Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 16:3 - ಕನ್ನಡ ಸತ್ಯವೇದವು C.L. Bible (BSI)

3 “ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಂದು ಒಪ್ಪಂದ ಇದೆಯಲ್ಲವೆ? ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಳುಹಿಸಿದ್ದೇನೆ; ಇಸ್ರಯೇಲರ ಅರಸ ಬಾಷನು ನನ್ನನ್ನು ಬಿಟ್ಟುಹೋಗುವಂತೆ ಮಾಡು; ಅವನ ಸಂಗಡ ನೀನು ಮಾಡಿಕೊಂಡಿರುವ ಒಪ್ಪಂದವನ್ನು ಮುರಿದುಬಿಡು,” ಎಂದು ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನಿಗೆ, “ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಪ್ಪಂದ ಇದೆಯಲ್ಲಾ? ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಳುಹಿಸಿದ್ದೇನೆ: ಇಸ್ರಾಯೇಲರ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವಂತೆ ಮಾಡು; ಅವನ ಸಂಗಡ ನೀನು ಮಾಡಿಕೊಂಡಿರುವ ಒಪ್ಪಂದವನ್ನು ಮುರಿದುಬಿಡು” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆಯಿರುತ್ತದಲ್ಲಾ; ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಳುಹಿಸಿದ್ದೇನೆ; ಇಸ್ರಾಯೇಲ್ಯರ ಅರಸನಾದ ಬಾಷನು ನನ್ನನ್ನು ಬಿಟ್ಟುಹೋಗುವಂತೆ ಅವನ ಸಂಗಡ ನೀನು ಮಾಡಿಕೊಂಡಿರುವ ಒಡಂಬಡಿಕೆಯನ್ನು ಮುರಿದುಬಿಡು ಎಂದು ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಬೆನ್ಹದದನೇ, ನಮ್ಮೊಂದಿಗೆ ಒಂದು ಒಪ್ಪಂದವಿರಲಿ. ನನ್ನ ತಂದೆಯೂ ನಿನ್ನ ತಂದೆಯೂ ಮಾಡಿದ್ದ ಒಪ್ಪಂದವನ್ನು ನಾವು ಮುಂದುವರಿಸೋಣ. ನೋಡು, ನಾನೀಗ ನಿನಗೆ ಬೆಳ್ಳಿಬಂಗಾರಗಳನ್ನು ಕಳುಹಿಸುತ್ತಿದ್ದೇನೆ. ನೀನೀಗ ಇಸ್ರೇಲಿನ ರಾಜನಾದ ಬಾಷನೊಡನೆ ಮಾಡಿದ್ದ ಒಪ್ಪಂದವನ್ನು ಮುರಿದುಹಾಕು. ಆಗ ಅವನು ನನಗೆ ತೊಂದರೆ ಕೊಡುವುದನ್ನು ನಿಲ್ಲಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ನನ್ನ ತಂದೆ ಮತ್ತು ನಿನ್ನ ತಂದೆಯ ನಡುವೆ ಇದ್ದಂತೆ ನನ್ನ ಮತ್ತು ನಿನ್ನ ನಡುವೆ ಒಡಂಬಡಿಕೆ ಉಂಟು. ಇಗೋ ನಾನು ಬೆಳ್ಳಿಬಂಗಾರವನ್ನು ನಿನಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟುಹೋಗುವಂತೆ, ನೀನು ಅವನ ಸಂಗಡ ಮಾಡಿದ ಒಡಂಬಡಿಕೆಯನ್ನು ಮುರಿಯಬೇಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 16:3
16 ತಿಳಿವುಗಳ ಹೋಲಿಕೆ  

ಭ್ರಷ್ಟರನು ಧಿಕ್ಕರಿಸುವನು, ಭಕ್ತರನು ಗೌರವಿಸುವನು I ನಷ್ಟವಾದರೂ ಕೊಟ್ಟ ಮಾತನು ತಪ್ಪನವನು II


ಅವರು ಮಮತೆ ಇಲ್ಲದವರೂ ಸಮಾಧಾನ ಸಹಿಸದವರೂ ಚಾಡಿಕೋರರೂ ಸ್ವೇಚ್ಛಾವರ್ತಿಗಳೂ ಕ್ರೂರಿಗಳೂ ಒಳಿತನ್ನು ದ್ವೇಷಿಸುವವರೂ ಆಗುವರು.


ದೇವರ ಆಲಯಕ್ಕೂ ಕಲ್ಲಿನ ವಿಗ್ರಹಕ್ಕೂ ಎಲ್ಲಿಯ ಸಾಮ್ಯ? ನಾವಾದರೋ ಜೀವಂತ ದೇವರ ಮಂದಿರವಾಗಿದ್ದೇವೆ. ಇದನ್ನು ದೇವರೇ ಹೇಳಿದ್ದಾರೆ: “ನನ್ನ ಜನರಲ್ಲೇ ನಾ ಮನೆಮಾಡುವೆನು ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು ಅವರೆನಗೆ ಪ್ರಜೆಯಾಗಿರುವರು.”


ಅವನು ಜೆರುಸಲೇಮಿಗೆ ಬಂದಾಗ ಹನಾನೀಯನ ಮಗ ಯೇಹೂ ಎಂಬ ದರ್ಶಿಯು ಅವನನ್ನು ಎದುರುಗೊಂಡು, “ನೀವು ಕೆಟ್ಟವನಿಗೆ ಸಹಾಯಮಾಡಬಹುದೇ? ಸರ್ವೇಶ್ವರನ ಹಗೆಗಾರರನ್ನು ಪ್ರೀತಿಸಬಹುದೇ? ನೀವು ಹೀಗೆ ಮಾಡಿದ್ದರಿಂದ ಸರ್ವೇಶ್ವರನ ಕೋಪ ನಿಮ್ಮ ಮೇಲಿರುತ್ತದೆ.


ಇಸ್ರಯೇಲರ ಅರಸ ಆಹಾಬನು ಯೆಹೂದ್ಯರ ಅರಸ ಯೆಹೋಷಾಫಾಟನನ್ನು, “ನನ್ನ ಜೊತೆಯಲ್ಲಿ ರಾಮೋತ್‍ಗಿಲ್ಯಾದಿಗೆ ಬರುತ್ತೀಯಾ?” ಎಂದು ಕೇಳಿದನು. ಅವನು, “ನಾನೂ ನೀನೂ ನನ್ನ ಜನರೂ ನಿನ್ನ ಜನರೂ ಒಂದೆ ಅಲ್ಲವೇ? ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಖಂಡಿತ ಬರುತ್ತೇನೆ,” ಎಂದು ಉತ್ತರಕೊಟ್ಟನು.


(ಗಿಬ್ಯೋನ್ಯರು ಇಸ್ರಯೇಲ್ ಕುಲಗಳಿಗೆ ಸೇರಿದವರಲ್ಲ; ಅವರು ಅಳಿಯದೆ ಉಳಿದ ಅಮೋರಿಯರಷ್ಟೇ). ಇಸ್ರಯೇಲರು ತಾವು ಇವರನ್ನು ಕೊಲ್ಲುವುದಿಲ್ಲವೆಂದು ಪ್ರಮಾಣಮಾಡಿ ಇದ್ದರು. ಆದರೂ ಸೌಲನು ಇಸ್ರಯೇಲ್ ಮತ್ತು ಯೆಹೂದ ಕುಲಗಳ ಮೇಲೆ ತನಗಿದ್ದ ಅಭಿಮಾನದ ನಿಮಿತ್ತ ಇವರನ್ನೂ ನಿರ್ನಾಮಗೊಳಿಸಬೇಕೆಂದಿದ್ದನು.


ಆಗ, ನೀವು ಈ ನಾಡಿನ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು, ಅವರ ಬಲಿಪೀಠಗಳನ್ನು ಕೆಡವಿಬಿಡಬೇಕು ಎಂದು ಆಜ್ಞಾಪಿಸಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೇಕೆ ಮಾಡಿದಿರಿ?


ಅಲ್ಲದೆ, ಆರೋನನನ್ನು ಉದ್ದೇಶಿಸಿ, “ನೀನು ಈ ಜನರಿಂದ ಮಹಾಪಾಪವನ್ನು ಮಾಡಿಸಿರುವೆ. ಹೀಗೆ ಮಾಡಿಸಲು ಇವರು ನಿನಗೇನು ಮಾಡಿದರು,” ಎಂದು ವಿಚಾರಿಸಿದನು. ಅದಕ್ಕೆ ಆರೋನನು,


ಇವನಿಗೂ ಇಸ್ರಯೇಲರ ಅರಸ ಬಾಷನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು.


ಆಗ ಆಸನು ಸರ್ವೇಶ್ವರನಾಲಯದ ಮತ್ತು ಅರಮನೆಯ ಭಂಡಾರಗಳಿಂದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿದ್ದ ಸಿರಿಯಾದ ಅರಸ ಬೆನ್ಹದದನಿಗೆ ಕಳುಹಿಸಿ,


ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ತನ್ನ ಸೈನ್ಯಾಧಿಪತಿಗಳನ್ನು ಇಸ್ರಯೇಲರ ಪಟ್ಟಣಗಳಿಗೆ ವಿರುದ್ಧ ಕಳುಹಿಸಿದನು; ಅವರು ಇಯ್ಯೋನ್, ದಾನ್, ಆಬೇಲ್ಮಯಿಮ್ ಇವುಗಳನ್ನೂ ನಫ್ತಾಲ್ಯರ ಪಟ್ಟಣಗಳ ಎಲ್ಲ ಉಗ್ರಾಣಗಳನ್ನೂ ಹಾಳುಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು