದರೆ ಅದರಿಂದೇನು ಫಲ? ಸುಂಕ ವಸೂಲಿಮಾಡುವವರೂ ಹಾಗೆ ಮಾಡುವುದಿಲ್ಲವೇ?


ಬಳಿಕ ಆ ವ್ಯಕ್ತಿ ನನಗೆ, “ಅತಿಪ್ರಿಯನೇ, ಭಯಪಡಬೇಡ. ನಿನಗೆ ಶಾಂತಿಸಮಾಧಾನವಿರಲಿ! ಧೈರ್ಯತಂದುಕೊ! ಧೈರ್ಯತಂದುಕೊ!” ಎಂದು ಹೇಳಿದ. ಅವನ ಈ ಮಾತನ್ನು ಕೇಳಿದ ಕೂಡಲೆ ನಾನು ಧೈರ್ಯದಿಂದ, “ಎನ್ನೊಡೆಯಾ, ಮಾತಾಡು. ನನಗೆ ಧೈರ್ಯತುಂಬಿರುವೆ,” ಎಂದು ಅರಿಕೆಮಾಡಿದೆ.


ಜಾಗರೂಕರಾಗಿರಿ, ವಿಶ್ವಾಸದಲ್ಲಿ ದೃಢರಾಗಿರಿ, ಧೈರ್ಯಶಾಲಿಗಳಾಗಿರಿ, ಸ್ಥೈರ್ಯದಿಂದ ಬಾಳಿರಿ.


“ಆದುದರಿಂದ ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ಅವನಿಗೆ ಒಳಿತನ್ನೇ ಮಾಡಿರಿ. ಪ್ರತಿಯಾಗಿ ಪಡೆಯುವ ಆಶೆಯಿಡದೆ ಸಾಲಕೊಡಿ. ಆಗ ನಿಮಗೆ ಮಹತ್ತಾದ ಸಂಭಾವನೆ ದೊರಕುವುದು. ನೀವು ಮಹೋನ್ನತ ದೇವರ ಮಕ್ಕಳಾಗುವಿರಿ. ದೇವರು ದುರ್ಜನರಿಗೂ ಒಳ್ಳೆಯವರು, ಕೃತಘ್ನರಿಗೂ ಒಳ್ಳೆಯವರು.


ಆಗ ಉಪವಾಸ ಮಾಡುವವನಂತೆ ನೀನು ಜನರಿಗೆ ಕಾಣಿಸಿಕೊಳ್ಳುವುದಿಲ್ಲ; ಅಂತರಂಗದಲ್ಲಿ ಇರುವ ನಿನ್ನ ತಂದೆಗೆ ಮಾತ್ರ ಕಾಣಿಸಿಕೊಳ್ಳುವೆ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ಅದಕ್ಕೆಲ್ಲ ಪ್ರತಿಫಲ ಕೊಡುವರು.”


“ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ನಿಮ್ಮ ಧಾರ್ಮಿಕ ಕಾರ್ಯಗಳನ್ನು ಅವರ ಎದುರಿಗೆ ಪ್ರದರ್ಶಿಸದಂತೆ ಎಚ್ಚರಿಕೆಯಿಂದಿರಿ. ಹಾಗೆ ಮಾಡಿದರೆ, ಸ್ವರ್ಗದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ದೊರಕದು.


ಅದಕ್ಕಾಗಿ ಹರ್ಷಿಸಿ ಆನಂದಪಡಿ; ಏಕೆಂದರೆ ಸ್ವರ್ಗದಲ್ಲಿ ನಿಮಗೆ ಸಿಗುವ ಪ್ರತಿಫಲ ಹಿರಿದು, ನಿಮಗಿಂತ ಮೊದಲಿದ್ದ ಪ್ರವಾದಿಗಳನ್ನೂ ಜನರು ಹೀಗೆಯೇ ಚಿತ್ರಹಿಂಸೆಗೆ ಒಳಪಡಿಸಿದರು.”


ಜಾಗೃತಗೊಳ್ಳುವನು ನಿನ್ನ ದಾಸನು ಅವುಗಳಿಂದ I ಸಂಭಾವಿತನಾಗುವನು ಅವುಗಳ ಪಾಲನೆಯಿಂದ II


“ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಜರಿಗೆ ಪ್ರಮಾಣ ಮಾಡಿಕೊಟ್ಟ ನಾಡನ್ನು ಇವರಿಗೆ ಸ್ವಾಧೀನಪಡಿಸಬೇಕಾದವನು ನೀನೇ.


ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಇಸ್ರಯೇಲಿನ ದೇವರಾದ ಸರ್ವೇಶ್ವರನನ್ನು ಸಂಪೂರ್ಣವಾಗಿ ಶ್ರದ್ಧೆಯಿಂದ ಅನುಸರಿಸಿದ್ದರಿಂದ ಹೆಬ್ರೋನ್ ಅವನಿಗೆ ಸೊತ್ತಾಗಿ ಸಿಕ್ಕಿತು.ಅದು ಇಂದಿನವರೆಗೂ ಅವನದೇ ಆಗಿದೆ.


ಇಗೋ, ಸರ್ವೇಶ್ವರನ ಕಾರ್ಯಸಂಬಂಧವಾದ ಎಲ್ಲ ವಿಚಾರಣೆಗಳಿಗೂ ಮಹಾಯಾಜಕ ಅಮರ್ಯನು ನಿಮ್ಮ ಅಧ್ಯಕ್ಷನು; ರಾಜಕೀಯ ಕಾರ್ಯಗಳ ಸಂಬಂಧವಾದ ಎಲ್ಲ ವಿಚಾರಣೆಗಳಿಗೂ ಇಷ್ಮಾಯೇಲನ ಮಗನೂ ಯೆಹೂದ ಕುಲದ ಪ್ರಮುಖನೂ ಆದ ಜೆಬದ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನದ ಲೇಖಕರು. ಧೈರ್ಯದಿಂದ ಕೆಲಸಮಾಡಿ. ಸರ್ವೇಶ್ವರಸ್ವಾಮಿ ಸಜ್ಜನರ ಸಹಾಯಕರು,” ಎಂದು ಹೇಳಿದನು.


ಅಸ್ಸೀರಿಯದ ಅರಸನಿಗೂ ಅವನೊಂದಿಗಿರುವ ಆ ದೊಡ್ಡ ಸೈನ್ಯಕ್ಕೂ ಅಂಜಬೇಡಿ, ಕಳವಳಪಡಬೇಡಿ. ಅವನಿಗಿರುವ ಸಹಾಯಕ್ಕಿಂತ ನಮಗಿರುವ ಸಹಾಯ ದೊಡ್ಡದು.


ಸರ್ವೇಶ್ವರ ಹೀಗೆನ್ನುತ್ತಾರೆ: “ನಿಲ್ಲಿಸು ನಿನ್ನ ಗೋಳಾಟವನ್ನು ಒರಸು ನಿನ್ನ ಕಣ್ಗಳಿಂದ ನೀರನ್ನು. ನಿನ್ನ ಪ್ರಯಾಸ ಸಾರ್ಥಕವಾಗುವುದು ಶತ್ರುವಿನ ದೇಶದಿಂದ ನಿನ್ನ ಮಕ್ಕಳು ಹಿಂದಿರುಗುವರು. ಸರ್ವೇಶ್ವರನಾದ ನನ್ನ ನುಡಿ ಇದು.”


ಸೇನಾಧೀಶ್ವರ ಸರ್ವೇಶ್ವರ ಹೀಗೆಂದಿದ್ದಾರೆ: “ನಿಮ್ಮ ಕೈ ಮುಂದಾಗಲಿ. ಈಗ ನೀವು ಕೇಳುತ್ತಿರುವ ಮಾತುಗಳು ಮಹಾದೇವಾಲಯಕ್ಕೆ ಅಸ್ತಿಭಾರವನ್ನು ಹಾಕಿದ ಕಾಲದಲ್ಲಿ ಪ್ರವಾದಿಗಳು ಆಡಿದ ಮಾತುಗಳೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು