Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 16:10 - ಕನ್ನಡ ಸತ್ಯವೇದವು C.L. Bible (BSI)

10 ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಿಯ ಮೇಲೆ ಕುಪಿತನಾಗಿ, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳಹಾಕಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಕನ ಮೇಲೆ ಕೋಪಗೊಂಡು, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳ ಹಾಕಿಸಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಸನು ಈ ಮಾತುಗಳ ದೆಸೆಯಿಂದ ಬೇಸರಗೊಂಡು ದರ್ಶಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿಡಿಸಿ ಕೋಳಹಾಕಿಸಿದನು. ಇದಲ್ಲದೆ ಜನರಲ್ಲಿ ಕೆಲವರನ್ನು ಪೀಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇದನ್ನು ಕೇಳಿದ ಆಸನು ಹನಾನಿಯ ಮೇಲೆ ಬಹುಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಆಸನು ಅದೇ ಸಮಯದಲ್ಲಿ ದೇವಜನರಾದ ಕೆಲವರೊಂದಿಗೆ ಕ್ರೂರವಾಗಿ ವರ್ತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಆಸನು ದರ್ಶಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಇದರ ನಿಮಿತ್ತ ಅವನ ಮೇಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವರನ್ನು ಬಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 16:10
24 ತಿಳಿವುಗಳ ಹೋಲಿಕೆ  

‘ನಾನು, ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸರು ಹೇಳಿದ್ದಾರೆ’ ಎಂದು ತಿಳಿಸಿರಿ,” ಎಂದು ಆಜ್ಞಾಪಿಸಿದನು.


ಹೆರೋದನು ಯೊವಾನ್ನನನ್ನು ಕಾರಾಗೃಹದಲ್ಲಿ ಬಂಧಿಸಿ, ತನ್ನ ದುಷ್ಕೃತ್ಯಗಳಿಗೆ ಮತ್ತೊಂದು ದುಷ್ಕೃತ್ಯವನ್ನು ಕೂಡಿಸಿದ್ದನು.


ಇಳೆಯ ಸೆರೆಯಾಳುಗಳನ್ನು ತುಳಿದುಬಿಡುವುದನ್ನೂ


ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನು ನನ್ನನ್ನು ಮುರಿದು ತಿಂದುಬಿಟ್ಟ ನನ್ನನ್ನು ಕುಡಿದು ಬಿಸಾಡಿದ ಪಾತ್ರೆಯನ್ನಾಗಿಸಿಬಿಟ್ಟ. ಘಟಸರ್ಪದ ಹಾಗೆ ನನ್ನನ್ನು ನುಂಗಿದ ನನ್ನ ರುಚಿಪದಾರ್ಥಗಳಿಂದ ಹೊಟ್ಟೆ ತುಂಬಿಸಿಕೊಂಡ ಮಿಕ್ಕಿದುದನ್ನೆಲ್ಲ ತೊಳೆದು ಎಸೆದುಬಿಟ್ಟ.


‘ಸರ್ವೇಶ್ವರ ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ದೇವಾಲಯದ ಯಾಜಕನನ್ನಾಗಿ ನೇಮಿಸಿದ್ದಾರೆ. ಯಾವನಾದರು ಮೈದುಂಬಿ ಪ್ರವಾದಿಯಾಗಿ ನಟಿಸಿದ್ದೇ ಆದರೆ ಅವನನ್ನು ಕೊಳಕ್ಕೆಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ನಿನಗೆ ವಹಿಸಿದ್ದಾರೆ.


ಅವನು ಪ್ರವಾದಿ ಯೆರೆಮೀಯನನ್ನು ಹೊಡೆಯಿಸಿ ಸರ್ವೇಶ್ವರನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲ ಬಳಿಯಲ್ಲಿದ್ದ ಸೆರೆಗೆ ಹಾಕಿಸಿದನು.


ಕೊಡುವೆ ಆ ಕೋಪದ ಕೊಡವನು ನಿನ್ನನು ಶೋಷಿಸಿದವರಿಗೆ ‘ನಾವು ತುಳಿದು ಹಾದುಹೋಗುವಂತೆ ನೆಲಕಚ್ಚಿ ಬೀಳು ಕೆಳಗೆ’ ಎಂದು ನಿಮ್ಮ ಬೆನ್ನನೆ ನೆಲವಾಗಿಸಿ, ಬೀದಿಕಸವನ್ನಾಗಿಸಿದವರಿಗೆ.”


ಸಜ್ಜನರು ವಿಧಿಸುವಾ ಶಿಕ್ಷೆ ಎನಗೆ ಕಟಾಕ್ಷ I ದುರ್ಜನರಿಂದ ನನಗಾಗದಿರಲಿ ಅಭಿಷೇಕ I ಸತತ ಪ್ರಾರ್ಥಿಸುವೆ ಆ ದುಷ್ಕೃತ್ಯಗಳ ವಿರುದ್ಧ II


ಏಕೆಂದರೆ ಬಡವರನು ತುಳಿದು ತೊರೆದುಬಿಟ್ಟ ತಾನು ಕಟ್ಟದ ಮನೆಯನು ಕಿತ್ತುಕೊಂಡುಬಿಟ್ಟ.


ಧೂಪಾರತಿ ಎತ್ತಬೇಕೆಂದು ಕೈಯಲ್ಲಿ ಧೂಪಕಳಸ ವನ್ನು ಹಿಡಿದಿದ್ದ ಉಜ್ಜೀಯನು ಕೋಪಗೊಂಡನು . ಸರ್ವೇಶ್ವರನ ಆಲಯದ ಧೂಪವೇದಿಯ ಬಳಿಯಲ್ಲಿ ನಿಂತು, ಯಾಜಕ ರೊಡನೆ ಅವನು ಸಿಟ್ಟಿನಿಂದ ಮಾತಾಡುತ್ತಿರುವಾಗಲೆ ಯಾಜಕರ ಸಮಕ್ಷಮದಲ್ಲೇ, ಅವನ ಹಣೆಯಲ್ಲಿ ಕುಷ್ಠ ಹುಟ್ಟಿತು.


ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನಾನು ಆಲೋಚನಾಮಂತ್ರಿಯನ್ನಾಗಿ ನೇಮಿಸಲಿಲ್ಲ; ಬಾಯಿಮುಚ್ಚುವಿಯೋ: ಅಥವಾ ಏಟು ತಿನ್ನುವಿಯೋ?’ ಎಂದನು. ಅದಕ್ಕೆ ಅವನು, “ನೀವು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುವುದರಿಂದ ದೇವರು ನಿಮ್ಮನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾರೆಂದು ನಾನು ಬಲ್ಲೆ,” ಎಂದು ಹೇಳಿ ಸುಮ್ಮನಾದನು.


ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಕೆಲಸ ಮಾಡುವುದಕ್ಕೂ ಇಟ್ಟಿಗೆಗಳನ್ನು ಸುಡುವುದಕ್ಕೂ ಹಚ್ಚಿದನು. ಅಮ್ಮೋನಿಯರ ಉಳಿದೆಲ್ಲ ಪಟ್ಟಣದವರಿಗೂ ಇದೇ ಗತಿ ಆಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಜೆರುಸಲೇಮಿಗೆ ಮರಳಿದನು.


ಆಗ ದಾವೀದನು ನಾತಾನನಿಗೆ, “ನಾನು ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದ್ದೇನೆ,” ಎಂದು ಹೇಳಿದನು. ನಾತಾನನು ಅವನಿಗೆ, “ಸರ್ವೇಶ್ವರ ನಿನ್ನ ಪಾಪವನ್ನು ಕ್ಷಮಿಸಿದ್ದಾರೆ; ನೀನು ಸಾಯುವುದಿಲ್ಲ.


ಆಕೆ ಆಗ ತಾನೆ ಋತುಸ್ನಾನ ಮಾಡಿಕೊಂಡಿದ್ದಳು. ಆಕೆಯನ್ನು ಕರೆದುತರುವಂತೆ ದಾವೀದನು ದೂತರನ್ನು ಕಳುಹಿಸಿದನು. ಆಕೆ ಬಂದಳು. ದಾವೀದನು ಆಕೆಯನ್ನು ಕೂಡಿದನು. ಅನಂತರ ಆಕೆ ತನ್ನ ಮನೆಗೆ ಹೋದಳು.


ಅವರಿಗೆ, ‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕರಗಿಸಬೇಕು,’ ಎಂದು ಆಜ್ಞಾಪಿಸಿದನು.


ಸರ್ವೇಶ್ವರ ಭೂಲೋಕದ ಎಲ್ಲಾ ಕಡೆ ದೃಷ್ಟಿಹರಿಸುತ್ತಾ ತಮ್ಮ ಕಡೆಗೆ ಯಥಾರ್ಥ ಮನಸ್ಸುಳ್ಳವರ ರಕ್ಷಣೆಗಾಗಿ ತಮ್ಮ ಪ್ರತಾಪವನ್ನು ತೋರ್ಪಡಿಸುತ್ತಾರೆ. ನೀವು ಈ ಕಾರ್ಯದಲ್ಲಿ ಬುದ್ಧಿಹೀನರಾಗಿ ನಡೆದುಕೊಂಡಿದ್ದೀರಿ; ಇಂದಿನಿಂದ ನಿಮಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದು ಹೇಳಿದನು.


ಆಸನ ಪೂರ್ವೋತ್ತರ ಚತರಿತ್ರೆಯನ್ನು ಯೆಹೂದ ಮತ್ತು ಇಸ್ರಯೇಲ್ ರಾಜರ ಇತಿಹಾಸ ಗ್ರಂಥದಲ್ಲಿ ಬರೆದಿರುತ್ತದೆ.


ಅರಸ ಯೆಹೋಯಾಕೀಮನು ಮತ್ತು ಅವನ ಎಲ್ಲ ವೀರಶೂರರು ಹಾಗು ನಾಯಕರು ಆ ಊರೀಯನ ಮಾತುಗಳನ್ನು ಕೇಳಿಸಿಕೊಂಡರು. ಕೂಡಲೆ ಅರಸ ಅವನನ್ನು ಕೊಂದುಹಾಕಲು ಮನಸ್ಸುಮಾಡಿದ. ಈ ಸುದ್ದಿಯನ್ನು ಕೇಳಿದ ಊರೀಯ ಭಯಪಟ್ಟು ಓಡಿಹೋಗಿ ಈಜಿಪ್ಟನ್ನು ಸೇರಿಕೊಂಡ.


ಆ ಅಧಿಕಾರಿಗಳು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ, ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು.


ಬೇತೇಲಿನ ಪೀಠದ ಬಳಿ ನಿಂತಿದ್ದ ಅರಸನು ಆ ದೈವಭಕ್ತನು ಪೀಠಕ್ಕೆ ವಿರೋಧವಾಗಿ ನುಡಿದದ್ದನ್ನು ಕೇಳಿ ಕೈಚಾಚಿ, “ಅವನನ್ನು ಹಿಡಿಯಿರಿ,” ಎಂದು ಆಜ್ಞಾಪಿಸಿದನು. ಕೂಡಲೆ ಅವನ ಕೈ ಒಣಗಿಹೋಯಿತು. ಅವನು ಅದನ್ನು ಹಿಂತೆಗೆದುಕೊಳ್ಳಲಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು