2 ಪೂರ್ವಕಾಲ ವೃತ್ತಾಂತ 16:4 - ಕನ್ನಡ ಸತ್ಯವೇದವು C.L. Bible (BSI)4 ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ತನ್ನ ಸೈನ್ಯಾಧಿಪತಿಗಳನ್ನು ಇಸ್ರಯೇಲರ ಪಟ್ಟಣಗಳಿಗೆ ವಿರುದ್ಧ ಕಳುಹಿಸಿದನು; ಅವರು ಇಯ್ಯೋನ್, ದಾನ್, ಆಬೇಲ್ಮಯಿಮ್ ಇವುಗಳನ್ನೂ ನಫ್ತಾಲ್ಯರ ಪಟ್ಟಣಗಳ ಎಲ್ಲ ಉಗ್ರಾಣಗಳನ್ನೂ ಹಾಳುಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ತನ್ನ ಸೈನ್ಯಾಧಿಪತಿಗಳನ್ನು ಇಸ್ರಾಯೇಲ್ಯರ ಪಟ್ಟಣಗಳಿಗೆ ವಿರುದ್ಧವಾಗಿ ಕಳುಹಿಸಿದನು; ಅವರು ಇಯ್ಯೋನ್, ದಾನ್, ಆಬೇಲ್ಮಯಿಮ್, ಇವುಗಳನ್ನೂ ನಫ್ತಾಲ್ಯರ ಪಟ್ಟಣಗಳ ಎಲ್ಲಾ ಉಗ್ರಾಣಗಳನ್ನೂ ಹಾಳು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ತನ್ನ ಸೈನ್ಯಾಧಿಪತಿಗಳನ್ನು ಇಸ್ರಾಯೇಲ್ಯರ ಪಟ್ಟಣಗಳಿಗೆ ವಿರೋಧವಾಗಿ ಕಳುಹಿಸಿದನು; ಅವರು ಇಯ್ಯೋನ್, ದಾನ್, ಆಬೇಲ್ಮಯಿಮ್ ಇವುಗಳನ್ನೂ ನಫ್ತಾಲ್ಯರ ಪಟ್ಟಣಗಳ ಎಲ್ಲಾ ಉಗ್ರಾಣಗಳನ್ನೂ ಹಾಳು ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಇದಕ್ಕೆ ಬೆನ್ಹದದನು ಒಪ್ಪಿ ತನ್ನ ಸೇನಾಪತಿಗಳನ್ನು ಇಸ್ರೇಲಿನ ಪಟ್ಟಣಗಳ ಮೇಲೆ ಆಕ್ರಮಣಮಾಡಲು ಕಳುಹಿಸಿದನು. ಅವರು ಹೋಗಿ ಇಯ್ಯೋನ್, ದಾನ್, ಅಬೇಲ್ಮಯಿಮ್ ಎಂಬ ಪಟ್ಟಣಗಳ ಮೇಲೆಯೂ ಭಂಡಾರಗಳನ್ನು ಇಟ್ಟಿದ ನಫ್ತಾಲಿ ಪ್ರಾಂತ್ಯದ ಎಲ್ಲಾ ಪಟ್ಟಣಗಳ ಮೇಲೆಯೂ ಆಕ್ರಮಣ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನ್ನ ಸೈನ್ಯಾಧಿಪತಿಗಳನ್ನು ಕಳುಹಿಸಿದನು. ಅವರು ಇಯ್ಯೋನ್, ದಾನ್ ಆಬೇಲ್ಮಯಿಮ್, ನಫ್ತಾಲ್ಯರ ಸಮಸ್ತ ಉಗ್ರಾಣಗಳ ಪಟ್ಟಣಗಳನ್ನು ವಶಪಡಿಸಿಕೊಂಡರು. ಅಧ್ಯಾಯವನ್ನು ನೋಡಿ |
ಆದರೂ ಕಷ್ಟಸಂಕಷ್ಟಗಳನ್ನು ಅನುಭವಿಸಿದ ಆ ನಾಡಿಗೆ ಇನ್ನು ಮುಂದೆ ಕತ್ತಲಿರುವುದಿಲ್ಲ. ಒಮ್ಮೆ ಜೆಬುಲೋನ್ ಮತ್ತು ನಪ್ತಾಲಿಯ ಗೋತ್ರಗಳಿಗೆ ಬೀಡಾಗಿದ್ದ ಆ ಪ್ರಾಂತ್ಯವು ಅವಮಾನಕ್ಕೆ ಗುರಿಯಾಗಿತ್ತು. ಆದರೆ ಇನ್ನು ಮುಂದೆ ಅದಕ್ಕೆ ಘನತೆಗೌರವ ಬರುವುದು: ಸಮುದ್ರದ ಹಾದಿಯಿಂದ ಹಿಡಿದು ಜೋರ್ಡನಿನ ಆಚೆಯಲ್ಲಿ ಇರುವ ಪ್ರಾಂತ್ಯದವರೆಗೆ ಮಾತ್ರವಲ್ಲ, ಅನ್ಯಜನರು ಇರುವ ಗಲಿಲೇಯ ಪ್ರಾಂತ್ಯದವರೆಗೂ ಘನತೆಗೌರವ ಬಂದೊದಗುವುದು.